RR vs PBKS IPL 2024: ಪಂಜಾಬ್ ಕಿಂಗ್ಸ್‌ಗೆ ಸಾಧಾರಣ ಗುರಿ ನೀಡಿದ ರಾಜಸ್ಥಾನ್ ರಾಯಲ್ಸ್
ಬುಧವಾರ, ಮೇ 15ರಂದು ಗುವಾಹಟಿಯ ಬರ್ಸಾಪುರ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ 2024ರ ಇಂಡಿಯನ್ ಪ್ರೀಮಿಯರ್ ಲೀಗ್‌ನ (ಐಪಿಎಲ್) 65ನೇ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡದ ಬ್ಯಾಟರ್‌ಗಳ ವೈಫಲ್ಯದಿಂದ ಪಂಜಾಬ್ ಕಿಂಗ್ಸ್ ವಿರುದ್ಧ ಸಾಧಾರಣ ಮೊತ್ತ ಕಲೆಹಾಕಿದೆ.
ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ರಾಜಸ್ಥಾನ್ ರಾಯಲ್ಸ್ ತಂಡ ರಿಯಾನ್ ಪರಾಗ್ ಅವರ 48 ರನ್‌ಗಳ ಅಗ್ರ ಸ್ಕೋರ್ ನೆರವಿನಿಂದ ನಿಗದಿತ 20 ಓವರ್‌ಗಳಲ್ಲಿ 9 ವಿಕೆಟ್ ನಷ್ಟಕ್ಕೆ 144 ರನ್ ಗಳಿಸಿದ್ದು, ಪಂಜಾಬ್ ಕಿಂಗ್ಸ್ ತಂಡಕ್ಕೆ 145 ರನ್‌ಗಳ ಸಾಧಾರಣ ಗುರಿ ನೀಡಿದೆ.

ರಾಜಸ್ಥಾನ್ ರಾಯಲ್ಸ್ ತಂಡದ ಬ್ಯಾಟಿಂಗ್ ಇನ್ನಿಂಗ್ಸ್ ಆರಂಭಿಸಿದ ಯಶಸ್ವಿ ಜೈಸ್ವಾಲ್ ಮತ್ತು ಟಾಮ್ ಕೊಹ್ಲರ್-ಕಾಡ್ಮೋರ್ ಉತ್ತಮ ಆರಂಭ ನೀಡಲು ವಿಫಲರಾದರು. ತಂಡದ ಮೊತ್ತ 4 ರನ್‌ಗಳಾಗಿದ್ದಾಗ 4 ರನ್ ಗಳಿಸಿ ಆಡುತ್ತಿದ್ದ ಯಶಸ್ವಿ ಜೈಸ್ವಾಲ್ ಔಟಾದರು.
ನಂತರ ಬಂದ ನಾಯಕ ಸಂಜು ಸ್ಯಾಮ್ಸನ್ ಅವರು ಸ್ಕೋರ್ ಬೋರ್ಡ್ ಹೆಚ್ಚಿಸಲು ಪ್ರಯತ್ನಪಟ್ಟರು. ಆದರೆ, 15 ಎಸೆತಗಳಲ್ಲಿ 3 ಬೌಂಡರಿ ಮೂಲಕ 18 ರನ್ ಗಳಿಸಿದ್ದಾಗ ಸಂಜು ಸ್ಯಾಮ್ಸನ್ ವಿಕೆಟ್ ಒಪ್ಪಿಸಿದರು. ಇವರ ಹಿಂದೆಯೇ ಟಾಮ್ ಕೊಹ್ಲರ್-ಕಾಡ್ಮೋರ್ ಕೂಡ 23 ಎಸೆತಗಳಲ್ಲಿ 2 ಬೌಂಡರಿ ಹಾಗೂ 1 ಸಿಕ್ಸರ್ ಸಮೇತ 18 ರನ್ ಗಳಿಸಿ ಪೆವಿಲಿಯನ್ ಸೇರಿದರು.

ರವಿಚಂದ್ರನ್ ಅಶ್ವಿನ್ ಮಧ್ಯಮ ಕ್ರಮಾಂಕದಲ್ಲಿ ಸ್ವಲ್ಪ ಪ್ರತಿರೋಧ ಒಡ್ಡಿದರು ಮತ್ತು 19 ಎಸೆತಗಳಲ್ಲಿ 3 ಬೌಂಡರಿ ಹಾಗೂ 1 ಸಿಕ್ಸರ್ ಮೂಲಕ 28 ರನ್ ಗಳಿಸಿದರು. ಕುಸಿದ ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ರಿಯಾನ್ ಪರಾಗ್ ಮತ್ತೊಮ್ಮೆ ಆಸರೆಯಾದರು ಮತ್ತು 34 ಎಸೆತಗಳಲ್ಲಿ 6 ಬೌಂಡರಿಗಳ ನೆರವಿನಿಂದ 48 ರನ್ ಬಾರಿಸಿ ಔಟಾದರು.
ಉಳಿದಂತೆ ಧ್ರುವ್ ಜುರೆಲ್ ಸೊನ್ನೆ ಸುತ್ತಿದರೆ, ರೋವ್ಮನ್ ಪೊವೆಲ್ 4 ರನ್, ಡೋನಾವನ್ ಫೆರ್ರಿರಾ 7 ರನ್, ಟ್ರೆಂಟ್ ಬೌಲ್ಟ್ 12 ರನ್ ಮತ್ತು ಅವೇಶ್ ಖಾನ್ ಅಜೇಯ 3 ರನ್ ಗಳಿಸಿ ತಂಡದ ಮೊತ್ತ 140ರ ಗಡಿ ದಾಟಲು ನೆರವಾದರು.
ಇನ್ನು ಬೌಲಿಂಗ್‌ನಲ್ಲಿ ಪಂಜಾಬ್ ಕಿಂಗ್ಸ್ ಪರ ರಾಹುಲ್ ಚಹಾರ್ 4 ಓವರ್‌ಗಳಲ್ಲಿ 26 ರನ್ ನೀಡಿ 2 ವಿಕೆಟ್ ಪಡೆದರೆ, ಹರ್ಷಲ್ ಪಟೇಲ್ 4 ಓವರ್‌ಗಳಲ್ಲಿ 28 ರನ್ ನೀಡಿ 2 ವಿಕೆಟ್ ಕಬಳಿಸಿದರು. ಸ್ಯಾಮ್ ಕರ್ರಾನ್ 3 ಓವರ್‌ಗಳಲ್ಲಿ 24 ರನ್ ನೀಡಿ 2 ವಿಕೆಟ್ ಪಡೆದರೆ, ಉಳಿದಂತೆ ಅರ್ಶ್‌ದೀಪ್ ಸಿಂಗ್ ಮತ್ತು ನಲ್ತಾನ್ ಎಲ್ಲಿಸ್ ತಲಾ ಒಂದೊಂದು ವಿಕೆಟ್ ಪಡೆದರು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications