ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಇಂಡಿಯಾ ಲೆಜೆಂಡ್ಸ್ vs ವೆಸ್ಟ್ ಇಂಡೀಸ್ ಲೆಜೆಂಡ್ಸ್: ಮಳೆಯಿಂದಾಗಿ ಪಂದ್ಯ ರದ್ದು

RSWS-2: match 6 India Legends vs West Indies Legends Match abandoned

ರೋಡ್ ಸೇಫ್ಟಿ ರೋಡ್ ಸೇಫ್ಟಿ ವರ್ಲ್ಡ್ ಸಿರೀಸ್ ಟೂರ್ನಿಯ ಎರಡನೇ ಆವೃತ್ತಿಯ ಪಂದ್ಯಗಳು ನಡೆಯುತ್ತಿದ್ದು ಇಂದು ಆರನೇ ಪಂದ್ಯ ನಡೆಯಬೇಕಾಗಿತ್ತು. ಈ ಪಂದ್ಯದಲ್ಲಿ ಇಂಡಿಯಾ ಲೆಜೆಂಡ್ಸ್ ಹಾಗೂ ವೆಸ್ಟ್ ಇಂಡೀಸ್ ಲೆಜೆಂಡ್ಸ್ ತಂಡಗಳು ಮುಖಾಮುಖಿಯಾಗಲಿದ್ದ ಕಾರಣ ಪಂದ್ಯದ ಮೇಲೆ ಸಾಕಷ್ಟು ಕುತೂಹಲ ಮೂಡಿಸಿತ್ತು. ಆದರೆ ಮಳೆಯಿಂದಾಗಿ ಕ್ರಿಕೆಟ್ ಅಭಿಮಾನಿಗಳು ನಿರಾಸೆ ಅನುಭವಿಸುವಂತಾಗಿದೆ. ಮಳೆಯ ಕಾರಣ ಒಂದೂ ಎಸೆತವನ್ನು ಕಾಣದೆ ಪಂದ್ಯವನ್ನು ರದ್ದುಗೊಳಿಸಲಾಗಿದೆ.

ಇಂಡಿಯಾ ಲೆಜೆಂಡ್ಸ್ ತಂಡವನ್ನು ಸಚಿನ್ ತೆಂಡೂಲ್ಕರ್ ಮುನ್ನಡೆಸುತ್ತಿದ್ದು ಡ್ವೇಯ್ನ್ ಸ್ಮಿತ್ ವೆಸ್ಟ್ ಇಂಡೀಸ್ ಲೆಜೆಂಡ್ಸ್ ತಂಡವನ್ನು ಮುನ್ನಡೆಸುತ್ತಿದ್ದಾರೆ. ಬಲಿಷ್ಠ ಆಟಗಾರರನ್ನು ಒಳಗೊಂಡಿರುವ ಈ ಎರಡು ತಂಡಗಳು ಮುಖಾಮುಖಿಯಾಗುವುದನ್ನು ನೋಡಲು ಅಭಿಮಾನಿಗಳು ಕುತೂಹಲದಿಂದ ಕಾಯುತ್ತಿದ್ದರು. ಆದರೆ ಮಳೆ ನಿರಾಸೆ ಮೂಡಿಸಿದೆ.

ಕೆಲವರು ಒಮ್ಮೆ ಮಾತ್ರ ನಿವೃತ್ತಿಯಾಗುತ್ತಾರೆ: ಕೊಹ್ಲಿಗೆ ನಿವೃತ್ತಿ ಸಲಹೆ ನೀಡಿದ ಅಫ್ರಿದಿಗೆ ಅಮಿತ್ ಮಿಶ್ರಾ ಪಂಚ್!ಕೆಲವರು ಒಮ್ಮೆ ಮಾತ್ರ ನಿವೃತ್ತಿಯಾಗುತ್ತಾರೆ: ಕೊಹ್ಲಿಗೆ ನಿವೃತ್ತಿ ಸಲಹೆ ನೀಡಿದ ಅಫ್ರಿದಿಗೆ ಅಮಿತ್ ಮಿಶ್ರಾ ಪಂಚ್!

ಮೊದಲ ಪಂದ್ಯ ಭರ್ಜರಿ ಗೆದ್ದುಕೊಂಡಿದ್ದ ಭಾರತ: ಇನ್ನು ರೋಡ್ ಸೇಫ್ಟಿ ವರ್ಲ್ಡ್ ಸಿರೀಸ್‌ನ ಎರಡನೇ ಆವೃತ್ತಿಯ ಮೊದಲ ಪಂದ್ಯದಲ್ಲಿ ಭಾರತ ದಕ್ಷಿಣ ಆಪ್ರಿಕಾ ಲೆಜೆಂಡ್ಸ್ ವಿರುದ್ಧ ಕಣಕ್ಕಿಳಿದಿತ್ತು. ಈ ಪಂದ್ಯವನ್ನು ಭರ್ಜರಿಯಾಗಿ ಗೆದ್ದುಕೊಳ್ಳುವಲ್ಲಿ ಟೀಮ್ ಇಂಡಿಯಾ ಯಶಸ್ವಿಯಾಗುವ ಮೂಲಕ ಟೂರ್ನಿಯಲ್ಲಿ ಶುಭಾರಂಭ ಮಾಡಿತ್ತು. ಮತ್ತೊಂದೆಡೆ ವೆಸ್ಟ್ ಇಂಡಿಸ್ ಕೂಡ ಈ ಬಾರಿಯ ಟೂರ್ನಿಯ ಮೊದಲ ಪಂದ್ಯದಲ್ಲಿ ಬಾಂಗ್ಲಾದೇಶ ಲೆಜೆಂಡ್ಸ್ ವಿರುದ್ಧ ಭರ್ಜರಿ ಗೆಲುವು ಸಾಧಿಸಿದೆ. ಈ ಮೂಲಕ ಉತ್ತಮ ಆರಂಭ ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿದೆ

ಇನ್ನು ಈ ಟೂರ್ನಿಯಲ್ಲಿ ಎರಡು ಪಂದ್ಯಗಳನ್ನು ಆಡಿ ಎರಡರಲ್ಲಿಯೂ ಗೆಲುವು ಸಾಧಿಸಿರುವ ಶ್ರೀಲಂಕಾ ಲೆಜೆಂಡ್ಸ ತಂಡ ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದರೆ ಭಾರತ ಎರಡನೇ ಸ್ಥಾನದಲ್ಲಿ ಹಾಗೂ ವೆಸ್ಟ್ ಇಂಡೀಸ್ ಮೂರನೇ ಸ್ಥಾನದಲ್ಲಿದೆ.

IND vs ENG T20: ಸ್ಮೃತಿ ಮಂಧಾನ ಅಬ್ಬರದ ಬ್ಯಾಟಿಂಗ್; ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಗೆಲುವುIND vs ENG T20: ಸ್ಮೃತಿ ಮಂಧಾನ ಅಬ್ಬರದ ಬ್ಯಾಟಿಂಗ್; ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಗೆಲುವು

ಇಂಡಿಯಾ ಲೆಜೆಂಡ್ಸ್ ಸ್ಕ್ವಾಡ್: ನಮನ್ ಓಜಾ (ವಿಕೆಟ್ ಕೀಪರ್), ಸಚಿನ್ ತೆಂಡೂಲ್ಕರ್ (ನಾಯಕ), ಸುರೇಶ್ ರೈನಾ, ಸ್ಟುವರ್ಟ್ ಬಿನ್ನಿ, ಯುವರಾಜ್ ಸಿಂಗ್, ಯೂಸುಫ್ ಪಠಾಣ್, ಇರ್ಫಾನ್ ಪಠಾಣ್, ಮನ್‌ಪ್ರೀತ್ ಗೋನಿ, ಮುನಾಫ್ ಪಟೇಲ್, ರಾಹುಲ್ ಶರ್ಮಾ, ಪ್ರಗ್ಯಾನ್ ಓಜಾ, ಹರ್ಭಜನ್ ಸಿಂಗ್, ಎಸ್ ಬದ್ರಿನಾಥ್, ರಾಜೇಶ್ ಪವಾರ್, ವಿನಯ್ ಕುಮಾರ್, ಅಭಿಮನ್ಯು ಮಿಥುನ್

ವೆಸ್ಟ್ ಇಂಡೀಸ್ ಲೆಜೆಂಡ್ಸ್ ಸ್ಕ್ವಾಡ್: ಡ್ವೇನ್ ಸ್ಮಿತ್ (ನಾಯಕ), ವಿಲಿಯಂ ಪರ್ಕಿನ್ಸ್ (ವಿಕೆಟ್ ಕೀಪರ್), ಡೇವ್ ಮೊಹಮ್ಮದ್, ನರಸಿಂಗ್ ಡಿಯೋನರಿನ್, ಕಿರ್ಕ್ ಎಡ್ವರ್ಡ್ಸ್, ಡ್ಯಾನ್ಜಾ ಹಯಾಟ್, ಸುಲೀಮನ್ ಬೆನ್, ದೇವೇಂದ್ರ ಬಿಶೂ, ಮರ್ಲಾನ್ ಬ್ಲಾಕ್, ಕ್ರಿಶ್ಮಾರ್ ಸ್ಯಾಂಟೋಕಿ, ಡೇರೆನ್ ಪೊವೆಲ್

Story first published: Wednesday, September 14, 2022, 20:40 [IST]
Other articles published on Sep 14, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X