For Quick Alerts
ALLOW NOTIFICATIONS  
For Daily Alerts
 

ಬಾಂಗ್ಲಾದೇಶ vs ದಕ್ಷಿಣ ಆಫ್ರಿಕಾ, 2ನೇ ಏಕದಿನ ಪಂದ್ಯ, Live ಸ್ಕೋರ್, ಪ್ಲೇಯಿಂಗ್ XI

SA vs Bang, ODI series, 2nd match Live score Toss Reports and Playing XI, Johannesburg

ಬಾಂಗ್ಲಾದೇಶ ಹಾಗೂ ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಯ ಎರಡನೇ ಪಂದ್ಯ ಜೊಹನ್ಸ್‌ಬರ್ಗ್‌ನ ವಾಂಡರರ್ಸ್ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಬಾಂಗ್ಲಾದೇಶ ಮೊದಲಿಗೆ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ. ಮೊದಲ ಪಂದ್ಯವನ್ನು ಭರ್ಜರಿಯಾಗಿ ಗೆದ್ದಿರುವ ಉತ್ಸಾಹದಲ್ಲಿರುವ ಬಾಂಗ್ಲಾ ತವರು ತಂಡಕ್ಕೆ ಮತ್ತೊಮ್ಮೆ ಶಾಕ್ ನೀಡುವ ಉತ್ಸಾಹದಲ್ಲಿದೆ.

ಇನ್ನು ಈ ಪಂದ್ಯಕ್ಕಾಗಿ ಬಾಂಗ್ಲಾದೇಶ ತಂಡ ಯಾವುದೇ ಬದಲಾವಣೆ ಮಾಡಿಕೊಂಡಿಲ್ಲ ಆದರೆ ದಕ್ಷಿಣ ಆಫ್ರಿಕಾ ತಂಡ ಮೂರು ಬದಲಾವಣೆ ಮಾಡಿಕೊಂಡಿದೆ. ಐಡೆನ್ ಮಾರ್ಕ್ರಾಮ್, ಆಂಡಿಲೆ ಫೆಹ್ಲುಕ್ವಾಯೊ ಹಾಗೂ ಮಾರ್ಕೊ ಜಾನ್ಸೆನ್ ಈ ಪಂದ್ಯದಲ್ಲಿ ಆಡುವ ಬಳಗದಿಂದ ಹೊರಬಿದ್ದಿದ್ದಾರೆ. ಕಳೆದ ಪಂದ್ಯದಲ್ಲಿ ಹೊರಗುಳಿದಿದ್ದ ಕ್ವಿಂಟನ್ ಡಿಕಾಕ್, ತಬ್ರೈಜ್ ಶಂಸಿ ಹಾಗೂ ವಾಯ್ನೆ ಪಾರ್ನೆಲ್ ಆಡುವ ಬಳಗದಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ.

Live ಸ್ಕೋರ್‌ಕಾರ್ಡ್ ಹೀಗಿದೆ:

1
51818

ಬಾಂಗ್ಲಾದೇಶ ಹಾಗೂ ದಕ್ಷಿಣ ಆಫ್ರಿಕಾ ತಂಡಗಳು ಮೊದಲಿಗೆ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಮುಖಾಮುಖಿಯಾಗಲಿದೆ. ಈ ಸರಣಿಯ ಬಳಿಕ ಎರಡು ಪಂದ್ಯಗಳ ಟೆಸ್ಟ್ ಸರಣಿ ನಡೆಯಲಿದೆ. ಐಪಿಎಲ್ ಕಾರಣದಿಂದಾಗಿ ದಕ್ಷಿಣ ಆಫ್ರಿಕಾದ ಕೆಲ ಪ್ರಮುಖ ಆಟಗಾರರು ಟೆಸ್ಟ್ ಸರಣಿಯಲ್ಲಿ ಕಣಕ್ಕಿಳಿಯುತ್ತಿಲ್ಲ. ಹೀಗಾಗಿ ಯುವ ಆಟಗಾರರು ಅವಕಾಶ ಪಡೆಯುವ ಸಾಧ್ಯತೆಯಿದೆ.

ದಕ್ಷಿಣ ಆಫ್ರಿಕಾ ಆಡುವ ಬಳಗ: ಜನ್ನೆಮನ್ ಮಲನ್, ಕ್ವಿಂಟನ್ ಡಿ ಕಾಕ್ (ವಿಕೆಟ್ ಕೀಪರ್), ಟೆಂಬಾ ಬವುಮಾ (ನಾಯಕ), ಕೈಲ್ ವೆರ್ರೆನ್ನೆ, ರಾಸ್ಸಿ ವ್ಯಾನ್ ಡೆರ್ ಡುಸ್ಸೆನ್, ಡೇವಿಡ್ ಮಿಲ್ಲರ್, ವೇಯ್ನ್ ಪಾರ್ನೆಲ್, ಕಗಿಸೊ ರಬಾಡ, ಕೇಶವ್ ಮಹಾರಾಜ್, ಲುಂಗಿ ಎನ್‌ಗಿಡಿ, ತಬ್ರೈಜ್ ಶಮ್ಸಿ

ಬೆಂಚ್: ಡ್ವೈನ್ ಪ್ರಿಟೋರಿಯಸ್, ರಿಯಾನ್ ರಿಕೆಲ್ಟನ್, ಮಾರ್ಕೊ ಜಾನ್ಸೆನ್, ಐಡೆನ್ ಮಾರ್ಕ್ರಾಮ್, ಆಂಡಿಲ್ ಫೆಹ್ಲುಕ್ವಾಯೊ

ಬಾಂಗ್ಲಾದೇಶ ಪ್ಲೇಯಿಂಗ್ XI: ತಮೀಮ್ ಇಕ್ಬಾಲ್ (ನಾಯಕ), ಲಿಟನ್ ದಾಸ್, ಶಕೀಬ್ ಅಲ್ ಹಸನ್, ಮುಶ್ಫಿಕರ್ ರಹೀಮ್ (ವಿಕೆಟ್ ಕೀಪರ್), ಯಾಸಿರ್ ಅಲಿ, ಮಹಮ್ಮದುಲ್ಲಾ, ಅಫೀಫ್ ಹೊಸೈನ್, ಮೆಹಿದಿ ಹಸನ್, ತಸ್ಕಿನ್ ಅಹ್ಮದ್, ಶೋರಿಫುಲ್ ಇಸ್ಲಾಂ, ಮುಸ್ತಫಿಜುರ್ ರೆಹಮಾನ್

ಬೆಂಚ್: ನಸುಮ್ ಅಹ್ಮದ್, ನಜ್ಮುಲ್ ಹೊಸೈನ್ ಶಾಂಟೊ, ಎಬಾಡೋತ್ ಹೊಸೈನ್, ಖಲೀದ್ ಅಹ್ಮದ್, ಮಹಮ್ಮದುಲ್ ಹಸನ್ ಜಾಯ್

Story first published: Sunday, March 20, 2022, 14:21 [IST]
Other articles published on Mar 20, 2022
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+