RR vs GT IPL 2024: ರಾಜಸ್ಥಾನ್ ಓಟಕ್ಕೆ ಬ್ರೇಕ್ ಹಾಕುತ್ತಾ ಗುಜರಾತ್?; ಟಾಸ್ ವರದಿ, ಆಡುವ 11ರ ಬಳಗ
ಬುಧವಾರ, ಏಪ್ರಿಲ್ 10ರಂದು ಜೈಪುರದ ಸವಾಯಿ ಮಾನ್‌ಸಿಂಗ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ 2024ರ ಇಂಡಿಯನ್ ಪ್ರೀಮಿಯರ್ ಲೀಗ್‌ನ (ಐಪಿಎಲ್) 24ನೇ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ಮತ್ತು ಗುಜರಾತ್ ಟೈಟನ್ಸ್ ತಂಡಗಳು ಸೆಣಸಾಡುತ್ತಿವೆ.
ಜೈಪುರದ ಮೈದಾನದ ಸುತ್ತಮುತ್ತ ತುಂತುರು ಮಳೆ ಸುರಿದ ಪರಿಣಾಮ ಟಾಸ್ 25 ನಿಮಿಷಗಳ ಸಮಯ ತಡವಾಯಿತು. ಹೀಗಾಗಿ ಪಂದ್ಯವು 7.30ರ ಬದಲಾಗಿ 7.40ಕ್ಕೆ ಆರಂಭವಾಯಿತು.

ಇನ್ನು ಟಾಸ್ ಗೆದ್ದ ಗುಜರಾತ್ ಟೈಟನ್ಸ್ ತಂಡದ ನಾಯಕ ಶುಭ್ಮನ್ ಗಿಲ್ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದರು. ಹೀಗಾಗಿ ಸಂಜು ಸ್ಯಾಮ್ಸನ್ ನಾಯಕತ್ವದ ರಾಜಸ್ಥಾನ್ ರಾಯಲ್ಸ್ ತಂಡ ಮೊದಲು ಬ್ಯಾಟಿಂಗ್ ಮಾಡಲಿದೆ.
ಸಂಜು ಸ್ಯಾಮ್ಸನ್ ನಾಯಕತ್ವದ ರಾಜಸ್ಥಾನ್ ರಾಯಲ್ಸ್ ತಂಡವು ಇದುವೆರೆಗೆ ಐಪಿಎಲ್ 2024ರಲ್ಲಿ ಆಡಿದ ಎಲ್ಲಾ ನಾಲ್ಕು ಪಂದ್ಯಗಳನ್ನು ಗೆದ್ದು ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ.
ಮತ್ತೊಂದೆಡೆ, ಶುಭ್ಮನ್ ಗಿಲ್ ನಾಯಕತ್ವದ ಗುಜರಾತ್ ಟೈಟಾನ್ಸ್ ತಂಡ ಆಡಿದ 5 ಪಂದ್ಯಗಳಲ್ಲಿ ಎರಡು ಗೆಲುವು ಮತ್ತು ಮೂರು ಪಂದ್ಯಗಳಲ್ಲಿ ಸೋಲು ಅನುಭವಿಸಿದ್ದು, ಅಂಕಪಟ್ಟಿಯಲ್ಲಿ 7ನೇ ಸ್ಥಾನದಲ್ಲಿದೆ.

ಇದೇ ವೇಳೆ ರಾಜಸ್ಥಾನ್ ರಾಯಲ್ಸ್ ತಮ್ಮ ಗೆಲುವಿನ ಓಟವನ್ನು ಮುಂದುವರೆಸುವ ಉದ್ದೇಶದಿಂದ ಕಣಕ್ಕಿಳಿಯಲಿದ್ದರೆ, ಗೆಲುವಿನ ಮೂಲಕ ಮರಳಿ ಟ್ರ್ಯಾಕ್‌ಗೆ ಮರಳಲು ಗುಜರಾತ್ ಟೈಟನ್ಸ್ ತಂಡ ಆಡಲಿದೆ.
ಆರ್‌ಆರ್ vs ಜಿಟಿ ಪಂದ್ಯದ ಟಿವಿ, ಲೈವ್ ಸ್ಟ್ರೀಮಿಂಗ್ ಮಾಹಿತಿ
ಐಪಿಎಲ್ 2024ರ ರಾಜಸ್ಥಾನ್ ರಾಯಲ್ಸ್ ಮತ್ತು ಗುಜರಾತ್ ಟೈಟನ್ಸ್ ಪಂದ್ಯವನ್ನು ಭಾರತದಲ್ಲಿ ಟಿವಿಯಲ್ಲಿ ಸ್ಟಾರ್ ಸ್ಪೋರ್ಟ್ಸ್‌ನಲ್ಲಿ ನೇರಪ್ರಸಾರವಾಗಲಿದ್ದರೆ, ಮೊಬೈಲ್‌ನಲ್ಲಿ ಜಿಯೋಸಿನಿಮಾ ಅಪ್ಲಿಕೇಶನ್‌ನಲ್ಲಿ ಲೈವ್ ಸ್ಟ್ರೀಮಿಂಗ್ ಇರಲಿದೆ.
ಆರ್‌ಆರ್ vs ಜಿಟಿ ಪಂದ್ಯದ ಆಡುವ 11ರ ಬಳಗ
ರಾಜಸ್ಥಾನ್ ರಾಯಲ್ಸ್: ಯಶಸ್ವಿ ಜೈಸ್ವಾಲ್, ಜೋಸ್ ಬಟ್ಲರ್, ಸಂಜು ಸ್ಯಾಮ್ಸನ್(ನಾಯಕ/ ವಿಕೆಟ್ ಕೀಪರ್), ರಿಯಾನ್ ಪರಾಗ್, ಧ್ರುವ್ ಜುರೆಲ್, ಶಿಮ್ರಾನ್ ಹೆಟ್ಮೆಯರ್, ರವಿಚಂದ್ರನ್ ಅಶ್ವಿನ್, ಟ್ರೆಂಟ್ ಬೌಲ್ಟ್, ಅವೇಶ್ ಖಾನ್, ನವದೀಪ್ ಸೈನಿ, ಯುಜ್ವೇಂದ್ರ ಚಾಹಲ್.
ಗುಜರಾತ್ ಟೈಟನ್ಸ್: ಸಾಯಿ ಸುದರ್ಶನ್, ಶುಭ್ಮನ್ ಗಿಲ್ (ನಾಯಕ), ಮ್ಯಾಥ್ಯೂ ವೇಡ್ (ವಿಕೆಟ್ ಕೀಪರ್), ಅಭಿನವ್ ಮನೋಹರ್, ವಿಜಯ್ ಶಂಕರ್, ರಾಹುಲ್ ತೆವಾಟಿಯಾ, ರಶೀದ್ ಖಾನ್, ನೂರ್ ಅಹ್ಮದ್, ಉಮೇಶ್ ಯಾದವ್, ಸ್ಪೆನ್ಸರ್ ಜಾನ್ಸನ್, ದರ್ಶನ್ ನಲ್ಕಂಡೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications