IPL 2024 Eliminator: ಆರ್‌ಸಿಬಿ-ರಾಜಸ್ಥಾನ ನಡುವೆ ಹೈವೋಲ್ಟೇಜ್ ಪಂದ್ಯ; ಟಾಸ್ ವರದಿ, ಆಡುವ 11ರ ಬಳಗ
ಮೇ 22 ಬುಧವಾರ, ಐಪಿಎಲ್ 2024ರ ಎಲಿಮಿನೇಟರ್ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ (ಆರ್‌ಆರ್) ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡಗಳು ಸೆಣಸಾಡುತ್ತಿದೆ. ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಆರ್‌ಸಿಬಿ ಮತ್ತ ಆರ್‌ಆರ್ ನಡುವಿನ ಹೈವೋಲ್ಟೇಜ್ ಪಂದ್ಯ ಆರಂಭವಾಗಿದೆ.
ಮೊದಲು ಟಾಸ್ ಗೆದ್ದ ರಾಜಸ್ಥಾನ ರಾಯಲ್ಸ್ ನಾಯಕ ಸಂಜು ಸ್ಯಾಮ್ಸನ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಹೀಗಾಗಿ ಫಾಪ್ ಡು ಪ್ಲೆಸಿಸ್ ಮುನ್ನೆಡೆಸುತ್ತಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮೊದಲು ಬ್ಯಾಟಿಂಗ್ ಮಾಡಲಿದೆ.

ಎಲಿಮಿನೇಟರ್‌ನಲ್ಲಿ ಗೆದ್ದ ತಂಡ ಕ್ವಾಲಿಫೈಯರ್-2 ರಲ್ಲಿ ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ಆಡಲಿದೆ. ಸೋತ ತಂಡ ಟೂರ್ನಿನಿಂದ ಹೊರ ಬೀಳಲಿದೆ.
ಈ ಋತುವಿನಲ್ಲಿ ಉಭಯ ತಂಡಗಳ ನಡುವೆ ಇದು ಎರಡನೇ ಮುಖಾಮುಖಿಯಾಗಿದೆ. ಜೈಪುರದಲ್ಲಿ ಉಭಯ ತಂಡಗಳ ನಡುವಿನ ಮೊದಲ ಪಂದ್ಯದಲ್ಲಿ ಆರ್‌ಸಿಬಿ ವಿರುದ್ಧ ಆರ್‌ಆರ್ ಭರ್ಜರಿ ಜಯ ಗಳಿಸಿತ್ತು. ಹೀಗಾಗಿ ಆರ್‌ಸಿಬಿ ಮತ್ತು ಆರ್‌ಆರ್ ನಡುವೆ ಜಿದ್ದಾಜಿದ್ದಿ ಹೋರಾಟ ನಡೆಯಲಿದೆ.
ಆರ್‌ಸಿಬಿ vs ಆರ್‌ಆರ್ ಪಂದ್ಯದ ಟಿವಿ, ಲೈವ್ ಸ್ಟ್ರೀಮಿಂಗ್ ವಿವರ
ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ರಾಜಸ್ಥಾನ ರಾಯಲ್ಸ್ ತಂಡಗಳ ನಡುವಿನ ಐಪಿಎಲ್ 2024ರ ರೋಚಕ ಪಂದ್ಯವನ್ನು ಭಾರತದಲ್ಲಿ ಟಿವಿಯಲ್ಲಿ ಸ್ಟಾರ್ ಸ್ಪೋರ್ಟ್ಸ್ ಚಾನೆಲ್‌ನಲ್ಲಿ ನೇರಪ್ರಸಾರ ಮಾಡಲಿದ್ದರೆ, ಮೊಬೈಲ್‌ನಲ್ಲಿ ಜಿಯೋಸಿನಿಮಾ ಅಪ್ಲಿಕೇಶನ್‌ನಲ್ಲಿ ಲೈವ್ ಸ್ಟ್ರೀಮಿಂಗ್ ಆಗಲಿದೆ.
ಆರ್‌ಸಿಬಿ vs ಆರ್‌ಆರ್ ಹೆಡ್ ಟು ಹೆಡ್
ಈವರೆಗೆ ಐಪಿಎಲ್‌ನಲ್ಲಿ ಉಭಯ ತಂಡಗಳು 31 ಪಂದ್ಯಗಳನ್ನು ಆಡಿವೆ. ಇದರಲ್ಲಿ ಆರ್‌ಸಿಬಿ ತಂಡವು 15 ಗೆಲುವು ಸಾಧಿಸಿದ್ದರೆ, ರಾಜಸ್ಥಾನ್ ತಂಡ 13 ಗೆಲುವು ಕಂಡಿದೆ. 3 ಪಂದ್ಯಗಳು ಯಾವುದೇ ಫಲಿತಾಂಶ ಕಾಣದೆ ರದ್ದಾಗಿವೆ. ಹೀಗಾಗಿ ಆರ್‌ಆರ್ ಎದುರು ಆರ್‌ಸಿಬಿ ಹೆಚ್ಚು ಪ್ರಾಬಲ್ಯ ಸಾಧಿಸಿದೆ.
ಆರ್‌ಸಿಬಿ vs ಆರ್‌ಆರ್ ಆಡುವ 11ರ ಬಳಗ
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ: ವಿರಾಟ್ ಕೊಹ್ಲಿ, ಫಾಫ್ ಡು ಪ್ಲೆಸಿಸ್ (ನಾಯಕ), ರಜತ್ ಪಾಟಿದಾರ್, ಕ್ಯಾಮೆರಾನ್ ಗ್ರೀನ್, ಗ್ಲೆನ್ ಮ್ಯಾಕ್ಸ್‌ವೆಲ್, ದಿನೇಶ್ ಕಾರ್ತಿಕ್ (ವಿ.ಕೀ), ಮಹಿಪಾಲ್ ಲೊಮ್ರೊರ್, ಕರಣ್ ಶರ್ಮಾ, ಯಶ್ ದಯಾಳ್, ಮೊಹಮ್ಮದ್ ಸಿರಾಜ್, ಲಾಕಿ ಫರ್ಗುಸನ್.
ರಾಜಸ್ಥಾನ ರಾಯಲ್ಸ್ ತಂಡ: ಯಶಸ್ವಿ ಜೈಸ್ವಾಲ್, ಟಾಮ್ ಕೊಹ್ಲರ್-ಕ್ಯಾಡ್ಮೋರ್, ಸಂಜು ಸ್ಯಾಮ್ಸನ್ (ನಾಯಕ ಮತ್ತು ವಿ.ಕೀ), ರಿಯಾನ್ ಪರಾಗ್, ಧ್ರುವ್ ಜುರೆಲ್, ರೋವ್ಮನ್ ಪೊವೆಲ್, ರವಿಚಂದ್ರನ್ ಅಶ್ವಿನ್, ಟ್ರೆಂಟ್ ಬೌಲ್ಟ್, ಅವೇಶ್ ಖಾನ್, ಸಂದೀಪ್ ಶರ್ಮಾ, ಯುಜ್ವೇಂದ್ರ ಚಹಾಲ್.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications