IPL 2024: ಆರ್‌ಸಿಬಿ- ಗುಜರಾತ್ ನಡುವೆ ಮೆಗಾಫೈಟ್; ಟಾಸ್ ವರದಿ, ಆಡುವ 11ರ ಬಳಗ
ಭಾನುವಾರ ಏಪ್ರಿಲ್ 28, 2024ರ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್)ನ ಮಧ್ಯಾಹ್ನದ ಮೊದಲ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಹಾಗು ಗುಜರಾತ್ ಟೈಟನ್ಸ್ ತಂಡಗಳು ಸೆಣಸಾಡುತ್ತಿವೆ. ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂ ಪಂದ್ಯ ಆರಂಭವಾಗಿದೆ.
ಈ ಪಂದ್ಯದಲ್ಲಿ ಮೊದಲು ಟಾಸ್ ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕ ಫಾಫ್ ಡು ಪ್ಲೆಸಿಸ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಹೀಗಾಗಿ ಶುಭ್ಮನ್ ಗಿಲ್ ಮುನ್ನಡೆಸುತ್ತಿರುವ ಗುಜರಾತ್ ಟೈಟನ್ಸ್ ತಂಡ ಬ್ಯಾಟಿಂಗ್ ಮಾಡಲಿದೆ. ಆರ್‌ಸಿಬಿ ಪರ ಈ ಪಂದ್ಯದಲ್ಲಿ ಗ್ಲೆನ್ ಮ್ಯಾಕ್ಸ್‌ವೆಲ್ ಕಣಕ್ಕೀಳಿದಿದ್ದಾರೆ.

ಗುಜರಾತ್ ಟೈಟನ್ಸ್ ಈವರೆಗೆ ಆಡಿರುವ 9 ಪಂದ್ಯಗಳಲ್ಲಿ 4ರಲ್ಲಿ ಜಯಗಳಿಸಿ ಅಂಕಪಟ್ಟಿಯಲ್ಲಿ 7ನೇ ಸ್ಥಾನದಲ್ಲಿದೆ. ಇತ್ತ ಆರ್‌ಸಿಬಿ 9 ಪಂದ್ಯಗಳ ಪೈಕಿ ಕೇವಲ ಎರಡರಲ್ಲಿ ಮಾತ್ರ ಗೆಲುವು ಸಾಧಿಸಿ ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದೆ.
ಆರ್‌ಸಿಬಿ vs ಜಿಟಿ ಪಂದ್ಯದ ಟಿವಿ, ಲೈವ್ ಸ್ಟ್ರೀಮಿಂಗ್ ವಿವರ :
ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಗುಜರಾತ್ ಟೈಟನ್ಸ್ ತಂಡಗಳ ನಡುವಿನ ಐಪಿಎಲ್ 2024ರ ರೋಚಕ ಪಂದ್ಯವನ್ನು ಭಾರತದಲ್ಲಿ ಟಿವಿಯಲ್ಲಿ ಸ್ಟಾರ್ ಸ್ಪೋರ್ಟ್ಸ್ ಚಾನೆಲ್‌ನಲ್ಲಿ ನೇರಪ್ರಸಾರ ಮಾಡಲಿದ್ದರೆ, ಮೊಬೈಲ್‌ನಲ್ಲಿ ಜಿಯೋಸಿನಿಮಾ ಅಪ್ಲಿಕೇಶನ್‌ನಲ್ಲಿ ಲೈವ್ ಸ್ಟ್ರೀಮಿಂಗ್ ಆಗಲಿದೆ.
ಆರ್‌ಸಿಬಿ vs ಜಿಟಿ ಆಡುವ 11ರ ಬಳಗ :
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ: ವಿರಾಟ್ ಕೊಹ್ಲಿ, ಫಾಫ್ ಡು ಪ್ಲೆಸಿಸ್ (ನಾಯಕ), ವಿಲ್ ಜಾಕ್ಸ್, ರಜತ್ ಪಾಟಿದಾರ್, ಗ್ಲೆನ್ ಮ್ಯಾಕ್ಸ್‌ವೆಲ್, ಕ್ಯಾಮೆರಾನ್ ಗ್ರೀನ್, ದಿನೇಶ್ ಕಾರ್ತಿಕ್ (ವಿ.ಕೀ), ಸ್ವಪ್ನಿಲ್ ಸಿಂಗ್, ಕರಣ್ ಶರ್ಮಾ, ಮೊಹಮ್ಮದ್ ಸಿರಾಜ್, ಯಶ್ ದಯಾಳ್
ಗುಜರಾತ್ ಟೈಟನ್ಸ್ ತಂಡ: ವೃದ್ಧಿಮಾನ್ ಸಹಾ(ವಿ.ಕೀ), ಶುಬ್ಮನ್ ಗಿಲ್(ನಾಯಕ), ಸಾಯಿ ಸುದರ್ಶನ್, ಡೇವಿಡ್ ಮಿಲ್ಲರ್, ಅಜ್ಮತುಲ್ಲಾ ಒಮರ್ಜಾಯ್, ರಾಹುಲ್ ತೆವಾಟಿಯಾ, ಶಾರುಖ್ ಖಾನ್, ರಶೀದ್ ಖಾನ್, ರವಿಶ್ರೀನಿವಾಸನ್ ಸಾಯಿ ಕಿಶೋರ್, ನೂರ್ ಅಹ್ಮದ್, ಮೋಹಿತ್ ಶರ್ಮಾ
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications