For Quick Alerts
ALLOW NOTIFICATIONS  
For Daily Alerts
 

ವಿಶ್ವಕಪ್‌: ದಾಖಲೆಗಳ ಸರದಾರ 'ಹಿಟ್‌ಮ್ಯಾನ್‌' ರೋಹಿತ್‌ ಶರ್ಮಾ

Rohit smashes record for most centuries in one World Cup

ಲೀಡ್ಸ್‌, ಜುಲೈ 07: ಪ್ರಸಕ್ತ ಏಕದಿನ ಕ್ರಿಕೆಟ್‌ ವಿಶ್ವಕಪ್‌ ಟೂರ್ನಿಯಲ್ಲಿ ದಾಖಲೆಗಳ ಮೇಲೆ ದಾಖಲೆ ಬರೆದಿರುವ ಟೀಮ್‌ ಇಂಡಿಯಾದ ಉಪನಾಯಕ ರೋಹಿತ್‌ ಶರ್ಮಾ, ಇದೇ ಶನಿವಾರ ನಡೆದ ಶ್ರೀಲಂಕಾ ವಿರುದ್ಧದ ಪಂದ್ಯದಲ್ಲೂ ಶತಕ ಸಿಡಿಸಿ ಒಂದೇ ಆವೃತ್ತಿಯ ವಿಶ್ವಕಪ್‌ನಲ್ಲಿ ಐದು ಶತಕಗಳನ್ನು ಬಾರಿಸಿದ ವಿಶ್ವದ ಮೊದಲ ಆಟಗಾರ ಎನಿಸಿದರು.

ವಿಶ್ವಕಪ್‌ ವೇಳಾಪಟ್ಟಿ / ಮುಖಾಮುಖಿ ದಾಖಲೆಗಳು / ಅಂಕಪಟ್ಟಿ

2015ರ ವಿಶ್ವಕಪ್‌ ಟೂರ್ನಿಯಲ್ಲಿ ಬಾಂಗ್ಲಾದೇಶ ವಿರುದ್ಧ ತಮ್ಮ ಚೊಚ್ಚಲ ವಿಶ್ವಕಪ್‌ ಶತಕ ಬಾರಿಸಿದ್ದ ರೋಹಿತ್‌, ಈ ಬಾರಿ ಒಟ್ಟು 5 ಶತಕಗಳೊಂದಿಗೆ ಒಟ್ಟು ಶತಕಗಳ ಗಳಿಕೆಯನ್ನು 6ಕ್ಕೆ ವಿಸ್ತರಿಸಿದ್ದಾರೆ. ಈ ಮೂಲಕ ವಿಶ್ವಕಪ್‌ನಲ್ಲಿ ಸಾರ್ವಕಾಲಿಕ ಅತಿ ಹೆಚ್ಚು ಶತಕ ಬಾರಿಸಿದವರ ಪೈಕಿ ಸಚಿನ್‌ ತೆಂಡೂಲ್ಕರ್‌ ಅವರ ದಾಖಲೆ ಸರಿಗಟ್ಟಿದ್ದಾರೆ.

ಇನ್ನು ಲೀಗ್‌ ಹಂತದಲ್ಲಿ ಅತಿ ಹೆಚ್ಚು ರನ್‌ಗಳಿಸಿದ ಬ್ಯಾಟ್ಸ್‌ಮನ್‌ ಎಂಬ ವಿಶ್ವ ದಾಖಲೆಯನ್ನೂ ರೋಹಿತ್‌ ತಮ್ಮದಾಗಿಸಿಕೊಂಡಿದ್ದಾರೆ. 2003ರ ವಿಶ್ವಕಪ್‌ ಟೂರ್ನಿಯಲ್ಲಿ ಸಚಿನ್‌ ತೆಂಡೂಲ್ಕರ್‌ ಲೀಗ್‌ ಹಂತದಲ್ಲಿ ಒಟ್ಟು 586 ರನ್‌ಗಳನ್ನು ಗಳಿಸಿದ್ದು ವಿಶ್ವ ದಾಖಲೆಯಾಗಿತ್ತು. ಈ ದಾಖಲೆಯನ್ನು ಬಾಂಗ್ಲಾದೇಶ ತಂಡದ ಆಲ್‌ರೌಂಡರ್‌ ಶಾಕಿಬ್‌ ಅಲ್‌ ಹಸನ್‌ (606) ಇದೇ ಶುಕ್ರವಾರ ಮುರಿದಿದ್ದರು. ಬಳಿಕ ಶ್ರೀಲಂಕಾ ವಿರುದ್ಧದ ಪಂದ್ಯದಲ್ಲಿ ಶತಕ ಸಿಡಿಸಿದ ರೋಹಿತ್‌, ಒಟ್ಟು 647 ರನ್‌ಗಳ ಗಳಿಕೆಯೊಂದಿಗೆ ಈ ವಿಶ್ವ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ. ಆಸ್ಟ್ರೇಲಿಯಾದ ಡೇವಿಡ್‌ ವಾರ್ನರ್‌ (638) ಈ ಪಟ್ಟಿಯಲ್ಲಿ ದ್ವಿತೀಯ ಸ್ಥಾನದಲ್ಲಿದ್ದಾರೆ.

ಪ್ರಸಕ್ತ ವಿಶ್ವಕಪ್‌ ಟೂರ್ನಿಯಲ್ಲಿ ರೋಹಿತ್‌ ಶರ್ಮಾ ಆಡಿದ 8 ಪಂದ್ಯಗಳಲ್ಲಿ ಕ್ರಮವಾಗಿ 122*, 57, 140, 01, 18, 102, 104 ಮತ್ತು 104 ರನ್‌ಗಳನ್ನು ಚೆಚ್ಚಿದ್ದಾರೆ. ಅಂದಹಾಗೆ ವಿಶ್ವಕಪ್‌ ಟೂರ್ನಿಯಲ್ಲಿ ಹ್ಯಾಟ್ರಿಕ್‌ ಶತಕ ಸಿಡಿಸಿದ ಭಾರತದ ಮೊತ್ತ ಮೊದಲ ಆಟಗಾರ ಕೂಡ ಹಿಟ್‌ಮ್ಯಾನ್‌ ಎಂಬುದು ವಿಶೇಷ.

ರೋಹಿತ್‌ ಮುಡಿಗೇರಿದ ಪ್ರಮುಖ ದಾಖಲೆಯ ಗರಿಗಳು

#01
ವಿಶ್ವಕಪ್‌ ಟೂರ್ನಿಯಲ್ಲಿ ಹ್ಯಾಟ್ರಿಕ್‌ ಶತಕದ ಸಾಧನೆ ಮಾಡಿದ ಮೊತ್ತ ಮೊದಲ ಭಾರತೀಯ ಬ್ಯಾಟ್ಸ್‌ಮನ್‌ ರೋಹಿತ್‌ ಶರ್ಮಾ.

#06
ವಿಶ್ವಕಪ್‌ ಟೂರ್ನಿಯ ಇತಿಹಾಸದಲ್ಲಿ ಸಾರ್ವಕಾಲಿಕ ಅತಿ ಹೆಚ್ಚು ಶತಕಗಳನ್ನು ಬಾರಿಸಿದ ದಾಖಲೆ. ಬ್ಯಾಟಿಂಗ್‌ ದಿಗ್ಗಜ ಸಚಿನ್‌ ತೆಂಡೂಲ್ಕರ್‌ 6 ಶತಕಗಳನ್ನು ಬಾರಿಸಿದ ವಿಶ್ವದ ಮೊದಲ ಬ್ಯಾಟ್ಸ್‌ಮನ್‌. ಪ್ರಸಕ್ತ ವಿಶ್ವಕಪ್‌ನಲ್ಲಿ ಭಾರತ ಫೈನಲ್‌ ತಲುಪಿದರೆ ರೋಹಿತ್‌ಗೆ ಇನ್ನೆರಡು ಪಂದ್ಯಗಳು ಲಭ್ಯವಾಗಲಿದ್ದು ಸಚಿನ್‌ ದಾಖಲೆ ಮುರಿಯುವ ಸುವರ್ಣಾವಕಾಶ ಹೊಂದಿದ್ದಾರೆ.

#04
ವಿಶ್ವಕಪ್‌ ಟೂರ್ನಿಯ ಒಂದೇ ಆವೃತ್ತಿಯಲ್ಲಿ ಅತಿ ಹೆಚ್ಚು ಪಂದ್ಯಶ್ರೇಷ್ಠ ಗೌರವ ಪಡೆದ ದಾಖಲೆಯನ್ನೂ ರೋಹಿತ್‌ ಸರಿಗಟ್ಟಿದ್ದಾರೆ. 2003ರ ವಿಶ್ವಕಪ್‌ನಲ್ಲಿ ನಾಲ್ಕು ಬಾರಿ ಪಂದ್ಯಶ್ರೇಷ್ಠ ಗೌರವ ಪಡೆದಿದ್ದರು.

#20
ಆಸ್ಟ್ರೇಲಿಯಾ ಮತ್ತು ನ್ಯೂಜಿಲೆಂಡ್‌ ಆತಿಥ್ಯದಲ್ಲಿ ನಡೆದ 2015ರ ವಿಶ್ವಕಪ್‌ ಬಳಿಕ ಏಕದಿನ ಕ್ರಿಕೆಟ್‌ನಲ್ಲಿ ರೋಹಿತ್‌ ಒಟ್ಟು 20 ಶತಕಗಳನ್ನು ಸಿಡಿಸಿದ್ದಾರೆ. ಈ ಪಟ್ಟಿಯಲ್ಲಿ ವಿರಾಟ್‌ ಕೊಹ್ಲಿ (18) ಎರಡನೇ ಸ್ಥಾನದಲ್ಲಿದ್ದಾರೆ.

#647
ಪ್ರಸಕ್ತ ವಿಶ್ವಕಪ್‌ ಟೂರ್ನಿಯಲ್ಲಿ ರೋಹಿತ್‌ ಗಳಿಸಿರುವ ಒಟ್ಟು ರನ್‌. ಇನ್ನು ವಿಶ್ವಕಪ್‌ ಟೂರ್ನಿಯ ಒಂದೇ ಆವೃತ್ತಿಯಲ್ಲಿ ಅತಿ ಹೆಚ್ಚು ರನ್‌ ಗಳಿಸಿದ ದಾಖಲೆಯ ಹೊಂದಿರುವ ಸಚಿನ್‌ ತೆಂಡೂಲ್ಕರ್‌ (673) ಅವರನ್ನು ಹಿಂದಿಕ್ಕಲು ರೋಹಿತ್‌ಗೆ ಇನ್ನು 27 ರನ್‌ಗಳ ಅಗತ್ಯವಿದೆ.

Story first published: Sunday, July 7, 2019, 16:31 [IST]
Other articles published on Jul 7, 2019
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+