ಸೋಮವಾರ, ಏಪ್ರಿಲ್ 22ರಂದು ಜೈಪುರದ ಸವಾಯಿ ಮಾನ್‌ಸಿಂಗ್ ಸ್ಟೇಡಿಯಂನಲ್ಲಿ ನಡೆಯಲಿರುವ 2024ರ ಇಂಡಿಯನ್ ಪ್ರೀಮಿಯರ್ ಲೀಗ್‌ನ (ಐಪಿಎಲ್) 38ನೇ ಪಂದ್ಯದಲ್ಲಿ ಬಲಿಷ್ಠ ತಂಡಗಳಾದ ರಾಜಸ್ಥಾನ್ ರಾಯಲ್ಸ್ (ಆರ್‌ಆರ್) ಮುಂಬೈ ಇಂಡಿಯನ್ಸ್ (ಎಂಐ) ತಂಡಗಳು ಮುಖಾಮುಖಿಯಾಗುತ್ತಿವೆ.
ಆಡಿದ ಏಳು ಪಂದ್ಯಗಳಲ್ಲಿ ಆರು ಪಂದ್ಯಗಳನ್ನು ಗೆದ್ದಿರುವ ಸಂಜು ಸ್ಯಾಮ್ಸನ್ ನಾಯಕತ್ವದ ರಾಜಸ್ಥಾನ್ ರಾಯಲ್ಸ್ ಪ್ರಸ್ತುತ ಐಪಿಎಲ್ 2024ರ ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ. ಹೀಗಾಗಿ ತನ್ನ ಗೆಲುವಿನ ನಾಗಾಲೋಟವನ್ನು ಮುಂದುವರೆಸಲು ಎದುರು ನೋಡುತ್ತಿದೆ.

ಮತ್ತೊಂದೆಡೆ, ಹಾರ್ದಿಕ್ ಪಾಂಡ್ಯ ನಾಯಕತ್ವದ ಮುಂಬೈ ಇಂಡಿಯನ್ಸ್ ಆಡಿದ 7 ಪಂದ್ಯಗಳಲ್ಲಿ 3 ಗೆಲುವು ಮತ್ತು 4 ಸೋಲು ಕಂಡಿದ್ದು, ಅಂಕಪಟ್ಟಿಯಲ್ಲಿ ಕೇವಲ ಆರು ಅಂಕಗಳೊಂದಿಗೆ ಐಪಿಎಲ್ 2024ರ ಅಂಕಪಟ್ಟಿಯಲ್ಲಿ ಆರನೇ ಸ್ಥಾನದಲ್ಲಿದೆ.
ಏಪ್ರಿಲ್ 1ರಂದು ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಉಭಯ ತಂಡಗಳು ಮುಖಾಮುಖಿಯಾದಾಗ, ರಾಜಸ್ಥಾನ್ ರಾಯಲ್ಸ್ ತಂಡವು ಆರು ವಿಕೆಟ್‌ಗಳಿಂದ ಮುಂಬೈ ಇಂಡಿಯನ್ಸ್ ವಿರುದ್ಧ ಸುಲಭ ಗೆಲುವು ಸಾಧಿಸಿತು.
ಎರಡು ತಂಡಗಳಲ್ಲಿ ಹೆಚ್ಚು ಸಾಮರ್ಥ್ಯವಿರುವ ಟಿ20 ಪವರ್-ಹಿಟ್ಟರ್ ಬ್ಯಾಟರ್‌ಗಳಿದ್ದಾರೆ. ಸೂರ್ಯಕುಮಾರ್ ಯಾದವ್, ಸಂಜು ಸ್ಯಾಮ್ಸನ್, ಶಿಮ್ರಾನ್ ಹೆಟ್ಮೆಯರ್, ಟಿಮ್ ಡೇವಿಡ್, ಹಾರ್ದಿಕ್ ಪಾಂಡ್ಯ ಮತ್ತು ಜೋಸ್ ಬಟ್ಲರ್ ಅವರಂತಹ ಆಟಗಾರರು ಅಬ್ಬರಿಸಲು ಕಾಯುತ್ತಿದ್ದಾರೆ.

ಸ್ಥಳ ಮತ್ತು ದಿನಾಂಕ: ರಾಜಸ್ಥಾನ್ ರಾಯಲ್ಸ್ ಮತ್ತು ಮುಂಬೈ ಇಂಡಿಯನ್ಸ್ ತಂಡಗಳ ನಡುವಿನ ಐಪಿಎಲ್ 2024ರ ಪಂದ್ಯವು ಜೈಪುರದ ಮಾನ್‌ಸಿಂಗ್ ಸ್ಟೇಡಿಯಂನಲ್ಲಿ ಸೋಮವಾರ, ಏಪ್ರಿಲ್ 22ರಂದು ನಡೆಯಲಿದೆ.
ಪಂದ್ಯದ ಸಮಯ: ರಾಜಸ್ಥಾನ್ ರಾಯಲ್ಸ್ ಮತ್ತು ಮುಂಬೈ ಇಂಡಿಯನ್ಸ್ ತಂಡಗಳ ನಡುವಿನ ರೋಚಕ ಪಂದ್ಯವು ಭಾರತೀಯ ಕಾಲಮಾನ ಸಂಜೆ 7.30ಕ್ಕೆ ಆರಂಭವಾಗಲಿದೆ.
ರಾಜಸ್ಥಾನ್ ರಾಯಲ್ಸ್ ಮತ್ತು ಮುಂಬೈ ಇಂಡಿಯನ್ಸ್ ನಡುವಿನ ಐಪಿಎಲ್ 2024ರ ಹೈವೋಲ್ಟೇಜ್ ಪಂದ್ಯವನ್ನು ಭಾರತದಲ್ಲಿ ಟಿವಿಯಲ್ಲಿ ಸ್ಟಾರ್ ಸ್ಪೋರ್ಟ್ಸ್ ಚಾನೆಲ್‌ನಲ್ಲಿ ನೇರಪ್ರಸಾರ ಮಾಡಲಿದ್ದು, ಮೊಬೈಲ್‌ನಲ್ಲಿ ಜಿಯೋಸಿನಿಮಾ ಅಫ್ಲಿಕೇಶನ್‌ನಲ್ಲಿ ಲೈವ್ ಸ್ಟ್ರೀಮಿಂಗ್ ಆಗಲಿದೆ.
ರಾಜಸ್ಥಾನ್ ರಾಯಲ್ಸ್: ಯಶಸ್ವಿ ಜೈಸ್ವಾಲ್, ಜೋಸ್ ಬಟ್ಲರ್, ಸಂಜು ಸ್ಯಾಮ್ಸನ್ (ನಾಯಕ/ ವಿಕೆಟ್ ಕೀಪರ್), ರಿಯಾನ್ ಪರಾಗ್, ಶಿಮ್ರಾನ್ ಹೆಟ್ಮೆಯರ್, ಧ್ರುವ್ ಜುರೆಲ್, ರವಿಚಂದ್ರನ್ ಅಶ್ವಿನ್, ಟ್ರೆಂಟ್ ಬೌಲ್ಟ್, ಅವೇಶ್ ಖಾನ್, ಯುಜ್ವೇಂದ್ರ ಚಾಹಲ್, ಆಂಡ್ರೆ ಬರ್ಗರ್.
ಮುಂಬೈ ಇಂಡಿಯನ್ಸ್: ರೋಹಿತ್ ಶರ್ಮಾ, ಇಶಾನ್ ಕಿಶನ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ (ನಾಯಕ), ತಿಲಕ್ ವರ್ಮಾ, ಟಿಮ್ ಡೇವಿಡ್, ರೊಮಾರಿಯೋ ಶೆಫರ್ಡ್, ಮೊಹಮ್ಮದ್ ನಬಿ, ಶ್ರೇಯಸ್ ಗೋಪಾಲ್, ಜೆರಾಲ್ಡ್ ಕೋಯಟ್ಜಿ, ಜಸ್ಪ್ರೀತ್ ಬುಮ್ರಾ.