Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

SA vs WI: ದಕ್ಷಿಣ ಆಫ್ರಿಕಾದ ಗೆಲುವಿಗಾಗಿ ಟೀಮ್ ಇಂಡಿಯಾ ಪ್ರಾರ್ಥನೆ

ಅಹಮದಾಬಾದ್‌: ಟಿ20 ವಿಶ್ವಕಪ್ನ ಸೂಪರ್ 8 ಹಂತದ ಪಂದ್ಯ ಕುತೂಹಲ ಮೂಡಿಸಿದೆ. ಗುರುವಾರ ನಡೆಯಲಿರುವ ಮೊದಲ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ಹಾಗೂ ವೆಸ್ಟ್‌ ಇಂಡೀಸ್ ತಂಡಗಳು ಕಾದಾಟ ನಡೆಸಲಿವೆ. ಈ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ಪಂದ್ಯವನ್ನು ಗೆಲ್ಲುವ ಹಾಟ್‌ ಫೆವರೀಟ್‌. ಟೀಮ್ ಇಂಡಿಯಾದ ಅಭಿಮಾನಿಗಳು ಸಹ ದಕ್ಷಿಣ ಆಫ್ರಿಕಾಗೆ ಜಯಕ್ಕೆ ಪ್ರಾರ್ಥನೆ ನಡೆಸುತ್ತಿದ್ದಾರೆ.

ದಕ್ಷಿಣ ಆಫ್ರಿಕಾ ಹಾಗೂ ವೆಸ್ಟ್‌ ಇಂಡೀಸ್ ನಡುವಣ ಕಾಳಗವನ್ನು ಭಾರತೀಯ ಅಭಿಮಾನಿಗಳು ಹಾಗೂ ಭಾರತ ತಂಡ ತದೇಕಚಿತ್ತದಿಂದ ನೋಡಲಿದೆ. ಟೀಮ್ ಇಂಡಿಯಾ ಸೆಮಿಫೈನಲ್‌ ಹಂತವನ್ನು ಸುಲಭವಾಗಿ ಪ್ರವೇಶಿಸಬೇಕಾದಲ್ಲಿ ವಿಂಡೀಸ್‌ ತಂಡವನ್ನು ದಕ್ಷಿಣ ಆಫ್ರಿಕಾ ತಂಡ ಮಣಿಸದರೆ ಭಾರತಕ್ಕೆ ಸಹಾಯವಾಗುತ್ತದೆ. ದಕ್ಷಿಣ ಆಫ್ರಿಕಾ ತಂಡ ಈ ಪಂದ್ಯದಲ್ಲಿ ಜಯ ಸಾಧಿಸಿದರೆ, ಟೀಮ್ ಇಂಡಿಯಾ ಸೂಪರ್ 8 ಹಂತದ ಎರಡೂ ಪಂದ್ಯಗಳನ್ನು ಸುಲಭವಾಗಿ ಗೆದ್ದರೂ ಸಹ ಸೆಮಿಫೈನಲ್‌ ಹಂತವನ್ನು ಪ್ರವೇಶಿಸಬಹುದು.

SA vs WI

ಟಿ20 ವಿಶ್ವಕಪ್‌ನಲ್ಲಿ ದಕ್ಷಿಣ ಆಫ್ರಿಕಾ ಹಾಗೂ ವೆಸ್ಟ್‌ ಇಂಡೀಸ್ ತಂಡಗಳು ಐದು ಬಾರಿ ಮುಖಾಮುಖಿಯಾಗಿವೆ. ಇದರಲ್ಲಿ ದಕ್ಷಿಣ ಆಫ್ರಿಕಾ ತಂಡ 4 ಪಂದ್ಯಗಳಲ್ಲಿ ಜಯ ಸಾಧಿಸಿದರೆ, 1 ಪಂದ್ಯದಲ್ಲಿ ಜಯ ಸಾಧಿಸಿದೆ. ಉಭಯ ತಂಡಗಳು ಸೂಪರ್‌ 8 ಹಂತದಲ್ಲಿ ತಲಾ ಒಂದು ಪಂದ್ಯವನ್ನು ಗೆದ್ದಿದ್ದರಿಂದ ಈ ಪಂದ್ಯದಲ್ಲಿ ಗೆಲ್ಲುವುದು ಯಾರು? ಎಂಬ ಪ್ರಶ್ನೆ ಉದ್ಭವಿಸಿದೆ.

ಭರವಸೆಯ ಆಟಗಾರರೇ ಬಲ

ದಕ್ಷಿಣ ಆಫ್ರಿಕಾ ತಂಡದಲ್ಲಿ ಅನುಭವಿ ಆಟಗಾರರ ದಂಡೇ ಇದೆ. ನಾಯಕ ಐಡೆನ್ ಮಾರ್ಕ್ರಾಮ್ ಸ್ಥಿರ ಬ್ಯಾಟಿಂಗ್ ಪ್ರದರ್ಶನ ನೀಡುತ್ತಿದ್ದಾರೆ. ಇನ್ನು ಮಧ್ಯಮ ಕ್ರಮಾಂಕದಲ್ಲಿ ರಿಯಾನ್ ರಿಕೆಲ್ಟನ್, ಡೆವಾಲ್ಡ್ ಬ್ರೆವಿಸ್, ಡೇವಿಡ್ ಮಿಲ್ಲರ್, ಟ್ರಿಸ್ಟಾನ್ ಸ್ಟಬ್ಸ್ ರನ್‌ ಕಲೆ ಹಾಕಿ ತಂಡಕ್ಕೆ ನೆರವಾಗ ಬೇಕಿದೆ. ಬೌಲಿಂಗ್ ವಿಭಾಗದಲ್ಲಿ ಕಾರ್ಬಿನ್ ಬಾಷ್ ತಮ್ಮ ಬಿಗುವಿನ ದಾಳಿ ಸಂಘಟಿಸಿ ಎದುರಾಳಿಗಳನ್ನು ಕಾಡಬಲ್ಲರು.

ದಕ್ಷಿಣ ಆಫ್ರಿಕಾ ಸಂಭಾವ್ಯ ತಂಡ: ಐಡೆನ್ ಮಾರ್ಕ್ರಾಮ್, ಕ್ವಿಂಟನ್ ಡಿ ಕಾಕ್, ರಿಯಾನ್ ರಿಕೆಲ್ಟನ್, ಡೆವಾಲ್ಡ್ ಬ್ರೆವಿಸ್, ಡೇವಿಡ್ ಮಿಲ್ಲರ್, ಟ್ರಿಸ್ಟಾನ್ ಸ್ಟಬ್ಸ್, ಮಾರ್ಕೊ ಜಾನ್ಸೆನ್, ಕಾರ್ಬಿನ್ ಬಾಷ್, ಕೇಶವ್ ಮಹಾರಾಜ್, ಕಗಿಸೊ ರಬಾಡ, ಲುಂಗಿ ಎನ್ಗಿಡಿ.

ಶಿಮ್ರೋನ್‌ ಹೆಟ್ಮೆಯರ್‌ ಆಕರ್ಷಣೆ

ವೆಸ್ಟ್‌ ಇಂಡೀಸ್ ತಂಡದಲ್ಲೂ ಹೊಡಿ ಬಡಿ ಆಟದ ಖ್ಯಾತ ನಾಮ ಆಟಗಾರರು ಇದ್ದಾರೆ. ಶಾಯ್‌ ಹೋಪ್‌ ಬ್ಯಾಟಿಂಗ್‌ನಲ್ಲಿ ಬಲ ತುಂಬಬಲ್ಲರು. ಮಧ್ಯಮ ಕ್ರಮಾಂಕದಲ್ಲಿ ಶಿಮ್ರೋನ್‌ ಹೆಟ್ಮೆಯರ್‌ ಜಿಂಬಾಬ್ವೆ ವಿರುದ್ಧದ ಪಂದ್ಯದಲ್ಲಿ ಅಬ್ಬರಿಸಿದ್ದರು. ಹೀಗಾಗಿ ಇವರ ಮೇಲೆ ಭರವಸೆ ಹೆಚ್ಚಿದೆ. ತಂಡದಲ್ಲಿರುವ ಭರವಸೆಯ ಆಲ್‌ರೌಂಡರ್‌ಗಳ ಮೇಲೆ ಎಲ್ಲರ ಚಿತ್ತ ನೆಟ್ಟಿದೆ.

ವೆಸ್ಟ್ ಇಂಡೀಸ್ ಸಂಭಾವ್ಯ ತಂಡ: ಬ್ರಾಂಡನ್ ಕಿಂಗ್, ಶಾಯ್ ಹೋಪ್, ಶಿಮ್ರೋನ್ ಹೆಟ್ಮೆಯರ್, ರೋವ್ಮನ್ ಪೊವೆಲ್, ಶೆರ್ಫೇನ್ ರುದರ್‌ಫೋರ್ಡ್, ರೊಮಾರಿಯೋ ಶೆಫರ್ಡ್, ಜೇಸನ್ ಹೋಲ್ಡರ್, ಮ್ಯಾಥ್ಯೂ ಫೋರ್ಡ್, ಅಕೀಲ್ ಹೊಸೈನ್ ಅಥವಾ ರೋಸ್ಟನ್ ಚೇಸ್, ಗುಡಾಕೇಶ್ ಮೋಟಿ, ಶಮರ್ ಜೋಸೆಫ್.

SA vs WI

ಪಿಚ್‌ ವರದಿ

ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿರುವ ಸೂಪರ್ 8 ಹಂತದ ಪಂದ್ಯದ ಮೇಲೆ ಎಲ್ಲರ ಚಿತ್ತ ನೆಟ್ಟಿದೆ. ದಕ್ಷಿಣ ಆಫ್ರಿಕಾ ಹಾಗೂ ವೆಸ್ಟ್‌ ಇಂಡೀಸ್ ನಡುವಣ ಪಂದ್ಯ ಕೆಂಪು ಮಣ್ಣಿನ ಪಿಚ್‌ ಮೇಲೆ ನಡೆಯುವ ಸಾಧ್ಯತೆ ಇದೆ. ಸಾಮಾನ್ಯವಾಗಿ ಕೆಂಪು ಮಣ್ಣಿನ ಪಿಚ್‌ಗಳು ಬೌಲರ್‌ಗಳಿಗೆ ಹೆಚ್ಚಿನ ಬೌನ್ಸ್ ನೀಡುವ ನಿರೀಕ್ಷೆಯಿದೆ. ಇನ್ನು ಈ ಪಿಚ್‌ ಬ್ಯಾಟರ್‌ಗಳಿಗೂ ನೆರವು ನೀಡುವ ಸಾಧ್ಯತೆ ಇದೆ.

ಪಂದ್ಯ ನಡೆಯುವುದು ಯಾವಾಗ?

ದಕ್ಷಿಣ ಆಫ್ರಿಕಾ ಹಾಗೂ ವೆಸ್ಟ್‌ ಇಂಡೀಸ್ ನಡುವಣ ಪಂದ್ಯ ಮಧ್ಯಾಹ್ನ 3 ಗಂಟೆಗೆ ನಡೆಯಲಿದೆ. ಅಲ್ಲದೆ ಪಂದ್ಯಕ್ಕೂ ಅರ್ಧಗಂಟೆಗೂ ಮುನ್ನ ಟಾಸ್‌ ನಡೆಯಲಿದೆ.

ಎಲ್ಲಿ ವೀಕ್ಷಿಸಬಹುದು?

ದಕ್ಷಿಣ ಆಫ್ರಿಕಾ ಹಾಗೂ ವೆಸ್ಟ್‌ ಇಂಡೀಸ್ ನಡುವಣ ಪಂದ್ಯವನ್ನು ಸ್ಟಾರ್ ಸ್ಪೋರ್ಟ್ಸ್‌ನಲ್ಲಿ ವೀಕ್ಷಿಸಬಹುದಾಗಿದೆ. ಅಲ್ಲದೆ ಆನ್‌ಲೈನ್‌ನಲ್ಲಿ ಜಿಯೋಹಾಟ್‌ಸ್ಟಾರ್‌ನಲ್ಲಿ ನೋಡಬಹುದಾಗಿದೆ.

Story first published: Thursday, February 26, 2026, 6:20 [IST]
Other articles published on Feb 26, 2026
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+