Kagiso Rabada: ರಬಾಡಾ 6 ವಿಕೆಟ್ ಪಡೆದಲ್ಲಿ ಬುಮ್ರಾ ದಾಖಲೆ ಉಡೀಸ್
ಕ್ರಿಕೆಟ್ ಅಭಿಮಾನಿಗಳ ಚಿತ್ತ ಈಗ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಮೇಲೆ ನೆಟ್ಟಿದೆ. ಈ ಟೆಸ್ಟ್ ಚಾಂಪಿಯನ್ ಶಿಪ್ ಪ್ರಶಸ್ತಿಗೆ ಮುತ್ತಿಡಲು ದಕ್ಷಿಣ ಆಫ್ರಿಕಾ ಹಾಗೂ ಆಸ್ಟ್ರೇಲಿಯಾ ತಂಡಗಳ ಪ್ಲ್ಯಾನ್ ಮಾಡಿಕೊಂಡಿವೆ. ಈ ಟೆಸ್ಟ್ ಸರಣಿಯಲ್ಲಿ ಎರಡನೇ ಬಾರಿಗೆ ಚಾಂಪಿಯನ್ ಪಟ್ಟವನ್ನು ಅಲಂಕರಿಸುವ ಆಸೆ ಆಸ್ಟ್ರೇಲಿಯಾ ತಂಡದ್ದಾಗಿದೆ. ಇನ್ನು ದಕ್ಷಿಣ ಆಫ್ರಿಕಾ ಚೊಚ್ಚಲ ಬಾರಿಗೆ ಈ ಟ್ರೋಫಿಗೆ ಮುತ್ತಿಡುವ ಕನಸು ಕಾಣುತ್ತಿದೆ.
ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಅಂಕಪಟ್ಟಿಯಲ್ಲಿ ಮೊದಲೆರೆಡು ಸ್ಥಾನಗಳನ್ನು ಪಡೆದ ತಂಡಗಳು ಚಾಂಪಿಯನ್ ಪಟ್ಟಕ್ಕೆ ಕಾದಾಟ ನಡೆಸಲಿವೆ. ಈ ಋತುವಿನಲ್ಲಿ ದಕ್ಷಿಣ ಆಫ್ರಿಕಾ ತಂಡವು ಅದ್ಭುತ ಪ್ರದರ್ಶನ ನೀಡಿ ಸತತ 7 ಪಂದ್ಯಗಳನ್ನು ಗೆದ್ದು 69.44 ಶೇಕಡಾ ಅಂಕಗಳೊಂದಿಗೆ ಅಂಕ ಪಟ್ಟಿಯಲ್ಲಿ ಮೊದಲ ಸ್ಥಾನ ಪಡೆದಿದೆ. ಇನ್ನು ಆಸ್ಟ್ರೇಲಿಯಾ ಎರಡನೇ ಸ್ಥಾನದೊಂದಿಗೆ ಫೈನಲ್‌ಗೆ ಪ್ರವೇಶ ಪಡೆದಿದೆ. ದಕ್ಷಿಣ ಆಫ್ರಿಕಾ ತಂಡ ಜಿಂಬಾಬ್ವೆ ವಿರುದ್ಧ ಅಭ್ಯಾಸ ಪಂದ್ಯವನ್ನು ಆಡಲಿದೆ. ಈ ವೇಳೆ ಎಲ್ಲರ ಕಣ್ಣುಗಳ ದಕ್ಷಿಣ ಆಫ್ರಿಕಾದ ಸ್ಟಾರ್ ವೇಗದ ಬೌಲರ್ ಕಗಿಸೋ ರಬಾಡ ಅವರ ಮೇಲೆ ನೆಟ್ಟಿರಲಿವೆ.

ಕಳೆದ ಆವೃತ್ತಿಯ ಫೈನಲ್ ಪಂದ್ಯ ಓವಲ್‌ನಲ್ಲಿ ನಡೆದಿತ್ತು. ಈ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡ, ಭಾರತವನ್ನು ಮಣಿಸಿ ಚೊಚ್ಚಲ ಬಾರಿಗೆ ಟ್ರೋಫಿಗೆ ಮುತ್ತಿಟ್ಟಿತ್ತು. ಆಗ ತಂಡವನ್ನು ಮುನ್ನಡೆಸಿದ್ದ ಕಾಂಗರೂ ನಾಯಕ ಪ್ಯಾಟ್ ಕಮಿನ್ಸ್, ಮತ್ತೊಮ್ಮೆ ಇಂತಹದ್ದೇ ಸಾಧನೆ ಮಾಡುವ ಕನಸಿನಲ್ಲಿದ್ದಾರೆ. ಈ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾದ ಕಗಿಸೊ ರಬಾಡ ಅವರ ಮೇಲೆ ಎಲ್ಲರ ಕಣ್ಣು ನೆಟ್ಟಿವೆ. ಇವರು ಇಂಗ್ಲೆಂಡ್ ಪಿಚ್‌ಗಳಲ್ಲಿ ಬಿಗುವಿನ ದಾಳಿ ನಡೆಸಿ ಎದುರಾಳಿಗಳನ್ನು ಕಾಡಬಲ್ಲ ಬೌಲರ್. ಇವರು ಬುಮ್ರಾ ಅವರ ದಾಖಲೆಯ ಮೇಲೆ ಕಣ್ಣು ನೆಟ್ಟಿದ್ದಾರೆ.
ಬುಮ್ರಾ ದಾಖಲೆಯ ಮೇಲೆ ರಬಾಡಾ ಚಿತ್ತ
ಜೂನ್ 11 ರಿಂದ ನಡೆಯಲಿರುವ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್‌ನಲ್ಲಿ ದಕ್ಷಿಣ ಆಫ್ರಿಕಾದ ವೇಗಿ 6 ವಿಕೆಟ್‌ಗಳನ್ನು ಪಡೆಯುವಲ್ಲಿ ಯಶಸ್ವಿಯಾದರೆ, ಇವರು ಬುಮ್ರಾ ಅವರ ಸಾಧನೆಯನ್ನು ಮೀರಿ ನಿಲ್ಲಬಹುದು. ಪ್ರಸಕ್ತ ರಬಾಡ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ನಲ್ಲಿ ಆಡಿದ 33 ಟೆಸ್ಟ್ ಪಂದ್ಯಗಳಲ್ಲಿ 151 ವಿಕೆಟ್‌ಗಳನ್ನು ಕಬಳಿಸಿದ್ದಾರೆ. ಅತಿ ಹೆಚ್ಚು ವಿಕೆಟ್ ಪಡೆದ ಆಟಗಾರರ ಪಟ್ಟಿಯಲ್ಲಿ ರಬಾಡಗೆ ಆರನೇ ಸ್ಥಾನ. ಇವರು ಫೈನಲ್ ಪಂದ್ಯದಲ್ಲಿ ಆರು ವಿಕೆಟ್ ಪಡೆಯುವಲ್ಲಿ ಯಶಸ್ವಿಯಾದಲ್ಲಿ ಬುಮ್ರಾ ದಾಖಲೆ ಅಳಿಸಿ ಹಾಕಬಹುದು.

ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್‌ಗಳಲ್ಲಿ ಬುಮ್ರಾ 5 ಟೆಸ್ಟ್ ಪಂದ್ಯಗಳಲ್ಲಿ 156 ವಿಕೆಟ್ ಪಡೆದಿದ್ದಾರೆ. ಇವರ ವಿಕೆಟ್ ಸಂಖ್ಯೆಯನ್ನು ಬ್ರೇಕ್ ಮಾಡುವತ್ತ ರಬಾಡ ಚಿತ್ತ ನೆಟ್ಟಿದ್ದಾರೆ. ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಇತಿಹಾಸದಲ್ಲಿ ಅತಿ ಹೆಚ್ಚು ವಿಕೆಟ್‌ಗಳನ್ನು ಪಡೆದ ಕೀರ್ತಿ ಆಸ್ಟ್ರೇಲಿಯಾದ ನಾಥನ್ ಲಿಯಾನ್ ಅವರಿಗೆ ಸಲ್ಲುತ್ತದೆ. ಇವರು 210 ವಿಕೆಟ್ ಪಡೆದಿದ್ದಾರೆ.ಎಡನೇ ಸ್ಥಾನದಲ್ಲಿ ಪ್ಯಾಟ್ ಕಮಿನ್ಸ್ ಇದ್ದು ಇವರು 200, ಮೂರನೇ ಸ್ಥಾನದಲ್ಲಿರುವ ಭಾರತದ ಅಶ್ವಿನ್ 195 ವಿಕೆಟ್ ಹೊಂದಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications