Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

RR vs DC IPL 2023: ರಾಜಸ್ಥಾನ ರಾಯಲ್ಸ್ ತಂಡಕ್ಕೆ ಭರ್ಜರಿ ಗೆಲುವು; ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಹ್ಯಾಟ್ರಿಕ್ ಸೋಲು

ಶನಿವಾರ, ಏಪ್ರಿಲ್ 8ರಂದು ಗುವಾಹಟಿಯ ಬರ್ಸಾಪರ ಸ್ಟೇಡಿಯಂನಲ್ಲಿ ನಡೆದ 2023ರ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್)ನ 11ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ವಿರುದ್ಧ ರಾಜಸ್ಥಾನ ರಾಯಲ್ಸ್ ತಂಡ 57 ರನ್‌ಗಳ ಅಂತರದ ಭಾರೀ ಗೆಲುವು ಸಾಧಿಸಿದೆ.

ಸಂಜು ಸ್ಯಾಮ್ಸನ್ ನಾಯಕತ್ವದ ರಾಜಸ್ಥಾನ ರಾಯಲ್ಸ್ ತಂಡ ನೀಡಿದ್ದ 200 ರನ್‌ಗಳ ಬೃಹತ್ ಗುರಿ ಬೆನ್ನಟ್ಟಿದ ಡೇವಿಡ್ ವಾರ್ನರ್ ನಾಯಕತ್ವದ ಡೆಲ್ಲಿ ಕ್ಯಾಪಿಟಲ್ಸ್ ತಂಡ 20 ಓವರ್‌ಗಳಲ್ಲಿ 9 ವಿಕೆಟ್ ಕಳೆದುಕೊಂಡು 142 ರನ್ ಗಳಿಸಲಷ್ಟೇ ಶಕ್ತವಾಯಿತು. ಇದರಿಂದ ರಾಜಸ್ಥಾನ ರಾಯಲ್ಸ್ ತಂಡ 57 ರನ್‌ಗಳಿಂದ ಗೆದ್ದರೆ, ಡೆಲ್ಲಿ ಕ್ಯಾಪಿಟಲ್ಸ್ ಸತತ ಮೂರು ಪಂದ್ಯಗಳಲ್ಲಿ ಸೋಲು ಕಂಡಂತಾಯಿತು.

RR vs DC IPL 2023: Rajasthan Royals Beat Delhi Capitals By 57 Runs

ಬೃಹತ್ ಗುರಿ ಬೆನ್ನತ್ತಿದ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಪರ ಪೃಥ್ವಿ ಶಾ ಮತ್ತು ಡೇವಿಡ್ ವಾರ್ನರ್ ಬ್ಯಾಟಿಂಗ್ ಇನ್ನಿಂಗ್ಸ್ ಆರಂಭಿಸಿದರು. ಆದರೆ, ಪೃಥ್ವಿ ಶಾ ಮತ್ತೊಮ್ಮೆ ರನ್ ಗಳಿಸುವಲ್ಲಿ ವಿಫಲರಾಗಿ ಸೊನ್ನೆ ಸುತ್ತಿದರು. ನಂತರ ಬಂದ ಮನೀಶ್ ಪಾಂಡೆ ಎದುರಿಸಿದ ಮೊದಲ ಎಸೆತದಲ್ಲಿಯೇ ವಿಕೆಟ್ ಒಪ್ಪಿಸಿ ಪೆವಿಲಿಯನ್‌ಗೆ ಮರಳಿದರು.

ಈ ವೇಳೆ ಕ್ರೀಸ್‌ಗೆ ರಿಲೀ ರುಸ್ಸೌ 12 ಎಸೆತಗಳಲ್ಲಿ 14 ರನ್ ಗಳಿಸಿ ಔಟಾದರು. ಲಲಿತ್ ಯಾದವ್ 24 ಎಸೆತಗಳಲ್ಲಿ 5 ಬೌಂಡರಿ ಸಮೇತ 34 ರನ್ ಬಾರಿಸಿದರು. ನಾಯಕ ಹಾಗೂ ಆರಂಭಿಕ ಡೇವಿಡ್ ವಾರ್ನರ್ 55 ಎಸೆತಗಳಲ್ಲಿ 7 ಬೌಂಡರಿಗಳ ನೆರವಿನಿಂದ 66 ರನ್ ಗಳಿಸಿದರು.

RR vs DC IPL 2023: Rajasthan Royals Beat Delhi Capitals By 57 Runs

ಉಳಿದಂತೆ ಯಾವ ಬ್ಯಾಟ್ಸ್‌ಮನ್‌ಗಳು ರಾಜಸ್ಥಾನ ರಾಯಲ್ಸ್ ಬೌಲರ್‌ಗಳಿಗೆ ಪ್ರತಿರೋಧ ಒಡ್ಡಲಿಲ್ಲ. ಅಕ್ಷರ್ ಪಟೇಲ್ 2 ರನ್, ರೋವ್ಮನ್ ಪೊವೆಲ್ 2 ರನ್, ಅಭಿಷೇಕ್ ಪೊರೆಲ್ 7 ರನ್, ಕುಲದೀಪ್ ಯಾದವ್ 3 ರನ್, ಅನ್ರಿಚ್ ನಾರ್ಟ್ಜೆ 0 ಮತ್ತು ಮುಖೇಶ್ ಕುಮಾರ 1 ರನ್ ಗಳಿಸಿದರು.

ಇನ್ನು ಬೌಲಿಂಗ್‌ನಲ್ಲಿ ರಾಜಸ್ಥಾನ ರಾಯಲ್ಸ್ ತಂಡದ ಪರ ಟ್ರೆಂಟ್ ಬೌಲ್ಟ್ 4 ಓವರ್‌ಗಳಲ್ಲಿ 29 ರನ್ ನೀಡಿ 3 ವಿಕೆಟ್ ಪಡೆದರೆ, ಯುಜ್ವೇಂದ್ರ ಚಹಾಲ್ 4 ಓವರ್‌ಗಳಲ್ಲಿ 27 ರನ್ ನೀಡಿ 3 ವಿಕೆಟ್ ಪಡೆದರು. ರವಿಚಂದ್ರನ್ ಅಶ್ವಿನ್ 4 ಓವರ್‌ಗಳಲ್ಲಿ 25 ರನ್ ನೀಡಿ 2 ವಿಕೆಟ್ ಕಬಳಿಸಿದರು. ಉಳಿದಂತೆ ಸಂದೀಪ್ ಶರ್ಮಾ 4 ಓವರ್‌ಗಳಲ್ಲಿ 20 ರನ್ ನೀಡಿ 1 ವಿಕೆಟ್ ಕಿತ್ತರು.

RR vs DC IPL 2023: Rajasthan Royals Beat Delhi Capitals By 57 Runs

ಇನ್ನು ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ರಾಜಸ್ಥಾನ ರಾಯಲ್ಸ್ ತಂಡ ನಿಗದಿತ 20 ಓವರ್‌ಗಳಲ್ಲಿ 4 ವಿಕೆಟ್ ಕಳೆದುಕೊಂಡು 199 ರನ್ ಕಲೆಹಾಕಿತು. ಆರಂಭಿಕ ಆಟಗಾರರಾದ ಯಶಸ್ವಿ ಜೈಸ್ವಾಲ್ ಮತ್ತು ಜೋಸ್ ಬಟ್ಲರ್ ಉತ್ತಮ ಆರಂಭ ಒದಗಿಸಿದರು. ಈ ಜೋಡಿ ಮೊದಲ ವಿಕೆಟ್‌ಗೆ 8.3 ಓವರ್‌ಗಳಲ್ಲಿ 98 ರನ್ ಜೊತೆಯಾಟ ನೀಡಿದರು.

ಯಶಸ್ವಿ ಜೈಸ್ವಾಲ್ 31 ಎಸೆತಗಳಲ್ಲಿ 11 ಬೌಂಡರಿ ಮತ್ತು 1 ಸಿಕ್ಸರ್ ಮೂಲಕ 60 ರನ್ ಬಾರಿಸಿದರೆ, ಜೋಸ್ ಬಟ್ಲರ್ 51 ಎಸೆತಗಳಲ್ಲಿ 11 ಬೌಂಡರಿ ಮತ್ತು 1 ಸಿಕ್ಸರ್ ನೆರವಿನಿಂದ 79 ರನ್ ಗಳಿಸಿದರು. ಉಳಿದಂತೆ ರಿಯಾನ್ ಪರಾಗ್ 7 ರನ್, ಧ್ರುವ ಜುರೆಲ್ 7 ರನ್ ಮತ್ತು ಶಿಮ್ರಾನ್ ಹೆಟ್ಮೆಯರ್ 21 ಎಸೆತಗಳಲ್ಲಿ 1 ಬೌಂಡರಿ ಮತ್ತು 4 ಸಹಾಯದಿಂದ 39 ರನ್ ಕಲೆಹಾಕಿದರು.

ಬೌಲಿಂಗ್‌ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಪರ ಮುಖೇಶ್ ಕುಮಾರ್ 4 ಓವರ್‌ಗಳಲ್ಲಿ 36 ರನ್ ನೀಡಿ 2 ವಿಕೆಟ್, ಕುಲದೀಪ್ ಯಾದವ್ 4 ಓವರ್‌ಗಳಲ್ಲಿ 31 ರನ್ ನೀಡಿ 1 ವಿಕೆಟ್ ಮತ್ತು ರೋವ್ಮನ್ ಪೊವೆಲ್ 2 ಓವರ್‌ಗಳಲ್ಲಿ 18 ರನ್ ನೀಡಿ 1 ವಿಕೆಟ್ ಪಡೆದರು.

Story first published: Saturday, April 8, 2023, 19:45 [IST]
Other articles published on Apr 8, 2023
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+