RR vs GT: ಸಮಬಲರ ನಡುವೆ ಹೋರಾಟ; ವೈಭವ್ ಸೂರ್ಯವಂಶಿ ಮೇಲೆ ಎಲ್ಲರ ಕಣ್ಣು
ಜೈಪುರ್: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 19ನೇ ಆವೃತ್ತಿಯ 52ನೇ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ಹಾಗೂ ಗುಜರಾತ್ ಟೈಟಾನ್ಸ್ ತಂಡಗಳು ಕಾದಾಟ ನಡೆಸಲಿವೆ. ಈ ಪಂದ್ಯದಲ್ಲಿ ಜಯ ಸಾಧಿಸಿ ಅಂಕ ಪಟ್ಟಿಯಲ್ಲಿ ಬಡ್ತಿ ಪಡೆಯುವ ಕನಸು ಎರಡೂ ತಂಡಗಳದ್ದಾಗಿದೆ. ಶನಿವಾರ ನಡೆಯುವ ಪಂದ್ಯದಲ್ಲಿ ಎಲ್ಲರ ಕಣ್ಣುಗಳು ವೈಭವ್ ಸೂರ್ಯವಂಶಿ ಅವರ ಮೇಲೆ ನೆಟ್ಟಿರಲಿವೆ.
ಗುಜರಾತ್ ಹಾಗೂ ರಾಜಸ್ಥಾನ್ ತಂಡಗಳು ಈಗಾಗಲೇ ಐಪಿಎಲ್‌ನಲ್ಲಿ ಒಟ್ಟು 9 ಬಾರಿ ಮುಖಾಮುಖಿಯಾಗಿವೆ. ಈ ವೇಳೆ ಜಿಟಿ 6 ಪಂದ್ಯಗಳಲ್ಲಿ ಜಯ ಸಾಧಿಸಿದರೆ, ಆರ್‌ಆರ್ 3 ಪಂದ್ಯಗಳನ್ನು ಗೆದ್ದುಕೊಂಡಿದೆ. ಈ ಲೀಗ್‌ನಲ್ಲಿ ಉಭಯ ತಂಡಗಳ ಒಮ್ಮೆ ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ್ದ ರಾಜಸ್ಥಾನ್ 211 ರನ್‌ಗಳ ಟಾರ್ಗೆಟ್ ನೀಡಿತ್ತು. ಈ ಗುರಿಯನ್ನು ಬೆನ್ನಟ್ಟಿದ ಗುಜರಾತ್ ಟೈಟಾನ್ಸ್ 6 ರನ್‌ಗಳಿಂದ ಸೋಲು ಕಂಡಿತ್ತು. ಹೀಗಾಗಿ ಶನಿವಾರ ನಡೆಯಲಿರುವ ಪಂದ್ಯ ಸಹ ಕುತೂಹಲ ಮೂಡಿಸಿದೆ.

ಎರಡೂ ತಂಡಗಳು ಲೀಗ್ ಹಂತದಲ್ಲಿ ಆಡಿದ 10 ಪಂದ್ಯಗಳಲ್ಲಿ 6ರಲ್ಲಿ ಜಯ ಸಾಧಿಸಿದ್ದು 12 ಅಂಕ ಕಲೆ ಹಾಕಿವೆ. ರಾಜಸ್ಥಾನ್ ಅಂಕಪಟ್ಟಿಯಲ್ಲಿ 4ನೇ ಸ್ಥಾನದಲ್ಲಿದ್ದರೆ, ಗುಜರಾತ್ ಐದನೇ ಸ್ಥಾನದಲ್ಲಿದೆ. ಈ ಪಂದ್ಯದಲ್ಲಿ ಜಯ ಸಾಧಿಸಿದ ತಂಡ ಪ್ಲೇ ಆಫ್‌ಗೆ ಒಂದು ಹೆಜ್ಜೆ ಹತ್ತಿರವಾಗುತ್ತದೆ. ಕಳೆದ ವರ್ಷ ಇದೇ ಅಂಗಳದಲ್ಲಿ ಗುಜರಾತ್ ಹಾಗೂ ರಾಜಸ್ಥಾನ್ ತಂಡಗಳು ಮುಖಾಮುಖಿಯಾದಾಗ ವೈಭವ್ ಸೂರ್ಯವಂಶಿ ಶತಕ ಬಾರಿಸಿ ಮಿಂಚಿದ್ದರು. ಹೀಗಾಗಿ ಎಲ್ಲರ ಕಣ್ಣುಗಳು ಇವರ ಮೇಲೆ ನೆಟ್ಟಿವೆ.
ವೈಭವ್ ಆಕರ್ಷಣೆ
ರಾಜಸ್ಥಾನ್ ತಂಡದ ಬ್ಯಾಟಿಂಗ್ ವಿಭಾಗದಲ್ಲಿ ಯುವ ಆಟಗಾರರ ಬಲ ಎದ್ದು ಕಾಣುತ್ತದೆ. ಲೀಗ್‌ನಲ್ಲಿ ವೈಭವ್ ಸೂರ್ಯವಂಶಿ (404 ರನ್) ಅಮೋಘ ಬ್ಯಾಟಿಂಗ್ ನಡೆಸಿದ್ದು, ಆರೆಂಜ್ ಕ್ಯಾಪ್ ರೇಸ್‌ನಲ್ಲಿದ್ದಾರೆ. ಆರಂಭಿಕ ಯಶಸ್ವಿ ಜೈಸ್ವಾಲ್ (290 ರನ್) ಹಾಗೂ ರಿಯಾನ್ ಪರಾಗ್ (207) ರನ್ ಕಲೆ ಹಾಕುತ್ತಿದ್ದು ಭರವಸೆ ಮೂಡಿಸಿದ್ದಾರೆ. ಮಧ್ಯಮ ಕ್ರಮಾಂಕದಲ್ಲಿ ಕಾಣಿಸಿಕೊಳ್ಳುವ ಡೊನೊವನ್ ಫೆರೀರಾ ಸಹ ಸ್ಥಿರ ಪ್ರದರ್ಶನ ನೀಡುತ್ತಿದ್ದಾರೆ.
ರಾಜಸ್ಥಾನ್ ತಂಡದ ಬೌಲಿಂಗ್ ವಿಭಾಗವನ್ನು ಮುನ್ನಡೆಸುವ ಅನುಭವಿ ಜೋಫ್ರಾ ಆರ್ಚರ್ ಪವರ್ ಪ್ಲೇ ಹಾಗೂ ಡೆತ್ ಓವರ್‌ಗಳಲ್ಲಿ ಬಿಗುವಿನ ದಾಳಿ ನಡೆಸಿ ಎದುರಾಳಿಗಳನ್ನು ಕಾಡಬಲ್ಲರು. ಇವರಿಗೆ ನಾಂಡ್ರಿ ಬರ್ಗರ್ ಹಾಗೂ ಬ್ರಿಜೇಶ್ ಶರ್ಮಾ ಉತ್ತಮ ಸಾಥ್ ನೀಡಬಲ್ಲರು. ಸ್ಪಿನ್ ಬೌಲಿಂಗ್‌ನಲ್ಲಿ ರವೀಂದ್ರ ಜಡೇಜಾ ಕಾಣಿಸಿಕೊಳ್ಳಲಿದ್ದಾರೆ.

ಟಾಪ್ ಆರ್ಡರ್ ಬಲ
ಗುಜರಾತ್ ತಂಡದ ಬ್ಯಾಟಿಂಗ್ ವಿಭಾಗಕ್ಕೆ ಟಾಪ್ ಆರ್ಡರ್ ಬ್ಯಾಟರ್‌ಗಳು ಬಲ ತುಂಬಿದ್ದಾರೆ. ಸಾಯಿ ಸುದರ್ಶನ್, ಶುಭಮನ್ ಗಿಲ್, ಜೋಸ್ ಬಟ್ಲರ್ ಬಿಗ್ ಇನಿಂಗ್ಸ್ ಆಡಿದರೆ ದೊಡ್ಡ ಮೊತ್ತದ ಕನಸು ನನಸಾಗುತ್ತದೆ. ವಾಷಿಂಗ್ಟನ್ ಸುಂದರ್ ಸಹ ತಂಡಕ್ಕೆ ಬ್ಯಾಟಿಂಗ್‌ನಲ್ಲಿ ನೆರವಾಗುತ್ತಿದ್ದಾರೆ. ಬೌಲಿಂಗ್‌ನಲ್ಲಿ ಮೊಹಮ್ಮದ್ ಸಿರಾಜ್, ಕಗಿಸೊ ರಬಾಡ ಆರಂಭದಲ್ಲಿ ಎದುರಾಳಿಗಳಿಗೆ ಶಾಕ್ ನೀಡಬಲ್ಲರು. ಸ್ಪಿನ್ ಬೌಲರ್ ರಶೀದ್ ಖಾನ್ ಮಧ್ಯದ ಓವರ್‌ಗಳಲ್ಲಿ ತಂಡಕ್ಕೆ ಆಧಾರವಾದರೆ, 2 ಅಂಕದ ಕನಸು ಫಲಿಸುತ್ತದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications