ಭಾರತ vs ದ.ಆಫ್ರಿಕಾ 3ನೇ ಏಕದಿನ: ಕಳಪೆ ಆಟವಾಡಿದ್ದ ಈ ಮೂವರು ಟೀಮ್ ಇಂಡಿಯಾದಿಂದ ಔಟ್!

ಭಾರತ ಮತ್ತು ದಕ್ಷಿಣ ಆಫ್ರಿಕಾ ತಂಡಗಳ ನಡುವಿನ ತೃತೀಯ ಏಕದಿನ ಪಂದ್ಯ ಇಂದು ( ಜನವರಿ 23 ) ಕೇಪ್ ಟೌನ್‌ನ ನ್ಯೂಲ್ಯಾಂಡ್ಸ್ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಪಂದ್ಯವು ಭಾರತೀಯ ಕಾಲಮಾನದ ಪ್ರಕಾರ ಮಧ್ಯಾಹ್ನ 2 ಗಂಟೆಗೆ ಆರಂಭವಾಗಲಿದೆ.
ಇನ್ನು ಈ ಪಂದ್ಯವು ಭಾರತ ಮತ್ತು ದಕ್ಷಿಣ ಆಫ್ರಿಕಾ ತಂಡಗಳ ನಡುವಿನ 3 ಪಂದ್ಯಗಳ ಏಕದಿನ ಸರಣಿಯ ಅಂತಿಮ ಪಂದ್ಯವಾಗಿದ್ದು, ಸರಣಿಯಲ್ಲಿ ವಿಜೇತರು ಯಾರು ಎಂಬ ಫಲಿತಾಂಶ ಈಗಾಗಲೇ ಹೊರಬಿದ್ದಿರುವ ಪರಿಣಾಮ ಈ ಪಂದ್ಯದ ಮೇಲೆ ಕುತೂಹಲ ಹಾಗೂ ನಿರೀಕ್ಷೆಗಳನ್ನು ಹೆಚ್ಚೇನೂ ಇಲ್ಲ ಎಂದೇ ಹೇಳಬಹುದು.
ಹೌದು, ಭಾರತ ಮತ್ತು ದಕ್ಷಿಣ ಆಫ್ರಿಕಾ ತಂಡಗಳ ನಡುವಿನ 3 ಪಂದ್ಯಗಳ ಏಕದಿನ ಸರಣಿಯ ಮೊದಲ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡ ಗೆಲುವನ್ನು ಸಾಧಿಸಿತ್ತು ಹಾಗೂ ದ್ವಿತೀಯ ಪಂದ್ಯದಲ್ಲಿಯೂ ಕೂಡ ದಕ್ಷಿಣ ಆಫ್ರಿಕಾ ಗೆಲುವು ಸಾಧಿಸುವುದರ ಮೂಲಕ ಸರಣಿಯಲ್ಲಿ 2-0 ಅಂತರದಲ್ಲಿ ಮುನ್ನಡೆ ಕಾಯ್ದುಕೊಳ್ಳುವುದು ಮಾತ್ರವಲ್ಲದೆ ಈಗಾಗಲೇ ಸರಣಿಯನ್ನು ಕೈವಶ ಕೂಡ ಮಾಡಿಕೊಂಡಿದೆ.
ಇನ್ನು ಈ ಏಕದಿನ ಸರಣಿ ಆರಂಭವಾಗುವುದಕ್ಕೂ ಮುನ್ನ ನಡೆದ ಭಾರತ ಮತ್ತು ದಕ್ಷಿಣ ಆಫ್ರಿಕಾ ತಂಡಗಳ ನಡುವಿನ ಟೆಸ್ಟ್ ಸರಣಿಯನ್ನು ಕೂಡ ಟೀಮ್ ಇಂಡಿಯಾ 1-2 ಅಂತರದಲ್ಲಿ ಸೋಲುವುದರ ಮೂಲಕ ಮುಖಭಂಗಕ್ಕೊಳಗಾಗಿತ್ತು. ಸದ್ಯ ಕೆಎಲ್ ರಾಹುಲ್ ನಾಯಕತ್ವದಲ್ಲಿ ಕಣಕ್ಕಿಳಿದು ಮೊದಲೆರಡು ಪಂದ್ಯಗಳಲ್ಲಿ ಸೋತಿರುವ ಟೀಮ್ ಇಂಡಿಯಾ ಇದೀಗ ಮೂರನೇ ಏಕದಿನ ಪಂದ್ಯದಲ್ಲಿ ಬೆಂಚ್ ಕಾಯುತ್ತಿದ್ದ ಆಟಗಾರರಿಗೆ ಅವಕಾಶ ನೀಡುವ ಸಾಧ್ಯತೆಗಳಿವೆ. ಹೀಗೆ ಬೆಂಚ್ ಕಾಯುತ್ತಿದ್ದ ಆಟಗಾರರಿಗೆ ಸ್ಥಾನ ನೀಡಲು ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲೆರಡು ಏಕದಿನ ಪಂದ್ಯಗಳಲ್ಲಿ ಕಳಪೆ ಪ್ರದರ್ಶನ ನೀಡಿದ ಈ ಕೆಳಕಂಡ ಮೂವರು ಆಟಗಾರರನ್ನು ತಂಡದಿಂದ ಹೊರಗಿಡುವ ಸಾಧ್ಯತೆಗಳಿವೆ.

ಭುವನೇಶ್ವರ್ ಕುಮಾರ್ ಬದಲು ಮೊಹಮ್ಮದ್ ಸಿರಾಜ್
ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಗಾಯದ ಸಮಸ್ಯೆಗೆ ಒಳಗಾಗಿದ್ದ ಮೊಹಮ್ಮದ್ ಸಿರಾಜ್ ಅಂತಿಮ ಟೆಸ್ಟ್ ಪಂದ್ಯಕ್ಕೆ ಅಲಭ್ಯರಾಗಿದ್ದರು. ಹೀಗೆ ಗಾಯದ ಸಮಸ್ಯೆಯಿಂದ ಬಳಲುತ್ತಿದ್ದ ಮೊಹಮ್ಮದ್ ಸಿರಾಜ್ ಇದೀಗ ಕಣಕ್ಕಿಳಿಯಲು ಫಿಟ್ ಆಗಿದ್ದು, ದಕ್ಷಿಣ ಆಫ್ರಿಕಾ ವಿರುದ್ಧದ ತೃತೀಯ ಏಕದಿನ ಪಂದ್ಯದಲ್ಲಿ ಆಡುವ ಬಳಗದಲ್ಲಿ ಸ್ಥಾನ ಪಡೆದುಕೊಳ್ಳುವ ಸಾಧ್ಯತೆಗಳಿವೆ. ಹಾಗೂ ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲೆರಡು ಪಂದ್ಯಗಳಲ್ಲಿ ಹೇಳಿಕೊಳ್ಳುವಂತಹ ಉತ್ತಮ ಬೌಲಿಂಗ್ ಪ್ರದರ್ಶನ ನೀಡುವಲ್ಲಿ ಎಡವಿದ ಭುವನೇಶ್ವರ್ ಕುಮಾರ್ ಮೊಹಮ್ಮದ್ ಸಿರಾಜ್ ಅವರಿಗೆ ಸ್ಥಾನ ಬಿಟ್ಟುಕೊಡುವ ಸಾಧ್ಯತೆಗಳು ಹೆಚ್ಚಿವೆ.

ಶ್ರೇಯಸ್ ಅಯ್ಯರ್, ವೆಂಕಟೇಶ್ ಅಯ್ಯರ್ ಹೊರಕ್ಕೆ
ಇನ್ನು ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲೆರಡು ಏಕದಿನ ಪಂದ್ಯಗಳಲ್ಲಿ ಯುವ ಆಟಗಾರರಾದ ಶ್ರೇಯಸ್ ಅಯ್ಯರ್ ಮತ್ತು ವೆಂಕಟೇಶ್ ಅಯ್ಯರ್ ನೀರಸ ಪ್ರದರ್ಶನವನ್ನು ನೀಡಿದ್ದರು. ಹೀಗಾಗಿ ಭಾರತ ಮತ್ತು ದಕ್ಷಿಣ ಆಫ್ರಿಕಾ ತಂಡಗಳ ನಡುವಿನ ತೃತೀಯ ಏಕದಿನ ಪಂದ್ಯದಲ್ಲಿ ಈ ಇಬ್ಬರ ಬದಲು ಸೂರ್ಯಕುಮಾರ್ ಯಾದವ್ ಮತ್ತು ರುತುರಾಜ್ ಗಾಯಕವಾಡ್ ಅವರಿಗೆ ಸ್ಥಾನ ನೀಡುವ ಸಾಧ್ಯತೆಗಳು ಹೆಚ್ಚಿವೆ. ಈ ಮೂಲಕ ಸೂರ್ಯಕುಮಾರ್ ಯಾದವ್ ಮತ್ತೆ ತಂಡಕ್ಕೆ ಮರಳಲಿದ್ದು ಮಧ್ಯಮ ಕ್ರಮಾಂಕದ ಬಲ ಹೆಚ್ಚಲಿದ್ದರೆ, ರುತುರಾಜ್ ಗಾಯಕ್ವಾಡ್ ಅಂತರರಾಷ್ಟ್ರೀಯ ಏಕದಿನ ಕ್ರಿಕೆಟ್‌ಗೆ ಪದಾರ್ಪಣೆ ಮಾಡಲಿದ್ದಾರೆ.

ಸಂಭಾವ್ಯ ಆಡುವ ಬಳಗಗಳು
ಭಾರತ ಸಂಭಾವ್ಯ ಆಡುವ ಬಳಗ: ಶಿಖರ್ ಧವನ್, ರುತುರಾಜ್ ಗಾಯಕವಾಡ್, ವಿರಾಟ್ ಕೊಹ್ಲಿ, ಕೆಎಲ್ ರಾಹುಲ್ (ನಾಯಕ), ಸೂರ್ಯಕುಮಾರ್ ಯಾದವ್, ರಿಷಭ್ ಪಂತ್ ( ವಿಕೆಟ್ ಕೀಪರ್), ಶಾರ್ದೂಲ್ ಠಾಕೂರ್, ರವಿಚಂದ್ರನ್ ಅಶ್ವಿನ್/ ಜಯಂತ್ ಯಾದವ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್/ ದೀಪಕ್ ಚಹಾರ್, ಯುಜುವೇಂದ್ರ ಚಾಹಲ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications