Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

IPL 2024: ರೋಹಿತ್ ಶರ್ಮಾ ಟೆನ್ವನ್‌ ಹೆಚ್ಚಿಸಿದ ಹಾರ್ದಿಕ್ ಪಾಂಡ್ಯ ಫಿಟ್ನೆಸ್ ಅಪ್‌ಡೇಟ್

ಇತ್ತೀಚೆಗಷ್ಟೇ ವಿಶ್ವಕಪ್‌ನಲ್ಲಿ ಬಾಂಗ್ಲಾದೇಶ ವಿರುದ್ಧ ಟೀಮ್ ಇಂಡಿಯಾದ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ಗಾಯಗೊಂಡಿದ್ದರು. ಇದಾದ ಬಳಿಕ ಹಾರ್ದಿಕ್ ಪಾಂಡ್ಯ ಮೈದಾನದಲ್ಲಿ ಕಾಣಿಸಿಕೊಂಡಿರಲಿಲ್ಲ. ಆದರೆ ಇದೀಗ ಭಾರತ ತಂಡಕ್ಕೆ ಸಂತಸದ ಸುದ್ದಿಯೊಂದು ಬಂದಿದೆ.

ಹಾರ್ದಿಕ್ ಪಾಂಡ್ಯ ಶೀಘ್ರದಲ್ಲೇ ಮೈದಾನಕ್ಕೆ ಮರಳಬಹುದು. ಹಾರ್ದಿಕ್ ಪಾಂಡ್ಯ ಅವರ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ಹೆಚ್ಚು ವೈರಲ್ ಆಗುತ್ತಿದೆ. ಈ ವೈರಲ್ ಫೋಟೋದಲ್ಲಿ, ಹಾರ್ದಿಕ್ ಪಾಂಡ್ಯ ತರಬೇತಿ ಪಡೆಯುತ್ತಿದ್ದಾರೆ. ಆದಾಗ್ಯೂ, ಹಾರ್ದಿಕ್ ಪಾಂಡ್ಯ ಶೀಘ್ರದಲ್ಲೇ ಮರಳಬಹುದು ಎಂದು ನಂಬಲಾಗಿದೆ.

Rohit Sharma wont be the captain again. Hardik Pandyas latest fitness update has come out

ಸದ್ಯ ಭಾರತ ತಂಡ ದಕ್ಷಿಣ ಆಫ್ರಿಕಾ ಪ್ರವಾಸದಲ್ಲಿದೆ. ಗಾಯದ ಕಾರಣ ಹಾರ್ದಿಕ್ ಪಾಂಡ್ಯ ದಕ್ಷಿಣ ಆಫ್ರಿಕಾ ಪ್ರವಾಸದಲ್ಲಿ ಆಡಲು ಸಾಧ್ಯವಾಗಲಿಲ್ಲ. ಆದರೆ ಭಾರತ-ಅಫ್ಘಾನಿಸ್ತಾನ ಸರಣಿಯಲ್ಲಿ ಹಾರ್ದಿಕ್ ಪಾಂಡ್ಯ ಪುನರಾಗಮನ ಮಾಡಲು ಸಾಧ್ಯವೇ ಎಂಬ ಪ್ರಶ್ನೆಗಳು ಎದ್ದಿವೆ.

ಭಾರತ ಮತ್ತು ಅಫ್ಘಾನಿಸ್ತಾನ ನಡುವೆ 3 ಟಿ20 ಪಂದ್ಯಗಳ ಸರಣಿ ನಡೆಯಲಿದೆ. ಉಭಯ ತಂಡಗಳ ನಡುವಿನ ಮೊದಲ ಟಿ20 ಜನವರಿ 11 ರಂದು ನಡೆಯಲಿದೆ. ಆದರೆ ಹಾರ್ದಿಕ್ ಪಾಂಡ್ಯ ಭಾರತ-ಅಫ್ಘಾನಿಸ್ತಾನ ಸರಣಿಯಲ್ಲಿ ಆಡಲು ಸಾಧ್ಯವಾಗುವುದಿಲ್ಲ. ಆದಾಗ್ಯೂ, ಹಾರ್ದಿಕ್ ಪಾಂಡ್ಯ ಶೀಘ್ರದಲ್ಲೇ ಮರಳಬಹುದು ಎಂದು ನಂಬಲಾಗಿದೆ. ಈ ಮೂಲಕ ಭಾರತೀಯ ಅಭಿಮಾನಿಗಳ ಹೊರತಾಗಿ ಮುಂಬೈ ಇಂಡಿಯನ್ಸ್‌ಗೆ ಸಂತಸದ ಸುದ್ದಿಯಿದೆ ಹೊರ ಬಂದಿದೆ.

Rohit Sharma wont be the captain again. Hardik Pandyas latest fitness update has come out

ಇತ್ತೀಚೆಗಷ್ಟೇ ಐಪಿಎಲ್ ಹರಾಜಿಗೂ ಮುನ್ನ ಮುಂಬೈ ಇಂಡಿಯನ್ಸ್ ತಂಡ ಹಾರ್ದಿಕ್ ಪಾಂಡ್ಯ ಅವರನ್ನು ತಂಡಕ್ಕೆ ಸೇರಿಸಿಕೊಂಡಿತ್ತು. ಮುಂಬೈ ಇಂಡಿಯನ್ಸ್ ಗುಜರಾತ್ ಟೈಟಾನ್ಸ್‌ನಿಂದ ಹಾರ್ದಿಕ್ ಪಾಂಡ್ಯ ಅವರನ್ನು ಟ್ರೇಡ್ ಮಾಡಿತ್ತು. ಈ ಮೂಲಕ ಹಾರ್ದಿಕ್ ಪಾಂಡ್ಯ ಐಪಿಎಲ್ 2024ರ ಸೀಸನ್‌ನಲ್ಲಿ ಮುಂಬೈ ಇಂಡಿಯನ್ಸ್‌ನ ಜೆರ್ಸಿಯಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ರೋಹಿತ್ ಶರ್ಮಾ ಬದಲಿಗೆ ಮುಂಬೈ ಇಂಡಿಯನ್ಸ್ ತಂಡ ಹಾರ್ದಿಕ್ ಪಾಂಡ್ಯ ಅವರನ್ನು ನಾಯಕನನ್ನಾಗಿ ಮಾಡಿದೆ. ಆದಾಗ್ಯೂ, ಹಾರ್ದಿಕ್ ಪಾಂಡ್ಯ ಈ ಹಿಂದೆಯೂ ಮುಂಬೈ ಇಂಡಿಯನ್ಸ್ ತಂಡದ ಭಾಗವಾಗಿದ್ದರು. ಹಾರ್ದಿಕ್ ಪಾಂಡ್ಯ ಐಪಿಎಲ್ 2015 ರ ಋತುವಿನಲ್ಲಿ ಮೊದಲ ಬಾರಿಗೆ ಆಡಿದ್ದರು. ಇದರ ನಂತರ, ಹಾರ್ದಿಕ್ ಪಾಂಡ್ಯ ಐಪಿಎಲ್ 2021 ರವರೆಗೆ ಮುಂಬೈ ಇಂಡಿಯನ್ಸ್ ಪರ ಆಡುವುದನ್ನು ಮುಂದುವರೆಸಿದರು. ಬಳಿಕ, ಐಪಿಎಲ್ 2022 ರ ಮೊದಲು, ಅವರು ಗುಜರಾತ್ ಟೈಟಾನ್ಸ್‌ನ ಭಾಗವಾದರು.

ಗುಜರಾತ್ ಟೈಟನ್ಸ್ ತಂಡದ ನಾಯಕರಾದ ಮೊದಲ ವರ್ಷವೇ ತಂಡಕ್ಕೆ ಚಾಂಪಿಯನ್ ಮುಕುಟ ತೊಡಿಸಿದ ಕೀರ್ತಿಯನ್ನು ತಮ್ಮದಾಗಿಸಿಕೊಂಡಿದ್ದಾರೆ. ಅಲ್ಲದೆ ಕಳೆದ ಬಾರಿಯ ಫೈನಲ್‌ನಲ್ಲೂ ಹಾರ್ದಿಕ್ ಪಡೆ ಸೋಲು ಕಂಡಿತ್ತು.

Rohit Sharma wont be the captain again. Hardik Pandyas latest fitness update has come out

ಇಷ್ಟು ದಿನಗಳ ಕಾಲ ತಣ್ಣಗಿದ್ದ ಮುಂಬೈ ಇಂಡಿಯನ್ಸ್ ಪಡಸಾಲೆಯಲ್ಲಿ ಮತ್ತೆ ಈಗ ಅಸಾಮಾಧನದ ಹೊಗೆ ಕಾಣಿಸಿಕೊಂಡಿದೆ. ಒಂದು ವೇಳೆ ಹಾರ್ದಿಕ್ ಪಾಂಡ್ಯ ಫಿಟ್ ಆಗಿ ಐಪಿಎಲ್‌ನಲ್ಲಿ ಮುಂಬೈ ಪರ ಕಣಕ್ಕೆ ಇಳಿದರೆ, ರೋಹಿತ್ ಶರ್ಮಾ ಕಥೆ ಏನು? ನಾಯಕತ್ವದ ಮೇಲೆ ಕಣ್ಣು ನೆಟ್ಟಿದ್ದ ಮುಂಬೈ ಇಂಡಿಯನ್ಸ್ ಆಟಗಾರರ ಕಥೇ ಏನು ಎಂಬ ಪ್ರಶ್ನೆಗಳು ಹರಿದಾಡುತ್ತಿವೆ.

ಹಾರ್ದಿಕ್ ಪಾಂಡ್ಯ ಅವರ ಫಿಟ್ನೆಸ್ ಅಪ್‌ ಡೇಟ್‌ ಒಂದು ಕಡೆ ಸಿಹಿ ಸುದ್ದಿಯಾದರೆ, ರೋಹಿತ್ ಶರ್ಮಾ ಅವರಿಗೆ ಇರಿಸು ಮುರಿಸು ಉಂಟು ಮಾಡಿದ್ದಂತೂ ಸುಳ್ಳಲ್ಲ.

Story first published: Wednesday, January 3, 2024, 7:04 [IST]
Other articles published on Jan 3, 2024
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+