RR vs MI: ರಾಯಲ್ಸ್ ಹ್ಯಾಟ್ರಿಕ್ ಗೆಲುವಿಗೆ ಕಾರಣವಾದ ಅಂಶ ಯಾವುದು?
ಗುವಾಹಟಿ: 19ನೇ ಆವೃತ್ತಿಯ ಐಪಿಎಲ್‌ನಲ್ಲಿ ರಾಜಸ್ಥಾನ ರಾಯಲ್ಸ್ ಅಮೋಘ ಪ್ರದರ್ಶನ ನೀಡಿ ಹ್ಯಾಟ್ರಿಕ್ ಗೆಲುವಿನ ನಗೆ ಬೀರಿದೆ. ಮಂಗಳವಾರ ನಡೆದ ಪಂದ್ಯದಲ್ಲಿ ರಾಜಸ್ಥಾನ್ ಭರ್ಜರಿ ಪ್ರದರ್ಶನ ನೀಡಿ 27 ರನ್‌ಗಳಿಂದ ಮುಂಬೈ ಇಂಡಿಯನ್ಸ್ ತಂಡವನ್ನು ಮಣಿಸಿ ಜಯಭೇರಿ ಬಾರಿಸಿತು. ಈ ಮೂಲಕ ರಾಜಸ್ಥಾನ್ ತವರಿನ ಅಭಿಮಾನಿಗಳ ಸಮ್ಮುಖದಲ್ಲಿ ಸ್ಥಿರ ಪ್ರದರ್ಶನ ನೀಡಿ ಆರ್ಭಟಿಸಿತು.
ಈ ಆವೃತ್ತಿಯ 13ನೇ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡ ಬ್ಯಾಟಿಂಗ್ ಹಾಗೂ ಬೌಲಿಂಗ್‌ನಲ್ಲಿ ಅಮೋಘ ಪ್ರದರ್ಶನ ನೀಡಿತು. ಟಾಸ್ ಸೋತರೂ ಮೊದಲು ಬ್ಯಾಟ್ ಮಾಡಿದ ರಾಜಸ್ಥಾನ್ ರಾಯಲ್ಸ್ 20 ಓವರ್‌ಗಳಲ್ಲಿ 3 ವಿಕೆಟ್ ನಷ್ಟಕ್ಕೆ 150 ರನ್ ಸೇರಿಸಿತು.

ರಾಜಸ್ಥಾನ್ ಪರ ಆರಂಭಿಕ ಯಶಸ್ವಿ ಜೈಸ್ವಾಲ್ ಅಮೋಘ ಬ್ಯಾಟಿಂಗ್ ಪ್ರದರ್ಶನ ನೀಡಿದರು. ಇವರು 32 ಎಸೆತಗಳಲ್ಲಿ 10 ಬೌಂಡರಿ, 4 ಸಿಕ್ಸರ್ ಸಹಾಯದಿಂದ ಅಜೇಯ 77 ರನ್ ಸಿಡಿಸಿದರು. ವೈಭವ್ ಸೂರ್ಯವಂಶಿ 14 ಎಸೆತಗಳಲ್ಲಿ 1 ಬೌಂಡರಿ, 5 ಸಿಕ್ಸರ್ ಸಹಾಯದಿಂದ 39 ರನ್ ಬಾರಿಸಿದರು.
ಗುರಿಯನ್ನು ಬೆನ್ನಟ್ಟಿದ ಮುಂಬೈ ತಂಡ ರನ್ ವೇಗಕ್ಕೆ ಚುರುಕು ಮುಟ್ಟಿಸುವಲ್ಲಿ ವಿಫಲವಾಯಿತು. ಮುಂಬೈ ಪವರ್ ಪ್ಲೇನಲ್ಲಿ ಪವರ್ ಹಿಟರ್‌ಗಳು ಪೆವಿಲಿಯನ್ ಸೇರಿದರು. ಇದು ಮುಂಬೈ ಇಂಡಿಯನ್ಸ್ ತಂಡಕ್ಕೆ ಪೆಟ್ಟು ನೀಡಿತು. ಸ್ಟಾರ್ ಆಟಗಾರರಾದ ರೋಹಿತ್ ಶರ್ಮಾ, ಸೂರ್ಯಕುಮಾರ್ ಯಾದವ್ ಅವರಿಗೆ ರಾಜಸ್ಥಾನ್ ಬೌಲರ್‌ಗಳ ರನ್ ನೀಡದಂತೆ ತಡೆಯುವಲ್ಲಿ ಸಫಲರಾದರು.
ಇದೇ ಆರ್‌ಆರ್ ಗೆಲುವಿನ ಟರ್ನಿಂಗ್ ಪಾಯಿಂಟ್
ರಾಜಸ್ಥಾನ್ ತಂಡದ ಬೌಲರ್‌ಗಳು ಬಿಗುವಿನ ದಾಳಿ ನಡೆಸಿದರು. ಅಲ್ಲದೆ ಪಂದ್ಯದ ಯಾವುದೇ ಹಂತದಲ್ಲೂ ಮುಂಬೈ ಬ್ಯಾಟರ್‌ಗಳು ರಾಯಲ್ಸ್ ಬೌಲರ್‌ಗಳ ಸವಾಲನ್ನು ಮೆಟ್ಟಿನಿಲ್ಲುವಲ್ಲಿ ವಿಫಲರಾದರು. ರಾಜಸ್ಥಾನ್ ತಂಡದ ಸಂದೀಪ್ ಶರ್ಮಾ, ನಾಂಡ್ರಿ ಬರ್ಗರ್, ರವಿ ಬಿಷ್ಣೋಯಿ ತಲಾ 2 ವಿಕೆಟ್ ಪಡೆದು ಗೆಲುವಿನಲ್ಲಿ ಮಿಂಚಿದರು. ಈ ಮೂಲಕ ರಾಜಸ್ಥಾನ ಜಯದಲ್ಲಿ ಮಿಂಚಿದರು. ರಾಜಸ್ಥಾನ ತಂಡ ಪವರ್ ಪ್ಲೇನಲ್ಲಿ ಮೂರು ವಿಕೆಟ್ ಹಾಗೂ ಬ್ಯಾಕ್ ಟು ಬ್ಯಾಕ್ ವಿಕೆಟ್ ಗಳನ್ನು ಪಡೆದು ಗೆಲುವಿನಲ್ಲಿ ಮಿಂಚಿದರು. ಪವರ್ ಪ್ಲೇನಲ್ಲಿ ಮೂರು ವಿಕೆಟ್ ಪಡೆದಿದ್ದು ರಾಜಸ್ಥಾನ ಗೆಲುವಿಗೆ ಟರ್ನಿಂಗ್ ಪಾಯಿಂಟ್ ಆಗಿತ್ತು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications