ನೆದರ್ಲೆಂಡ್ಸ್ ವಿರುದ್ಧದ ಏಕದಿನ ಸರಣಿಗೆ ಬಲಿಷ್ಠ ದ. ಆಫ್ರಿಕಾ ತಂಡ ಪ್ರಕಟ: ತಂಡಕ್ಕೆ ಮರಳಿದ ಸ್ಟಾರ್ ವೇಗಿಗಳು

ನೆದರ್ಲೆಂಡ್ಸ್ ತಂಡದ ವಿರುದ್ಧ ದಕ್ಷಿಣ ಆಫ್ರಿಕಾ ತಂಡ ಏಕದಿನ ಸರಣಿಯನ್ನು ಆಡಲು ಸಜ್ಜಾಗಿದೆ. ಐಸಿಸಿ ಏಕದಿನ ವಿಶ್ವಕಪ್‌ಗೆ ನೇರವಾಗಿ ಅರ್ಹತೆ ಗಿಟ್ಟಿಸುವ ನಿಟ್ಟಿನಲ್ಲಿ ದಕ್ಷಿಣ ಆಫ್ರಿಕಾ ತಂಡಕ್ಕೆ ಈ ಸರಣಿ ಮಹತ್ವ ಪಡೆದುಕೊಂಡಿದೆ. ಹೀಗಾಗಿ ಯುರೋಪಿಯನ್ ದೇಶದ ವಿರುದ್ಧದ ಈ ಏಕದಿನ ಸರಣಿಗೆ ಪೂರ್ಣಪ್ರಮಾಣದ ತಂಡವನ್ನು ದಕ್ಷಿಣ ಆಫ್ರಿಕಾ ಮಂಡಳಿ ಇಂದು ಪ್ರಕಟಿಸಿದೆ.
ಮಾರ್ಚ್ 31ರಿಂದ ಆರಂಬವಾಗಲಿರುವ ಈ ಏಕದಿನ ಸರಣಿಗೆ ದಕ್ರಿಣ ಆಫ್ರಿಕಾ ತಂಡ ಬಲಿಷ್ಠ ಬಳಗವನ್ನು ಇಂದು ಸಮಾಜಿಕ ಜಾಲತಾಣದಲ್ಲಿ ಪ್ರಕಟಿಸಿದೆ. ವಿಶ್ವಕಪ್‌ಗೆ ಅರ್ಹತೆಯನ್ನು ಪಡೆಯುವ ದೃಷ್ಟಿಯಿಂದ ಟೆಂಬಾ ಬವುಮಾ ನೇತೃತ್ವದ ತಂಡದಲ್ಲಿ ಎಲ್ಲಾ ಪ್ರಮುಖ ಆಟಗಾರರು ಸ್ಥಾನವನ್ನು ಪಡೆದುಕೊಂಡಿದ್ದಾರೆ. ಈ ಮೂಲಕ ವಿಶ್ವಕಪ್‌ನಲ್ಲಿ ನೇರವಾಗಿ ಅರ್ಹತೆಯನ್ನು ಪಡೆಯಲು ಇರುವ ಎಲ್ಲಾ ಅವಕಾಶವನ್ನು ಸಂಪೂರ್ಣವಾಗಿ ಬಳಸಿಕೊಳ್ಳಲು ನಿರ್ಧರಿಸಿದೆ.
ಇನ್ನು ವೆಸ್ಟ್ ಇಂಡೀಸ್ ವಿರುದ್ಧದ ಸರಣಿಯಲ್ಲಿ ವಿಶ್ರಾಂತಿ ಪಡೆದುಕೊಂಡಿದ್ದ ದಕ್ಷಿಣ ಆಫ್ರಿಕಾದ ಪ್ರಮುಖ ವೇಗದ ಅಸ್ತ್ರಗಳಾದ ಕಗಿಸೊ ರಬಾಡ ಮತ್ತು ಅನ್ರಿಕ್ ನಾರ್ಕಿಯಾ ಮತ್ತೆ ತಂಡಕ್ಕೆ ಮರಳಿದ್ದಾರೆ. ಈ ಹಿಂದೆ ವೆಸ್ಟ್ ಇಂಡೀಸ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ನಾರ್ಕಿಯಾ ಗಾಯಗೊಂಡಿದ್ದು ಬಳಿಕ ತಂಡದಿಂದ ಹೊರಗುಳಿದಿದ್ದರೆ ಕಗಿಸೋ ರಬಾಡ ಅವರಿಗೆ ಏಕದಿನ ಸರಣಿಯಲ್ಲಿ ವಿಶ್ರಾಂತಿ ನೀಡಿ ಟಿ20 ಸರಣಿಯಲ್ಲಿ ಕಣಕ್ಕಿಳಿದಿದ್ದರು. ಇದೀಗ ಈ ಇಬ್ಬರು ವೇಗಿಗಳು ಕೂಡ ಏಕದಿನ ತಂಡಕ್ಕೆ ಮರಳಿದ್ದಾರೆ.
ಇನ್ನು ರಬಾಡ ಮತ್ತು ನಾರ್ಕಿಯಾ ಹೊರತುಪಡಿಸಿ ದಕ್ಷಿಣ ಆಫ್ರಿಕಾದ ವೇಗದ ದಾಳಿಯಲ್ಲಿ ವೇಯ್ನ್ ಪಾರ್ನೆಲ್, ಲುಂಗಿ ಎನ್ಗಿಡಿ ಮತ್ತು ಮಾರ್ಕೊ ಜಾನ್ಸೆನ್ ಕೂಡ ಈ ಸರಣಿಯಲ್ಲಿ ಸ್ಥಾನವನ್ನು ಪಡೆದುಕೊಂಡಿದ್ದಾರೆ. ಈ ಮೂಲಕ ದಕ್ಷಿಣ ಆಫ್ರಿಕಾ ತಂಡ ಅತ್ಯಂತ ಬಲಿಷ್ಠ ವೇಗದ ಬೌಲಿಂಗ್ ಪಡೆಯೊಂದಿಗೆ ನೆದರ್ಲೆಂಡ್ಸ್ ವಿರುದ್ಧ ಸೆಣೆಸಾಟ ನಡೆಸಲಿದೆ.
ಇನ್ನು ಏಕದಿನ ವಿಶ್ವಕಪ್‌ನಲ್ಲಿ ನೇರವಾಗಿ ಅರ್ಹತೆ ಪಡೆಯಲು ಆಯೋಜಿಸುವ ಏಕದಿನ ಸೂಪರ್ ಲೀಗ್‌ನಲ್ಲಿ 13 ತಂಡಗಳು ಸ್ಪರ್ಧಿಸುತ್ತಿದ್ದು ಇದರಲ್ಲಿ ಆತಿಥೇಯ ಭಾರತ ತಂಡ ಹಾಗೂ ಉಳಿದ ಅಗ್ರ 7 ತಂಡಗಳು ನೇರವಾಗಿ ಅರ್ಹತೆಯನ್ನು ಪಡೆದುಕೊಳ್ಳಲಿದೆ. ಕೊನೆಯ ಐದು ತಂಡಗಳು ಜಿಂಬಾಬ್ವೆಯಲ್ಲಿ ಜೂನ್ 18ರಿಂದ ನಡೆಯಲಿರುವ ಅರ್ಹತಾ ಸುತ್ತಿನಲ್ಲಿ ಭಾಗಿಯಾಗಿ ಬಳಿಕ ಅರ್ಹತೆಯನ್ನು ಸಂಪಾದಿಸಲಿದೆ. ಈ ಅಂಕಪಟ್ಟಿಯಲ್ಲಿ ದಕ್ಷಿಣ ಆಫ್ರಿಕಾ ತಂಡ ಸದ್ಯ 9ನೇ ಸ್ಥಾನದಲ್ಲಿದ್ದು ಈ ಸರಣಿ ದಕ್ಷಿಣ ಆಫ್ರಿಕಾ ಪಾಲಿಗೆ ಮಹತ್ವದ್ದಾಗಿದೆ.
ದಕ್ಷಿಣ ಆಫ್ರಿಕಾ ತಂಡ ಹೀಗಿದೆ: ಟೆಂಬಾ ಬವುಮಾ (ನಾಯಕ), ಕ್ವಿಂಟನ್ ಡಿ ಕಾಕ್, ಜಾರ್ನ್ ಫಾರ್ಟುಯಿನ್, ರೀಜಾ ಹೆಂಡ್ರಿಕ್ಸ್, ಮಾರ್ಕೊ ಜಾನ್ಸೆನ್, ಹೆನ್ರಿಕ್ ಕ್ಲಾಸಿನ್, ಸಿಸಂಡಾ ಮಗಾಲಾ, ಐಡೆನ್ ಮಾರ್ಕ್ರಾಮ್, ಡೇವಿಡ್ ಮಿಲ್ಲರ್, ಲುಂಗಿ ಎನ್‌ಗಿಡಿ, ಅನ್ರಿಚ್ ನಾರ್ಕಿಯಾ, ವೇಯ್ನ್ ಪಾರ್ನೆಲ್, ಕಗಿಸೊ ರಬಾಡ, ಟಬ್ರೇಜ್ ಶಮ್ಸಿ
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications