Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

RR vs DC: ಒತ್ತಡದಲ್ಲಿರುವ ಡೆಲ್ಲಿಗೆ ರಾಯಲ್ಸ್‌ ಸವಾಲು

ಜೈಪುರ್: ಐಪಿಎಲ್‌ನಲ್ಲಿ ಅಮೋಘ ಪ್ರದರ್ಶನ ನೀಡುತ್ತಿರುವ ರಾಜಸ್ಥಾನ್ ರಾಯಲ್ಸ್ (ಆರ್‌ಆರ್‌) ಹಾಗೂ ಡೆಲ್ಲಿ ಕ್ಯಾಪಿಟಲ್ಸ್‌ (ಡಿಸಿ) ತಂಡಗಳು ಕಾದಾಟ ನಡೆಸಲಿವೆ. ಈ ವೇಳೆ ಎಲ್ಲರ ಕಣ್ಣುಗಳು ಯುವ ಆಟಗಾರ ವೈಭವ್ ಸೂರ್ಯವಂಶಿ ಅವರ ಮೇಲೆ ನೆಟ್ಟಿವೆ. ಈ ಪಂದ್ಯದಲ್ಲಿ ಸ್ಥಿರ ಪ್ರದರ್ಶನ ನೀಡಿ 2 ಅಂಕಗಳನ್ನು ಕಲೆ ಹಾಕುವ ಇರಾದೆ ಉಭಯ ತಂಡಗಳದ್ದಾಗಿದೆ.

ರಾಜಸ್ಥಾನ್‌ ರಾಯಲ್ಸ್‌ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಈಗಾಗಲೇ ಐಪಿಎಲ್‌ನಲ್ಲಿ ಒಟ್ಟು 30 ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ಈ ವೇಳೆ ಉಭಯ ತಂಡಗಳು ತಲಾ 15 ಪಂದ್ಯಗಳನ್ನು ಗೆದ್ದಿವೆ. ಆರ್‌ಆರ್‌ ಆಡಿದ 9 ಪಂದ್ಯಗಳಲ್ಲಿ 6 ಜಯ, 3 ಸೋಲು ಕಂಡಿದ್ದು, 12 ಅಂಕಗಳೊಂದಿಗೆ ಅಂಕ ಪಟ್ಟಿಯಲ್ಲಿ 4ನೇ ಸ್ಥಾನದಲ್ಲಿದೆ. ಇನ್ನು ಡೆಲ್ಲಿ ಕ್ಯಾಪಿಟಲ್ಸ್‌ ತಂಡ ಆಡಿದ 8 ಪಂದ್ಯಗಳಲ್ಲಿ 3 ಜಯ, 5 ಸೋಲು ಕಂಡಿದ್ದು, 6 ಅಂಕಗಳೊಂದಿಗೆ ಏಳನೇ ಸ್ಥಾನದಲ್ಲಿದೆ.

RR vs DC

ಜೈಪುರ್‌ನಲ್ಲಿ ನಡೆಯಲಿರುವ ಪಂದ್ಯದಲ್ಲಿ ಆರ್‌ಆರ್‌ ಅಬ್ಬರಿಸುವ ಕನಸು ಹೊಂದಿದೆ. ಹಿಂದಿನ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್‌ ಅಜೇಯ ಓಟಕ್ಕೆ ಬ್ರೇಕ್ ಹಾಕಿದ್ದ ರಾಜಸ್ಥಾನ್‌ ಆತ್ಮವಿಶ್ವಾಸದಿಂದ ಕಣಕ್ಕೆ ಇಳಿಯಲಿದೆ. ಆರಂಭಿಕರಾದ ವೈಭವ್ ಸೂರ್ಯವಂಶಿ ಹಾಗೂ ಯಶಸ್ವಿ ಜೈಸ್ವಾಲ್‌ ಅವರು ತಂಡಕ್ಕೆ ಭರ್ಜರಿ ಅಡಿಪಾಯವನ್ನು ಹಾಕಿಕೊಡಬೇಕಿದೆ. ಈ ಜೋಡಿ ಉತ್ತಮವಾಗಿ ಆರಂಭ ನೀಡಿದಾಗಲೆಲ್ಲಾ ತಂಡದ ಪ್ರದರ್ಶನದ ಮೇಲೆ ಪರಿಣಾಮ ಬೀರಲಿದೆ.

ನಾಯಕ ಮೇಲೆ ಒತ್ತಡ

ಮಧ್ಯಮ ಕ್ರಮಾಂಕದಲ್ಲಿ ಭರವಸೆ ಮೂಡಿಸಿರುವ ಧ್ರುವ್ ಜುರೇಲ್‌, ರಿಯಾನ್ ಪರಾಗ್‌, ಕಳೆದ ಪಂದ್ಯದ ಹೀರೋ ಡೊನೊವನ್ ಫೆರೀರಾ ಮೇಲೆ ಅವರ ಚಿತ್ತ ನೆಟ್ಟಿವೆ. ತಂಡದ ಬೌಲಿಂಗ್ ವಿಭಾಗ ಬಲಾಢ್ಯವಾಗಿದೆ. ವೇಗದ ಬೌಲರ್‌ಗಳಾದ ಜೋಫ್ರಾ ಆರ್ಚರ್, ನಂದ್ರೆ ಬರ್ಗರ್‌, ಬ್ರಿಜೇಶ್ ಶರ್ಮಾ ಶಿಸ್ತು ಬದ್ಧ ದಾಳಿ ಸಂಘಟಿಸಬಲ್ಲರು. ಕನ್ನಡಿಗ ಯಶ್ ರಾಜ್ ಪುಂಜಾ, ರವೀಂದ್ರ ಜಡೇಜಾ ಸ್ಪಿನ್ ಬೌಲಿಂಗ್ ಮೂಲಕ ಎದುರಾಳಿಗಳನ್ನು ಕಾಡಬೇಕಿದೆ. ಅಂದಾಗ ಮಾತ್ರ 2 ಅಂಕದ ಕನಸು ನನಸಾಗುತ್ತದೆ.

RR vs DC

ಕಳೆದ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್‌, ಆರ್‌ಸಿಬಿ ವಿರುದ್ಧ ಕಳಪೆ ಪ್ರದರ್ಶನ ನೀಡಿತ್ತು. ನವದೆಹಲಿಯ ಅರುಣ್‌ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಡೆಲ್ಲಿ 75 ರನ್‌ಗಳಿಗೆ ಆಲೌಟ್ ಆಗಿತ್ತು. ಈ ಪಂದ್ಯದಲ್ಲಿ ಸ್ಟಾರ್ ಬ್ಯಾಟರ್‌ಗಳು ರನ್‌ ಕಲೆ ಹಾಕುವಲ್ಲಿ ವಿಫಲರಾಗಿದ್ದರು. ಹೀಗಾಗಿ ಇವರ ಮೇಲೆ ಒತ್ತಡವಿದೆ. ರಾಜಸ್ಥಾನ್ ರಾಯಲ್ಸ್‌ ವಿರುದ್ಧದ ಪಂದ್ಯದಲ್ಲಿ ಕೆಎಲ್ ರಾಹುಲ್‌, ನಿತೀಶ್ ರಾಣಾ, ಸಮೀರ್ ರಿಜ್ವಿ, ಟ್ರಿಸ್ಟನ್‌ ಸ್ಬಬ್ಸ್‌, ಡೇವಿಡ್‌ ಮಿಲ್ಲರ್ ಒತ್ತಡವನ್ನು ಮೆಟ್ಟಿನಿಂತು ಬ್ಯಾಟ್ ಮಾಡುವ ಅವಶ್ಯಕತೆ ಇದೆ.

ಮಿಚೆಲ್ ಸ್ಟಾರ್ಕ್‌ ಕಣಕ್ಕೆ?

ಡೆಲ್ಲಿ ಕ್ಯಾಪಿಟಲ್ಸ್ ತಂಡದ ವೇಗದ ಬೌಲರ್‌ ಮಿಚೆಲ್ ಸ್ಟಾರ್ಕ್‌ ರಾಯಲ್ಸ್‌ ವಿರುದ್ಧ ಕಣಕ್ಕೆ ಇಳಿಯಬಹುದು. ಕೈಲ್ ಜೇಮಿಸನ್‌, ಅಕ್ಷರ್ ಪಟೇಲ್, ಕುಲ್‌ದೀಪ್ ಯಾದವ್ ಬಿಗುವಿನ ದಾಳಿ ನಡೆಸಿ ತಂಡದ ಜಯದಲ್ಲಿ ಮಿಂಚಬೇಕಿದೆ.

Story first published: Thursday, April 30, 2026, 18:40 [IST]
Other articles published on Apr 30, 2026
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+