IPl 2025: ಲಕ್ನೋ ಎದುರು ಗೆಲ್ಲುವ ಪಂದ್ಯ ಕೈ ಚೆಲ್ಲಿದ ರಾಜಸ್ಥಾನ
ರಾಜಸ್ಥಾನ ರಾಯಲ್ಸ್ ಗೆಲುವಿನ ಸನಿಹದಲ್ಲಿ ಸೋಲು ಕಂಡಿದೆ. ರಾಜಸ್ಥಾನ ರಾಯಲ್ಸ್ ಪರ ಯಶಸ್ವಿ ಜೈಸ್ವಾಲ್ ಅವರ ಅದ್ಭುತ ಇನ್ನಿಂಗ್ಸ್ ವ್ಯರ್ಥವಾಗಿದೆ. ಕೊನೆಯ ಓವರ್‍ನಲ್ಲಿ ರಾಜಸ್ಥಾನ ರಾಯಲ್ಸ್ ತಂಡಕ್ಕೆ ವೇಗಿ ಅವೇಶ್ ಖಾನ್ ಗೆಲುವು ತಂದು ಕೊಡುವ ಮೂಲಕ ಹೀರೋ ಆದರು.
ಪಂದ್ಯದಲ್ಲಿ ಟಾಸ್ ಗೆದ್ದು ಮೊದಲ ಬ್ಯಾಟಿಂಗ್ ಮಾಡಿದ ಲಕ್ನೋ ಸೂಪರ್ ಕಿಂಗ್ಸ್ ತಂಡ ನಿಗದಿತ 20 ಓವರ್‍ಗಳಲ್ಲಿ 5 ವಿಕೆಟ್ ನಷ್ಟಕ್ಕೆ 180 ರನ್ ಗಳಿಸಿತು. ಈ ಗುರಿ ಬೆನ್ನಟ್ಟಿದ ರಾಜಸ್ಥಾನ ರಾಯಲ್ಸ್ ಭರ್ಜರಿ ಆರಂಭದ ನಡುವೆ ಕೂಡ ಗೆಲುವಿನ ದಡ ಸೇರುವಲ್ಲಿ ವಿಫಲವಾಯಿತು. ರಾಜಸ್ಥಾನ 5 ವಿಕೆಟ್ ಕಳೆದುಕೊಂಡು ಕೇವಲ 178 ರನ್ ಗಳಿಸಲು ಶಕ್ತವಾಯಿತು. ಇದರೊಂದಿಗೆ ಲಕ್ನೋ ತಂಡ 2 ರನ್‌ಗಳ ರೋಚಕ ಗೆಲುವು ಸಾಧಿಸಿತು.

ಕೊನೆಯ ಓವರ್ ವರೆಗೆ ನಡೆದ ರೋಚಕ ಪಂದ್ಯದಲ್ಲಿ ರಾಜಸ್ತಾನ ರಾಯಲ್ ತಂಡವನ್ನು ಲಕ್ನೋ ಸೂಪರ್ ಜೈಂಟ್ಸ್ ಮಣಿಸಿತು. ಲಕ್ನೋ ತಂಡವು ಆಡಿರುವ 8 ಪಂದ್ಯಗಳಲ್ಲಿ ಐದು ಗೆಲುವುಗಳೊಂದಿಗೆ 10 ಅಂಕಗಳನ್ನು ಗಳಿಸಿದ್ದು, ಅಂಕ ಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿದೆ. ರಾಜಸ್ಥಾನ ತಂಡ ಆಡಿರುವ 8 ಪಂದ್ಯಗಳಲ್ಲಿ ಆರನೇ ಸೋಲು ಕಂಡಿದೆ. ನಾಲ್ಕು ಅಂಕಗಳೊಂದಿಗೆ ಎಂಟನೇ ಸ್ಥಾನದಲ್ಲಿದೆ.
ವೈಭವ್-ಜೈಸ್ವಾಲ್ ಹೋರಾಟ ವ್ಯರ್ಥ
ಲಕ್ನೋ ಸೂಪರ್ ಜೈಂಟ್ಸ್ ನೀಡಿದ 181 ರನ್‌ಗಳ ಬೆನ್ನಟ್ಟಿದ ರಾಜಸ್ಥಾನ ರಾಯಲ್ಸ್ ತಂಡಕ್ಕೆ ಯಶಸ್ವಿ ಜೈಸ್ವಾಲ್ ಮತ್ತು ವೈಭವ್ ಸೂರ್ಯವಂಶಿ ಬಿರುಸಿನ ಆರಂಭ ನೀಡಿದರು. ಇಬ್ಬರೂ ಮೊದಲ ವಿಕೆಟ್‌ಗೆ 8.4 ಓವರ್‌ಗಳಲ್ಲಿ 85 ರನ್‌ಗಳನ್ನು ಸೇರಿಸಿದರು. 14 ವರ್ಷದ ಚೊಚ್ಚಲ ಪಂದ್ಯದಲ್ಲಿ ವೈಭವ್ 20 ಎಸೆತಗಳಲ್ಲಿ 2 ಬೌಂಡರಿ ಮತ್ತು 3 ಸಿಕ್ಸರ್ ನೆರವಿನಿಂದ 34 ರನ್ ಬಾರಿಸಿ ಔಟಾದರು. ಯಶಸ್ವಿ ಜೈಸ್ವಾಲ್ 53 ಎಸೆತಗಳಲ್ಲಿ 74 ರನ್ ಗಳಿಸಿ ಔಟಾದರು. ಅವರ ಬ್ಯಾಟ್‌ನಿಂದ 5 ಬೌಂಡರಿ ಮತ್ತು 4 ಸಿಕ್ಸರ್‌ಗಳು ಬಂದವು.
