ಶುಭಮನ್ ಗಿಲ್ ಸ್ಥಾನದಲ್ಲಿ ಬ್ಯಾಟಿಂಗ್ ಮಾಡುವುದು ಯಾರು?
ಮೆಲ್ಬೋರ್ನ್‌ನಲ್ಲಿ ನಡೆಯುತ್ತಿರುವ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ಮೊದಲು ಬ್ಯಾಟಿಂಗ್ ಮಾಡಲು ಮುಂದಾಗಿದೆ. ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಮೂರು ಆಲ್‌ರೌಂಡರ್‌ಗಳೊಂದಿಗೆ ಕಣಕ್ಕೆ ಇಳಿದಿದೆ. ಭಾರತದ ಭರವಸೆಯ ಆಟಗಾರ ಶುಭಮನ್ ಗಿಲ್, ರನ್ ಕಲೆ ಹಾಕುವಲ್ಲಿ ವಿಫಲರಾಗುತ್ತಿದ್ದು ತಂಡದಿಂದ ಹೊರಗೆ ಕೂರಿಸಲಾಗಿದೆ. ಇವರ ಸ್ಥಾನದಲ್ಲಿ ಟೀಮ್ ಇಂಡಿಯಾ ಮತ್ತೊಬ್ಬ ಸ್ಪಿನ್ ಬೌಲರ್‌ಗೆ ಅವಕಾಶ ನೀಡಲಾಗಿದೆ. ಈ ಮೂಲಕ ಭಾರತ ನುರಿತ ಐವರು ಬೌಲರ್‌ಗಳೊಂದಿಗೆ ಕಣಕ್ಕೆ ಇಳಿಯಲಿದೆ.
ಟೀಮ್ ಇಂಡಿಯಾ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಬಲಿಷ್ಠ ತಂಡವನ್ನು ಕಣಕ್ಕೆ ಇಳಿಸಿದಂತೆ ಕಾಣುತ್ತಿದೆ. ಈ ವೇಳೆ ಟೀಮ್ ಇಂಡಿಯಾದಲ್ಲಿ ಆರು ಜನ ನುರಿತ ಬೌಲರ್‌ಗಳು ಇದ್ದು, ನಾಯಕನಿಗೆ ಹೆಚ್ಚಿನ ಬೌಲಿಂಗ್ ಆಯ್ಕೆಗಳು ಸಿಗಲಿವೆ. ಇನ್ನು ಈ ಪಂದ್ಯದಲ್ಲಿ ನಿತೀಶ್ ಕುಮಾರ್ ರೆಡ್ಡಿ ಅವರ ಮೇಲೆ ನಿರೀಕ್ಷೆಗಳು ಹೆಚ್ಚಿವೆ.

ಯಾವ ಕ್ರಮಾಂಕದಲ್ಲಿ ರೋಹಿತ್ ಬ್ಯಾಟಿಂಗ್?
ಟೀಮ್ ಇಂಡಿಯಾದ ನಾಯಕ ರೋಹಿತ್ ಶರ್ಮಾ ಟಾಸ್ ಸೋತ ಬಳಿಕ ತಂಡವನ್ನು ಘೋಷಿಸುತ್ತಿದರು. ಈ ವೇಳೆ ಭಾರತ ತಂಡದಿಂದ ಭರವಸೆಯ ಆಟಗಾರ ಶುಭಮನ್ ಗಿಲ್ ಅವರನ್ನು ಕೈ ಬಿಡಲಾಗಿದೆ. ಇವರ ಬದಲಿಗೆ ವಾಷಿಂಗ್ಟನ್ ಸುಂದರ್ ಅವರಿಗೆ ಅವಕಾಶ ನೀಡಲಾಗಿದೆ. ಗಿಲ್ ಅವರನ್ನು ಕೈ ಬಿಡುತ್ತಿದ್ದಂತೆ ರೋಹಿತ್ ಶರ್ಮಾ ಯಾವ ಕ್ರಮಾಂಕದಲ್ಲಿ ಬ್ಯಾಟ್ ಮಾಡುತ್ತಾರೆ ಎಂಬ ಬಗ್ಗೆ ಹಲವು ಪ್ರಶ್ನೆಗಳು ಎದ್ದಿವೆ. ರೋಹಿತ್ ಶರ್ಮಾ ಟಾಪ್ ಆರ್ಡರ್‌ನಲ್ಲಿ ಬ್ಯಾಟ್ ಮಾಡುವುದು ನಿಶ್ಚಿತವಾಗಿದೆ. ಆದರೆ ಯಾವ ಕ್ರಮಾಂಕದಲ್ಲಿ ಬ್ಯಾಟ್ ಮಾಡುತ್ತಾರೆ ಎಂಬುದು ಕುತೂಹಲ ಮೂಡಿಸಿದೆ.
ರೋಹಿತ್ ಶರ್ಮಾ ಅನುಪಸ್ಥಿತಿಯಲ್ಲಿ ಇನಿಂಗ್ಸ್ ಆರಂಭಿಸಿದ ಕೆಎಲ್ ರಾಹುಲ್ ಅವರು ತಮ್ಮ ಮೇಲೆ ತಂಡ ಇಟ್ಟ ಭರವಸೆಯನ್ನು ಉಳಿಸಿಕೊಂಡಿದ್ದಾರೆ. ಇವರು ಸರಣಿಯಲ್ಲಿ ಭಾರತದ ಪರ ಗರಿಷ್ಠ ರನ್ ಕಲೆ ಹಾಕಿದ ಆಟಗಾರ ಎಂಬ ಹೆಗ್ಗಳಿಕೆಯನ್ನು ತಮ್ಮದಾಗಿಸಿಕೊಂಡಿದ್ದಾರೆ. ಹೀಗಾಗಿ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ರಾಹುಲ್ ಮತ್ತೊಮ್ಮೆ ಇನ್ನಿಂಗ್ಸ್ ಆರಂಭಿಸುತ್ತಾರಾ ಎಂಬ ಪ್ರಶ್ನೆಗಳು ಉದ್ಭವಿಸುತ್ತವೆ. ತಂಡವನ್ನು ಒಮ್ಮೆ ಗಮನಿಸಿದರೆ, ರೋಹಿತ್ ಶರ್ಮಾ ಆರಂಭಿಕರಾಗಿ ಅಥವ ಮೂರನೇ ಕ್ರಮಾಂಕದಲ್ಲಿ ಬ್ಯಾಟ್ ಮಾಡಬಹುದು.

ಮೂರನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಯಾರು?
ಟೀಮ್ ಇಂಡಿಯಾದ ಪರ ನಾಲ್ಕನೇ ಕ್ರಮಾಂಕದಲ್ಲಿ ಮೂರನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡುವುದು ಯಾರು ಎಂಬ ಪ್ರಶ್ನೆಗಳು ಉದ್ಭವಿಸಿವೆ. ಶುಭಮನ್ ಗಿಲ್ ಸ್ಥಾನದಲ್ಲಿ ಬ್ಯಾಟಿಂಗ್ ನಡೆಸುವುದು ಯಾರು ಎಂಬ ಪ್ರಶ್ನೆಗಳು ಉದ್ಭವಿಸಿವೆ. ತಂಡದ ಸಮೀಕರಣವನ್ನು ನೋಡಿದಾಗ ರೋಹಿತ್ ಶರ್ಮಾ ಹೆಚ್ಚಿನ ಜವಾಬ್ದಾರಿಯನ್ನು ಹೊತ್ತುಕೊಂಡು ಮೂರನೇ ಕ್ರಮಾಂಕದಲ್ಲಿ ಬ್ಯಾಟ್ ಮಾಡುವುದನ್ನು ಕಾಣಬಹುದಾಗಿದೆ.
ಏಷ್ಯಾದ ಹೊರಗಡೆ ರನ್ ಕಲೆ ಹಾಕುವಲ್ಲಿ ವಿಫಲರಾಗಿರುವ ಶುಭಮನ್ ಗಿಲ್ ಅವರಿಗೆ ತಂಡದಿಂದ ಕೈ ಬಿಡಲಾಗಿದೆ. ಇವರು ಪ್ರಸಕ್ತ ಸರಣಿಯಲ್ಲಿ ರನ್ ಕಲೆ ಹಾಕುವಲ್ಲಿ ವಿಫಲರಾಗಿದ್ದಾರೆ. ಹೀಗಾಗಿ ಅವರನ್ನು ತಡದಿಂದ ಕೈ ಬಿಡಲಾಗಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications