Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಐಪಿಎಲ್ 2020: ಬೆಂಗಳೂರು vs ರಾಜಸ್ಥಾನ್, ಟಾಸ್ ರಿಪೋರ್ಟ್, ಪ್ಲೇಯಿಂಗ್ XI

Royal Challengers Bangalore vs Rajasthan Royals toss report and playing XI

ಐಪಿಎಲ್‌ನಲ್ಲಿ ಇಂದು ಮೊದಲ ಬಾರಿಗೆ ಡಬಲ್ ಹೆಡರ್ ನಡೆಯಲಿದೆ. ಇಂದಿನ ಮೊದಲ ಪಂದ್ಯದಲ್ಲಿ ವಿರಾಟ್ ಕೊಹ್ಲಿ ನೇತೃತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಸ್ಟೀವ್ ಸ್ಮಿತ್ ನೇತೃತ್ವದ ರಾಜಸ್ಥಾನ್ ರಾಯಲ್ಸ್ ಮುಖಾಮುಖಿಯಾಗಿದೆ. ಟಾಸ್ ಪ್ರಕ್ರಿಯೆ ಮುಗಿದಿದ್ದು ಟಾಸ್ ಗೆದ್ದಿರುವ ರಾಜಸ್ಥಾನ್ ರಾಯಲ್ಸ್ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.

ರಾಜಸ್ಥಾನ್ ರಾಯಲ್ಸ್ ತಂಡದ ಬ್ಯಾಟಿಂಗ್ ಪಡೆ ಮೊದಲ ಎರಡು ಪಂದ್ಯಗಳಲ್ಲಿ ಭಾರೀ ಸದ್ದು ಮಾಡಿತ್ತು. ಆದರೆ ಮೂರನೇ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಕಳಪೆ ಬ್ಯಾಟಿಂಗ್ ಪ್ರದರ್ಶಿಸಿ ಸೋಲು ಕಂಡಿತ್ತು. ಹೀಗಾಗಿ ಇಂದಿನ ಪಂದ್ಯದಲ್ಲಿ ಆರ್‌ಸಿಬಿ ಬೌಲಿಂಗ್ ಪಡೆಯ ವಿರುದ್ಧ ಯಾವ ರೀತಿ ಹೋರಾಡಲಿದೆ ಎಂಬುದನ್ನು ಕಾದು ನೋಡಬೇಕಿದೆ.

ಇನ್ನು ವಿರಾಟ್ ಕೊಹ್ಲಿ ನೇತೃತ್ವದ ಆರ್‌ಸಿಬಿ ಕಳೆದ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಕಳಪೆ ಪ್ರದರ್ಶನದಲ್ಲೂ 200+ ರನ್ ಗಳಿಸಲು ಶಕ್ತವಾಗಿತ್ತು. ಹೀಗಾಗಿ ಬ್ಯಾಟಿಂಗ್ ಸಾಮರ್ಥ್ಯದ ಬಗ್ಗೆ ವಿಶ್ವಾಸವಿದೆ. ಆದರೆ ವಿರಾಟ್ ಕೊಹ್ಲಿ ಈ ಪಂದ್ಯದಲ್ಲಾದರೂ ತಮ್ಮ ಬ್ಯಾಟಿಂಗ್ ಲಯ ಕಂಡುಕೊಳ್ಳಬೇಕಾದ ಅನಿವಾರ್ಯತೆಯಿದೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ಆಡುವ ಬಳಗ: ದೇವದುತ್ ಪಡಿಕ್ಕಲ್, ಆರನ್ ಫಿಂಚ್, ವಿರಾಟ್ ಕೊಹ್ಲಿ (ನಾಯಕ), ಎಬಿ ಡಿವಿಲಿಯರ್ಸ್ (ವಿಕೆಟ್ ಕೀಪರ್), ಶಿವಮ್ ದುಬೆ, ಗುರ್ಕೀರತ್ ಸಿಂಗ್ ಮನ್, ವಾಷಿಂಗ್ಟನ್ ಸುಂದರ್, ಇಸುರು ಉದಾನಾ, ನವದೀಪ್ ಸೈನಿ, ಆಡಮ್ ಜಂಪಾ, ಯುಜ್ವೇಂದ್ರ ಚಾಹಲ್

ರಾಜಸ್ಥಾನ್ ರಾಯಲ್ಸ್ ಆಡುವ ಬಳಗ: ಜೋಸ್ ಬಟ್ಲರ್ (ವಿಕೆಟ್ ಕೀಪರ್), ಸ್ಟೀವನ್ ಸ್ಮಿತ್ (ನಾಯಕ), ಸಂಜು ಸ್ಯಾಮ್ಸನ್, ರಾಬಿನ್ ಉತ್ತಪ್ಪ, ರಿಯಾನ್ ಪರಾಗ್, ರಾಹುಲ್ ತೇವಟಿಯಾ, ಮಹಿಪಾಲ್ ಲೊಮರ್, ಟಾಮ್ ಕರ್ರನ್, ಶ್ರೇಯಾಸ್ ಗೋಪಾಲ್, ಜೋಫ್ರಾ ಆರ್ಚರ್, ಜಯದೇವ್ ಉನಾದ್ಕಟ್

Story first published: Saturday, October 3, 2020, 16:49 [IST]
Other articles published on Oct 3, 2020
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+