ಬದೋನಿ ಅರ್ಧಶತಕ
ಲಕ್ನೋ ಸೂಪರ್ ಜೈಂಟ್ಸ್ ಪರ ಮಿಚೆಲ್ ಮಾರ್ಷ್ ಮತ್ತು ಐಡೆನ್ ಮಾರ್ಕ್ರಾಮ್ ಇನ್ನಿಂಗ್ಸ್ ಆರಂಭಿಸಿದರು. ಆದರೆ ಲಕ್ನೋ ಉತ್ತಮ ಆರಂಭ ಪಡೆಯಿಲ್ಲ. ಆರಂಭದಲ್ಲೇ ಮಿಚೆಲ್ ಮಾರ್ಷ್ 4 ರನ್ ಗಳಿಸಿ ಔಟಾದರು. ಬಳಿಕ ಬಂದ ನಿಕೋಲಸ್ ಪೂರನ್ ಕೂಡ 10 ರನ್ ಗಳಿಸಿ ವಿಕೆಟ್ ಕಳೆದುಕೊಂಡರೆ, ನಾಯಕ ರಿಷಭ್ ಪಂತ್ ಕೇವಲ 3 ರನ್ ಗಳಿಸಿ ಔಟಾದರು. ಇಂತಹ ಸಂದರ್ಭದಲ್ಲಿ ಲಕ್ನೋ 54 ರನ್‌ಗೆ 3 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತು.
ಈ ವೇಳೆ ಒಂದಾದ ಐಡೆನ್ ಮಾರ್ಕ್ರಾಮ್ ಮತ್ತು ಆಯುಷ್ ಬದೋನಿ ಜೋಡಿ ಜವಾಬ್ದಾರಿಯುತ ಇನ್ನಿಂಗ್ಸ್ ಆಡಿದರು. ಕುಸಿದ ಲಕ್ನೋ ತಂಡಕ್ಕೆ ಐಡೆನ್ ಮಾರ್ಕ್ರಾಮ್ ನಿಧನವಾಗಿ ರನ್ ಗಳಿಸಿದರು. ಐಡೆನ್ ಮಾರ್ಕ್ರಾಮ್ 45 ಎಸೆತಗಳಲ್ಲಿ 5 ಬೌಂಡರಿ ಮತ್ತು 3 ಸಿಕ್ಸರ್ ನೆರವಿನಿಂದ 66 ರನ್ ಬಾರಿಸಿದರು. ಮತ್ತೊಂದೆಡೆ ಆಯುಷ್ ಬದೋನಿ 34 ಎಸೆತಗಳಲ್ಲಿ 5 ಬೌಂಡರಿ ಮತ್ತು 1 ಸಿಕ್ಸರ್ ಸಹಾಯದಿಂದ 50 ರನ್ ಗಳಿಸಿದರು. ಈ ಅರ್ಧಶತಕದ ನೆರವಿನಿಂದ ಲಕ್ನೋ ತಂಡ ಸವಾಲಿನ ಮೊತ್ತ ಕಲೆ ಹಾಕಿತು.
ಅಬ್ದುಲ್ ಸಮದ್ ಕೊನೆಯಲ್ಲಿ ಅಬ್ಬರಿಸಿದರು. ಅವರು ಕೇವಲ 10 ಎಸೆತಗಳಲ್ಲಿ 4 ಸಿಕ್ಸರ್ ನೆರವಿನಿಂದ 30 ರನ್ ಬಾರಿಸಿದರು. ಮತ್ತೊಂದೆಡೆ ಡೇವಿಡ್ ಮಿಲ್ಲರ್ 7 ಗಳಿಸಿದರು. ರಾಜಸ್ಥಾನ ರಾಯಲ್ಸ್ ಪರ ವನಿಂದು ಹಸರಂಗ 2 ವಿಕೆಟ್ ಪಡೆದರೆ, ಜೋಫ್ರಾ ಆರ್ಚರ್, ಸಂದೀಪ್ ಶರ್ಮಾ ಮತ್ತು ತುಷಾರ್ ದೇಶಪಾಂಡೆ ತಲಾ ಒಂದೊಂದು ವಿಕೆಟ್ ಪಡೆದರು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications