For Quick Alerts
ALLOW NOTIFICATIONS  
For Daily Alerts
 

RR vs PBKS IPL 2024: ಸತತ 4ನೇ ಸೋಲು ಕಂಡ ರಾಜಸ್ಥಾನ್ ರಾಯಲ್ಸ್; ಭರ್ಜರಿ ಗೆಲುವು ಸಾಧಿಸಿದ ಪಂಜಾಬ್‌ ಕಿಂಗ್ಸ್

ಬುಧವಾರ, ಮೇ 15ರಂದು ಗುವಾಹಟಿಯ ಬರ್ಸಾಪುರ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ 2024ರ ಇಂಡಿಯನ್ ಪ್ರೀಮಿಯರ್ ಲೀಗ್‌ನ (ಐಪಿಎಲ್) 65ನೇ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡದ ವಿರುದ್ಧ ಪಂಜಾಬ್ ಕಿಂಗ್ಸ್ 5 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿದೆ.

ಸತತ 4ನೇ ಸೋಲು ಅನುಭವಿಸಿದ ರಾಜಸ್ಥಾನ್ ರಾಯಲ್ಸ್ ತಂಡ ಐಪಿಎಲ್ 2024ರ ಪ್ಲೇಆಫ್‌ಗೆ ಪ್ರವೇಶ ಪಡೆದಿದ್ದರೂ, ಅಗ್ರ 2ರಲ್ಲಿ ಲೀಗ್ ಹಂತ ಮುಗಿಸಲು ಅವಕಾಶ ಕಷ್ಟಕರವಾಗಿರಿಸಿಕೊಂಡಿದೆ. ಇನ್ನು ಐಪಿಎಲ್ 2024ರ ಪ್ಲೇಆಫ್‌ನಿಂದ ಹೊರಬಿದ್ದಿರುವ ಪಂಜಾಬ್ ಕಿಂಗ್ಸ್ ಗೆಲುವು ಸಾಧಿಸಿ ಅಂಕಪಟ್ಟಿಯಲ್ಲಿ 9ನೇ ಸ್ಥಾನಕ್ಕೇರಿದೆ.

RR vs PBKS IPL 2024 Punjab Kings Beat Rajasthan Royals By 5 Wickets In 65th Match

ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ರಾಜಸ್ಥಾನ್ ರಾಯಲ್ಸ್ ತಂಡ ರಿಯಾನ್ ಪರಾಗ್ ಅವರ 48 ರನ್‌ಗಳ ಅಗ್ರ ಸ್ಕೋರ್ ನೆರವಿನಿಂದ ನಿಗದಿತ 20 ಓವರ್‌ಗಳಲ್ಲಿ 9 ವಿಕೆಟ್ ನಷ್ಟಕ್ಕೆ 144 ರನ್ ಕಲೆಹಾಕಿತ್ತು.

145 ರನ್‌ಗಳ ಸಾಧಾರಣ ಗುರಿ ಬೆನ್ನಟ್ಟಿದ ಪಂಜಾಬ್ ಕಿಂಗ್ಸ್ ತಂಡ ಹಂಗಾಮಿ ನಾಯಕ ಸ್ಯಾಮ್ ಕರ್ರಾನ್ ಅವರ ಅಮೋಘ ಅರ್ಧಶತಕದ ಸಾಹಸದಿಂದ 18.5 ಓವರ್‌ಗಳಲ್ಲಿ 5 ವಿಕೆಟ್ ಕಳೆದುಕೊಂಡು ಗೆಲುವಿನ ದಡ ಸೇರಿತು.

ಪಂಜಾಬ್ ಕಿಂಗ್ಸ್ ತಂಡದ ಬ್ಯಾಟಿಂಗ್ ಇನ್ನಿಂಗ್ಸ್ ಆರಂಭಿಸಿದ ಪ್ರಭ್‌ಸಿಮ್ರಾನ್ ಸಿಂಗ್ ಮತ್ತು ಜಾನಿ ಬೈರ್‌ಸ್ಟೋವ್ ದೊಡ್ಡ ಆರಂಭ ನೀಡಲು ವಿಫಲರಾದರು. ಪ್ರಭ್‌ಸಿಮ್ರಾನ್ ಸಿಂಗ್ 6 ರನ್ ಗಳಿಸಿ ಔಟಾದರೆ, ಜಾನಿ ಬೈರ್‌ಸ್ಟೋವ್ 14 ರನ್ ಗಳಿಸಿ ವಿಕೆಟ್ ಒಪ್ಪಿಸಿದರು.

ನಂತರ ಬಂದ ರಿಲೀ ರೊಸ್ಸೌ 13 ಎಸೆತಗಳಲ್ಲಿ 5 ಬೌಂಡರಿ ಹಾಗೂ 22 ರನ್ ಗಳಿಸಿ ಕುಸಿದಿದ್ದ ತಂಡಕ್ಕೆ ಆಸರೆಯಾದರು. ಬಳಿಕ ಕ್ರೀಸ್‌ಗೆ ಬಂದ ಶಶಾಂಕ್ ಸಿಂಗ್ ಡಕ್‌ಗೆ ಔಟಾದರು.

RR vs PBKS IPL 2024 Punjab Kings Beat Rajasthan Royals By 5 Wickets In 65th Match

ಇನ್ನು ಹಂಗಾಮಿ ನಾಯಕ ಸ್ಯಾಮ್ ಕರ್ರಾನ್ ಕೊನೆಯವರೆಗೂ ಆಡಿ ತಂಡವನ್ನು ಗೆಲ್ಲಿಸಿದರು ಮತ್ತು 41 ಎಸೆತಗಳಲ್ಲಿ 5 ಬೌಂಡರಿ ಹಾಗೂ 3 ಸಿಕ್ಸರ್‌ಗಳ ಸಮೇತ ಅಜೇಯ 63 ರನ್ ಬಾರಿಸಿದರೆ, ಜಿತೇಶ್ ಶರ್ಮಾ 20 ಎಸೆತಗಳಲ್ಲಿ 2 ಸಿಕ್ಸರ್‌ಗಳ ಮೂಲಕ 22 ರನ್ ಗಳಿಸಿದರು. ಇನ್ನು ಅಶುತೋಷ್ ಶರ್ಮಾ 11 ಎಸೆತಗಳಲ್ಲಿ 1 ಬೌಂಡರಿ ಹಾಗೂ 1 ಸಿಕ್ಸರ್ ನೆರವಿನಿಂದ ಅಜೇಯ 17 ರನ್ ಗಳಿಸಿದರು.

ಇನ್ನು ಬೌಲಿಂಗ್‌ನಲ್ಲಿ ರಾಜಸ್ಥಾನ್ ರಾಯಲ್ಸ್ ಪರ ಅವೇಶ್ ಖಾನ್ 3.5 ಓವರ್‌ಗಳಲ್ಲಿ 28 ರನ್ ನೀಡಿ 2 ವಿಕೆಟ್ ಕಬಳಿಸಿದರೆ, ಯುಜ್ವೇಂದ್ರ ಚಹಾಲ್ 4 ಓವರ್‌ಗಳಲ್ಲಿ 31 ರನ್ ನೀಡಿ 2 ವಿಕೆಟ್ ಪಡೆದರು. ಉಳಿದಂತೆ ಟ್ರೆಂಟ್ ಬೌಲ್ಟ್ ಒಂದು ವಿಕೆಟ್ ಪಡೆದರು.

RR vs PBKS IPL 2024 Punjab Kings Beat Rajasthan Royals By 5 Wickets In 65th Match


ಇದಕ್ಕೂ ಮುನ್ನ ರಾಜಸ್ಥಾನ್ ರಾಯಲ್ಸ್ ತಂಡದ ಬ್ಯಾಟಿಂಗ್ ಇನ್ನಿಂಗ್ಸ್ ಆರಂಭಿಸಿದ ಯಶಸ್ವಿ ಜೈಸ್ವಾಲ್ ಮತ್ತು ಟಾಮ್ ಕೊಹ್ಲರ್-ಕಾಡ್ಮೋರ್ ಉತ್ತಮ ಆರಂಭ ನೀಡಲು ವಿಫಲರಾದರು. ತಂಡದ ಮೊತ್ತ 4 ರನ್‌ಗಳಾಗಿದ್ದಾಗ 4 ರನ್ ಗಳಿಸಿ ಆಡುತ್ತಿದ್ದ ಯಶಸ್ವಿ ಜೈಸ್ವಾಲ್ ಔಟಾದರು.

ನಂತರ ಬಂದ ನಾಯಕ ಸಂಜು ಸ್ಯಾಮ್ಸನ್ ಅವರು ಸ್ಕೋರ್ ಬೋರ್ಡ್ ಹೆಚ್ಚಿಸಲು ಪ್ರಯತ್ನಪಟ್ಟರು. ಆದರೆ, 15 ಎಸೆತಗಳಲ್ಲಿ 3 ಬೌಂಡರಿ ಮೂಲಕ 18 ರನ್ ಗಳಿಸಿದ್ದಾಗ ಸಂಜು ಸ್ಯಾಮ್ಸನ್ ವಿಕೆಟ್ ಒಪ್ಪಿಸಿದರು. ಇವರ ಹಿಂದೆಯೇ ಟಾಮ್ ಕೊಹ್ಲರ್-ಕಾಡ್ಮೋರ್ ಕೂಡ 23 ಎಸೆತಗಳಲ್ಲಿ 2 ಬೌಂಡರಿ ಹಾಗೂ 1 ಸಿಕ್ಸರ್ ಸಮೇತ 18 ರನ್ ಗಳಿಸಿ ಪೆವಿಲಿಯನ್ ಸೇರಿದರು.

ರವಿಚಂದ್ರನ್ ಅಶ್ವಿನ್ ಮಧ್ಯಮ ಕ್ರಮಾಂಕದಲ್ಲಿ ಸ್ವಲ್ಪ ಪ್ರತಿರೋಧ ಒಡ್ಡಿದರು ಮತ್ತು 19 ಎಸೆತಗಳಲ್ಲಿ 3 ಬೌಂಡರಿ ಹಾಗೂ 1 ಸಿಕ್ಸರ್ ಮೂಲಕ 28 ರನ್ ಗಳಿಸಿದರು. ಕುಸಿದ ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ರಿಯಾನ್ ಪರಾಗ್ ಮತ್ತೊಮ್ಮೆ ಆಸರೆಯಾದರು ಮತ್ತು 34 ಎಸೆತಗಳಲ್ಲಿ 6 ಬೌಂಡರಿಗಳ ನೆರವಿನಿಂದ 48 ರನ್ ಬಾರಿಸಿ ಔಟಾದರು.

ಉಳಿದಂತೆ ಧ್ರುವ್ ಜುರೆಲ್ ಸೊನ್ನೆ ಸುತ್ತಿದರೆ, ರೋವ್ಮನ್ ಪೊವೆಲ್ 4 ರನ್, ಡೋನಾವನ್ ಫೆರ್ರಿರಾ 7 ರನ್, ಟ್ರೆಂಟ್ ಬೌಲ್ಟ್ 12 ರನ್ ಮತ್ತು ಅವೇಶ್ ಖಾನ್ ಅಜೇಯ 3 ರನ್ ಗಳಿಸಿ ತಂಡದ ಮೊತ್ತ 140ರ ಗಡಿ ದಾಟಲು ನೆರವಾದರು.

ಇನ್ನು ಬೌಲಿಂಗ್‌ನಲ್ಲಿ ಪಂಜಾಬ್ ಕಿಂಗ್ಸ್ ಪರ ರಾಹುಲ್ ಚಹಾರ್ 4 ಓವರ್‌ಗಳಲ್ಲಿ 26 ರನ್ ನೀಡಿ 2 ವಿಕೆಟ್ ಪಡೆದರೆ, ಹರ್ಷಲ್ ಪಟೇಲ್ 4 ಓವರ್‌ಗಳಲ್ಲಿ 28 ರನ್ ನೀಡಿ 2 ವಿಕೆಟ್ ಕಬಳಿಸಿದರು. ಸ್ಯಾಮ್ ಕರ್ರಾನ್ 3 ಓವರ್‌ಗಳಲ್ಲಿ 24 ರನ್ ನೀಡಿ 2 ವಿಕೆಟ್ ಪಡೆದರೆ, ಉಳಿದಂತೆ ಅರ್ಶ್‌ದೀಪ್ ಸಿಂಗ್ ಮತ್ತು ನಲ್ತಾನ್ ಎಲ್ಲಿಸ್ ತಲಾ ಒಂದೊಂದು ವಿಕೆಟ್ ಪಡೆದರು.

Story first published: Wednesday, May 15, 2024, 23:27 [IST]
Other articles published on May 15, 2024
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+