ರೋಹಿತ್ ಶರ್ಮಾ ವಿಡಿಯೋದಲ್ಲಿ ನಿವೃತ್ತಿ ಪ್ರಶ್ನೆಗೆ ಉತ್ತರ
ಭಾರತ ತಂಡದ ಸದ್ಯ ಟಿ20 ಕ್ರಿಕೆಟ್ ಆಡುವಲ್ಲಿ ನಿರತವಾಗಿದೆ. ಈ ವೇಳೆ ಟೀಮ್ ಇಂಡಿಯಾ ತಾನಾಡಿದ ಮೊದಲ ಪಂದ್ಯದಲ್ಲಿ ಯುಎಇ ವಿರುದ್ಧ 9 ವಿಕೆಟ್ ಜಯ ಸಾಧಿಸಿದ್ದು, ಆತ್ಮವಿಶ್ವಾಸದಿಂದ ಬೀಗುತ್ತಿದೆ. ಆದರೆ ಟೀಮ್ ಇಂಡಿಯಾ ಅಭಿಮಾನಿಗಳಿಗೆ ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ಏಕದಿನ ಸರಣಿಯ ಮೇಲೆ ಚಿತ್ತ ನೆಟ್ಟಿದೆ. ಈ ಸರಣಿಯಲ್ಲಿ ಟೀಮ್ ಇಂಡಿಯಾದ ಸೂಪರ್ ಸ್ಟಾರ್ ಆಟಗಾರರಾದ ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ಅಂಗಳ ಪ್ರವೇಶಿಸಲಿದ್ದಾರೆ.
ರೋಹಿತ್, ವಿರಾಟ್ ಜೋಡಿ ಕೊನೆಯ ಬಾರಿಗೆ ಭಾರತದ ಪರ ಚಾಂಪಿಯನ್ಸ್ ಟ್ರೋಫಿಯನ್ನು ಆಡಿತ್ತು. ಇದೇ ವೇಳೆ ಟೀಮ್ ಇಂಡಿಯಾದ ಸ್ಟಾರ್ ಆಟಗಾರ ರೋಹಿತ್ ಶರ್ಮಾ ಏಕದಿನ ಫಾರ್ಮೆಟ್‌ಗೂ ವಿದಾಯ ಹೇಳಬಹುದು ಎಂಬ ಮಾತುಗಳು ಕೇಳಿ ಬರುತ್ತಿದ್ದವು. ಈ ಎಲ್ಲ ಪ್ರಶ್ನೆಗಳಿಗೆ ರೋಹಿತ್ ಶರ್ಮಾ ಒಂದು ವಿಡಿಯೋ ಪೋಸ್ಟ್ ಮಾಡುವ ಮೂಲಕ ಉತ್ತರವನ್ನು ನೀಡಿದ್ದಾರೆ.

ಅಕ್ಟೋಬರ್‌ನಲ್ಲಿ ನಡೆಯಲಿರುವ ಏಕದಿನ ಸರಣಿಗೆ ಭಾರತ, ಆಸ್ಟ್ರೇಲಿಯಾ ಪ್ರವಾಸವನ್ನು ಕೈಗೊಳ್ಳಲಿದೆ. ಈ ವೇಳೆ ವಿರಾಟ್ ಹಾಗೂ ರೋಹಿತ್ ಅಂಗಳಕ್ಕೆ ಇಳಿಯಲಿದ್ದಾರೆ. ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ಇಬ್ಬರೂ ಟಿ20 ವಿಶ್ವಕಪ್ ಗೆದ್ದ ಬಳಿಕ ಈ ಫಾರ್ಮೆಟ್‌ಗೆ ವಿದಾಯ ಹೇಳಿದ್ದರು. ಅಲ್ಲದೆ ಐಪಿಎಲ್ ಮಧ್ಯದಲ್ಲಿ ಟೆಸ್ಟ್ ಫಾರ್ಮೆಟ್‌ಗೂ ನಿವೃತ್ತಿ ತಿಳಿಸಿದ್ದರು. ಹೀಗಾಗಿ ಈ ಇಬ್ಬರೂ ಆಟಗಾರರು ಸದ್ಯ ಏಕದಿನ ಫಾರ್ಮೆಟ್ ಮಾತ್ರ ಆಡಲಿದ್ದಾರೆ. ರೋಹಿತ್ ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಒಂದು ವಿಡಿಯೋ ಹಂಚಿಕೊಂಡಿದ್ದಾರೆ. ಈ ವಿಡಯೋ ಈಗ ಸಖತ್ ವೈರಲ್ ಆಗಿದೆ.
ರೋಹಿತ್ ಶರ್ಮಾ ತಾವು ನೆಟ್ಸ್‌ನಲ್ಲಿ ಅಭ್ಯಾಸ ಮಾಡುವ ವಿಡಿಯೋ ಒಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ಪೋಸ್ಟ್ ಮಾಡುವುದರೊಂದಿಗೆ ರೋಹಿತ್ ನಾನು ಮತ್ತೆ ಇಲ್ಲಿಗೆ ಬಂದಿದ್ದೇನೆ ಎಂದು ಬರೆದುಕೊಂಡಿದ್ದಾರೆ. ಭಾರತ ಹಾಗೂ ಆಸ್ಟ್ರೇಲಿಯಾ ನಡುವಣ ಮೊದಲ ಏಕದಿನ ಪಂದ್ಯ ಅ.19 ರಂದು ನಡೆಯಲಿದೆ. ಈ ಸರಣಿಯಲ್ಲಿ ರೋಹಿತ್ ಶರ್ಮಾ ಆಡುವುದು ಪಕ್ಕಾ ಎನ್ನಲಾಗುತ್ತಿದೆ. ಈ ಸರಣಿಯಲ್ಲಿ ಅವರು ನಾಯಕರಾಗಿ ಕಾಣಿಸಿಕೊಳ್ಳುವ ಸಾಧ್ಯತೆ ಹೆಚ್ಚಿದೆ.
ಭಾರತ "ಎ" ಪರ ಕಣಕ್ಕೆ?
ಆಸ್ಟ್ರೇಲಿಯಾ "ಎ" ತಂಡ ಸದ್ಯ ಭಾರತದ ಪ್ರವಾಸದಲ್ಲಿದೆ. ಈ ವೇಳೆ 2 ಅನಧಿಕೃತ ಟೆಸ್ಟ್ ಪಂದ್ಯಗಳನ್ನು ಆಡಬೇಕಿದೆ. ಇದಾದ ಬಳಿಕ ಉಭಯ ದೇಶಗಳ ನಡುವಣ ಮೂರು ಪಂದ್ಯಗಳ ಏಕದಿನ ಸರಣಿ ನಡೆಯಲಿದೆ. ಬಹುದಿನಗಳಿಂದ ಮೈದಾನದಿಂದ ದೂರ ಉಳಿದಿರುವ ರೋಹಿತ್ ಶರ್ಮಾ, ಭಾರತ "ಎ" ಪರ ಏಕದಿನ ಪಂದ್ಯಗಳನ್ನು ಆಡುವ ಸಾಧ್ಯತೆ ಇದೆ. ಈ ಮೂಲಕ ರೋಹಿತ್ ಆಸ್ಟ್ರೇಲಿಯಾ ಪ್ರವಾಸಕ್ಕೆ ಭರ್ಜರಿ ತಯಾರಿ ನಡೆಸಲಿದ್ದಾರೆ. ಈ ಮೂಲಕ ರೋಹಿತ್ ಶರ್ಮಾ ಮುಂಬರುವ ಆಸ್ಟ್ರೇಲಿಯಾ ಸರಣಿಯನ್ನು ಸ್ಮರಣೀಯವಾಗಿಸುವ ಇರಾದೆಯನ್ನು ಹೊಂದಿದ್ದಾರೆ. ಅಭಿಮಾನಿಗಳು ಸಹ ಇವರ ಆಟವನ್ನು ಕಣ್ಣು ತುಂಬಿಕೊಳ್ಳಲು ಕಾತುರರಾಗಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications