ವಿಶ್ವಕಪ್‌ನಲ್ಲಿ 'ಹಿಟ್‌ಮ್ಯಾನ್' ರೋಹಿತ್ ಶರ್ಮಾ ಶತಕಗಳ ದಾಖಲೆ!

ಮ್ಯಾಂಚೆಸ್ಟರ್, ಜೂನ್ 16: ಟೀಮ್ ಇಂಡಿಯಾದ ಉಪ ನಾಯಕ ರೋಹಿತ್ ಶರ್ಮಾ ಪ್ರಸಕ್ತ ವಿಶ್ವಕಪ್ ಟೂರ್ನಿಯಲ್ಲಿ ಪಾಕಿಸ್ತಾನ ವಿರುದ್ಧ ಭರ್ಜರಿ ಬ್ಯಾಟಿಂಗ್ ನಡೆಸಿ ವೃತ್ತಿ ಬದುಕಿನ 24ನೇ ಒಡಿಐ ಶತಕ ಸಿಡಿಸಿ ಅಬ್ಬರಿಸಿದರು.
ವಿಶ್ವಕಪ್ ವೇಳಾಪಟ್ಟಿ / ಮುಖಾಮುಖಿ ದಾಖಲೆಗಳು / ಅಂಕಪಟ್ಟಿ
ಪಂದ್ಯದಲ್ಲಿ ಕೇವಲ 34 ಎಸೆತಗಳಲ್ಲಿ ಅರ್ಧಶತಕ ಪೂರೈಸಿದ ಹಿಟ್‌ಮ್ಯಾನ್ ಖ್ಯಾತಿಯ ರೋಹಿತ್, ನೋಡ ನೋಡುತ್ತಿದ್ದಂತೆಯೇ 85 ಎಸೆತಗಳಲ್ಲಿ ಶತಕ ಸಿಡಿಸಿ ಟೀಮ್ ಇಂಡಿಯಾದ ಬೃಹತ್ ಮೊತ್ತಕ್ಕೆ ಬೇಕಿದ್ದ ಭರ್ಜರಿ ಅಡಿಪಾಯ ಹಾಕಿಕೊಟ್ಟರು. ಇದು ಪ್ರಸಕ್ತ ವಿಶ್ವಕಪ್ ಟೂರ್ನಿಯಲ್ಲಿ ರೋಹಿತ್ ಅವರ ಎರಡನೇ ಶತಕವಾಗಿ. ಇದಕ್ಕೂ ಮೊದಲು ದಕ್ಷಿಣ ಆಫ್ರಿಕಾ ವಿರುದ್ಧದ ಪಂದ್ಯದಲ್ಲಿ ಸೆಂಚುರಿ ಬಾರಿಸಿದ್ದರು.
ಇನ್ನು ವಿಶ್ವಕಪ್ ಟೂರ್ನಿಗಳಲ್ಲಿ ರೋಹಿತ್ ಅವರ ಮೂರನೇ ಶತಕ ಇದಾಗಿದೆ. ಈ ಮೂಲಕ ವಿಶ್ವಕಪ್ ಟೂರ್ನಿಗಳಲ್ಲಿ 3 ಶತಕಗಳನ್ನು ಗಳಿಸಿದ ನಾಲ್ಕನೇ ಬ್ಯಾಟ್ಸ್‌ಮನ್ ಎನಿಸಿದ್ದಾರೆ. ಕೇವಲ ಸಚಿನ್ ತೆಂಡೂಲ್ಕರ್ (6), ಸೌರವ್ ಗಂಗೂಲಿ (4) ಮತ್ತು ಶಿಖರ್ ಧವನ್ (3) ಈ ಪಟ್ಟಿಯಲ್ಲಿ ಮುಂದಿದ್ದಾರೆ.
ಪಾಕಿಸ್ತಾನದ ಬೌಲರ್‌ಗಳನ್ನು ಮನಬಂದಂತೆ ದಂಡಿಸಿ ಏಕದಿನ ಕ್ರಿಕೆಟ್‌ನಲ್ಲಿ ವಿಶ್ವ ದಾಖಲೆಯ ನಾಲ್ಕನೇ ದಿವಶತಕದತ್ತ ಕಣ್ಣಿಟ್ಟಿದ್ದ ರೋಹಿತ್, 113 ಎಸೆತಗಳಲ್ಲಿ 14 ಫೋರ್ ಮತ್ತು 3 ಸಿಕ್ಸರ್‌ಗಳನ್ನು ಒಳಗೊಂಡ 140 ರನ್‌ಗಳನ್ನು ಗಳಿಸಿದ್ದಾಗ ಫೈನಲ್ ಕಡೆಗಿನ ಫೀಲ್ಡರ್ ಅವರನ್ನು ಗಮನಿಸದೆ ಅನಗತ್ಯ ಹೊಡೆತಕ್ಕೆ ಕೈ ಹಾಕಿ ವಿಕೆಟ್ ಕೈಚೆಲ್ಲಿದರು.

23 ವರ್ಷಗಳ ದಾಖಲೆ ಮುರಿದ ರೋಹಿತ್-ರಾಹುಲ್
ಪ್ರಸಕ್ತ ವಿಶ್ವಕಪ್ ಟೂರ್ನಿಯಲ್ಲಿ ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ಭಾರತದ ಪರ ಆರಂಭಿಕರಾಗಿ ಕಣಕ್ಕಿಳಿದ ರೋಹಿತ್ ಶರ್ಮಾ ಮತ್ತು ಕೆ.ಎಲ್ ರಾಹುಲ್ 23 ವರ್ಷಗಳ ದಾಖಲೆಯನ್ನು ಪುಡಿಗಟ್ಟಿದ್ದಾರೆ. ಅಂದಹಾಗೆ ಏಕದಿನ ಕ್ರಿಕೆಟ್‌ನಲ್ಲಿ ಇದೇ ಮೊದಲ ಬಾರಿ ಇನಿಂಗ್ಸ್ ಆರಂಭಿಸಿದ ರೋಹಿತ್ ಮತ್ತು ರಾಹುಲ್ ಜೋಡಿ ಮೊದಲ ವಿಕೆಟ್‌ಗೆ 137 ಎಸೆತಗಳಲ್ಲಿ 136 ರನ್‌ಗಳ ಜೊತೆಯಾಟ ನಡೆಸಿತು. ಈ ಮೂಲಕ ವಿಶ್ವಕಪ್‌ನಲ್ಲಿ ಮೊದಲ ವಿಕೆಟ್‌ಗೆ ಭಾರತದ ಗರಿಷ್ಠ ರನ್‌ಗಳ ಜೊತೆಯಾಟವಾಡಿದ್ದ ಸಚಿನ್ ತೆಂಡೂಲ್ಕರ್ ಮತ್ತು ನವಜೋತ್ ಸಿಂಗ್ ಸಿಧು ಅವರ 90 ರನ್‌ಗಳ ದಾಖಲೆಯನ್ನು ನುಚ್ಚು ನೂರು ಮಾಡಿದ್ದಾರೆ. ಸಚಿನ್ ಮತ್ತು ಸಿಧು ಜೋಡಿ 1996ರ ವಿಶ್ವಕಪ್‌ನಲ್ಲಿ ಭಾರತಕ್ಕೆ 287 ರನ್‌ಗಳನ್ನು ತಂದುಕೊಡುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಅಂದು ಭಾರತಕ್ಕೆ 37 ರನ್‌ಗಳ ಗೆಲುವು ಸಿಕ್ಕಿತ್ತು. ಇದೇ ವೇಳೆ ಪಾಕಿಸ್ತಾನ ವಿರುದ್ಧ ವಿಶ್ವಕಪ್ ಟೂರ್ನಿಯಲ್ಲಿ ಶತಕದ ಜೊತೆಯಾಟವಾಡಿದ ಭಾರತದ ಮೊತ್ತ ಮೊದಲ ಆರಂಭಿಕ ಜೋಡಿ ಎಂಬ ಕೀರ್ತಿಗೂ ರೋಹಿತ್ ಮತ್ತು ರಾಹುಲ್ ಪಾತ್ರರಾಗಿದ್ದಾರೆ.

ಧೋನಿ ದಾಖಲೆ ಮುರಿದ ರೋಹಿತ್
ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ಮೊದಲ ಸಿಕ್ಸರ್ ಸಿಡಿಸುವ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಭಾರತದ ಪರ ಅತಿ ಹೆಚ್ಚು ಸಿಕ್ಸರ್‌ಗಳನ್ನು ಸಿಡಿಸಿದ ದಾಖಲೆಯನ್ನು ರೋಹಿತ್ ತಮ್ಮದಾಗಿಸಿಕೊಂಡರು. ಪಂದ್ಯಕ್ಕೂ ಮುನ್ನ ಎಂ.ಎಸ್ ಧೋನಿ ಮತ್ತು ರೋಹಿತ್ ಒಟ್ಟು 355 ಸಿಕ್ಸರ್‌ಗಳೊಂದಿಗೆ ಸಮಬಲದಲ್ಲಿದ್ದರು ಪಂದ್ಯದಲ್ಲಿ ಒಟ್ಟು 3 ಸಿಕ್ಸರ್ ಸಿಡಿಸಿದ ಹಿಟ್‌ಮ್ಯಾನ್ ತಮ್ಮ ಒಟ್ಟು ಸಿಕ್ಸರ್‌ಗಳನ್ನು 358ಕ್ಕೆ ಏರಿಸಿ ದಾಖಲೆ ತಮ್ಮದಾಗಿಸಿಕೊಂಡಿದ್ದಾರೆ.

ವಿಶ್ವಕಪ್‌ನಲ್ಲಿ ಅತಿ ಹೆಚ್ಚು ಶತಕಗಳನ್ನು ಸಿಡಿಸಿರುವ ಭಾರತೀಯರು
ಸಚಿನ್ ತೆಂಡೂಲ್ಕರ್ (06)
ಸೌರವ್ ಗಂಗೂಲಿ (04)
ಶಿಖರ್ ಧವನ್ (03)
ರೋಹಿತ್ ಶರ್ಮಾ (03)
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications