Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

RR vs MI: ಹ್ಯಾಟ್ರಿಕ್‌ ಗೆಲುವಿನ ಕನಸಿನಲ್ಲಿ ರಾಯಲ್ಸ್‌: ವೈಭವ್ vs ಬುಮ್ರಾ ಸಮರ

19ನೇ ಆವೃತ್ತಿ ಐಪಿಎಲ್‌ನ 13ನೇ ಪಂದ್ಯದಲ್ಲಿ ಭರ್ಜರಿ ಫಾರ್ಮ್‌ನಲ್ಲಿರುವ ರಾಜಸ್ಥಾನ್ ರಾಯಲ್ಸ್‌ ಹಾಗೂ ಮುಂಬೈ ಇಂಡಿಯನ್ಸ್ ತಂಡಗಳು ಕಾದಾಟ ನಡೆಸಲಿವೆ. ಈ ಪಂದ್ಯಕ್ಕೆ ಗುವಾಹಟಿ ಮೈದಾನ ಸಾಕ್ಷಿಯಾಗಲಿದೆ. ತವರಿನಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಜಯ ಸಾಧಿಸಿ ಹ್ಯಾಟ್ರಿಕ್‌ ಗೆಲುವಿನ ನಗೆ ಬೀರುವ ಕನಸು ರಾಯಲ್ಸ್ ತಂಡದ್ದಾಗಿದೆ. ಉಭಯ ತಂಡಗಳಲ್ಲೂ ಸ್ಟಾರ್ ಆಟಗಾರರು ಇದ್ದು, ಪಂದ್ಯ ರೋಚಕತೆ ಹೆಚ್ಚಿಸಿದೆ.

ರಾಜಸ್ಥಾನ್ ಈ ಆವೃತ್ತಿಯಲ್ಲಿ ಅಬ್ಬರದ ಪ್ರದರ್ಶನ ನೀಡುತ್ತಿದೆ. ಚೆನ್ನೈ ಹಾಗೂ ಗುಜರಾತ್ ವಿರುದ್ಧ ಜಯ ಸಾಧಿಸಿರುವ ರಾಜಸ್ಥಾನ್ 4 ಅಂಕವನ್ನು ಕಲೆ ಹಾಕಿದೆ. ಇನ್ನು ಮುಂಬೈ ಇಂಡಿಯನ್ಸ್‌ ಮೊದಲ ಪಂದ್ಯದಲ್ಲಿ ಕೆಕೆಆರ್‌ ವಿರುದ್ಧ ಜಯ ಸಾಧಿಸಿದ್ದು, ಡೆಲ್ಲಿ ಕ್ಯಾಪಿಟಲ್ಸ್‌ ವಿರುದ್ಧ ಸೋಲು ಕಂಡಿದೆ. ಹೀಗಾಗಿ ಮುಂಬೈ ತಂಡ ಗೆಲುವಿನ ಟ್ರ್ಯಾಕ್‌ಗೆ ಮರಳಲು ಪ್ಲ್ಯಾನ್ ಮಾಡಿಕೊಂಡಿದೆ.

RR vs MI

ರಾಜಸ್ಥಾನ್ ತಂಡದ ಪರ ಆರಂಭಿಕರಾಗಿ ಕಣಕ್ಕೆ ಇಳಿಯುವ ಯಶಸ್ವಿ ಜೈಸ್ವಾಲ್‌ ಹಾಗೂ ವೈಭವ್ ಸೂರ್ಯವಂಶಿ ತಂಡಕ್ಕೆ ಉತ್ತಮ ಆರಂಭವನ್ನು ನೀಡುವ ವಿಶ್ವಾಸವನ್ನು ಹೊಂದಿದ್ದಾರೆ. ಇನ್ನು ಯಶಸ್ವಿ ಜಿಟಿ ವಿರುದ್ಧದ ಪಂದ್ಯದಲ್ಲಿ ಅರ್ಧಶತಕ ಬಾರಿಸಿ ಭರವಸೆ ಮೂಡಿಸಿದ್ದಾರೆ. ಮೂರನೇ ಕ್ರಮಾಂಕದಲ್ಲಿ ಬ್ಯಾಟ್ ಮಾಡಿದ ಧ್ರುವ್ ಜುರೇಲ್‌ ಸೊಗಸಾದ ಬ್ಯಾಟಿಂಗ್ ಪ್ರದರ್ಶನ ನೀಡಿ ತಂಡಕ್ಕೆ ಆಧಾರವಾಗಿದ್ದರು. ಇವರು ಎರಡನೇ ಪಂದ್ಯದಲ್ಲಿ 75 ರನ್‌ ಸಿಡಿಸಿ ಭರವಸೆ ಮೂಡಿಸಿದ್ದಾರೆ.

ಆರ್ಚರ್, ತುಷಾರ್ ಆಕರ್ಷಣೆ

ಮಧ್ಯಮ ಕ್ರಮಾಂಕದಲ್ಲಿ ರಿಯಾನ್ ಪರಾಗ್, ಶಿಮ್ರೊನ್ ಹೆಟ್ಮೆಯರ್ ತಮ್ಮ ಮೇಲೆ ತಂಡ ಇಟ್ಟ ನಂಬಿಕೆಗೆ ಪೂರಕವಾಗಿ ಬ್ಯಾಟ್ ಮಾಡಬೇಕಿದೆ. ಇನ್ನು ಆಲ್‌ರೌಂಡರ್ ರವೀಂದ್ರ ಜಡೇಜಾ ಅವರ ಮೇಲೆ ಎಲ್ಲರ ಕಣ್ಣು ನೆಟ್ಟಿದೆ. ಗುಜರಾತ್‌ ವಿರುದ್ಧದ ಪಂದ್ಯದಲ್ಲಿ ಡೆತ್ ಓವರ್‌ಗಳಲ್ಲಿ ಭರ್ಜರಿ ದಾಳಿಯನ್ನು ಸಂಘಟಿಸಿದ ಜೋಫ್ರಾ ಆರ್ಚರ್ ಹಾಗೂ ತುಷಾರ್ ದೇಶಾಪಾಂಡೆ ಅವರು ಭರವಸೆ ಮೂಡಿಸಿದ್ದಾರೆ. ಗುಜರಾತ್ ವಿರುದ್ಧದ ಪಂದ್ಯದಲ್ಲಿ ರವಿ ಬಿಷ್ಣೋಯಿ 4 ವಿಕೆಟ್‌ ಕಬಳಿಸಿದ್ದು, ತಂಡದಲ್ಲಿ ತಮ್ಮ ಸ್ಥಾನವನ್ನು ಉಳಿಸಿಕೊಳ್ಳಬಹುದು.

ಅನುಭವಿಗಳ ಬಲ

ಮುಂಬೈ ತಂಡದ ಪರ ಆರಂಭಿಕರಾಗಿ ರಯಾನ್ ರಿಕಲ್ಟನ್‌ ಹಾಗೂ ರೋಹಿತ್ ಶರ್ಮಾ ಕಣಕ್ಕೆ ಇಳಿಯಲಿದ್ದು, ರಾಜಸ್ಥಾನ್ ಬೌಲರ್‌ಗಳನ್ನು ಕಾಡಬಲ್ಲರು. ಮಧ್ಯಮ ಕ್ರಮಾಂಕದಲ್ಲಿ ತಿಲಕ್ ವರ್ಮಾ ಪರಿಸ್ಥಿತಿಗೆ ಅನುಗುಣವಾಗಿ ಬ್ಯಾಟ್ ಮಾಡಬೇಕಿದೆ. ಇನ್ನು ಸೂರ್ಯಕುಮಾರ್ ಯಾದವ್ ಕಳೆದ ಪಂದ್ಯದಲ್ಲಿ ಅರ್ಧಶತಕ ಬಾರಿಸಿದ್ದು ಇವರ ಮೇಲೆ ಅಭಿಮಾನಿಗಳ ಕಣ್ಣು ನೆಟ್ಟಿದೆ. ಉಳಿದ ಬ್ಯಾಟರ್‌ಗಳು ಸಹ ಸ್ಥಿರ ಪ್ರದರ್ಶನ ನೀಡಿ ಜಯ ಸಾಧಿಸುವ ಅನಿವಾರ್ಯತೆ ಇದೆ. ವೇಗದ ಬೌಲಿಂಗ್ ವಿಭಾಗದಲ್ಲಿ ಜಸ್ಪ್ರೀತ್ ಬುಮ್ರಾ ಎದುರಾಳಿ ಬ್ಯಾಟರ್‌ಗಳಿಗೆ ಕಂಟಕವಾಗುವ ಬೌಲರ್. ಶಾರ್ದೂಲ್ ಠಾಕೂರ್, ಮಿಚೆಲ್ ಸ್ಯಾಂಟ್ನರ್‌, ಮಯಾಂಕ್ ಮಾರ್ಕಂಡೆ ಸ್ಥಿರ ಬೌಲಿಂಗ್ ನಡೆಸಿದಲ್ಲಿ ಎರಡನೇ ಗೆಲುವಿನ ಕನಸು ನನಸಾಗುತ್ತದೆ.

RR vs MI

ಪಂದ್ಯದ ಸಮಯ: ಸಂಜೆ 7.30ಕ್ಕೆ
ನೇರ ಪ್ರಸಾರ: ಸ್ಟಾರ್‌ ಸ್ಪೋರ್ಟ್ಸ್, ಜಿಯೋ ಹಾಟ್ ಸ್ಟಾರ್‌

Story first published: Monday, April 6, 2026, 18:55 [IST]
Other articles published on Apr 6, 2026
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+