Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

SA vs NZ Semifinal: ಪಂದ್ಯದ ಸಮಯ, ನೇರಪ್ರಸಾರ, ಪ್ಲೇಯಿಂಗ್ ಇಲೆವೆನ್, ಹವಾಮಾನದ ಸಂಪೂರ್ಣ ಮಾಹಿತಿ

ಕೋಲ್ಕತ್ತಾ: ಕಳೆದ ಬಾರಿಯ ಟಿ20 ವಿಶ್ವಕಪ್ನ ಫೈನಲ್‌ ಪಂದ್ಯದಲ್ಲಿ ನಿರಾಸೆ ಅನುಭವಿಸಿದ್ದ ದಕ್ಷಿಣ ಆಫ್ರಿಕಾ, ಈ ಬಾರಿಯ ಟಿ20 ವಿಶ್ವಕಪ್‌ನ ಸೆಮಿಫೈನಲ್‌ನಲ್ಲಿ ನ್ಯೂಜಿಲೆಂಡ್‌ಗೆ ಸವಾಲು ಎಸೆಯಲಿದೆ. ಉಭಯ ತಂಡಗಳು ಬಲಿಷ್ಠವಾಗಿದ್ದು ಪಂದ್ಯ ರೋಚಕತೆಯಿಂದ ಕೂಡಿದೆ. ಈಡನ್‌ ಗಾರ್ಡನ್‌ ಅಂಗಳದತ್ತ ಎಲ್ಲರ ಚಿತ್ತ ನೆಟ್ಟಿದೆ. ಈ ಪಂದ್ಯವನ್ನು ಗೆದ್ದ ತಂಡ ಪ್ರಶಸ್ತಿ ಸುತ್ತಿಗೆ ಅರ್ಹತೆ ಪಡೆಯುತ್ತದೆ.

ದಕ್ಷಿಣ ಆಫ್ರಿಕಾ ಈ ಟೂರ್ನಿಯಲ್ಲಿ ಆಡಿದ ಧಾಟಿಯನ್ನು ನೋಡಿದರೆ, ಮೊದಲ ಸೆಮಿಫೈನಲ್‌ ಪಂದ್ಯವನ್ನು ಗೆಲ್ಲುವ ನೆಚ್ಚಿನ ತಂಡ ಎಂದು ಪರಿಗಣಿಸಬಹುದಾಗಿದೆ. ದಕ್ಷಿಣ ಆಫ್ರಿಕಾ ಈ ಟೂರ್ನಿಯಲ್ಲಿ ಆಡಿದ 9 ಪಂದ್ಯಗಳನ್ನು ಗೆದ್ದು ಬೀಗಿದ್ದು, ಆತ್ಮ ವಿಶ್ವಾಸದಿಂದ ಸೆಮಿಫೈನಲ್‌ ಹಂತಕ್ಕೆ ತಲುಪಿದೆ. ನ್ಯೂಜಿಲೆಂಡ್ ಸಹ ಉತ್ತಮ ಕ್ರಿಕೆಟ್‌ ಆಡಿದೆ. ಆದರೆ ಮಹತ್ವದ ಪಂದ್ಯದಲ್ಲಿ ಸ್ಥಿರ ಪ್ರದರ್ಶನ ನೀಡುವಲ್ಲಿ ಎಡವಿದೆ. ಹೀಗಾಗಿ ಈ ಪಂದ್ಯ ರೋಚಕತೆ ಹೆಚ್ಚಿಸಿದೆ. ಈ ಪಂದ್ಯದ ಸಂಪೂರ್ಣ ವಿವರ ಇಲ್ಲಿದೆ.

SA vs NZ Semifinal

ಪಿಚ್‌ ಯಾರಿಗೆ ಸಹಾಯಕ?

ದಕ್ಷಿಣ ಆಫ್ರಿಕಾ ಹಾಗೂ ನ್ಯೂಜಿಲೆಂಡ್‌ ನಡುವಣ ಪಂದ್ಯಕ್ಕೆ ಬಳಸಲಾಗಿರುವ ಪಿಚ್‌ ಡಾರ್ಕ್‌ ಶೇಡ್‌ನಿಂದ ಕೂಡಿದೆ. ಈ ಪಿಚ್‌ ಸ್ಪಿನ್ ಬೌಲರ್‌ಗಳಿಗೆ ನೆರವು ನೀಡುತ್ತದೆ ಎಂದು ನಂಬಲಾಗಿದೆ. ಇನ್ನು ಎರಡನೇ ಇನಿಂಗ್ಸ್‌ನಲ್ಲಿ ಇಬ್ಬನಿ ಬೀಳುವ ಸಾಧ್ಯತೆ ಇದೆ. ಹೀಗಾಗಿ ಟಾಸ್‌ ಪ್ರಮುಖ ಪಾತ್ರ ವಹಿಸುತ್ತದೆ.

ಹವಾಮಾನ ವರದಿ?

ಟಿ20 ವಿಶ್ವಕಪ್‌ನ ಮೊದಲ ಸೆಮಿಫೈನಲ್‌ ಪಂದ್ಯ ಕೋಲ್ಕತ್ತಾದಲ್ಲಿ ನಡೆಯಲಿದ್ದು, ಕ್ರಿಕೆಟ್‌ ಆಡಲು ಪೂರಕವಾಗಿರಲಿದೆ. ಅಲ್ಲದೆ ಮಳೆ ಸಾಧ್ಯತೆ ಕಡಿಮೆ.

ದಕ್ಷಿಣ ಆಫ್ರಿಕಾ ಪ್ಲೇಯಿಂಗ್ ಇಲೆವೆನ್‌ ಹೀಗಿರುವ ಸಾಧ್ಯತೆ

ಕ್ವಿಂಟನ್ ಡಿ ಕಾಕ್, ಏಡೆನ್ ಮಾರ್ಕ್ರಮ್, ರಿಯಾನ್ ರಿಕೆಲ್ಟನ್, ಡೆವಾಲ್ಡ್ ಬ್ರೆವಿಸ್, ಡೇವಿಡ್ ಮಿಲ್ಲರ್, ಟ್ರಿಸ್ಟಾನ್ ಸ್ಟಬ್ಸ್, ಮಾರ್ಕೊ ಜಾನ್ಸೆನ್, ಕಾರ್ಬಿನ್ ಬಾಷ್, ಕಗಿಸೊ ರಬಾಡ, ಕೇಶವ್ ಮಹಾರಾಜ್, ಲುಂಗಿ ಎನ್ಗಿಡಿ.

ಅಂಕಿ ಅಂಶಗಳು ಏನು ಹೇಳುತ್ತವೇ?

  1. ದಕ್ಷಿಣ ಆಫ್ರಿಕಾ ಟಿ20 ವಿಶ್ವಕಪ್‌ನಲ್ಲಿ ಒಂದೇ ಒಂದು ಪಂದ್ಯವನ್ನು ನ್ಯೂಜಿಲೆಂಡ್ ವಿರುದ್ಧ ಸೋತಿಲ್ಲ. ಈ ವರೆಗೆ ಉಭಯ ತಂಡಗಳು ಐದು ಬಾರಿ ಟಿ20 ವಿಶ್ವಕಪ್‌ನಲ್ಲಿ ಮುಖಾಮುಖಿ ನಡೆಸಿದ್ದೂ ಐದು ಪಂದ್ಯಗಳನ್ನು ದಕ್ಷಿಣ ಆಫ್ರಿಕಾ ಗೆದ್ದಿದೆ.

  2. ದಕ್ಷಿಣ ಆಫ್ರಿಕಾದ ನಾಯಕ ಏಡನ್ ಮಾರ್ಕ್ರಾಮ್ ಅವರು 32 ರನ್‌ ಬಾರಿಸುವಲ್ಲಿ ಸಫಲರಾದರೆ ಒಂದೇ ಟಿ20 ವಿಶ್ವಕಪ್ ಆವೃತ್ತಿಯಲ್ಲಿ 300 ರನ್‌ ಬಾರಿಸಿದ ಆರನೇ ಪ್ಲೇಯರ್ ಎಂಬ ಹೆಗ್ಗಳಿಕೆಯನ್ನು ತಮ್ಮದಾಗಿಸಿಕೊಳ್ಳಲಿದ್ದಾರೆ.

  3. ಉಭಯ ತಂಡಗಳು ಈಗಾಗಲೇ ಟಿ20 ಕ್ರಿಕೆಟ್‌ನಲ್ಲಿ ಒಟ್ಟು 19 ಬಾರಿ ಮುಖಾಮುಖಿಯಾಗಿದ್ದು 12 ಪಂದ್ಯಗಳಲ್ಲಿ ದಕ್ಷಿಣ ಆಫ್ರಿಕಾ ಗೆದ್ದಿದೆ. ನ್ಯೂಜಿಲೆಂಡ್ 7 ಪಂದ್ಯಗಳನ್ನು ಗೆದ್ದಿದೆ.

ದಕ್ಷಿಣ ಆಫ್ರಿಕಾ, ನ್ಯೂಜಿಲೆಂಡ್ ಪಂದ್ಯವನ್ನು ಎಲ್ಲಿ ನೋಡಬಹುದು?

ಟಿ20 ವಿಶ್ವಕಪ್‌ನ ಮೊದಲ ಸೆಮಿಫೈನಲ್ ಪಂದ್ಯವನ್ನು ಸ್ಟಾರ್ ಸ್ಪೋರ್ಟ್ಸ್‌ ನೆಟ್‌ ವರ್ಕ್‌ನಲ್ಲಿ ನೋಡಬಹುದಾಗಿದೆ. ಅಲ್ಲದೆ ಜಯೋಹಾಟ್‌ಸ್ಟಾರ್‌ನಲ್ಲಿ ಆನ್‌ಲೈನ್‌ನಲ್ಲಿ ವೀಕ್ಷಿಸಬಹುದಾಗಿದೆ.

ಟಿ20 ವಿಶ್ವಕಪ್‌ ಸೆಮಿಫೈನಲ್‌ ಪಂದ್ಯ ನಡೆಯುವುದು ಯಾವಾಗ?

ದಕ್ಷಿಣ ಆಫ್ರಿಕಾ, ನ್ಯೂಜಿಲೆಂಡ್ ನಡುವಣ ಪಂದ್ಯ ಸಂಜೆ 7ಕ್ಕೆ ಆರಂಭವಾಗಲಿದೆ. ಅಲ್ಲದೆ ಪಂದ್ಯದ ಅರ್ಧ ಗಂಟೆ ಮುನ್ನ ಟಾಸ್ ನಡೆಯಲಿದೆ.

Story first published: Wednesday, March 4, 2026, 8:48 [IST]
Other articles published on Mar 4, 2026
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+