Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

IPL 2024 Qualifier-2: ರಾಜಸ್ಥಾನ-ಹೈದರಾಬಾದ್ ನಡುವೆ ನಾಕೌಟ್‌ ಪಂದ್ಯ; ಟಾಸ್‌ ವರದಿ, ಆಡುವ 11ರ ಬಳಗ

ಮೇ 24 ಶುಕ್ರವಾರ, 2024ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ (ಐಪಿಎಲ್‌)ನ ಕ್ವಾಲಿಫೈಯರ್ -2 ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್‌ (ಆರ್‌ಆರ್‌) ಮತ್ತು ಸನ್ ರೈಸರ್ಸ್ ಹೈದರಾಬಾದ್ (ಎಸ್‌ಆರ್‌ಹೆಚ್) ಮುಖಾಮುಖಿಯಾಗಿವೆ. ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ಈ ನಾಕೌಟ್‌ ಪಂದ್ಯ ಆರಂಭವಾಗಿದೆ.‌

ಮೊದಲು ಟಾಸ್‌ ಗೆದ್ದ ರಾಜಸ್ಥಾನ ರಾಯಲ್ಸ್ ತಂಡದ ಸಂಜು ಸ್ಯಾಮ್ಸನ್‌ ಬೌಲಿಂಗ್‌ ಆಯ್ಕೆ ಮಾಡಿಕೊಂಡಿದ್ದಾರೆ. ಹೀಗಾಗಿ ಪ್ಯಾಟ್‌ ಕಮ್ಮಿನ್ಸ್ ಮುನ್ನೆಡೆಸುತ್ತಿರುವ ಸನ್‌ ರೈಸರ್ಸ್ ಹೈದರಾಬಾದ್‌ ತಂಡ ಮೊದಲು ಬ್ಯಾಟಿಂಗ್‌ ಮಾಡಲಿದೆ.

RR vs SRH Qualifier-2 IPL 2024 Rajasthan Royals vs Sunrisers Hyderabad Toss Report

ಈ ಪಂದ್ಯದಲ್ಲಿ ಗೆದ್ದ ತಂಡ ಕೋಲ್ಕತ್ತಾ ನೈಟ್‌ ರೈಡರ್ಸ್‌ ವಿರುದ್ಧ ಐಪಿಎಲ್‌ 2024ರ ಫೈನಲ್‌ ಪಂದ್ಯದಲ್ಲಿ ಸೆಣಸಾಡಲಿದೆ. ಸೋತ ತಂಡ ಮೂರನೇ ಸ್ಥಾನದಲ್ಲಿರಲಿದೆ.

ಕಳೆದ ಪಂದ್ಯ ಆರ್‌ಸಿಬಿ ಎದುರು ಗೆದ್ದಿರುವ ಆರ್‌ಆರ್‌ ಇಂದು ಗೆಲುವಿನ ಮೇಲೆ ಕಣ್ಣಿಟ್ಟಿದೆ. ಇತ್ತ ಎಸ್‌ಆರ್‌ಹೆಚ್‌ ಕೆಕೆಆರ್‌ ವಿರುದ್ಧ ಸೋತು ಫೈನಲ್‌ ಹೋಗಲು ಮತ್ತೊಂದು ಅವಕಾಶ ಪಡೆದಿದೆ.

ಆರ್‌ಆರ್‌ vs ಎಸ್‌ಆರ್‌ಹೆಚ್‌ ಪಂದ್ಯದ ಟಿವಿ,ಲೈವ್‌ ಸ್ಟ್ರೀಮಿಂಗ್‌ ವಿವರ

ರಾಜಸ್ಥಾನ ರಾಯಲ್ಸ್‌ vs ಸನ್ ರೈಸರ್ಸ್ ಹೈದರಾಬಾದ್ ತಂಡಗಳ ನಡುವೆ ಆರಂಭವಾಗಿರುವ ಐಪಿಎಲ್‌ ಪಂದ್ಯವನ್ನು ಭಾರತದಲ್ಲಿ ಟಿವಿಯಲ್ಲಿ ಸ್ಟಾರ್‌ ಸ್ಪೋರ್ಟ್ಸ್ ಚಾನೆಲ್‌ನಲ್ಲಿ ನೇರಪ್ರಸಾರ ಮಾಡಲಿದ್ದು, ಮೊಬೈಲ್‌ನಲ್ಲಿ ಜಿಯೋಸಿನಿಮಾ ಅಫ್ಲಿಕೇಶನ್‌ನಲ್ಲಿ ಲೈವ್‌ ಸ್ಟ್ರೀಮಿಂಗ್‌ ಆಗಲಿದೆ.

ಆರ್‌ಆರ್‌ vs ಎಸ್‌ಆರ್‌ಹೆಚ್‌ ಆಡುವ 11ರ ಬಳಗ

ರಾಜಸ್ಥಾನ ರಾಯಲ್ಸ್ ತಂಡ: ಯಶಸ್ವಿ ಜೈಸ್ವಾಲ್, ಟಾಮ್ ಕೊಹ್ಲರ್-ಕ್ಯಾಡ್ಮೋರ್, ಸಂಜು ಸ್ಯಾಮ್ಸನ್ (ನಾಯಕ ಮತ್ತು ವಿ.ಕೀ), ರಿಯಾನ್ ಪರಾಗ್, ಧ್ರುವ್ ಜುರೆಲ್, ರೋವ್ಮನ್ ಪೊವೆಲ್, ರವಿಚಂದ್ರನ್ ಅಶ್ವಿನ್, ಟ್ರೆಂಟ್ ಬೌಲ್ಟ್, ಅವೇಶ್ ಖಾನ್, ಸಂದೀಪ್ ಶರ್ಮಾ, ಯುಜ್ವೇಂದ್ರ ಚಹಾಲ್

ಸನ್ ರೈಸರ್ಸ್ ಹೈದರಾಬಾದ್ ತಂಡ: ಟ್ರಾವಿಸ್ ಹೆಡ್, ಅಭಿಷೇಕ್ ಶರ್ಮಾ, ರಾಹುಲ್ ತ್ರಿಪಾಠಿ, ನಿತೀಶ್ ರೆಡ್ಡಿ, ಐಡೆನ್ ಮಾರ್ಕ್ರಾಮ್, ಹೆನ್ರಿಚ್ ಕ್ಲಾಸೆನ್(ವಿ.ಕೀ), ಅಬ್ದುಲ್ ಸಮದ್, ಪ್ಯಾಟ್ ಕಮಿನ್ಸ್(ನಾಯಕ), ಭುವನೇಶ್ವರ್ ಕುಮಾರ್, ಜಯದೇವ್ ಉನದ್ಕತ್, ಟಿ ನಟರಾಜನ್

Story first published: Friday, May 24, 2024, 19:15 [IST]
Other articles published on May 24, 2024
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+