Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

IPL 2024: ತವರಿನಲ್ಲಿ ಗುಜರಾತ್‌ ಎದುರು ಆರ್‌ಸಿಬಿಗೆ 'ಮಾಡು ಇಲ್ಲವೇ ಮಡಿ' ಪಂದ್ಯ: ಯಾರಿಗೆ ಒಲಿಯಲಿದೆ ಗೆಲುವು?

ಶನಿವಾರ ಮೇ 4, 2024ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ (ಐಪಿಎಲ್‌)ನ 52ನೇ ಪಂದ್ಯದಲ್ಲಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು (ಆರ್‌ಸಿಬಿ) ಹಾಗು ಗುಜರಾತ್‌ ಟೈಟನ್ಸ್‌ ತಂಡಗಳು ಸೆಣಸಾಡುತ್ತಿವೆ. ಬೆಂಗಳೂರಿನ ಎಂ.ಚಿನ್ನಸ್ವಾಮಿ ಸ್ಟೇಡಿಯಂ ಆರ್‌ಸಿಬಿ ಮತ್ತು ಜಿಟಿ ಪಂದ್ಯಕ್ಕೆ ಆತಿಥ್ಯ ವಹಿಸಿದೆ.

ಐಪಿಎಲ್‌ ಟೂರ್ನಿಯಲ್ಲಿ ಆರ್‌ಸಿಬಿ ತನ್ನ ಪ್ಲೇ ಕನಸನ್ನು ಜೀವಂತವಾಗಿ ಉಳಿಸಿಕೊಳ್ಳಲು ಶುಭ್ಮನ್‌ ಗಿಲ್ ನಾಯಕತ್ವದ ಗುಜರಾತ್ ತಂಡದ ಎದುರು ಮಾಡು ಇಲ್ಲವೇ ಮಡಿ ಎಂಬತಾಗಿದೆ. ಕಳೆದ ಎರಡು ಪಂದ್ಯಗಳನ್ನು ಭರ್ಜರಿಯಾಗಿ ಗೆದ್ದಿರುವ ಆರ್‌ಸಿಬಿ ಇಂದು ತವರಿನಲ್ಲಿ ಗೆಲ್ಲುವ ಉತ್ಸಾಹದಲ್ಲಿದೆ.

Royal Challengers Bengaluru vs Gujarat Titans Preview 2024 Indian Premier League Match Report

ಐಪಿಎಲ್‌ 2024ರಲ್ಲಿ ಉಭಯ ತಂಡಗಳು ಎರಡನೇ ಬಾರಿಗೆ ಮುಖಾಮುಖಿಯಾಗುತ್ತಿವೆ. ಏಪ್ರಿಲ್‌ 28 ರಂದು ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಗುಜರಾತ್‌ ಟೈಟನ್ಸ್‌ ತಂಡವನ್ನು ಆರ್‌ಸಿಬಿ ಬಗ್ಗು ಬಡಿತ್ತಿತ್ತು. ಹೀಗಾಗಿ ಅದೇ ಗಟ್ಟಿ ನಿರೀಕ್ಷೆಯಲ್ಲಿ ಆರ್‌ಸಿಬಿ ಇಂದು ಗುಜರಾತ್‌ ಎದುರು ಕಣಕ್ಕೀಳಿಯುತ್ತಿದೆ. ಈವರೆಗೆ ಆಡಿರುವ 10 ಪಂದ್ಯಗಳಲ್ಲಿ 4ರಲ್ಲಿ ಜಯಗಳಿಸಿರುವ ಜಿಟಿ, ಅಂಕಪಟ್ಟಿಯಲ್ಲಿ 8ನೇ ಸ್ಥಾನದಲ್ಲಿದೆ. ಇತ್ತ 10 ಪಂದ್ಯಗಳಲ್ಲಿ 3ರಲ್ಲಿ ಮಾತ್ರ ಗೆಲುವು ಕಂಡಿರುವ ಆರ್‌ಸಿಬಿ ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದೆ.

ಒಟ್ಟಾರೆ ಗುಜರಾತ್ ಮತ್ತು ಬೆಂಗಳೂರು ತಂಡಗಳು ಈವರೆಗೆ 4 ಬಾರಿ ಮಾತ್ರ ಐಪಿಎಲ್‌ನಲ್ಲಿ ಎದುರಾಗಿದ್ದು, ಇದರಲ್ಲಿ ಗುಜರಾತ್ 2 ಪಂದ್ಯಗಳಲ್ಲಿ ಗೆದ್ದರೆ, ಆರ್‌ಸಿಬಿ 2ರಲ್ಲಿ ಗೆದ್ದು ಬೀಗಿದೆ. ಈ ಮೂಲಕ ಉಭಯ ತಂಡಗಳು ಸಮಬಲ ಸಾಧಿಸಿವೆ.

ಆರ್‌ಸಿಬಿ vs ಜಿಟಿ ಪಂದ್ಯದ ಟಿವಿ, ಲೈವ್ ಸ್ಟ್ರೀಮಿಂಗ್ ವಿವರ :

ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಮತ್ತು ಗುಜರಾತ್‌ ಟೈಟನ್ಸ್‌ ನಡುವಿನ ಐಪಿಎಲ್ 2024ರ ರೋಚಕ ಪಂದ್ಯವನ್ನು ಭಾರತದಲ್ಲಿ ಟಿವಿಯಲ್ಲಿ ಸ್ಟಾರ್ ಸ್ಪೋರ್ಟ್ಸ್ ಚಾನೆಲ್‌ನಲ್ಲಿ ನೇರಪ್ರಸಾರ ಮಾಡಲಿದ್ದರೆ, ಮೊಬೈಲ್‌ನಲ್ಲಿ ಜಿಯೋಸಿನಿಮಾ ಅಪ್ಲಿಕೇಶನ್‌ನಲ್ಲಿ ಲೈವ್ ಸ್ಟ್ರೀಮಿಂಗ್ ಆಗಲಿದೆ.

ಆರ್‌ಸಿಬಿ vs ಜಿಟಿ ಸಂಭ್ಯಾವ ಆಡುವ 11ರ ಬಳಗ :

ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಸಂಭ್ಯಾವ ತಂಡ : ವಿರಾಟ್ ಕೊಹ್ಲಿ, ಫಾಫ್ ಡು ಪ್ಲೆಸಿಸ್ (ನಾಯಕ), ವಿಲ್ ಜಾಕ್ಸ್, ರಜತ್ ಪಾಟೀದಾರ್, ಕ್ಯಾಮರೂನ್ ಗ್ರೀನ್, ದಿನೇಶ್ ಕಾರ್ತಿಕ್ (ವಿ. ಕೀ), ಮಹಿಪಾಲ್ ಲೊಮ್ರರ್, ಕರಣ್‌ ಶರ್ಮಾ, ಸ್ವಪ್ನಿಲ್ ಸಿಂಗ್, ಲಾಕಿ ಫರ್ಗುಸನ್, ಮೊಹಮ್ಮದ್ ಸಿರಾಜ್

ಗುಜರಾತ್‌ ಟೈಟನ್ಸ್‌ ಸಂಭ್ಯಾವ ತಂಡ : ಶುಭ್ಮನ್ ಗಿಲ್ (ನಾಯಕ), ವೃದ್ಧಿಮಾನ್ ಸಹಾ (ವಿ.ಕೀ), ಸಾಯಿ ಸುದರ್ಶನ್, ಡೇವಿಡ್ ಮಿಲ್ಲರ್, ಅಝ್ಮತ್ ಉಲ್ಲಾ ಒಮರ್ಝಾರ್, ಶಾರುಖ್ ಖಾನ್, ರಾಹುಲ್ ತೆವಾಟಿಯಾ, ಸಾಯಿ ಕಿಶೋರ್, ರಶೀದ್ ಖಾನ್, ರಶೀದ್ ಖಾನ್, ನೂರ್‌ ಅಹ್ಮದ್‌, ಮೋಹಿತ್ ಶರ್ಮಾ.

Story first published: Saturday, May 4, 2024, 8:57 [IST]
Other articles published on May 4, 2024
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+