For Quick Alerts
ALLOW NOTIFICATIONS  
For Daily Alerts
 

RR vs PBKS IPL 2024: ರಾಜಸ್ಥಾನ್ ರಾಯಲ್ಸ್‌ಗೆ ಪಂಜಾಬ್ ಕಿಂಗ್ಸ್ ಕೊನೆಯ ಸವಾಲು; ಟಾಸ್ ವರದಿ, ಆಡುವ 11ರ ಬಳಗ

ಬುಧವಾರ, ಮೇ 15ರಂದು ಗುವಾಹಟಿಯ ಬರ್ಸಾಪುರ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ 2024ರ ಇಂಡಿಯನ್ ಪ್ರೀಮಿಯರ್ ಲೀಗ್‌ನ (ಐಪಿಎಲ್) 65ನೇ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ಮತ್ತು ಪಂಜಾಬ್ ಕಿಂಗ್ಸ್ ತಂಡಗಳು ಅನೌಪಚಾರಿಕ ಪಂದ್ಯದಲ್ಲಿ ಸೆಣಸಾಡುತ್ತಿವೆ.

ಟಾಸ್ ಗೆದ್ದ ರಾಜಸ್ಥಾನ್ ರಾಯಲ್ಸ್ ತಂಡದ ನಾಯಕ ಸಂಜು ಸ್ಯಾಮ್ಸನ್ ಮೊದಲು ಬ್ಯಾಟಿಂಗ್ ಮಾಡುವ ನಿರ್ಧಾರ ಮಾಡಿದ್ದಾರೆ. ಹೀಗಾಗಿ ಸ್ಯಾಮ್ ಕರ್ರಾನ್ ನಾಯಕತ್ವದ ಪಂಜಾಬ್ ಕಿಂಗ್ಸ್ ತಂಡ ಮೊದಲು ಬೌಲಿಂಗ್ ಮಾಡಲಿದೆ.

RR vs PBKS IPL 2024 Rajasthan Royals vs Punjab Kings Match Toss Report And Playing 11

ಪಂಜಾಬ್ ಕಿಂಗ್ಸ್ ತಂಡ ಈಗಾಗಲೇ ಐಪಿಎಲ್ 2024ರ ಪ್ಲೇಆಫ್ ರೇಸ್‌ನಿಂದ ಹೊರಬಿದ್ದಿದೆ. ಹೀಗಾಗಿ ತನ್ನ ಕೊನೆಯ ಲೀಗ್ ಪಂದ್ಯವನ್ನು ಗೆಲುವಿನ ಮೂಲಕ ಅಭಿಯಾನ ಮುಕ್ತಾಯಗೊಳಿಸಲು ಎದುರು ನೋಡುತ್ತಿದೆ.

ಇನ್ನು ರಾಜಸ್ಥಾನ್ ರಾಯಲ್ಸ್ ತಂಡ 16 ಅಂಕಗಳೊಂದಿಗೆ ಪ್ಲೇಆಫ್ ಪ್ರವೇಶಿಸಿದ್ದರೂ, 12 ಪಂದ್ಯಗಳಿಂದ 14 ಅಂಕಗಳಲ್ಲಿರುವ ಸನ್ ರೈಸರ್ಸ್ ಹೈದರಾಬಾದ್ ತಂಡದೊಂದಿಗೆ ಅಗ್ರ 2ನೇ ಸ್ಥಾನದಲ್ಲಿ ಮುಕ್ತಾಯಗೊಳಿಸುವ ಭರವಸೆಯನ್ನು ಹೊಂದಿಲ್ಲ. ಆದ್ದರಿಂದ ಈ ಪಂದ್ಯದಲ್ಲಿ ಗೆಲ್ಲುವ ಭರವಸೆ ಹೊಂದಿದೆ.

RR vs PBKS IPL 2024 Rajasthan Royals vs Punjab Kings Match Toss Report And Playing 11

ಆರ್‌ಆರ್ vs ಪಿಬಿಕೆಎಸ್ ಪಂದ್ಯದ ಟಿವಿ, ಲೈವ್ ಸ್ಟ್ರೀಮಿಂಗ್ ವಿವರ
ರಾಜಸ್ಥಾನ್ ರಾಯಲ್ಸ್ ಮತ್ತು ಪಂಜಾಬ್ ಕಿಂಗ್ಸ್ ತಂಡಗಳ ನಡುವಿನ ಐಪಿಎಲ್ 2024ರ ಪಂದ್ಯವನ್ನು ಭಾರತದಲ್ಲಿ ಟಿವಿಯಲ್ಲಿ ಸ್ಟಾರ್ ಸ್ಪೋರ್ಟ್ಸ್ ಚಾನೆಲ್‌ನಲ್ಲಿ ನೇರಪ್ರಸಾರ ಮಾಡಲಾಗುತ್ತದೆ ಮತ್ತು ಮೊಬೈಲ್‌ನಲ್ಲಿ ಜಿಯೋಸಿನಿಮಾ ಅಪ್ಲಿಕೇಶನ್‌ನಲ್ಲಿ ಲೈವ್ ಸ್ಟ್ರೀಮಿಂಗ್ ಆಗಲಿದೆ.

ಆರ್‌ಆರ್ vs ಪಿಬಿಕೆಎಸ್ ಆಡುವ 11ರ ಬಳಗ

ಪಂಜಾಬ್ ಕಿಂಗ್ಸ್: ಪ್ರಭ್‌ಸಿಮ್ರಾನ್ ಸಿಂಗ್, ಜಾನಿ ಬೈರ್‌ಸ್ಟೋವ್, ರಿಲೀ ರೊಸ್ಸೌ, ಶಶಾಂಕ್ ಸಿಂಗ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಸ್ಯಾಮ್ ಕುರ್ರಾನ್ (ನಾಯಕ), ಹರ್‌ಪ್ರೀತ್ ಬ್ರಾರ್, ಹರ್ಷಲ್ ಪಟೇಲ್, ನಾಥನ್ ಎಲ್ಲಿಸ್, ರಾಹುಲ್ ಚಾಹರ್, ಅರ್ಶ್‌ದೀಪ್ ಸಿಂಗ್.

ರಾಜಸ್ಥಾನ್ ರಾಯಲ್ಸ್: ಯಶಸ್ವಿ ಜೈಸ್ವಾಲ್, ಟಾಮ್ ಕೊಹ್ಲರ್-ಕಾಡ್ಮೋರ್, ಸಂಜು ಸ್ಯಾಮ್ಸನ್ (ನಾಯಕ/ ವಿಕೆಟ್ ಕೀಪರ್), ರಿಯಾನ್ ಪರಾಗ್, ಧ್ರುವ್ ಜುರೆಲ್, ರೋವ್ಮನ್ ಪೊವೆಲ್, ರವಿಚಂದ್ರನ್ ಅಶ್ವಿನ್, ಟ್ರೆಂಟ್ ಬೌಲ್ಟ್, ಸಂದೀಪ್ ಶರ್ಮಾ, ಅವೇಶ್ ಖಾನ್, ಯುಜ್ವೇಂದ್ರ ಚಾಹಲ್.

Story first published: Wednesday, May 15, 2024, 19:16 [IST]
Other articles published on May 15, 2024
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+