For Quick Alerts
ALLOW NOTIFICATIONS  
For Daily Alerts
 

RR vs DC Preview: ಪ್ರಿವ್ಯೂ, ಪಿಚ್ ರಿಪೋರ್ಟ್, ಹವಾಮಾನ ವರದಿ

RR vs DC match 58th, Preview, Weather Forecast and Pitch Report details

ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಬುಧವಾರ ರಾಜಸ್ಥಾನ್ ರಾಯಲ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ ತಂಡಗಳು ಮುಖಾಮುಖಿಯಾಗಲಿದೆ. ಈ ಟೂರ್ನಿಯ 58ನೇ ಪಂದ್ಯ ಇದಾಗಿದ್ದು ಪ್ಲೇಆಫ್ ಹಂತಕ್ಕೇರುವ ದೃಷ್ಟಿಯಿಂದ ಈ ಪಂದ್ಯ ಬಹಳ ಕುತೂಹಲ ಮೂಡಿಸಿದೆ. ರಾಜಸ್ಥಾನ್ ರಾಯಲ್ಸ್ ತಂಡ ಪ್ರಸ್ತುತ ಅಂಕಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದ್ದು ಅಗ್ರ ಎರಡರಲ್ಲಿ ಸ್ಥಾನ ಪಡೆಯುವ ಪ್ರಯತ್ನವನ್ನು ಆರ್‌ಆರ್ ತಂಡ ನಡೆಸಲಿದೆ. ಇತ್ತ ಐದನೇ ಸ್ಥಾನದಲ್ಲಿರುವ ಡೆಲ್ಲಿ ಕ್ಯಾಪಿಟಲ್ಸ್ ತಂಡ ಈ ಪಂದ್ಯವನ್ನು ಗೆಲ್ಲೇಬೇಕಾದ ಒತ್ತಡದಲ್ಲಿದೆ.

ಡೆಲ್ಲಿ ಕ್ಯಾಪಿಟಲ್ಸ ತಂಡ ಈ ಬಾರಿ ಟೂರ್ನಿಯುದ್ದಕ್ಕೂ ಅಸ್ಥಿರ ಪ್ರದರ್ಶನವನ್ನು ನೀಡಿಕೊಂಡು ಬಂದಿದೆ. ಆಡಿರುವ 11 ಪಂದ್ಯಗಳಲ್ಲಿ ಡಿಸಿ 5 ಗೆಲುವು ಹಾಗೂ 6 ಸೋಲು ಅನುಭವಿಸಿದೆ. ಹೀಗಾಗಿ ಪ್ಲೇಆಫ್ ಹಂತಕ್ಕೇರುವ ಅವಕಾಶ ಗಳಿಸಿಕೊಳ್ಳಬೇಕಾದರೆ ಮುಂದಿನ ಮೂರು ಪಂದ್ಯಗಳಲ್ಲಿ ಮೂರನ್ನೂ ಗೆಲ್ಲಬೇಕಿದೆ. ಈ ಮಧ್ಯೆ ರಾಜಸ್ಥಾನ್ ರಾಯಲ್ಸ್ ತಂಡ ಈ ಬಾರಿ ಆರಂಭದಿಂದಲೂ ಉತ್ತಮ ಪ್ರದರ್ಶನ ನೀಡಿಕೊಂಡು ಬಂದಿದೆ. ಜೋಸ್ ಬಟ್ಲರ್, ನಾಯಕ ಸಂಜು ಸ್ಯಾಮ್ಸನ್ ಹಾಗೂ ಯುಜುವೇಂದ್ರ ಚಾಹಲ್ ಈ ಟೂರ್ನಿಯಲ್ಲಿ ಅದ್ಭುತ ಲಯದಲ್ಲಿದ್ದಾರೆ.

ಸ್ಕ್ವಾಡ್‌ಗಳು: ಡೆಲ್ಲಿ ಕ್ಯಾಪಿಟಲ್ಸ್ ಸಂಪೂರ್ಣ ತಂಡ: ರಿಷಬ್ ಪಂತ್ (ನಾಯಕ & ವಿಕೆಟ್ ಕೀಪರ್), ಪೃಥ್ವಿ ಶಾ, ಟಿಮ್ ಸೀಫರ್ಟ್, ಮನ್‌ದೀಪ್ ಸಿಂಗ್, ಲಲಿತ್ ಯಾದವ್, ರೋವ್‌ಮನ್ ಪೊವೆಲ್, ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್, ಕುಲದೀಪ್ ಯಾದವ್, ಖಲೀಲ್ ಅಹ್ಮದ್, ಮುಸ್ತಾಫಿಜುರ್ ರೆಹಮಾನ್, ಅಶ್ವಿನ್ ಹೆಬ್ಬಾರ್, ಡೇವಿಡ್ ವಾರ್ನರ್, ಮಿಚೆಲ್ ಮಾರ್ಷ್, ಶ್ರೀಕರ್, ಭರತ್ ಸರ್ಫರಾಜ್ ಖಾನ್, ಲುಂಗಿ ಎನ್‌ಗಿಡಿ, ಪ್ರವೀಣ್ ದುಬೆ, ಅನ್ರಿಚ್ ನಾರ್ಟ್ಜೆ, ಕಮಲೇಶ್ ನಾಗರಕೋಟಿ, ಚೇತನ್ ಸಕರಿಯಾ, ರಿಪಾಲ್ ಪಟೇಲ್, ಯಶ್ ಧುಲ್, ವಿಕ್ಕಿ ಒಸ್ತ್ವಾಲ್

ರಾಜಸ್ಥಾನ್ ರಾಯಲ್ಸ್: ಸಂಜು ಸ್ಯಾಮ್ಸನ್ (ನಾಯಕ), ಜೋಸ್ ಬಟ್ಲರ್, ಯಶಸ್ವಿ ಜೈಸ್ವಾಲ್, ರವಿಚಂದ್ರನ್ ಅಶ್ವಿನ್, ಟ್ರೆಂಟ್ ಬೌಲ್ಟ್, ಶಿಮ್ರಾನ್ ಹೆಟ್ಮೆಯರ್, ದೇವದತ್ ಪಡಿಕ್ಕಲ್, ಪ್ರಸಿದ್ಧ್ ಕೃಷ್ಣ, ಯುಜ್ವೇಂದ್ರ ಚಹಾಲ್, ರಿಯಾನ್ ಪರಾಗ್, ಕೆಸಿ ಕಾರಿಯಪ್ಪ, ನವದೀಪ್ ಸೈನಿ, ಓಬೇದ್ ಮೆಕಾಯ್, ಅನುನಯ್ ಸಿಂಗ್, ಕುಲದೀಪ್ ಸೇನ್, ಕರುಣ್ ನಾಯರ್, ಧ್ರುವ್ ಜುರೆಲ್, ತೇಜಸ್ ಬರೋಕಾ, ಕುಲದೀಪ್ ಯಾದವ್, ಶುಭಂ ಗರ್ವಾಲ್, ಜೇಮ್ಸ್ ನೀಶಮ್, ನಾಥನ್ ಕೌಲ್ಟರ್-ನೈಲ್, ರಾಸ್ಸಿ ವ್ಯಾನ್ ಡೆರ್ ಡಸ್ಸೆನ್, ಡೇರಿಲ್ ಮಿಚೆಲ್

ಪಂದ್ಯದ ದಿನಾಂಕ, ಸಮಯ ಹಾಗೂ ಸ್ಥಳ: ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ತಂಡಗಳ ನಡುವಿನ ಪಂದ್ಯ ಮೇ 11 ರಂದು ಬುಧವಾರ ನಡೆಯಲಿದ್ದು ಸಂಜೆ 7:30ಕ್ಕೆ ಪಂದ್ಯ ಪ್ರಾರಂಭವಾಗಲಿದೆ. ಮುಂಬೈನ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ಈ ಪಂದ್ಯ ಆಯೋಜನೆಯಾಗಲಿದೆ.

RR vs DC match 58th, Preview, Weather Forecast and Pitch Report details

ಪಿಚ್ ರಿಪೋರ್ಟ್ ಹಾಗೂ ಹವಾಮಾನ ವರದಿ: ಮುಂಬೈನ ಡಿವೈ ಪಾಟೀಲ್ ಕ್ರೀಡಾಂಗಣ ಬ್ಯಾಟಿಂಗ್ ಹಾಗೂ ಬೌಲಿಂಗ್ ಎರಡೂ ವಿಭಾಗಕ್ಕೂ ಉತ್ತಮ ನೆರವು ನೀಡುವ ನಿರೀಕ್ಷೆಯಿದೆ. ಕಳೆದ ಐದು ಪಂದ್ಯಗಳಲ್ಲಿ ಎರಡು ತಮಡಗಳು ಮಾತ್ರವೇ ರನ್ ಬೆನ್ನಟ್ಟಿ ಗೆದ್ದುಕೊಂಡಿದೆ. ಈ ಸಂದರ್ಭದಲ್ಲಿ ಮೊದಲ ಇನ್ನಿಂಗ್ಸ್‌ನಲ್ಲಿ ಬ್ಯಾಟಿಂಗ್ ನಡೆಸಿದ ತಮಡಗಳ ಸರಾಸರಿ ಮೊತ್ತ 166 ಆಗಿದೆ. ಸ್ಪಿನ್ನರ್‌ಗಳು ಹಾಗೂ ವೇಗಿಗಳು ಇಬ್ಬರಿಗೂ ಪಿಚ್ ನೆರವು ನೀಡಲಿದೆ.

ಸಂಭಾವ್ಯ ತಂಡಗಳು: ರಾಜಸ್ಥಾನ್ ರಾಯಲ್ಸ್ : ಜೋಸ್ ಬಟ್ಲರ್, ಯಶಸ್ವಿ ಜೈಸ್ವಾಲ್, ಸಂಜು ಸ್ಯಾಮ್ಸನ್ (ನಾಯಕ ಮತ್ತು ವಿಕೆಟ್ ಕೀಪರ್), ದೇವದತ್ ಪಡಿಕ್ಕಲ್, ರಿಯಾನ್ ಪರಾಗ್, ರಾಸ್ಸಿ ವ್ಯಾನ್ ಡೆರ್ ಡುಸ್ಸೆನ್ / ಜೇಮ್ಸ್ ನೀಶಮ್, ಆರ್ ಅಶ್ವಿನ್, ಟ್ರೆಂಟ್ ಬೌಲ್ಟ್, ಪ್ರಸಿದ್ಧ್ ಕೃಷ್ಣ, ಯುಜ್ವೇಂದ್ರ ಚಾಹಲ್, ಕುಲ್ದೀಪ್ ಸೇನ್ .

ಡೆಲ್ಲಿ ಕ್ಯಾಪಿಟಲ್ಸ್: ಡೇವಿಡ್ ವಾರ್ನರ್, ಶ್ರೀಕರ್ ಭರತ್, ಮಿಚೆಲ್ ಮಾರ್ಷ್, ರಿಷಭ್ ಪಂತ್ (ನಾಯಕ ಮತ್ತು ವಿಕೆಟ್ ಕೀಪರ್), ರೋವ್ಮನ್ ಪೊವೆಲ್, ಅಕ್ಷರ್ ಪಟೇಲ್, ರಿಪಾಲ್ ಪಟೇಲ್, ಶಾರ್ದೂಲ್ ಠಾಕೂರ್, ಕುಲದೀಪ್ ಯಾದವ್, ಖಲೀಲ್ ಅಹ್ಮದ್, ಅನ್ರಿಚ್ ನಾರ್ಕಿಯಾ.

Story first published: Tuesday, May 10, 2022, 16:47 [IST]
Other articles published on May 10, 2022
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+