MI vs GT: ರೋಹಿತ್ ಶರ್ಮಾ ಅಬ್ಬರಕ್ಕೆ ಬೆಚ್ಚಿದ ಟೈಟಾನ್ಸ್
ಭರವಸೆಯ ಆಟಗಾರ ಹಿಟ್ ಮ್ಯಾನ್ ಖ್ಯಾತಿಯ ರೋಹಿತ್ ಶರ್ಮಾ ಅವರು ಬಾರಿಸಿದ ಭರ್ಜರಿ ಅರ್ಧಶತಕದ ನೆರವಿನಿಂದ ಮುಂಬೈ ಇಂಡಿಯನ್ಸ್ ಎಲಿಮಿನೇಟರ್ ಪಂದ್ಯದಲ್ಲಿ ಗುಜರಾಟ್ ಟೈಟಾನ್ಸ್ ತಂಡಕ್ಕೆ 229 ರನ್‌ಗಳ ಗುರಿಯನ್ನು ನೀಡಿದೆ.
ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಮುಂಬೈ ಇಂಡಿಯನ್ಸ್ ರೋಹಿತ್ ಶರ್ಮಾ ಹಾಗೂ ಜಾನಿ ಬೇರ್‌ಸ್ಟೋ ಭರ್ಜರಿ ಜೊತೆಯಾಟದ ಕಾಣಿಕೆ ನೀಡಿದರು. ಈ ಜೋಡಿ ಮೊದಲ ವಿಕೆಟ್‌ಗೆ ಪವರ್ ಪ್ಲೇನಲ್ಲಿ ಪವರ್ ಫುಲ್ ಆಟವನ್ನು ಆಡಿತು. ಈ ಜೋಡಿಯನ್ನು ಕಟ್ಟಿ ಹಾಕುವಲ್ಲಿ ಗುಜರಾತ್ ಬೌಲರ್‌ಗಳು ವಿಫಲರಾದರು. ಪವರ್ ಪ್ಲೇನಲ್ಲಿ ಮುಂಬೈ ಇಂಡಿಯನ್ಸ್ 79 ರನ್ ಕಲೆ ಹಾಕಿತು. ಈ ವೇಳೆ ರೋಹಿತ್ ಶರ್ಮಾ ಅವರಿಗೆ ಮೂರು ಜೀವದಾನಗಳು ಲಭಿಸಿದವು. ಈ ಐಪಿಎಲ್‌ನಲ್ಲಿ ಇದೇ ಮೊದಲ ಬಾರಿಗೆ ಬ್ಯಾಟಿಂಗ್ ಮಾಡಿದ ಜಾನಿ ಬೇರ್ ಸ್ಟೋ (47) ಅಬ್ಬರಿಸಿದರು. ಈ ಜೋಡಿ ಮೊದಲ ವಿಕೆಟ್‌ಗೆ 84 ರನ್ ಜೊತೆಯಾಟದ ಕಾಣಿಕೆ ನೀಡಿತು.

ಎರಡನೇ ವಿಕೆಟ್‌ಗೆ ರೋಹಿತ್ ಶರ್ಮಾ ಹಾಗೂ ಸೂರ್ಯಕುಮಾರ್ ಯಾದವ್ ಜೋಡಿ ಸಹ ಅಮೋಘ ಜೊತೆಯಾಟವನ್ನು ನೀಡಿತು. ಈ ಜೊಡಿ 34 ಎಸೆತಗಳಲ್ಲಿ 59 ರನ್ ಸಿಡಿಸಿತು. ಈ ವೇಳೆ ಸೂರ್ಯಕುಮಾರ್ ಯಾದವ್ 1 ಬೌಂಡರಿ, 3 ಸಿಕ್ಸರ್ ಸೇರಿದಂತೆ 33 ರನ್ ಸಿಡಿಸಿ ಔಟ್ ಆದರು. ಮೂರನೇ ವಿಕೆಟ್‌ಗೆ ರೋಹಿತ್ ಶರ್ಮಾ, ತಿಲಕ್ ವರ್ಮಾ ಜೊತೆಗೂಡಿ ಗುಜರಾತ್ ಬೌಲರ್‌ಗಳನ್ನು ಕೊಂಚ ಕಾಡಿದರು. ಈ ಜೋಡಿ 22 ಎಸೆತಗಳಲ್ಲಿ 43 ರನ್ ಸಿಡಿಸಿತು. ಈ ವೇಳೆ ರೋಹಿತ್ ಶರ್ಮಾ ಇಲ್ಲದ ಹೊಡೆತಕ್ಕೆ ಮುಂದಾಗಿ ಔಟ್ ಆದರು.
ರೋಹಿತ್ ಶರ್ಮಾ 81
ಬಿಗ್ ಮ್ಯಾಚ್ ಪ್ಲೇಯರ್ ಎಂದೇ ಖ್ಯಾತಿ ಪಡೆದಿರುವ ರೋಹಿತ್ ಶರ್ಮಾ ಎಲಿಮಿನೇಟರ್ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ ಆರ್ಭಟ ನಡೆಸಿದರು. ಇವರು 50 ಎಸೆತಗಳಲ್ಲಿ 9 ಬೌಂಡರಿ, 4 ಸಿಕ್ಸರ್ ಸಹಾಯದಿಂದ 81 ರನ್ ಸಿಡಿಸಿ ಇಲ್ಲದ ಹೊಡೆತಕ್ಕೆ ಮುಂದಾಗಿ ಪ್ರಸಿದ್ಧ್ ಕೃಷ್ಣಾ ಅವರಿಗೆ ವಿಕೆಟ್ ಒಪ್ಪಿಸಿದರು.
ಮಧ್ಯಮ ಕ್ರಮಾಂಕದಲ್ಲಿ ತಿಲಕ್ ವರ್ಮಾ 11 ಎಸೆತಗಳಲ್ಲಿ 3 ಸಿಕ್ಸರ್ ಸಹಾಯದಿಂದ 25 ರನ್ ಸಿಡಿಸಿದರು. ನಾಯಕ ಹಾರ್ದಿಕ್ ಪಾಂಡ್ಯ 9 ಎಸೆತಗಳಲ್ಲಿ 3 ಸಿಕ್ಸರ್ ಸಿಡಿಸಿ ಅಜೇಯ 22 ರನ್ ಬಾರಿಸಿದರು. ಈ ಸ್ಟಾರ್ ಆಟಗಾರ ಭರವಸೆಯ ಆಟದ ನೆರವಿನಿಂದ ಮುಂಬೈ 20 ಓವರ್‌ಗಳಲ್ಲಿ 5 ವಿಕೆಟ್‌ಗೆ 228 ರನ್ ಸೇರಿಸಿತು.
ಗುಜರಾತ್ ಟೈಟಾನ್ಸ್ ಪರ ಪ್ರಸಿದ್ಧ್ ಕೃಷ್ಣಾ 53 ರನ್ ನೀಡಿ 2, ಸಾಯಿ ಕಿಶೋರ್ 42 ರನ್ ಗೆ 2 ವಿಕೆಟ್ ಕಬಳಿಸಿದರು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications