ಮುಂಬೈ ಬ್ಯಾಟಿಂಗ್‌ಗೆ ಆಧಾರವಾದ ದಕ್ಷಿಣ ಆಫ್ರಿಕಾ ಪ್ಲೇಯರ್
ಮುಂಬೈ ಇಂಡಿಯನ್ಸ್ ತಂಡ ರಾಜಸ್ಥಾನ ರಾಯಲ್ಸ್ ವಿರುದ್ಧ ಭರ್ಜರಿ ಜಯ ದಾಖಲಿಸುವ ಮೂಲಕ ಪ್ಲೇ ಆಫ್‌ಗೆ ತುಂಬ ಹತ್ತಿರ ನಿಂತಿದೆ. ಅಲ್ಲದೆ ಆಡಿದ 11 ಪಂದ್ಯಗಳಲ್ಲಿ 14 ಅಂಕಗಳನ್ನು ಕಲೆ ಹಾಕಿ ಅಂಕ ಪಟ್ಟಿಯಲ್ಲಿ ಅಗ್ರ ಸ್ಥಾನದಲ್ಲಿದೆ. ಇನ್ನು ಮುಂಬೈ ಈ ಲೀಗ್‌ನಲ್ಲಿ ಸತತ ಆರನೇ ಜಯ ದಾಖಲಿಸಿದೆ. ಇನ್ನು ರಾಜಸ್ಥಾನ ವಿರುದ್ಧದ ಗೆಲುವಿನಲ್ಲಿ ಹಲವು ಜನರು ಹೀರೋ ರೀತಿ ಕಾಣಿಸಿಕೊಳ್ಳುತ್ತಾರೆ ಆದರೆ ನಿಜವಾದ ಹೀರೋ ವಿಕೆಟ್ ಕೀಪರ್ ಕಂ ಬ್ಯಾಟರ್ ರಯಾನ್ ರಿಕಲ್ಟನ್.
ಮುಂಬೈ ಇಂಡಿಯನ್ಸ್ ಸೌದಿಯಲ್ಲಿ ನಡೆದ ಮೆಗಾ ಹರಾಜಿನಲ್ಲಿ ದಕ್ಷಿಣ ಆಫ್ರಿಕಾದ ರಯಾನ್ ರಿಕಲ್ಟನ್ ಅವರನ್ನು 1 ಕೋಟಿ ರೂಪಾಯಿ ನೀಡಿ ಖರಿದಿಸಿತ್ತು. ಇವರು ಲೀಗ್‌ನಲ್ಲಿ ತಮ್ಮ ಕ್ಷಮತೆಗೆ ತಕ್ಕ ಆಟವನ್ನು ಆಡುತ್ತಿದ್ದಾರೆ. ಸಿಕ್ಕ ಅವಕಾಶವನ್ನು ಎರಡೂ ಕೈಗಳಿಂದ ಬಳಸಿಕೊಳ್ಳುವ ಓಪನರ್ ತಂಡಕ್ಕೆ ಉತ್ತಮ ಆರಂಭ ನೀಡುವಲ್ಲಿ ತಮ್ಮದೇ ಆದ ಕಾಣಿಕೆ ನೀಡುತ್ತಿದ್ದಾರೆ. ರಾಜಸ್ಥಾನ ರಾಯಲ್ಸ್ ವಿರುದ್ಧದ ಪಂದ್ಯದಲ್ಲೂ ರಿಕಲ್ಟನ್ ಭರ್ಜರಿ ಬ್ಯಾಟಿಂಗ್ ಪ್ರದರ್ಶನ ನೀಡಿದರು.

ಟಾಸ್ ಸೋತರೂ ಮೊದಲು ಬ್ಯಾಟ್ ಮಾಡಿದ ಮುಂಬೈ ಇಂಡಿಯನ್ಸ್ ತಂಡದ ಆರಂಭ ಭರ್ಜರಿಯಾಗಿತ್ತು. ಆರಂಭಿಕರಾದ ರಯಾನ್ ರಿಕಲ್ಟನ್ ಹಾಗೂ ರೋಹಿತ್ ಶರ್ಮಾ ಜೊತೆಗೂಡಿ ಮೊದಲ ವಿಕೆಟ್‌ಗೆ ಶತಕದ ಜೊತೆಯಾಟವನ್ನು ನೀಡಿದರು. ಈ ಮೂಲಕ ಆರಂಭದಲ್ಲೇ ಬೃಹತ್ ಮೊತ್ತದ ಸೂಚನೆಯನ್ನು ನೀಡಿದರು. ರಿಕಲ್ಟನ್ ಅಮೋಘ ಬ್ಯಾಟಿಂಗ್ ಪ್ರದರ್ಶನ ನೀಡಿ ಗಮನ ಸೆಳೆದರು. ತಮ್ಮ ನೈಜ್ಯ ಆಟವನ್ನು ಆಡಿದ ಇವರು ಅಬ್ಬರಿಸಿದರು.
ರಾಜಸ್ಥಾನ ರಾಯಲ್ಸ್ ಹೆಣೆದುಕೊಂಡಿದ್ದ ಪ್ಲ್ಯಾನ್ ಎಲ್ಲ ಉಲ್ಟಾ ಮಾಡಿದ ರಿಕಲ್ಟನ್ ಬೌಂಡರಿ, ಸಿಕ್ಸರ್ ಬಾರಿಸಿ ರನ್ ವೇಗಕ್ಕೆ ಚುರುಕು ಮುಟ್ಟಿಸಿದರು. ಇವರು ರಾಯಲ್ಸ್ ವಿರುದ್ಧ 38 ಎಸೆತಗಳಲ್ಲಿ 7 ಬೌಂಡರಿ, 3 ಸಿಕ್ಸರ್ ಸಹಾಯದಿಂದ 61 ರನ್ ಸಿಡಿಸಿದರು. ಈ ಮೂಲಕ ತಂಡ ತಮ್ಮ ಮೇಲೆ ಇಟ್ಟ ನಂಬಿಕೆಗೆ ಪೂರಕವಾಗಿ ಬ್ಯಾಟ್ ಮಾಡಿದರು.ಇವರ ಆಟದ ನೆರವಿನಿಂದಲೇ ಮುಂಬೈ ಉತ್ತಮ ಮೊತ್ತವನ್ನು ಕಲೆ ಹಾಕಲು ಸಾಧ್ಯವಾಯಿತು.
ಐಪಿಎಲ್ ಸಾಧನೆ
ಪ್ರಸಕ್ತ ಐಪಿಎಲ್‌ನಲ್ಲಿ ರಯನ್ ರಿಕಲ್ಟನ್ ಅಮೋಘ ಬ್ಯಾಟಿಂಗ್ ಪ್ರದರ್ಶನ ನೀಡುತ್ತಿದ್ದಾರೆ. ಆಡಿರುವ 11 ಪಂದ್ಯಗಳಲ್ಲಿ 33.40ರ ಸರಾಸರಿಯಲ್ಲಿ 334 ರನ್ ಸಿಡಿಸಿರುವ ರಯಾನ್ ಅಬ್ಬರಿಸಿದ್ದಾರೆ. ಈ ವೇಳೆ ರಯಾನ್ 42 ಬೌಂಡರಿ ಹಾಗೂ 15 ಸಿಕ್ಸರ್ ಸಿಡಿಸಿದ್ದಾರೆ.
ಪಂದ್ಯ ಫಲಿತಾಂಶ
ಟಾಸ್ ಸೋತರೂ ಮೊದಲು ಬ್ಯಾಟ್ ಮಾಡಿದ ಮುಂಬೈ ಇಂಡಿಯನ್ಸ್ 20 ಓವರ್‌ಗಳಲ್ಲಿ 2 ವಿಕೆಟ್ ನಷ್ಟಕ್ಕೆ 217 ರನ್ ಕಲೆ ಹಾಕಿತು. ಗುರಿಯನ್ನು ಹಿಂಬಾಲಿಸಿದ ರಾಜಸ್ಥಾನ ರಾಯಲ್ಸ್ ಟ್ರೆಂಟ್ ಬೌಲ್ಟ್ ಹಾಗೂ ಕರಣ್ ಶರ್ಮಾ ಬೌಲಿಂಗ್ ದಾಳಿಗೆ ಸುಸ್ತಾಯಿತು. ಪರಿಣಾಮ 117 ರನ್‌ಗೆ ಆಲೌಟ್ ಆಗಿ ಸೋಲು ಕಂಡಿತು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications