RR vs GT IPL 2024: ಅಜೇಯ ರಾಜಸ್ಥಾನ್ ಕಟ್ಟಿಹಾಕುವುದೇ ಗುಜರಾತ್?; ಸಂಭಾವ್ಯ ಆಡುವ 11ರ ಬಳಗ
ಬುಧವಾರ, ಏಪ್ರಿಲ್ 10ರಂದು ಜೈಪುರದ ಸವಾಯಿ ಮಾನ್‌ಸಿಂಗ್ ಸ್ಟೇಡಿಯಂನಲ್ಲಿ ನಡೆಯಲಿರುವ 2024ರ ಇಂಡಿಯನ್ ಪ್ರೀಮಿಯರ್ ಲೀಗ್‌ನ (ಐಪಿಎಲ್) 24ನೇ ಪಂದ್ಯದಲ್ಲಿ ಆತಿಥೇಯ ರಾಜಸ್ಥಾನ್ ರಾಯಲ್ಸ್ ಮತ್ತು ಗುಜರಾತ್ ಟೈಟನ್ಸ್ ತಂಡಗಳು ಮುಖಾಮುಖಿಯಾಗಲು ಸಜ್ಜಾಗಿವೆ.
ಸಂಜು ಸ್ಯಾಮ್ಸನ್ ನಾಯಕತ್ವದ ರಾಜಸ್ಥಾನ್ ರಾಯಲ್ಸ್ ತಂಡವು ಇದುವೆರೆಗೆ ಐಪಿಎಲ್ 2024ರಲ್ಲಿ ಆಡಿದ ಎಲ್ಲಾ ನಾಲ್ಕು ಪಂದ್ಯಗಳನ್ನು ಗೆದ್ದು ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ. ಇದೇ ವೇಳೆ ತಮ್ಮ ಗೆಲುವಿನ ಓಟವನ್ನು ಮುಂದುವರೆಸುವ ಉದ್ದೇಶದಿಂದ ಕಣಕ್ಕಿಳಿಯಲಿದೆ.

ಮತ್ತೊಂದೆಡೆ, ಶುಭ್ಮನ್ ಗಿಲ್ ನಾಯಕತ್ವದ ಗುಜರಾತ್ ಟೈಟಾನ್ಸ್ ತಂಡ ಆಡಿದ 5 ಪಂದ್ಯಗಳಲ್ಲಿ ಎರಡು ಗೆಲುವು ಮತ್ತು ಮೂರು ಪಂದ್ಯಗಳಲ್ಲಿ ಸೋಲು ಅನುಭವಿಸಿದ್ದು, ಅಂಕಪಟ್ಟಿಯಲ್ಲಿ 7ನೇ ಸ್ಥಾನದಲ್ಲಿದೆ. ತಮ್ಮ ಅಭಿಯಾನವನ್ನು ಮರಳಿ ಟ್ರ್ಯಾಕ್‌ಗೆ ತರಲು ಗುಜರಾತ್ ಟೈಟನ್ಸ್‌ಗೆ ಗೆಲುವು ಮುಖ್ಯವಾಗಿದೆ.
ತಮ್ಮ ಹಿಂದಿನ ಆರ್‌ಸಿಬಿ ವಿರುದ್ಧದ ಪಂದ್ಯದಲ್ಲಿ ಅಜೇಯ ಶತಕದ ಮೂಲಕ ಫಾರ್ಮ್‌ಗೆ ಮರಳಿದ ಜೋಸ್ ಬಟ್ಲರ್ ಅವರಿಂದ ದೊಡ್ಡ ಇನ್ನಿಂಗ್ಸ್ ಬರುವ ನಿರೀಕ್ಷೆ ಇದೆ. ಅಲ್ಲದೆ, ರಾಜಸ್ಥಾನ್ ರಾಯಲ್ಸ್ ತವರಿನ ಲಾಭವನ್ನು ಬಳಸಿಕೊಳ್ಳುವ ಗುರಿಯನ್ನು ಹೊಂದಿದೆ.
ಆದಾಗ್ಯೂ, ಗುಜರಾತ್ ಟೈಟನ್ಸ್ ತಂಡದಲ್ಲಿ ನಾಯಕ ಶುಭ್ಮನ್ ಗಿಲ್ ಮತ್ತು ಸಾಯಿ ಸುದರ್ಶನ್ ಮಿಂಚಿನ ಬ್ಯಾಟಿಂಗ್‌ನ ಹೊರತಾಗಿಯೂ, ಉಳಿದ ಬ್ಯಾಟರ್‌ಗಳು ಫಾರ್ಮ್‌ಗೆ ಮರಳಲು ಹೆಣಗಾಡುತ್ತಿದ್ದಾರೆ. ಸ್ಫೋಟಕ ಬ್ಯಾಟರ್ ಡೇವಿಡ್ ಮಿಲ್ಲರ್ ಗಾಯದಿಂದ ಇನ್ನೂ ಚೇತರಿಸಿಕೊಳ್ಳುತ್ತಿದ್ದಾರೆ.

ಆರ್‌ಆರ್ vs ಜಿಟಿ ಪಂದ್ಯದ ವಿವರ
ಸ್ಥಳ ಮತ್ತು ದಿನಾಂಕ: ಐಪಿಎಲ್ 2024ರ ರಾಜಸ್ಥಾನ್ ರಾಯಲ್ಸ್ ಮತ್ತು ಗುಜರಾತ್ ಟೈಟನ್ಸ್ ನಡುವಿನ ಪಂದ್ಯವು ಬುಧವಾರ, ಏಪ್ರಿಲ್ 10ರಂದು ಜೈಪುರದ ಸವಾಯಿ ಮಾನ್‌ಸಿಂಗ್ ಸ್ಟೇಡಿಯಂನಲ್ಲಿ ನಡೆಯಲಿದೆ.
ಪಂದ್ಯದ ಸಮಯ: ರಾಜಸ್ಥಾನ್ ರಾಯಲ್ಸ್ ಮತ್ತು ಗುಜರಾತ್ ಟೈಟನ್ಸ್ ನಡುವಿನ ರೋಚಕ ಪಂದ್ಯವು ಭಾರತೀಯ ಕಾಲಮಾನ ಸಂಜೆ 7.30ಕ್ಕೆ ಆರಂಭವಾಗಲಿದೆ.
ಆರ್‌ಆರ್ vs ಜಿಟಿ ಪಂದ್ಯದ ಟಿವಿ, ಲೈವ್ ಸ್ಟ್ರೀಮಿಂಗ್ ಮಾಹಿತಿ
ಐಪಿಎಲ್ 2024ರ ರಾಜಸ್ಥಾನ್ ರಾಯಲ್ಸ್ ಮತ್ತು ಗುಜರಾತ್ ಟೈಟನ್ಸ್ ಪಂದ್ಯವನ್ನು ಭಾರತದಲ್ಲಿ ಟಿವಿಯಲ್ಲಿ ಸ್ಟಾರ್ ಸ್ಪೋರ್ಟ್ಸ್‌ನಲ್ಲಿ ನೇರಪ್ರಸಾರವಾಗಲಿದ್ದರೆ, ಮೊಬೈಲ್‌ನಲ್ಲಿ ಜಿಯೋಸಿನಿಮಾ ಅಪ್ಲಿಕೇಶನ್‌ನಲ್ಲಿ ಲೈವ್ ಸ್ಟ್ರೀಮಿಂಗ್ ಇರಲಿದೆ.
ಆರ್‌ಆರ್ vs ಜಿಟಿ ಸಂಭಾವ್ಯ ಆಡುವ 11ರ ಬಳಗ
ಗುಜರಾತ್ ಟೈಟನ್ಸ್: ಸಾಯಿ ಸುದರ್ಶನ್, ಶುಭ್ಮನ್ ಗಿಲ್ (ನಾಯಕ), ಕೇನ್ ವಿಲಿಯಮ್ಸನ್, ಶರತ್ ಬಿಆರ್ (ವಿಕೆಟ್ ಕೀಪರ್), ವಿಜಯ್ ಶಂಕರ್, ರಾಹುಲ್ ತೆವಾಟಿಯಾ, ರಶೀದ್ ಖಾನ್, ನೂರ್ ಅಹ್ಮದ್, ಉಮೇಶ್ ಯಾದವ್, ಸ್ಪೆನ್ಸರ್ ಜಾನ್ಸನ್, ದರ್ಶನ್ ನಲ್ಕಂಡೆ.
ರಾಜಸ್ಥಾನ್ ರಾಯಲ್ಸ್: ಯಶಸ್ವಿ ಜೈಸ್ವಾಲ್, ಜೋಸ್ ಬಟ್ಲರ್, ಸಂಜು ಸ್ಯಾಮ್ಸನ್ (ನಾಯಕ/ ವಿಕೆಟ್ ಕೀಪರ್), ರಿಯಾನ್ ಪರಾಗ್, ಧ್ರುವ್ ಜುರೆಲ್, ಶಿಮ್ರಾನ್ ಹೆಟ್ಮೆಯರ್, ರವಿಚಂದ್ರನ್ ಅಶ್ವಿನ್, ಟ್ರೆಂಟ್ ಬೌಲ್ಟ್, ಅವೇಶ್ ಖಾನ್, ನಾಂದ್ರೆ ಬರ್ಗರ್, ಯುಜ್ವೇಂದ್ರ ಚಹಾಲ್.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications