
ದಕ್ಷಿಣ ಆಫ್ರಿಕಾ ಪ್ರವಾಸ ಕೈಗೊಂಡಿರುವ ಬಾಂಗ್ಲಾದೇಶ ತಂಡ ಏಕದಿನ ಸರಣಿಯ ಅಂತಿಮ ಪಂದ್ಯದಲ್ಲಿ ಪರಸ್ಪರ ಮುಖಾಮುಖಿಯಾಗಿದೆ. ಮೊದಲ ಎರಡು ಪಂದ್ಯಗಳಲ್ಲಿ ಎರಡೂ ತಂಡಗಳು ತಲಾ ಒಂದೊಂದು ಗೆಲುವು ಸಾಧಿಸಿದ್ದು ಅಂತಿಮ ಪಂದ್ಯ ಗೆದ್ದ ತಂಡ ಸರಣಿಯನ್ನು ಮುಡುಗೇರಿಸಿಕೊಳ್ಳಲಿದೆ. ಈ ನಿರ್ಣಾಯಕ ಪಂದ್ಯದಲ್ಲಿ ಆತಿಥೇಯ ದಕ್ಷಿಣ ಆಫ್ರಿಕಾ ತಂಡ ಟಾಸ್ ಗೆದ್ದಿದ್ದು ಮೊದಲಿಗೆ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.
ಇನ್ನು ಈ ಸರಣಿಯ ಮೊದಲ ಪಂದ್ಯದಲ್ಲಿ 38 ರನ್‌ಗಳ ಅಂತರದಿಂದ ಗೆಲುವು ಸಾಧಿಸಿರುವ ಬಾಂಗ್ಲಾದೇಶ ಎರಡನೇ ಪಂದ್ಯದಲ್ಲಿ 7 ವಿಕೆಟ್‌ಗಳ ಅಂತರದ ಸೋಲು ಅನುಭವಿಸಿದೆ. ಹೀಗಾಗಿ ಅಂತಿಮ ಪಂದ್ಯದಲ್ಲಿ ಎರಡೂ ತಂಡಗಳ ಸಾಕಷ್ಟು ಪೈಪೋಟಿಯ ಪ್ರದರ್ಶನ ನೀಡುವ ಸಾಧ್ಯತೆಯಿದೆ. ಅದರಲ್ಲೂ ಬಾಂಗ್ಲಾದೇಶ ಹರಿಣಗಳ ನಾಡಿನಲ್ಲಿ ಚೊಚ್ಚಲ ಸರಣಿ ಗೆಲ್ಲುವ ಕನಸು ಕಾಣುತ್ತಿದೆ.
Live ಸ್ಕೋರ್‌ಕಾರ್ಡ್ ಹೀಗಿದೆ
ಇನ್ನು ಈ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡದ ಪರವಾಗಿ ಒಂದು ಬದಲಾವಣೆ ಮಾಡಿಕೊಳ್ಳಲಾಗಿದೆ. ವೇಯ್ನ್ ಪಾರ್ನೆಲ್ ಗಾಯಗೊಂಡಿರುವ ಕಾರಣ ಡ್ವೇಯ್ನ್ ಪ್ರಿಟೋರಿಯಸ್ ಆಡುವ ಬಳಗದಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ. ಬಾಂಗ್ಲಾದೇಶ ತಂಡ ಯಾವುದೇ ಬದಲಾವಣೆ ಮಾಡಿಕೊಳ್ಳದೆ ಈ ಪಂದ್ಯದಲ್ಲಿ ಕಣಕ್ಕಿಳಿದಿದೆ.
ಬಾಂಗ್ಲಾದೇಶ ಹಾಗೂ ದಕ್ಷಿಣ ಆಫ್ರಿಕಾ ತಂಡಗಳು ಮೊದಲಿಗೆ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಮುಖಾಮುಖಿಯಾಗಿದೆ. ಈ ಸರಣಿಯ ಬಳಿಕ ಎರಡು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಈ ಎರಡು ತಂಡಗಳು ಸೆಣೆಸಾಟ ನಡೆಸಲಿದೆ. ಐಪಿಎಲ್ ಕಾರಣದಿಂದಾಗಿ ದಕ್ಷಿಣ ಆಫ್ರಿಕಾದ ಕೆಲ ಪ್ರಮುಖ ಆಟಗಾರರು ಟೆಸ್ಟ್ ಸರಣಿಯಲ್ಲಿ ಕಣಕ್ಕಿಳಿಯುತ್ತಿಲ್ಲ. ಹೀಗಾಗಿ ಯುವ ಆಟಗಾರರು ಅವಕಾಶ ಪಡೆಯುವ ಸಾಧ್ಯತೆಯಿದೆ.
ದಕ್ಷಿಣ ಆಫ್ರಿಕಾ ಆಡುವ ಬಳಗ: ಜನ್ನೆಮನ್ ಮಲನ್, ಕ್ವಿಂಟನ್ ಡಿ ಕಾಕ್ (ವಿಕೆಟ್ ಕೀಪರ್), ಟೆಂಬಾ ಬವುಮಾ (ನಾಯಕ), ಕೈಲ್ ವೆರ್ರೆನ್ನೆ, ರಾಸ್ಸಿ ವ್ಯಾನ್ ಡೆರ್ ಡುಸ್ಸೆನ್, ಡೇವಿಡ್ ಮಿಲ್ಲರ್, ಕಗಿಸೊ ರಬಾಡ, ಡ್ವೈನ್ ಪ್ರಿಟೋರಿಯಸ್, ಕೇಶವ್ ಮಹಾರಾಜ್, ಲುಂಗಿ ಎನ್‌ಗಿಡಿ, ತಬ್ರೈಜ್ ಶಮ್ಸಿ
ಬೆಂಚ್: ವೇಯ್ನ್ ಪಾರ್ನೆಲ್, ರಿಯಾನ್ ರಿಕೆಲ್ಟನ್, ಮಾರ್ಕೊ ಜಾನ್ಸೆನ್, ಐಡೆನ್ ಮಾರ್ಕ್ರಾಮ್, ಆಂಡಿಲ್ ಫೆಹ್ಲುಕ್ವಾಯೊ
ಬಾಂಗ್ಲಾದೇಶ ಪ್ಲೇಯಿಂಗ್ XI: ತಮೀಮ್ ಇಕ್ಬಾಲ್ (ನಾಯಕ), ಲಿಟನ್ ದಾಸ್, ಶಕೀಬ್ ಅಲ್ ಹಸನ್, ಮುಶ್ಫಿಕರ್ ರಹೀಮ್ (ವಿಕೆಟ್ ಕೀಪರ್), ಯಾಸಿರ್ ಅಲಿ, ಮಹಮ್ಮದುಲ್ಲಾ, ಅಫೀಫ್ ಹೊಸೈನ್, ಮೆಹಿದಿ ಹಸನ್, ತಸ್ಕಿನ್ ಅಹ್ಮದ್, ಶೋರಿಫುಲ್ ಇಸ್ಲಾಂ, ಮುಸ್ತಫಿಜುರ್ ರೆಹಮಾನ್
ಬೆಂಚ್: ನಸುಮ್ ಅಹ್ಮದ್, ನಜ್ಮುಲ್ ಹೊಸೈನ್ ಶಾಂಟೊ, ಎಬಾಡೋತ್ ಹೊಸೈನ್, ಖಲೀದ್ ಅಹ್ಮದ್, ಮಹಮ್ಮದುಲ್ ಹಸನ್ ಜಾಯ್