RR vs KKR: ಕೆಕೆಆರ್ ವಿರುದ್ಧ ಗೆದ್ದು 2ನೇ ಸ್ಥಾನಕ್ಕೇರುವ ತವಕದಲ್ಲಿ ರಾಜಸ್ಥಾನ್; ಟಾಸ್ ವರದಿ, ಆಡುವ 11ರ ಬಳಗ
ಭಾನುವಾರ, ಮೇ 19ರಂದು ಗುವಾಹಟಿಯ ಬರ್ಸಾಪರಾ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ 2024ರ ಇಂಡಿಯನ್ ಪ್ರೀಮಿಯರ್ ಲೀಗ್‌ನ (ಐಪಿಎಲ್) ಅಂತಿಮ ಲೀಗ್ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ತಂಡಗಳು ಪರಸ್ಪರ ಸೆಣಸಾಡುತ್ತಿವೆ.
ಟಾಸ್ ಗೆದ್ದ ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ನಾಯಕ ಶ್ರೇಯಸ್ ಅಯ್ಯರ್ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಹೀಗಾಗಿ ಸಂಜು ಸ್ಯಾಮ್ಸನ್ ನಾಯಕತ್ವದ ರಾಜಸ್ಥಾನ್ ರಾಯಲ್ಸ್ ತಂಡ ಮೊದಲು ಬ್ಯಾಟಿಂಗ್ ಮಾಡಲಿದೆ.

ಗಮನಾರ್ಹವಾಗಿ, ನಿರಂತರ ಮಳೆಯಿಂದ ತಡವಾಗಿ ಆರಂಭವಾಗುತ್ತಿರುವ ಈ ಪಂದ್ಯದಲ್ಲಿ ತಲಾ 7 ಓವರ್‌ಗಳಿಗೆ ಕಡಿತಗೊಳಿಸಲಾಗಿದೆ. ಮಳೆಯು ಟಾಸ್ ಅನ್ನು ಸುಮಾರು 3 ಗಂಟೆ 30 ನಿಮಿಷಗಳ ಕಾಲ ವಿಳಂಬಗೊಳಿಸಿತು. ಹೀಗಾಗಿ ಪಂದ್ಯವನ್ನು 7-ಓವರ್‌ಗಳಿಗೆ ಇಳಿಸಲಾಯಿತು.
ಈ ದಿನದ ಮಧ್ಯಾಹ್ನದ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ತನ್ನ ಕೊನೆಯ ಲೀಗ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು ಸೋಲಿಸಿ 16 ಅಂಕ ಹೊಂದಿರುವ ರಾಜಸ್ಥಾನ್ ರಾಯಲ್ಸ್ ಬದಲಿಗೆ 17 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದೆ.
ಐಪಿಎಲ್ 2024ರ ಅಂಕಪಟ್ಟಿಯಲ್ಲಿ ಈಗಾಗಲೇ ಕೆಕೆಆರ್ ತಂಡ ಅಗ್ರಸ್ಥಾನದಲ್ಲಿ ಭದ್ರವಾಗಿದೆ ಮತ್ತು ಎರಡೂ ತಂಡಗಳು ಪ್ಲೇಆಫ್‌ಗೆ ಅರ್ಹತೆ ಪಡೆದುಕೊಂಡಿವೆ. ಆದರೆ, ಈ ಪಂದ್ಯದಲ್ಲಿ ಗೆಲುವಿನೊಂದಿಗೆ ರಾಜಸ್ಥಾನ್ ರಾಯಲ್ಸ್ ತಂಡ ಅಗ್ರ-2 ಸ್ಥಾನವನ್ನು ಖಚಿಪಡಿಸಿಕೊಳ್ಳುವ ಗುರಿಯನ್ನು ಹೊಂದಿದೆ.
