ಬಾಂಗ್ಲಾದೇಶ vs ದಕ್ಷಿಣ ಆಫ್ರಿಕಾ ಏಕದಿನ ಸರಣಿ: ಮೊದಲ ಪಂದ್ಯ, Live ಸ್ಕೋರ್, ಪ್ಲೇಯಿಂಗ್ XI

ಬಾಂಗ್ಲಾದೇಶ ಕ್ರಿಕೆಟ್ ತಂಡ ದಕ್ಷಿಣ ಆಫ್ರಿಕಾ ಪ್ರವಾಸ ಕೈಗೊಂಡಿದ್ದು ಏಕದಿನ ಹಾಗೂ ಟೆಸ್ಟ್ ಸರಣಿಯಲ್ಲಿ ಮುಖಾಮುಖಿಯಾಗುತ್ತಿದೆ. ಈ ಪ್ರವಾಸದ ಏಕದಿನ ಸರಣಿ ಆರಂಭವಾಗಿದ್ದು ಮೊದಲ ಪಂದ್ಯ ಸೆಂಚುರಿಯನ್‌ನ ಸೂಪರ್ ಸ್ಪೋರ್ಟ್ ಪಾರ್ಕ್‌ನಲ್ಲಿ ಆರಂಭವಾಗಿದೆ. ಈ ಪಂದ್ಯದಲ್ಲಿ ಆತಿಥೇಯ ದಕ್ಷಿಣ ಆಫ್ರಿಕಾ ಟಾಸ್ ಗೆದ್ದಿದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.
ದಕ್ಷಿಣ ಆಫ್ರಿಕಾ ತಂಡದ ನಾಯಕತ್ವ ಟೆಂಬಾ ಬವುಮಾ ವಹಿಸಿಕೊಂಡಿದ್ದು ಬಾಂಗ್ಲಾದೇಶದ ವಿರುದ್ಧ ಸೆಣೆಸಾಟಕ್ಕೆ ಇಳಿದಿದೆ. ಇತ್ತ ತಮೀಮ್ ಇಕ್ಬಾಲ್ ನೇತೃತ್ವದ ಬಾಂಗ್ಲಾದೇಶ ಸಂಪೂರ್ಣ ಸಾಮರ್ಥ್ಯದೊಂದಿಗೆ ಕಣಕ್ಕಿಳಿದಿದ್ದು ದಕ್ಷಿಣ ಆಫ್ರಿಕಾ ವಿರುದ್ಧ ಉತ್ತಮ ಪ್ರದರ್ಶನ ನೀಡುವ ಆತ್ಮವಿಶ್ವಾಸದೊಂದಿಗೆ ಕಣಕ್ಕಿಳಿದಿದೆ.
Live ಸ್ಕೋರ್‌ಕಾರ್ಡ್ ಹೀಗಿದೆ
ಬಾಂಗ್ಲಾದೇಶ ಹಾಗೂ ದಕ್ಷಿಣ ಆಫ್ರಿಕಾ ತಂಡಗಳು ಮೊದಲಿಗೆ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಮುಖಾಮುಖಿಯಾಗಲಿದೆ. ಈ ಸರಣಿಯ ಬಳಿಕ ಎರಡು ಪಂದ್ಯಗಳ ಟೆಸ್ಟ್ ಸರಣಿ ನಡೆಯಲಿದೆ. ಐಪಿಎಲ್ ಕಾರಣದಿಂದಾಗಿ ದಕ್ಷಿಣ ಆಫ್ರಿಕಾದ ಕೆಲ ಪ್ರಮುಖ ಆಟಗಾರರು ಟೆಸ್ಟ್ ಸರಣಿಯಲ್ಲಿ ಕಣಕ್ಕಿಳಿಯುತ್ತಿಲ್ಲ. ಹೀಗಾಗಿ ಯುವ ಆಟಗಾರರು ಅವಕಾಶ ಪಡೆಯುವ ಸಾಧ್ಯತೆಯಿದೆ.
ದಕ್ಷಿಣ ಆಫ್ರಿಕಾ ಪ್ಲೇಯಿಂಗ್ XI: ಜನ್ನೆಮನ್ ಮಲನ್, ಐಡೆನ್ ಮಾರ್ಕ್ರಾಮ್, ಟೆಂಬಾ ಬವುಮಾ (ನಾಯಕ), ರಾಸ್ಸಿ ವ್ಯಾನ್ ಡೆರ್ ಡುಸೆನ್, ಕೈಲ್ ವೆರೆಯ್ನೆ (ವಿಕೆಟ್ ಕೀಪರ್), ಡೇವಿಡ್ ಮಿಲ್ಲರ್, ಆಂಡಿಲೆ ಫೆಹ್ಲುಕ್ವಾಯೊ, ಮಾರ್ಕೊ ಜಾನ್ಸೆನ್, ಕೇಶವ್ ಮಹಾರಾಜ್, ಕಗಿಸೊ ರಬಾಡ, ಲುಂಗಿ ಎನ್‌ಗಿಡಿ
ಬೆಂಚ್: ಡ್ವೈನ್ ಪ್ರಿಟೋರಿಯಸ್, ತಬ್ರೈಜ್ ಶಮ್ಸಿ, ವೇಯ್ನ್ ಪಾರ್ನೆಲ್, ರಯಾನ್ ರಿಕೆಲ್ಟನ್
ಬಾಂಗ್ಲಾದೇಶ ಪ್ಲೇಯಿಂಗ್ XI: ತಮೀಮ್ ಇಕ್ಬಾಲ್ (ನಾಯಕ), ಲಿಟನ್ ದಾಸ್, ಶಕೀಬ್ ಅಲ್ ಹಸನ್, ಮುಶ್ಫಿಕರ್ ರಹೀಮ್ (ವಿಕೆಟ್ ಕೀಪರ್), ಯಾಸಿರ್ ಅಲಿ, ಮಹಮ್ಮದುಲ್ಲಾ, ಅಫೀಫ್ ಹೊಸೈನ್, ಮೆಹಿದಿ ಹಸನ್, ತಸ್ಕಿನ್ ಅಹ್ಮದ್, ಶೋರಿಫುಲ್ ಇಸ್ಲಾಂ, ಮುಸ್ತಫಿಜುರ್ ರೆಹಮಾನ್
ಬೆಂಚ್: ನಸುಮ್ ಅಹ್ಮದ್, ನಜ್ಮುಲ್ ಹೊಸೈನ್ ಶಾಂಟೊ, ಎಬಾಡೋತ್ ಹೊಸೈನ್, ಖಲೀದ್ ಅಹ್ಮದ್, ಮಹಮ್ಮದುಲ್ ಹಸನ್ ಜಾಯ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications