127 ರನ್‌ಗಳಿಗೆ ಚೆನ್ನೈ ತಂಡವನ್ನು ಕಟ್ಟಿ ಹಾಕಿದ ರಾಯಲ್ಸ್
ಗುವಾಹಟಿ: ರಾಜಸ್ಥಾನ ರಾಯಲ್ಸ್ ಬೌಲರ್‌ಗಳ ವಿರುದ್ಧ, ಚೆನ್ನೈ ಸೂಪರ್ ಕಿಂಗ್ಸ್ ತಂಡದ ಬ್ಯಾಟರ್‌ಗಳು ರನ್ ಕಲೆ ಹಾಕುವಲ್ಲಿ ವಿಫಲರಾದ ಕಾರಣ 19ನೇ ಆವೃತ್ತಿಯ ಐಪಿಎಲ್‌ನ ಮೂರನೇ ಪಂದ್ಯದಲ್ಲಿ ಅಲ್ಪ ಮೊತ್ತಕ್ಕೆ ಕುಸಿಯಿತು. ಚೆನ್ನೈ ತಂಡದ ಪರ ಸ್ಟಾರ್ ಆರಂಭಿಕ ಆಟಗಾರರು ಜವಾಬ್ದಾರಿ ಮರೆತರು. ಈ ಮೂಲಕ ಚೆನ್ನೈ ಸೂಪರ್ ಕಿಂಗ್ಸ್ ರಾಜಸ್ಥಾನ ರಾಯಲ್ಸ್ ವಿರುದ್ಧ ಮೂರನೇ ಕನಿಷ್ಠ ಮೊತ್ತ ಕಲೆ ಹಾಕಿತು.
ಟಾಸ್ ಸೋತರೂ ಮೊದಲು ಬ್ಯಾಟ್ ಮಾಡುವ ಅವಕಾಶ ಪಡೆದ ಚೆನ್ನೈ ತಂಡ ಕಳಪೆ ಆರಂಭವನ್ನು ಕಂಡಿತು. ರಾಜಸ್ಥಾನ ರಾಯಲ್ಸ್ ತಂಡದೊಂದಿಗೆ ಹಲವು ವರ್ಷಗಳ ಬಳಿಕ ಆಡಿದ್ದ ಅನುಭವ ಹೊಂದಿದ್ದ ಸಂಜು ಸ್ಯಾಮ್ಸನ್, ಈ ಬಾರಿಯ ಐಪಿಎಲ್‌ನಲ್ಲಿ ಹಳದಿ ಜೆರ್ಸಿಯಲ್ಲಿ ಕಾಣಿಸಿಕೊಂಡರು. ಹರಾಜಿಗೂ ಮುನ್ನ ನಡೆದ ಟ್ರೇಡ್‌ನಲ್ಲಿ ಸಂಜು ಸಿಎಸ್‌ಕೆ ಪಾಲಾದಾರು. ಹೀಗಾಗಿ ಎಲ್ಲರ ಕಣ್ಣುಗಳು ಇವರ ಮೇಲೆ ನೆಟ್ಟಿದ್ದವು. ಆದರೆ ಇವರು ತಂಡ ತಮ್ಮ ಮೇಲೆ ಇಟ್ಟ ನಂಬಿಕೆಯನ್ನು ಹುಸಿಯಾಗಿಸಿದರು. ಇವರು 6 ರನ್ ಬಾರಿಸಿದ್ದಾಗ ಬರ್ಗರ್ ಎಸೆತದಲ್ಲಿ ಬೌಲ್ಡ್ ಆದರು.

ರನ್ ಕಲೆ ಹಾಕಲು ಪರದಾಟ
ನಾಯಕ ರುತುರಾಜ್ ಗಾಯಕ್ವಾಡ್ ಅವರು ಸಹ ಜವಾಬ್ದಾರಿಯನ್ನು ಮರೆತರು. ಇವರು 11 ಎಸೆತಗಳಲ್ಲಿ 1 ಬೌಂಡರಿ ನೆರವಿನಿಂದ 6 ರನ್ ಬಾರಿಸಿದ್ದಾಗ, ಜೋಫ್ರಾ ಆರ್ಚರ್ ತೋಡಿದ ಖೆಡ್ಡಾಗೆ ಬಲಿಯಾದರು. ಯುವ ಆಟಗಾರ ಆಯುಷ್ ಮಾತ್ರೆ (0), ಮ್ಯಾಥ್ಯೂ ಶಾರ್ಟ್ (2) ದೊಡ್ಡ ಮೊತ್ತವನ್ನು ಕಲೆ ಹಾಕುವಲ್ಲಿ ವಿಫಲರಾದರು.
ಪವರ್ ಪ್ಲೇನಲ್ಲೇ 4 ವಿಕೆಟ್ ಕಳೆದುಕೊಂಡು ಸಂಕಷ್ಟದಲ್ಲಿದ್ದ ಚೆನ್ನೈ ಸೂಪರ್ ಕಿಂಗ್ಸ್ ಇಂಪ್ಯಾಕ್ಟ್ ಪ್ಲೇಯರ್ ರೂಪದಲ್ಲಿ ಸರ್ಫರಾಜ್ ಖಾನ್ ಅವರನ್ನು ಕಣಕ್ಕೆ ಇಳಿಸಿತು. ಇವರು 12 ಎಸೆತಗಳನ್ನು ಎದುರಿಸಿ 2 ಬೌಂಡರಿ, 1 ಸಿಕ್ಸರ್ ಸಹಾಯದಿಂದ 17 ರನ್ ಸಿಡಿಸಿ ಔಟ್ ಆದರು. ಇವರು ರವೀಂದ್ರ ಜಡೇಜಾ ಅವರ ಎಸೆತವನ್ನು ಸ್ವೀಪ್ ಮಾಡಲು ಹೋಗಿ ಎಲ್‌ಬಿಡಬ್ಲ್ಯೂ ಬಲೆಗೆ ಬಿದ್ದರು. ಯುವ ಆಟಗಾರ ಕಾರ್ತಿಕ್ ಶರ್ಮಾ 1 ಸಿಕ್ಸರ್ ಸಹಾಯದಿಂದ 18 ರನ್ ಸಿಡಿಸಿದರು.
ಕೆಳ ಮಧ್ಯಮ ಕ್ರಮಾಂಕದಲ್ಲಿ ಜೇಮಿ ಓವರ್‌ಟನ್ ಅವರನ್ನು ಹೊರತು ಪಡಿಸಿ ಉಳಿದ ಬ್ಯಾಟರ್‌ಗಳು ಜವಾಬ್ದಾರಿ ಮರೆತರು. ಜೇಮಿ ಓವರ್‌ಟನ್ 2 ಬೌಂಡರಿ, 2 ಸಿಕ್ಸರ್ ಸಹಾಯದಿಂದ 43 ರನ್ ಬಾರಿಸಿದ್ದಾಗ ಇಲ್ಲದ ರನ್ ಕದಿಯಲು ಹೋಗಿ ಔಟ್ ಆದರು. ಅಂತಿಮವಾಗಿ ಚೆನ್ನೈ ಸೂಪರ್ ಕಿಂಗ್ಸ್ 19.4 ಓವರ್‌ಗಳಲ್ಲಿ 127 ರನ್‌ಗಳಿಗೆ ಆಲೌಟ್ ಆಯಿತು.

ರಾಜಸ್ಥಾನ ರಾಯಲ್ಸ್ ತಂಡದ ಪರ ಜೋಫ್ರಾ ಆರ್ಚರ್, ನಾಂಡ್ರೆ ಬರ್ಗರ್, ರವೀಂದ್ರ ಜಡೇಜಾ ತಲಾ 2 ವಿಕೆಟ್ ಪಡೆದರು.
ಐಪಿಎಲ್‌ನಲ್ಲಿ ಚೆನ್ನೈ ಕಲೆ ಹಾಕಿದ ಕನಿಷ್ಠ ಮೊತ್ತ
79, ಮುಂಬೈ ಇಂಡಿಯನ್ಸ್ ವಿರುದ್ಧ, 2013
97, ಮುಂಬೈ ಇಂಡಿಯನ್ಸ್ ವಿರುದ್ಧ, 2022
103/9, ಕೋಲ್ಕತ್ತ ನೈಟ್ ರೈಡರ್ಸ್, 2025
109, ರಾಜಸ್ಥಾನ ರಾಯಲ್ಸ್ ವಿರುದ್ಧ, 2008
109, ಮುಂಬೈ ಇಂಡಿಯನ್ಸ್ ವಿರುದ್ಧ, 2019
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications