RR vs GT IPL 2024: ಸ್ಯಾಮ್ಸನ್, ಪರಾಗ್ ಭರ್ಜರಿ ಬ್ಯಾಟಿಂಗ್; ಗುಜರಾತ್‌ಗೆ ಬೃಹತ್ ಗುರಿ ನೀಡಿದ ರಾಜಸ್ಥಾನ್
ಬುಧವಾರ, ಏಪ್ರಿಲ್ 10ರಂದು ಜೈಪುರದ ಸವಾಯಿ ಮಾನ್‌ಸಿಂಗ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ 2024ರ ಇಂಡಿಯನ್ ಪ್ರೀಮಿಯರ್ ಲೀಗ್‌ನ (ಐಪಿಎಲ್) 24ನೇ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡವು ಗುಜರಾತ್ ಟೈಟನ್ಸ್ ತಂಡಕ್ಕೆ ಸವಾಲಿನ ಮೊತ್ತದ ಗುರಿ ನೀಡಿದೆ.
ಇನ್ನು ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ರಾಜಸ್ಥಾನ್ ರಾಯಲ್ಸ್ ತಂಡ ಸಂಜು ಸ್ಯಾಮ್ಸನ್ ಮತ್ತು ರಿಯಾನ್ ಪರಾಗ್ ಅವರ ಭರ್ಜರಿ ಅರ್ಧಶತಕಗಳ ನೆರವಿನಿಂದ ನಿಗದಿತ 20 ಓವರ್‌ಗಳಲ್ಲಿ 3 ವಿಕೆಟ್ ನಷ್ಟಕ್ಕೆ 196 ರನ್‌ಗಳನ್ನು ಕಲೆಹಾಕಿದ್ದು, ಗುಜರಾತ್ ಟೈಟನ್ಸ್ ತಂಡಕ್ಕೆ 197 ರನ್‌ಗಳ ಗುರಿ ನೀಡಿದೆ.

ರಾಜಸ್ಥಾನ್ ರಾಯಲ್ಸ್ ತಂಡದ ಬ್ಯಾಟಿಂಗ್ ಇನ್ನಿಂಗ್ಸ್ ಆರಂಭಿಸಿದ ಯಶಸ್ವಿ ಜೈಸ್ವಾಲ್ ಮತ್ತು ಜೋಸ್ ಬಟ್ಲರ್ ಮತ್ತೆ ಉತ್ತಮ ಆರಂಭ ನೀಡಲು ವಿಫಲರಾದರು. ಈ ಜೋಡಿ ಮೊದಲ ವಿಕೆಟ್‌ಗೆ 4.2 ಓವರ್‌ಗಳಲ್ಲಿ 32 ರನ್‌ಗಳ ಜೊತೆಯಾಟ ನೀಡಿದರು.
ಈ ವೇಳೆ ಯಶಸ್ವಿ ಜೈಸ್ವಾಲ್ 19 ಎಸೆತಗಳಲ್ಲಿ 5 ಬೌಂಡರಿ ಸಮೇತ 24 ರನ್ ಗಳಿಸಿ ಔಟಾದರು. ನಂತರ ಓವರ್‌ನಲ್ಲಿ ಜೋಸ್ ಬಟ್ಲರ್ ಕೂಡ 8 ರನ್ ಗಳಿಸಿ ವಿಕೆಟ್ ಒಪ್ಪಿಸಿದರು.
ಆ ನಂತರ ಜೊತೆಗೂಡಿದ ಸಂಜು ಸ್ಯಾಮ್ಸನ್ ಮತ್ತು ರಿಯಾನ್ ಪರಾಗ್ ಆಕ್ರಮಣಕಾರಿ ಆಟದ ಮೂಲಕ ತಂಡದ ಮೊತ್ತವನ್ನು ಹೆಚ್ಚಿಸಿದರು. ಈ ಜೋಡಿ ಮೂರನೇ ವಿಕೆಟ್‌ಗೆ 130 ರನ್‌ಗಳ ಜೊತೆಯಾಟ ನಿರ್ಮಿಸಿದರು.

ರಿಯಾನ್ ಪರಾಗ್ 48 ಎಸೆತಗಳಲ್ಲಿ 3 ಬೌಂಡರಿ ಹಾಗೂ 5 ಸಿಕ್ಸರ್‌ಗಳ ಮೂಲಕ 76 ರನ್ ಬಾರಿಸಿ ಇನ್ನಿಂಗ್ಸ್‌ನ 19ನೇ ಓವರ್‌ನಲ್ಲಿ ದೊಡ್ಡ ಶಾಟ್‌ಗೆ ಪ್ರಯತ್ನಿಸಿ ಕ್ಯಾಚ್ ನೀಡಿದರು. ಕೊನೆಯಲ್ಲಿ ಕ್ರೀಸ್‌ಗೆ ಬಂದ ಶಿಮ್ರಾನ್ ಹೆಟ್ಮೆಯರ್ 5 ಎಸೆತಗಳಲ್ಲಿ 1 ಬೌಂಡರಿ ಹಾಗೂ 1 ಸಿಕ್ಸರ್ ನೆರವಿನಿಂದ ಅಜೇಯ 13 ರನ್ ಗಳಿಸಿದರು.
ಇನ್ನು ನಾಯಕ ಸಂಜು ಸ್ಯಾಮ್ಸನ್ ಮತ್ತೊಮ್ಮೆ ತಮ್ಮ ಅದ್ಭುತ ಬ್ಯಾಟಿಂಗ್ ಪ್ರದರ್ಶನ ಮುಂದುವರೆಸಿದರು. 38 ಎಸೆತಗಳಲ್ಲಿ 7 ಬೌಂಡರಿ ಹಾಗೂ 2 ಸಿಕ್ಸರ್‌ಗಳ ಸಮೇತ ಅಜೇಯ 68 ರನ್ ಗಳಿಸಿದರು.
ಇನ್ನು ಬೌಲಿಂಗ್‌ನಲ್ಲಿ ಗುಜರಾತ್ ಟೈಟನ್ಸ್ ತಂಡದ ಪರ ಉಮೇಶ್ ಯಾದವ್ 4 ಓವರ್‌ಗಳಲ್ಲಿ 47 ರನ್ ನೀಡಿ 1 ವಿಕೆಟ್ ಪಡೆದರೆ, ರಶೀದ್ ಖಾನ್ 4 ಓವರ್‌ಗಳಲ್ಲಿ 18 ರನ್ ನೀಡಿ 1 ವಿಕೆಟ್ ಮತ್ತು ಮೋಹಿತ್ ಶರ್ಮಾ 4 ಓವರ್‌ಗಳಲ್ಲಿ 51 ರನ್ ನೀಡಿ 1 ವಿಕೆಟ್ ಪಡೆದರು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications