For Quick Alerts
ALLOW NOTIFICATIONS  
For Daily Alerts
 

Rohit Sharma: ಎರಡು ಜೀವದಾನ ನೀಡಿದರೂ ಬಳಸಿಕೊಳ್ಳದ ರೋಹಿತ್‌: ಯುವ ಬೌಲರ್‌ಗೆ ವಿಕೆಟ್‌ ಒಪ್ಪಿಸಿದ ಹಿಟ್‌ ಮ್ಯಾನ್‌

ರೋಹಿತ್ ಶರ್ಮಾ ಕಳಪೆ ಫಾರ್ಮ್‌ ಐಸಿಸಿ ಚಾಂಪಿಯನ್ಸ್ ಟ್ರೋಫಿ ಸೆಮಿಫೈನಲ್‌ ಪಂದ್ಯದಲ್ಲೂ ಮುಂದುವರೆದಿದೆ. ದುಬೈನಲ್ಲಿ ನಡೆಯುತ್ತಿರುವ ಚಾಂಪಿಯನ್ಸ್‌ ಟ್ರೋಫಿ ಪಂದ್ಯದಲ್ಲಿ ರೋಹಿತ್‌ ಸ್ಥಿರ ಪ್ರದರ್ಶನ ನೀಡುವಲ್ಲಿ ವಿಫಲರಾದರು. ಇವರು ತನ್ನ ಫೆವರೀಟ್‌ ತಂಡದ ವಿರುದ್ಧವೇ ರನ್‌ ಕಲೆ ಹಾಕುವಲ್ಲಿ ಪರದಾಟ ನಡೆಸಿದರು. ಈ ಟೂರ್ನಿಯಲ್ಲಿ ಬಾಂಗ್ಲಾದೇಶ ವಿರುದ್ಧದ ಪಂದ್ಯದಲ್ಲಿ ತಮ್ಮ ನೈಜ್ಯ ಆಟವನ್ನು ಪ್ರದರ್ಶಿಸಿದ ರೋಹಿತ್‌, ನಂತರದ ಪಂದ್ಯಗಳಲ್ಲಿ ರನ್‌ ಕಲೆ ಹಾಕುವಲ್ಲಿ ವಿಫಲರಾದರು.

ದುಬೈನಲ್ಲಿನ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಟಾಸ್‌ ಗೆದ್ದ ಆಸ್ಟ್ರೇಲಿಯಾ ಬ್ಯಾಟಿಂಗ್ ಮಾಡುವ ನಿರ್ಧಾರವನ್ನು ಮಾಡಿತು. ನಾಯಕ ಸ್ಟೀವನ್‌ ಸ್ಮಿತ್‌ ಹಾಗೂ ಅಲೆಕ್ಸ್‌ ಕ್ಯಾರಿ ಅವರ ಭರ್ಜರಿ ಅರ್ಧಶತಕದ ನೆರವಿನಿಂದ ಆಸ್ಟ್ರೇಲಿಯಾ 49.3 ಓವರ್‌ಗಳಲ್ಲಿ 264 ರನ್‌ಗಳಿಗೆ ಆಲೌಟ್ ಆಯಿತು. ಈ ಗುರಿಯನ್ನು ಬೆನ್ನಟ್ಟಿದ ಭಾರತದ ಆರಂಭ ಕಳಪೆಯಾಗಿತ್ತು. ಆರಂಭಿಕ ಶುಭಮನ್‌ ಗಿಲ್‌ (8) ಬೇಗನೆ ಪೆವಿಲಿಯನ್‌ ಸೇರಿದರು.

Rohit Sharma s Struggles Continue as India Falls Short in ICC Champions Trophy Semi-Final

ರೋಹಿತ್ ಶರ್ಮಾ ಒತ್ತಡದ ಸನ್ನಿವೇಶದಲ್ಲಿ ಬ್ಯಾಟಿಂಗ್ ಮಾಡುವಲ್ಲಿ ವಿಫಲರಾದರು. ಈ ವೇಳೆ ರೋಹಿತ್ ಶರ್ಮಾ ಅವರಿಗೆ ಎರಡನೇ ಓವರ್‌ನ 3ನೇ ಎಸೆತದಲ್ಲಿ ಹಾಗೂ ಮೂರನೇ ಓವರ್‌ನ ಕೊನೆಯ ಎಸೆತದಲ್ಲಿ ಎರಡು ಜೀವದಾನಗಳು ಸಿಕ್ಕಿದ್ದವು. ಆದರೆ ಈ ಜೀವದಾನದ ಲಾಭವನ್ನು ಪಡೆಯುವಲ್ಲಿ ರೋಹಿತ್‌ ವಿಫಲರಾದರು. ಪರಿಣಾಮ ಇವರ ಇನಿಂಗ್ಸ್‌ 28 ರನ್‌ಗಳಿಗೆ ಕೊನೆ ಗೊಂಡಿತು. ಈ ವೇಳೆ ಇವರು 3 ಬೌಂಡರಿ, 1 ಸಿಕ್ಸರ್ ಬಾರಿಸಿದ್ದಾರೆ. ಇವರು 21 ವರ್ಷದ ಕೂಪರ್ ಕಾನೋಲಿ ಅವರಿಗೆ ವಿಕೆಟ್‌ ಒಪ್ಪಿಸಿದರು.

ನಾಕೌಟ್‌ನಲ್ಲಿ ಫ್ಲಾಪ್‌

ರೋಹಿತ್ ಶರ್ಮಾ ಭಾರತ ತಂಡ ಕಂಡ ಶ್ರೇಷ್ಠ ಬ್ಯಾಟರ್‌. ಆದರೆ ಇವರು ಐಸಿಸಿ ಟೂರ್ನಿಯ ನಾಕೌಟ್ ಹಂತದಲ್ಲಿ ಸ್ಥಿರ ಬ್ಯಾಟಿಂಗ್ ನಡೆಸುವಲ್ಲಿ ಎಡವಿದ್ದಾರೆ. ಇವರು ಬಾಂಗ್ಲಾದೇಶದ ವಿರುದ್ಧ2015 ಏಕದಿನ ವಿಶ್ವಕಪ್‌ ಕ್ವಾರ್ಟರ್‌ ಫೈನಲ್‌ನಲ್ಲಿ ಹಾಗೂ 2017ರ ಚಾಂಪಿಯನ್ಸ್‌ ಟ್ರೋಫಿಯ ಸೆಮಿಫೈನಲ್‌ ಪಂದ್ಯದಲ್ಲಿ ಶತಕ ಸಿಡಿಸಿದರು. ಇದಾದ ಬಳಿಕ ಇವರ ಬ್ಯಾಟ್‌ನಿಂದ ದೊಡ್ಡ ಇನಿಂಗ್ಸ್ ಬಾರಲಿಲ್ಲ. ಇವರು 2022 ಟಿ20 ವಿಶ್ವಕಪ್‌ನ ಸೆಮಿಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧದ ಅರ್ಧಶತಕ ಬಾರಿಸಿದ್ದರು. ಆದರೆ ಇವರು ನಾಕೌಟ್‌ ಪಂದ್ಯಗಳಲ್ಲಿ ದೊಡ್ಡ ಇನಿಂಗ್ಸ್‌ ಕಟ್ಟಲಿಲ್ಲ.

Rohit Sharma s Struggles Continue as India Falls Short in ICC Champions Trophy Semi-Final

ರೋಹಿತ್ ಶರ್ಮಾ ಪ್ರಸಕ್ತ ಚಾಂಪಿಯನ್ಸ್ ಟ್ರೋಫಿಯಲ್ಲಿ ಆಡಿದ 4 ಪಂದ್ಯಗಳಲ್ಲಿ 26ರ ಸರಾಸರಿಯಲ್ಲಿ 104 ರನ್‌ ಸಿಡಿಸಿ ನಿರಾಸೆ ಅನುಭವಿಸಿದ್ದಾರೆ. ಇವರು ಸದ್ಯ ಫಾರ್ಮ್‌ನಿಂದ ಬಳಲುತ್ತಿದ್ದಾರೆ. ಇವರು ಬಾರ್ಡರ್‌ ಗವಾಸ್ಕರ್‌ ಟ್ರೋಫಿಯ ಟೆಸ್ಟ್‌ ಪಂದ್ಯದಲ್ಲೂ ಇವರು ಆಸ್ಟ್ರೇಲಿಯಾ ತಂಡದ ಬೌಲರ್‌ಗಳಿಗೆ ಕಾಡಲಿಲ್ಲ. ಇವರು ಈ ಟೂರ್ನಿಯಲ್ಲಿ ರನ್‌ ಕಲೆ ಹಾಕುವಲ್ಲಿ ವಿಫಲರಾಗಿದ್ದಕ್ಕೆ ದೇಶೀಯ ಟೂರ್ನಿಯಲ್ಲಿ ಬ್ಯಾಟ್ ಮಾಡಿದರು. ಆದರೆ ರಣಜಿ ಟೂರ್ನಿಯಲ್ಲಿ ಇವರು ನಿರಾಸೆ ಅನುಭವಿಸಿದ್ದರು. ಆದರೆ ಭಾರತದಲ್ಲಿ ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಯ ಕಟಕ್‌ನಲ್ಲಿ ನಡೆದ ಪಂದ್ಯದಲ್ಲಿ ಶತಕ ಬಾರಿಸಿ ಅಬ್ಬರಿಸಿದ್ದರು. ಆದರೆ ಚಾಂಪಿಯನ್ಸ್‌ ಟ್ರೋಫಿಯಲ್ಲಿ ಸ್ಥಿರ ಬ್ಯಾಟಿಂಗ್ ಪ್ರದರ್ಶನ ನೀಡುವಲ್ಲಿ ವಿಫಲರಾದರು.

Story first published: Tuesday, March 4, 2025, 21:32 [IST]
Other articles published on Mar 4, 2025
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+