ಭಾನುವಾರದ ಮಧ್ಯಾಹ್ನ ಪಂಜಾಬ್ ಕಿಂಗ್ಸ್ ವಿರುದ್ಧ ನಡೆಯುತ್ತಿರುವ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ಗೆದ್ದಿದ್ದರಿಂದ, ಅವರು ರಾಜಸ್ಥಾನ್ ರಾಯಲ್ಸ್ ಬದಲಿಗೆ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನವನ್ನು ತಲುಪಿದ್ದಾರೆ. ಹೀಗಾಗಿ ಸಂಜು ಸ್ಯಾಮ್ಸನ್ ನಾಯಕತ್ವದ ತಂಡಕ್ಕೆ ಗೆಲುವು ಅನಿವಾರ್ಯವಾಗಿದೆ.

ಆರ್‌ಆರ್ vs ಕೆಕೆಆರ್ ಪಂದ್ಯದ ಟಿವಿ, ಲೈವ್ ಸ್ಟ್ರೀಮಿಂಗ್ ವಿವರ
ರಾಜಸ್ಥಾನ್ ರಾಯಲ್ಸ್ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ತಂಡಗಳ ನಡುವಿನ ಐಪಿಎಲ್ 2024ರ ಪಂದ್ಯವನ್ನು ಭಾರತದಲ್ಲಿ ಟಿವಿಯಲ್ಲಿ ಸ್ಟಾರ್ ಸ್ಪೋರ್ಟ್ಸ್ ಚಾನೆಲ್‌ನಲ್ಲಿ ನೇರಪ್ರಸಾರ ಮಾಡಲಾಗುತ್ತದೆ ಮತ್ತು ಮೊಬೈಲ್‌ನಲ್ಲಿ ಜಿಯೋಸಿನಿಮಾ ಅಪ್ಲಿಕೇಶನ್‌ನಲ್ಲಿ ಲೈವ್ ಸ್ಟ್ರೀಮಿಂಗ್ ಆಗಲಿದೆ.
ಐಪಿಎಲ್ 2024: ಉಭಯ ತಂಡಗಳ ಆಡುವ 11ರ ಬಳಗ
ರಾಜಸ್ಥಾನ್ ರಾಯಲ್ಸ್: ಯಶಸ್ವಿ ಜೈಸ್ವಾಲ್, ಟಾಮ್ ಕೊಹ್ಲರ್-ಕಾಡ್ಮೋರ್, ಸಂಜು ಸ್ಯಾಮ್ಸನ್(ನಾಯಕ/ ವಿಕೆಟ್ ಕೀಪರ್), ರಿಯಾನ್ ಪರಾಗ್, ಧ್ರುವ್ ಜುರೆಲ್, ರೋವ್ಮನ್ ಪೊವೆಲ್, ರವಿಚಂದ್ರನ್ ಅಶ್ವಿನ್, ಟ್ರೆಂಟ್ ಬೌಲ್ಟ್, ಸಂದೀಪ್ ಶರ್ಮಾ, ಅವೇಶ್ ಖಾನ್, ನಾಂದ್ರೆ ಬರ್ಗರ್.
ಕೋಲ್ಕತ್ತಾ ನೈಟ್ ರೈಡರ್ಸ್: ರಹಮಾನುಲ್ಲಾ ಗುರ್ಬಾಜ್ (ವಿಕೆಟ್ ಕೀಪರ್), ಸುನಿಲ್ ನರೈನ್, ವೆಂಕಟೇಶ್ ಅಯ್ಯರ್, ಶ್ರೇಯಸ್ ಅಯ್ಯರ್ (ನಾಯಕ), ರಿಂಕು ಸಿಂಗ್, ಆಂಡ್ರೆ ರಸೆಲ್, ರಮಣದೀಪ್ ಸಿಂಗ್, ಅನುಕೂಲ್ ರಾಯ್, ಮಿಚೆಲ್ ಸ್ಟಾರ್ಕ್, ಹರ್ಷಿತ್ ರಾಣಾ, ವರುಣ್ ಚಕ್ರವರ್ತಿ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications