ರಣರೋಚಕ ಕಾದಾಟ: ಆಡುವ ಬಳಗದಲ್ಲೇ ಇಲ್ಲದಿದ್ದರೂ ಆಸ್ಟ್ರೇಲಿಯಾಗೆ ಸ್ಮರಣೀಯ ಗೆಲುವು ತಂದಿತ್ತ ಲ್ಯಾಬುಶೇನ್!!
ವಿಶ್ವಕಪ್ ಸನಿಹದಲ್ಲಿರುವಾಗ ದಕ್ಷಿಣ ಆಫ್ರಿಕಾ ಪ್ರವಾಸ ಕೈಗೊಂಡು ಏಕದಿನ ಸರಣಿಯನ್ನು ಆಡುತ್ತಿರುವ ಆಸ್ಟ್ರೇಲಿಯಾ ತಂಡ ಸ್ಮರಣೀಯ ಗೆಲುವೊಂದನ್ನು ದಾಖಲಿಸಿದೆ. ಐದು ಪಂದ್ಯಗಳ ಏಕದಿನ ಸರಣಿಯಲ್ಲಿ ಮೊದಲ ಪಂದ್ಯದಲ್ಲಿ ಈ ಎರಡು ತಂಡಗಳು ಮುಖಾಮುಖಿಯಾಗಿದ್ದಾಗ ಆಸಿಸ್ ತಂಡದ ಪರವಾಗಿ ಅಮೋಘ ಪ್ರದರ್ಶನ ನೀಡಿದ ಲ್ಯಾಬುಶೇನ್ ಮ್ಯಾಚ್ ವಿನ್ನಿಂಗ್ ಪ್ರದರ್ಶನ ನೀಡಿ ಎಲ್ಲರನ್ನೂ ಚಕಿತಗೊಳಿಸಿದ್ದಾರೆ.
ದಕ್ಷಿಣ ಆಫ್ರಿಕಾ ಹಾಗೂ ಆಸ್ಟ್ರೇಲಿಯಾ ನಡುವಿನ ಈ ಪಂದ್ಯ ಲೋಸ್ಕೋರಿಂಗ್ ಪಂದ್ಯವಾಗಿತ್ತು. ದಕ್ಷಿಣ ಆಫ್ರಿಕಾ ತಂಡ ನಿಡಿದ್ದ ಸಾಧಾರಣ ಮೊತ್ತದ ಗುರಿಯನ್ನು ಬೆನ್ನಟ್ಟಿದ ಆಸ್ಟ್ರೇಲಿಯಾ ಬಹುತೇಕ ಸೋಲಿನ ಅಂಚಿಗೆ ತಲುಪಿತ್ತು. ಆದರೆ ಈ ಸಂದರ್ಭದಲ್ಲಿ ಆಸ್ಟ್ರೇಲಿಯಾ ತಂಡದ ಆಡುವ XIರ ಬಳಗದಲ್ಲೇ ಇಲ್ಲದ ಮಾರ್ನಸ್ ಲ್ಯಾಬುಶೇನ್ ಕನ್ಕೂಶನ್ ಕವರ್ ಆಗಿ ಆಡುವ ಬಳಗಕ್ಕೆ ಸೇರಿಕೊಂಡು ಕಣಕ್ಕಿಳಿದು ಈ ಅತ್ಯಮೋಘ ಪ್ರದರ್ಶನ ನೀಡಿ ಆಸ್ಟ್ರೇಲಿಯಾದ ಗೆಲುವಿಗೆ ಕಾರಣವಾದರು.

ಅಂದಹಾಗೆ ಈ ಪಂದ್ಯದಲ್ಲಿ ಟಾಸ್ ಸೋತು ಮೊದಲಿಗೆ ಬ್ಯಾಟಿಂಗ್ ನಡೆಸಿದ ದಕ್ಷಿಣ ಆಫ್ರಿಕಾ ತಂಡದ ಪರವಾಗಿ ನಾಯಕ ಟೆಂಬಾ ಬವುಮಾ ಏಕಾಂಗಿ ಹೋರಾಟ ಪ್ರದರ್ಶಿಸಿದರು. ಉಳಿದೆಲ್ಲಾ ಆಟಗಾರರು ಸಂಪೂರ್ಣ ವೈಫಲ್ಯ ಅನುಭವಿಸಿದ್ದರೂ ಬವುಮಾ 114 ರನ್‌ಗಳನ್ನು ಸಿಡಿಸಿದರು. ಇದರ ಪರಿಣಾಮವಾಗಿ 222 ರನ್‌ಗಳಿಸಿ ದಕ್ಷಿಣ ಆಫ್ರಿಕಾ ಸುಲಭ ಗುರಿಯನ್ನು ಆಸ್ಟ್ರೇಲಿಯಾ ತಂಡದ ಮುಂದಿಟ್ಟಿತ್ತು.
ಈ ಮೊತ್ತವನ್ನು ಬೆನ್ನಟ್ಟಿದ ಆಸ್ಟ್ರೇಲಿಯಾ ತಂಡ ಆರಂಭದಲ್ಲೇ ಆಘಾತ ಅನುಭವಿಸಿ ಸಂಕಷ್ಟಕ್ಕೆ ಸಿಲುಕಿತ್ತು. ದಕ್ಷಿಣ ಆಫ್ರಿಕಾ ವೇಗಿಗಳಾದ ರಬಡಾ, ಜಾನ್ಸನ್ ಮತ್ತು ಎನ್‌ಗಿಡಿ ಆಸ್ಟ್ರೇಲಿಯಾದ ಅಗ್ರ ಕ್ರಮಾಂಕ ಹಾಗೂ ಮಧ್ಯಮ ಕ್ರಮಾಂಕದ ವಿರುದ್ಧ ಸಂಪೂರ್ಣ ಹಿಡಿತ ಸಾಧಿಸಿದ್ದರು. ಹೀಗಾಗಿ ಆಸ್ಟ್ರೇಲಿಯಾ ತಂಡದ ಗೆಲುವಿಗೆ ಇನ್ನೂ 100ಕ್ಕೂ ಅಧಿಕ ರನ್‌ಗಳ ಅಗತ್ಯವಿದೆ ಎಂದಾಗಲೇ 7 ವಿಕೆಟ್ ಕಳೆದುಕೊಂಡು ಹೂನಾಯ ಸ್ಥಿತಿಯಲ್ಲಿತ್ತು.
ಈ ಮಧ್ಯೆ ತಂಡದ ಆಲ್‌ರೌಂಡರ್ ಕ್ಯಾಮರೂನ್ ಗ್ರೀನ್ ತಲೆಗೆ ಚೆಂಡೇಟು ಬಡಿದ ಕಾರಣ ಕನ್ಕೂಶನ್ ಸಬ್‌ಸಿಟ್ಯೂಟ್ ಆಗಿ ಬ್ಯಾಟಿಂಗ್‌ಗೆ ಇಳಿದ ಮಾರ್ನಸ್ ಲ್ಯಾಬುಶೇನ್ ಪಂದ್ಯದ ಗತಿಯನ್ನೇ ಬದಲಿಸಿದರು. ಅಮೋಘ ಬ್ಯಾಟಿಂಗ್ ಪ್ರದರ್ಶನ ನೀಡಿದ ಮಾರ್ನಸ್ ದಕ್ಷಿಣ ಆಫ್ರಿಕಾ ಬೌಲರ್‌ಗಳನ್ನು ದಂಡಿಸುತ್ತಾ ಸಾಗಿದರು. ಆಶ್ಟನ್ ಅಗರ್ ಜೊತೆಗೆ ಸೇರಿಕೊಂಡ ಅವರು ಭರ್ಜರಿ 112 ರನ್‌ಗಳ ಜೊತೆಯಾಟವನ್ನು ನೀಡಿದ್ದಾರೆ. ಈ ಮೂಲಕ ಎಲ್ಲಾ ಅಡೆತಡೆಗಳನ್ನು ಮೀರಿ ಆಸ್ಟ್ರೇಲಿಯಾ ಈ ಪಂದ್ಯದಲ್ಲಿ ರೋಚಕ 3 ವಿಕೆಟ್‌ಗಳ ಅಂತರದ ಗೆಲುವು ಸಾಧಿಸಿದೆ.
ನಿರ್ಣಾಯಕ ಹಂತದಲ್ಲಿ ಬ್ಯಾಟಿಂಗ್‌ಗೆ ಇಳಿದ ಮಾರ್ನಸ್ ಲ್ಯಾಬುಶೇನ್ 93 ಎಸೆತಗಳನ್ನು ಎದುರಿಸಿದ್ದು 80 ರನ್‌ಗಳನ್ನು ಗಳಿಸಿ ಅಜೇಯವಾಗಿ ಉಳಿದುಕೊಂಡಿದ್ದಾರೆ. ಇನ್ನು ಅವರಿಗೆ ಸಾರ್ಥ ನೀಡಿದ ಆಶ್ಟನ್ ಅಗರ್ 69 ಎಸೆತಗಳನ್ನು ಎದುರಿಸಿ 48 ರನ್‌ಗಳಿಸಿ ಅಜೇಯವಾಗುಳಿಸಿದ್ದರು.
ದಕ್ಷಿಣ ಆಫ್ರಿಕಾ: ಕ್ವಿಂಟನ್ ಡಿ ಕಾಕ್ (ವಿಕೆಟ್ ಕೀಪರ್), ಟೆಂಬಾ ಬವುಮಾ (ನಾಯಕ), ರಾಸ್ಸಿ ವ್ಯಾನ್ ಡೆರ್ ಡಸ್ಸೆನ್, ಐಡೆನ್ ಮಾರ್ಕ್ರಾಮ್, ಹೆನ್ರಿಚ್ ಕ್ಲಾಸೆನ್, ಡೇವಿಡ್ ಮಿಲ್ಲರ್, ಮಾರ್ಕೊ ಜಾನ್ಸೆನ್, ಜೆರಾಲ್ಡ್ ಕೊಯೆಟ್ಜಿ, ಕೇಶವ್ ಮಹಾರಾಜ್, ಕಗಿಸೊ ರಬಾಡ, ಲುಂಗಿ ಎನ್ಗಿಡಿ
ಬೆಂಚ್: ಡೆವಾಲ್ಡ್ ಬ್ರೆವಿಸ್, ಜಾರ್ನ್ ಫಾರ್ಚುಯಿನ್, ರೀಜಾ ಹೆಂಡ್ರಿಕ್ಸ್, ಸಿಸಂಡಾ ಮಗಾಲಾ, ಅನ್ರಿಚ್ ನಾರ್ಟ್ಜೆ, ತಬ್ರೈಜ್ ಶಮ್ಸಿ, ವೇಯ್ನ್ ಪಾರ್ನೆಲ್, ಟ್ರಿಸ್ಟಾನ್ ಸ್ಟಬ್ಸ್
ಆಸ್ಟ್ರೇಲಿಯಾ: ಡೇವಿಡ್ ವಾರ್ನರ್, ಟ್ರಾವಿಸ್ ಹೆಡ್, ಮಿಚೆಲ್ ಮಾರ್ಷ್ (ನಾಯಕ), ಕ್ಯಾಮೆರಾನ್ ಗ್ರೀನ್, ಜೋಶ್ ಇಂಗ್ಲಿಸ್, ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್), ಮಾರ್ಕಸ್ ಸ್ಟೋನಿಸ್, ಸೀನ್ ಅಬಾಟ್, ಆಶ್ಟನ್ ಅಗರ್, ಜೋಶ್ ಹ್ಯಾಜಲ್‌ವುಡ್, ಆಡಮ್ ಝಂಪಾ
ಬೆಂಚ್: ಮಾರ್ನಸ್ ಲ್ಯಾಬುಸ್ಚಾಗ್ನೆ, ಸ್ಪೆನ್ಸರ್ ಜಾನ್ಸನ್, ಟಿಮ್ ಡೇವಿಡ್, ಆರನ್ ಹಾರ್ಡಿ, ತನ್ವೀರ್ ಸಂಘ, ನಾಥನ್ ಎಲ್ಲಿಸ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications