
ನ್ಯೂಜಿಲೆಂಡ್ ತಂಡದ ಅನುಭವಿ ಆಟಗಾರ ಕೇನ್ ವಿಲಿಯಮ್ಸನ್ ನ್ಯೂಜಿಲೆಂಡ್ ಪರವಾಗಿ ಟೆಸ್ಟ್ ಕ್ರಿಕೆಟ್‌ನಲ್ಲಿ ವಿಶೇಷ ದಾಖಲೆ ಬರೆದಿದ್ದಾರೆ. ಟೆಸ್ಟ್ ಕ್ರಿಕೆಟ್‌ನಲ್ಲಿ ನ್ಯೂಜಿಲೆಂಡ್ ಪರವಾಗಿ ಅತಿ ಹೆಚ್ಚು ರನ್‌ಗಳಿಸಿದ ಆಟಗಾರ ಎನಿಸಿದ್ದಾರೆ ಕೇನ್ ವಿಲಿಯಮ್ಸನ್. ಇದಕ್ಕೂ ಮುನ್ನ ಈ ದಾಖಲೆ ರಾಸ್ ಟೇಲರ್ ಹೆಸರಿನಲ್ಲಿತ್ತು. ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯ ಎರಡನೇ ಪಂದ್ಯದ ಎರಡನೇ ಇನ್ನಿಂಗ್ಸ್‌ನಲ್ಲಿ ಕೇನ್ ಈ ದಾಖಲೆ ಮಾಡಿದ್ದಾರೆ.
ರಾಸ್ ಟೇಲರ್ ದಾಖಲೆ ಮುರಿಯಲು ಕೇನ್ ವಿಲಿಯಮ್ಸನ್‌ಗೆ ಎರಡನೇ ಇನ್ನಿಂಗ್ಸ್‌ನಲ್ಲಿ ಕೇವಲ ಮೂರು ರನ್‌ಗಳ ಅಗತ್ಯ ಮಾತ್ರವೇ ಇತ್ತು. ನಾಲ್ಕನೇ ದಿನಾಟದಲ್ಲಿ ಬೌಂಡರಿ ಸಿಡಿಸುವ ಮೂಲಕ ಈ ದಾಖಲೆ ಮುರಿದಿದ್ದಾರೆ. ರಾಸ್ ಟೇಲರ್ ಟೆಸ್ಟ್ ಕ್ರಿಕೆಟ್‌ನಲ್ಲಿ 7683 ರನ್‌ಗಳಿಸಿ ಈ ದಾಖಲೆ ತನ್ನ ಹೆಸರಿನಲ್ಲಿ ಹೊಂದಿದ್ದರು.
ಈ ದಾಖಲೆ ಮುರಿದ ಕೇನ್ ವಿಲಿಯಮ್ಸನ್ ಅವರನ್ನು ರಾಸ್ ಟೇಲರ್ ಪ್ರಶಂಸಿಸಿ ಟ್ವೀಟ್ ಮಾಡಿದ್ದಾರೆ. ಕೇನ್ ಪರಿಶ್ರಮ, ಬದ್ಧತೆ ಹಾಗೂ ತಲ್ಲೀನತೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ ರಾಸ್ ಟೇಲರ್. "ನ್ಯೂಜಿಲೆಂಡ್ ಪರವಾಹಿ ಅತಿ ಹೆಚ್ಚು ಟೆಸ್ಟ್ ರನ ಗಳಿಸಿದ ಆಟಗಾರ ಎನಿಸಿಕೊಂಡಿರುವುದಕ್ಕೆ ಕೇನ್ ನಿಮಗೆ ಅಭಿನಂದನೆ. ಈ ಸಾಧನೆಯು ಟೆಸ್ಟ್ ಕ್ರಿಕೆಟ್‌ಗಾಗಿ ನೀವು ಮಾಡಿರುವ ಕಠಿಣ ಪರಿಶ್ರಮ ಮತ್ತು ಸಮರ್ಪಣೆಗೆ ಸಾಕ್ಷಿಯಾಗಿದೆ. ಇನ್ನಷ್ಟು ಹಲವು ದಾಖಲೆಗಳು ನಿಮ್ಮಿಂದ ಬರಲಿ" ಎಂದು ರಾಸ್ ಟೇಲರ್ ಹಾರೈಸಿದ್ದಾರೆ.
ಕುತೂಹಲ ಮೂಡಿಸಿದ ಪಂದ್ಯ: ಇನ್ನು ಇಂಗ್ಲೆಂಡ್ ಹಾಗೂ ನ್ಯೂಜಿಲೆಂಡ್ ನಡುವಿನ ಟೆಸ್ಟ್ ಸರಣಿಯ ಎರಡನೇ ಹಾಗೂ ಅಂರಿಮ ಪಮದ್ಯದ ಅಂತಿಮ ದಿನದಾಟ ತೀವ್ರ ಕುತೂಹಲ ಮೂಡಿಸಿದೆ. ಮೊದಲ ಇನ್ನಿಂಗ್ಸ್‌ನಲ್ಲಿ 435/5 ರನ್‌ಗಳಿಸಿ ಡಿಕ್ಲೇರ್ ಮಾಡಿದ್ದ ಇಂಗ್ಲೆಂಡ್ ಬಳಿಕ 209 ರನ್‌ಗಳಿಗೆ ನ್ಯೂಜಿಲೆಂಡ್ ತಂಡವನ್ನು ಆಲೌಟ್ ಮಾಡಿತ್ತು. ಹೀಗಾಗಿ ಆತಿಥೆಯ ನ್ಯೂಜಿಲೆಂಡ್ ತಂಡಕ್ಕೆ ಫಾಲೋಆನ್ ಹೇರಿತು ಇಂಗ್ಲೆಂಡ್. ಆದರೆ ಎರಡನೇ ಇನ್ನಿಂಗ್ಸ್‌ನಲ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ ಕಾರಣ ಪೈಪೋಟಿ ಮೊತ್ತ ದಾಖಲಿಸಲು ಕಿವೀಸ್ ಸಾಧ್ಯವಾಯಿತು.
ಎರಡನೇ ಇನ್ನಿಂಗ್ಸ್‌ನಲ್ಲಿ 483 ರನ್‌ಗಳಿಗೆ ಆಲೌಟ್ ಆದ ನ್ಯೂಜಿಲೆಂಡ್ ಇಂಗ್ಲೆಂಡ್ ತಂಡಕ್ಕೆ ಗೆಲ್ಲಲು 258 ರನ್‌ಗಳ ಗುರಿ ನಿಗದಿಪಡಿಸಿತು. ಇನ್ನು ನಾಲ್ಕನೇ ದಿದ ಅಂತ್ಯದಲ್ಲಿ ಎರಡನೇ ಇನ್ನಿಂಗ್ಸ್‌ನ ಬ್ಯಾಟಿಂಗ್ ಆರಂಭಿಸಿರುವ ಇಂಗ್ಲೆಂಡ್ 48 ರನ್‌ಗಳಿಗೆ 1 ವಿಕೆಟ್ ಕಳೆದುಕೊಂಡಿದೆ. ಕೊನೆಯ ದಿನ ಇಂಗ್ಲೆಂಡ್‌ಗೆ ಗೆಲ್ಲಲು 210 ರನ್‌ಗಳ ಅಗತ್ಯವಿದ್ದು ಕಿವೀಸ್ ಪಡೆಗೆ 9 ವಿಕೆಟ್ ಕಬಳಿಸುವ ಸವಾಲಿದೆ.
ನ್ಯೂಜಿಲೆಂಡ್ ಆಡುವ ಬಳಗ: ಟಾಮ್ ಲ್ಯಾಥಮ್, ಡೆವೊನ್ ಕಾನ್ವೇ, ಕೇನ್ ವಿಲಿಯಮ್ಸನ್, ವಿಲ್ ಯಂಗ್, ಹೆನ್ರಿ ನಿಕೋಲ್ಸ್, ಡೇರಿಲ್ ಮಿಚೆಲ್, ಟಾಮ್ ಬ್ಲುಂಡೆಲ್ (ವಿಕೆಟದ ಕೀಪರ್), ಮೈಕೆಲ್ ಬ್ರೇಸ್‌ವೆಲ್, ಟಿಮ್ ಸೌಥಿ (ನಾಯಕ), ಮ್ಯಾಟ್ ಹೆನ್ರಿ, ನೀಲ್ ವ್ಯಾಗ್ನರ್
ಬೆಂಚ್: ಸ್ಕಾಟ್ ಕುಗ್ಗೆಲೀಜ್ನ್, ಬ್ಲೇರ್ ಟಿಕ್ನರ್, ಜಾಕೋಬ್ ಡಫಿ, ಇಶ್ ಸೋಧಿ
ಇಂಗ್ಲೆಂಡ್ ಆಡುವ ಬಳಗ: ಝಾಕ್ ಕ್ರಾಲಿ, ಬೆನ್ ಡಕೆಟ್, ಆಲಿ ಪೋಪ್, ಜೋ ರೂಟ್, ಹ್ಯಾರಿ ಬ್ರೂಕ್, ಬೆನ್ ಸ್ಟೋಕ್ಸ್ (ನಾಯಕ), ಬೆನ್ ಫೋಕ್ಸ್ (ವಿಕೆಟ್ ಕೀಪರ್), ಆಲಿ ರಾಬಿನ್ಸನ್, ಸ್ಟುವರ್ಟ್ ಬ್ರಾಡ್, ಜ್ಯಾಕ್ ಲೀಚ್, ಜೇಮ್ಸ್ ಆಂಡರ್ಸನ್
ಬೆಂಚ್: ಓಲಿ ಸ್ಟೋನ್, ಡೇನಿಯಲ್ ಲಾರೆನ್ಸ್, ವಿಲ್ ಜ್ಯಾಕ್ಸ್, ಮ್ಯಾಥ್ಯೂ ಪಾಟ್ಸ್