CSK vs SRH: ಟಾಸ್ ಗೆದ್ದ ಚೆನ್ನೈ ಬ್ಯಾಟಿಂಗ್ ಆಯ್ಕೆ: ಧೋನಿಗೆ ಇಲ್ಲ ಅವಕಾಶ
ಚೆನ್ನೈ: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್)ನ 63ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್‌ಕೆ) ಹಾಗೂ ಸನ್‌ರೈಸರ್ಸ್ ಹೈದರಾಬಾದ್ (ಎಸ್‌ಆರ್‌ಎಚ್) ತಂಡಗಳು ಕಾದಾಟ ನಡೆಸಿವೆ. ಈ ಪಂದ್ಯದಲ್ಲಿ ಗೆಲುವು ದಾಖಲಿಸಿ ಅಂಕಪಟ್ಟಿಯಲ್ಲಿ ಬಡ್ತಿ ಪಡೆದು ಪ್ಲೇ ಆಫ್ ಪ್ರವೇಶಿಸುವ ಕನಸು ಎರಡೂ ತಂಡಗಳದ್ದಾಗಿದೆ. ಈ ಪಂದ್ಯದಲ್ಲಿ ಟಾಸ್ ಮಹತ್ವದಾಗಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಚೆನ್ನೈ ತಂಡ ಮೊದಲು ಬ್ಯಾಟಿಂಗ್ ಮಾಡುವ ನಿರ್ಧಾರವನ್ನು ಮಾಡಿದೆ.
ಎಸ್‌ಆರ್‌ಎಚ್ ತಂಡ ಈ ಲೀಗ್‌ನಲ್ಲಿ ಆಡಿದ 12 ಪಂದ್ಯಗಳಲ್ಲಿ 7 ಜಯ, 5 ಸೋಲು ಕಂಡಿದ್ದು, 14 ಅಂಕಗಳೊಂದಿಗೆ ಅಂಕ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದೆ. ಇನ್ನು ಚೆನ್ನೈ ವಿರುದ್ಧದ ಪಂದ್ಯದಲ್ಲಿ ಗೆಲುವು ದಾಖಲಿಸಿ ಅಗ್ರ ಎರಡು ಸ್ಥಾನವನ್ನು ಪ್ರವೇಶಿಸುವ ಕನಸು ಹೈದರಾಬಾದ್ ತಂಡದ್ದಾಗಿದೆ. ಇನ್ನು ಆರಂಭದಲ್ಲಿ ಸ್ಥಿರ ಪ್ರದರರ್ಶನ ನೀಡುವಲ್ಲಿ ವಿಫಲರಾದ ಸಿಎಸ್‌ಕೆ ಆಡಿದ 12 ಪಂದ್ಯಗಳಲ್ಲಿ 6 ಜಯ, 6 ಸೋಲು ಕಂಡಿದ್ದು, 12 ಅಂಕಗಳೊಂದಿಗೆ ಐದನೇ ಸ್ಥಾನದಲ್ಲಿದೆ. ಅಂಕ ಪಟ್ಟಿಯಲ್ಲಿ ಬಡ್ತಿ ಸಾಧಿಸುವತ್ತ ಎರಡೂ ತಂಡಗಳು ಚಿತ್ತ ನೆಟ್ಟಿವೆ.

ಈ ಪಂದ್ಯದಲ್ಲಿ ಎಲ್ಲರ ಕಣ್ಣುಗಳು ಚೆನ್ನೈ ತಂಡದ ನಾಯಕ ರುತುರಾಜ್ ಗಾಯಕ್ವಾಡ್ ಅವರ ಮೇಲೆ ನೆಟ್ಟಿದ್ದವು. ನಿರೂಪಕ ನೇರವಾಗಿ ಮಹೇಂದ್ರ ಸಿಂಗ್ ಧೋನಿ ಕಣಕ್ಕೆ ಇಳಿಯುತ್ತಾರಾ ಎಂದು ಕೇಳಿದಾಗ?, ಅವರು ಇನ್ನು ಫಿಟ್ ಆಗಿಲ್ಲ ಮುಂದಿನ ಪಂದ್ಯದಲ್ಲಿ ಇವರು ಕಣಕ್ಕೆ ಇಳಿಯಬಹುದು ಎಂದು ಗಾಯಕ್ವಾಡ್ ತಿಳಿಸಿದರು.
ಸಿಎಸ್‌ಕೆ ತಂಡ: ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ರುತುರಾಜ್ ಗಾಯಕ್ವಾಡ್ (ನಾಯಕ), ಉರ್ವಿಲ್ ಪಟೇಲ್, ಕಾರ್ತಿಕ್ ಶರ್ಮಾ, ಡೆವಾಲ್ಡ್ ಬ್ರೆವಿಸ್, ಶಿವಂ ದುಬೆ, ಪ್ರಶಾಂತ್ ವೀರ್, ಅಕೀಲ್ ಹೊಸೈನ್, ಅನ್ಶುಲ್ ಕಾಂಬೋಜ್, ಸ್ಪೆನ್ಸರ್ ಜಾನ್ಸನ್, ನೂರ್ ಅಹ್ಮದ್
ಎಸ್‌ಆರ್‌ಎಚ್ ತಂಡ: ಅಭಿಷೇಕ್ ಶರ್ಮಾ, ಇಶಾನ್ ಕಿಶನ್ (ವಿಕೆಟ್ ಕೀಪರ್), ಹೆನ್ರಿಚ್ ಕ್ಲಾಸೆನ್, ಸಲೀಲ್ ಅರೋರಾ, ಆರ್ ಸ್ಮರಣ್, ನಿತೀಶ್ ಕುಮಾರ್ ರೆಡ್ಡಿ, ಪ್ಯಾಟ್ ಕಮ್ಮಿನ್ಸ್ (ನಾಯಕ), ಶಿವಾಂಗ್ ಕುಮಾರ್, ಈಶಾನ್ ಮಾಲಿಂಗ, ಸಾಕಿಬ್ ಹುಸೇನ್, ಪ್ರಫುಲ್ ಹಿಂಗೆ
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications