For Quick Alerts
ALLOW NOTIFICATIONS  
For Daily Alerts
 

Rohit Sharma: ಪಾಕಿಸ್ತಾನದ ಸೋಲನ್ನು ಅಣಕಿಸಿದರಾ ರೋಹಿತ್ ಶರ್ಮಾ? ಫೋಟೊ ವೈರಲ್!

ಐಸಿಸಿ ಪುರುಷರ ಕ್ರಿಕೆಟ್ ವಿಶ್ವಕಪ್ 2023 ರಲ್ಲಿ, ಅಫ್ಘಾನಿಸ್ತಾನವು ಸೋಮವಾರ ಕೇವಲ ಎರಡು ವಿಕೆಟ್‌ಗಳನ್ನು ಕಳೆದುಕೊಂಡು 283 ರನ್‌ಗಳ ಗುರಿಯನ್ನು ಬೆನ್ನಟ್ಟುವ ಮೂಲಕ ಏಕದಿನ ಕ್ರಿಕೆಟ್‌ನಲ್ಲಿ ಮೊದಲ ಬಾರಿಗೆ ಪಾಕಿಸ್ತಾನವನ್ನು ಸೋಲಿಸಿತು.

ಅಫ್ಘಾನಿಸ್ತಾನದ ಐತಿಹಾಸಿಕ ಗೆಲುವಿನ ನಂತರ, ಭಾರತದ ನಾಯಕ ರೋಹಿತ್ ಶರ್ಮಾ ಇನ್‌ಸ್ಟಾಗ್ರಾಮ್‌ನಲ್ಲಿ ಚಿತ್ರವನ್ನು ಹಂಚಿಕೊಂಡಿದ್ದು ಸಾಕಷ್ಟು ವೈರಲ್ ಆಗಿದೆ. ರೋಹಿತ್ ಶರ್ಮಾ ಬಾಬರ್ ಅಜಮ್ ತಂಡವನ್ನು ಅಣಕಿಸಿದ್ದಾರೆ ಎಂದು ಹಲವರು ಭಾವಿಸಿದ್ದಾರೆ, ಹಾಗಾದ್ರೆ ನಿಜವೇ ಎಂದು ತಿಳಿಯೋಣ.

 Rohit Sharmas Cryptic Post Goes Viral, Sparks Speculation About Dig at Pakistan Team

2023ರ ಏಕದಿನ ವಿಶ್ವಕಪ್ ಆರಂಭಕ್ಕೆ ಮೊದಲು ಅಫ್ಘಾನಿಸ್ತಾನ ಕೇವಲ ಒಂದು ಪಂದ್ಯವನ್ನು ಮಾತ್ರ ಗೆದ್ದಿತ್ತು, 2015 ರಲ್ಲಿ ಸ್ಕಾಟ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಗೆಲುವು ಸಾಧಿಸಿದ್ದು ಬಿಟ್ಟರೆ, ಏಕದಿನ ವಿಶ್ವಕಪ್‌ನಲ್ಲಿ ಒಂದೂ ಪಂದ್ಯವನ್ನೂ ಗೆದ್ದಿರಲಿಲ್ಲ.

1
1-2023

ಆದರೆ 2023ರ ಏಕದಿನ ವಿಶ್ವಕಪ್ ಪಂದ್ಯಾವಳಿಯಲ್ಲಿ 2 ಗೆಲುವು ಸಾಧಿಸಿ ಇತಿಹಾಸ ನಿರ್ಮಿಸಿದೆ. ಅದೂ ಕೂಡ ಇಂಗ್ಲೆಂಡ್ ಮತ್ತು ಪಾಕಿಸ್ತಾನ ತಂಡಗಳ ವಿರುದ್ದ ಗೆಲುವು ಕಂಡಿರುವುದು ವಿಶ್ವ ಕ್ರಿಕೆಟ್ ಜಗತ್ತನ್ನು ಅಚ್ಚರಿಗೊಳಿಸಿದೆ.

ರೋಹಿತ್ ಶರ್ಮಾ ಫೋಟೊ ವೈರಲ್

ಅಫ್ಘಾನಿಸ್ತಾನ ಗೆದ್ದ ತಕ್ಷಣ ಭಾರತದ ನಾಯಕ, ಇನ್ಸ್ಟಾಗ್ರಾಮ್ ಸ್ಟೋರಿಯನ್ನು ಪೋಸ್ಟ್ ಮಾಡಿದ್ದಾರೆ, ಅದರಲ್ಲಿ ಅವರು ನಗುತ್ತಿರುವುದನ್ನು ಕಾಣಬಹುದು. ಪ್ರಸ್ತುತ, ರೋಹಿತ್ ಶರ್ಮಾ ಟೀಮ್ ಇಂಡಿಯಾ ಜೊತೆಗೆ ಧರ್ಮಶಾಲಾದಲ್ಲಿದ್ದಾರೆ, ಎಲ್ಲರೂ ತಮ್ಮ ರಜಾದಿನವನ್ನು ಆನಂದಿಸುತ್ತಿದ್ದಾರೆ. ಧರ್ಮಶಾಲಾದಲ್ಲಿ ಎರಡು ದಿನಗಳ ಕಾಲ ಉಳಿಯಲಿದ್ದು ನಂತರ ಲಕ್ನೋಗೆ ಪ್ರಯಾಣ ಮಾಡಲಿದ್ದಾರೆ.

ಮುಂದಿನ ಭಾನುವಾರ (ಅಕ್ಟೋಬರ್ 29) ಟೀಂ ಇಂಡಿಯಾ ಲಕ್ನೋದಲ್ಲಿ ಇಂಗ್ಲೆಂಡ್ ತಂಡವನ್ನು ಎದುರಿಸಲಿದ್ದು, ಅದಕ್ಕು ಮೊದಲು ಕೆಲವು ದಿನಗಳ ಕಾಲ ವಿಶ್ರಾಂತಿ ಪಡೆಯುತ್ತಿದ್ದಾರೆ.

ತಂಡದ ಆಟಗಾರರು ಸತತವಾಗಿ ಕ್ರಿಕೆಟ್ ಆಡುತ್ತಿರುವ ಕಾರಣ ಒತ್ತಡವನ್ನು ಕಡಿಮೆ ಮಾಡಲು ಈ ವಿಶ್ರಾಂತಿ ಅಗತ್ಯ ಎಂದು ನಂಬಲಾಗಿದೆ. ವಿಶ್ವಕಪ್‌ನಲ್ಲಿ ಇದುವರೆಗೂ ಆಡಿರುವ 5 ಪಂದ್ಯಗಳಲ್ಲಿ ಗೆಲುವು ಸಾಧಿಸಿರುವ ಭಾರತ ತಂಡ ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ. ಹಾಲಿ ಚಾಂಪಿಯನ್ ಇಂಗ್ಲೆಂಡ್ ತಂಡ 10ನೇ ಸ್ಥಾನದಲ್ಲಿದೆ.

ಇನ್ನು ಅಫ್ಘಾನಿಸ್ತಾನ ಮುಂದಿನ ಪಂದ್ಯದಲ್ಲಿ ಶ್ರೀಲಂಕಾ ತಂಡವನ್ನು ಎದುರಿಸಲಿದ್ದು, ಈ ಪಂದ್ಯವನ್ನು ಗೆಲ್ಲುವ ವಿಶ್ವಾಸದಲ್ಲಿದೆ. ಅಫ್ಘಾನಿಸ್ತಾನದ ಗೆಲುವಿಗೆ ಮಾಜಿ ಕ್ರಿಕೆಟಿಗರು, ಕ್ರಿಕೆಟ್ ಅಭಿಮಾನಿಗಳು ಸಂತಸ ವ್ಯಕ್ತಪಡಿಸಿದ್ದಾರೆ.

ಇನ್ನು ಪಾಕಿಸ್ತಾದ ಕಳಪೆ ಪ್ರದರ್ಶನಕ್ಕೆ ಪಾಕಿಸ್ತಾನ ಮಾಜಿ ಕ್ರಿಕೆಟಿಗರು ಕೋಪಗೊಂಡಿದ್ದಾರೆ. ಫೀಲ್ಡಿಂಗ್ ಕೆಟ್ಟದಾಗಿದೆ ಎಂದು ಬಾಬರ್ ಅಜಂ ಪಡೆಯನ್ನು ಟೀಕಿಸಿದ್ದಾರೆ.

Story first published: Tuesday, October 24, 2023, 13:40 [IST]
Other articles published on Oct 24, 2023
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+