SA vs WI: ವೆಸ್ಟ್ ಇಂಡೀಸ್ ವಿರುದ್ಧದ ಸರಣಿಗೆ ದಕ್ಷಿಣ ಆಫ್ರಿಕಾ ತಂಡ ಪ್ರಕಟ; ಟಿ20 ನಾಯಕನಾಗಿ ಮಾರ್ಕ್ರಾಮ್ ನೇಮಕ

ವೆಸ್ಟ್ ಇಂಡೀಸ್ ವಿರುದ್ಧದ ಟಿ20 ಮತ್ತು ಏಕದಿನ ಸರಣಿಗೆ ತನ್ನ ತಂಡ ಪ್ರಕಟಿಸಿದ ದಕ್ಷಿಣ ಆಫ್ರಿಕಾ ಕ್ರಿಕೆಟ್ ಮಂಡಳಿ, ಇದೇ ವೇಳೆ ಟಿ20 ನಾಯಕನಾಗಿ ಏಡೆನ್ ಮಾರ್ಕ್ರಾಮ್ ಅವರನ್ನು ನೇಮಕ ಮಾಡಿದೆ.
ಕಳೆದ ಎರಡು ಟಿ20 ವಿಶ್ವಕಪ್‌ಗಳಲ್ಲಿ ಲೀಗ್ ಹಂತದಲ್ಲಿ ಹೊರಬಿದ್ದ ನಂತರ, ನಾಯಕನ ಜವಾಬ್ದಾರಿ ತ್ಯಜಿಸಿದ ಟೆಂಬಾ ಬವುಮಾ ಅವರಿಂದ ಏಡೆನ್ ಮಾರ್ಕ್ರಾಮ್ ಅವರಿಗೆ ಟಿ20 ತಂಡದ ಜವಾಬ್ದಾರಿಯನ್ನು ನೀಡಲಾಗಿದೆ.
ಇದರ ಜೊತೆಗೆ ದಕ್ಷಿಣ ಆಫ್ರಿಕಾ ತಂಡದ ಕೋಚಿಂಗ್ ಸಿಬ್ಬಂದಿಯಲ್ಲಿ ಬ್ಯಾಟಿಂಗ್ ಕೋಚ್ ಆಗಿ ಜೆಪಿ ಡುಮಿನಿ ಮತ್ತು ವೈಟ್-ಬಾಲ್ ತಂಡಕ್ಕೆ ಬೌಲಿಂಗ್ ಕೋಚ್ ಆಗಿ ರೋರಿ ಕ್ಲೀನ್‌ವೆಲ್ಟ್ ಅವರನ್ನು ನೇಮಕ ಮಾಡಲಾಗಿದೆ.
ಇದರಲ್ಲಿ ಗಮನಾರ್ಹ ಅಂಶವೆಂದರೆ, ಜೆಪಿ ಡುಮಿನಿ ಶಾಶ್ವತ ಆಧಾರದ ಮೇಲೆ ತಂಡದೊಂದಿಗೆ ಇರಲಿದ್ದರೆ, ರೋರಿ ಕ್ಲೀನ್‌ವೆಲ್ಟ್ ಮುಂಬರುವ ವೆಸ್ಟ್ ಇಂಡೀಸ್ ಸರಣಿಗೆ ಮಾತ್ರ ತಂಡದ ಭಾಗವಾಗಿರುತ್ತಾರೆ.
"ದಕ್ಷಿಣ ಆಫ್ರಿಕಾ ಟಿ20 ತಂಡದ ನಾಯಕನಾಗಿ ನೇಮಕಗೊಂಡ ಏಡೆನ್ ಮಾರ್ಕ್ರಾಮ್ ಅವರನ್ನು ನಾನು ಅಭಿನಂದಿಸುತ್ತೇನೆ. ನಾಯಕತ್ವವು ಅವರಿಗೆ ತುಂಬಾ ಪರಿಚಿತವಾಗಿದೆ, ಈಗಾಗಲೇ ಹಲವು ಪಂದ್ಯಗಳಲ್ಲಿ ಯಶಸ್ವಿಯಾಗಿ ಮುನ್ನಡೆಸಿದ್ದಾರೆ".
"ಏಡೆನ್ ಮಾರ್ಕ್ರಾಮ್ ತಂಡದ ಆತ್ಮವಿಶ್ವಾಸವನ್ನು ಪ್ರೇರೇಪಿಸುವ ಆಟಗಾರರಾಗಿದ್ದು, ನೂತನ ಪಾತ್ರದಲ್ಲಿ ಯಶಸ್ವಿಯಾಗುವ ಎಲ್ಲಾ ಗುಣಗಳನ್ನು ಹೊಂದಿದ್ದಾರೆ. ದಕ್ಷಿಣ ಆಫ್ರಿಕಾ ತಂಡವನ್ನು ಮುಂದಿನ ಹಂತಕ್ಕೆ ಕೊಂಡೊಯ್ಯುವಲ್ಲಿ ನಮಗೆ ಯಾವುದೇ ಸಂದೇಹವಿಲ್ಲ," ಎಂದು ದಕ್ಷಿಣ ಆಫ್ರಿಕಾ ಕ್ರಿಕೆಟ್ ನಿರ್ದೇಶಕ ಎನೋಚ್ ಎನ್ಕ್ವೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸನ್‌ರೈಸರ್ಸ್ ಈಸ್ಟರ್ನ್ ಕೇಪ್ ತಂಡವನ್ನು ಮುನ್ನಡೆಸಿದ ಮಾರ್ಕ್ರಾಮ್
SA20 ಉದ್ಘಾಟನಾ ಲೀಗ್‌ನಲ್ಲಿ ಸನ್‌ರೈಸರ್ಸ್ ಈಸ್ಟರ್ನ್ ಕೇಪ್ ತಂಡವನ್ನು ಮುನ್ನಡೆಸಿ ಚಾಂಪಿಯನ್ ಮಾಡಿದ ಏಡೆನ್ ಮಾರ್ಕ್ರಾಮ್ ಯಶಸ್ವಿಯಾಗಿದ್ದಾರೆ. 2014ರಲ್ಲಿ ಅಂಡರ್-19 ಪುರುಷರ ಕ್ರಿಕೆಟ್ ವಿಶ್ವಕಪ್‌ನಲ್ಲಿ ದಕ್ಷಿಣ ಆಫ್ರಿಕಾ ತಂಡವನ್ನು ಪ್ರಶಸ್ತಿ ಗೆಲುವಿನತ್ತ ಮುನ್ನಡೆಸಿದ ಅನುಭವ ಹೊಂದಿದ್ದಾರೆ.
ಇನ್ನು ದಕ್ಷಿಣ ಆಫ್ರಿಕಾ ತಂಡ ತವರಿನಲ್ಲಿ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ವೆಸ್ಟ್ ಇಂಡೀಸ್ ತಂಡವನ್ನು ಎದುರಿಸಲು ಸಿದ್ಧವಾಗಿದೆ. ನಂತರ ಮೂರು ಟಿ20 ಪಂದ್ಯಗಳನ್ನು ಆಡಲಿದೆ. ಏಕದಿನ ತಂಡದಿಂದ ಆನ್ರಿಚ್ ನಾರ್ಟ್ಜೆ ಮತ್ತು ಕಗಿಸೊ ರಬಾಡ ಅವರಿಗೆ ವಿಶ್ರಾಂತಿ ನೀಡಲಾಗಿದ್ದು, ಏಕದಿನ, ಟಿ20 ಸರಣಿಗೆ ದಕ್ಷಿಣ ಆಫ್ರಿಕಾ ಪ್ರತ್ಯೇಕ ತಂಡಗಳನ್ನು ಪ್ರಕಟಿಸಲಾಗಿದೆ.

ಮೊದಲ ಎರಡು ಏಕದಿನ ಪಂದ್ಯಗಳಿಗೆ ದಕ್ಷಿಣ ಆಫ್ರಿಕಾ ತಂಡ
ಟೆಂಬಾ ಬವುಮಾ (ನಾಯಕ), ಜೆರಾಲ್ಡ್ ಕೊಯೆಟ್ಜಿ, ಕ್ವಿಂಟನ್ ಡಿ ಕಾಕ್, ಟೋನಿ ಡಿ ಜೊರ್ಜಿ, ಜಾರ್ನ್ ಫೋರ್ಚುಯಿನ್, ರೀಜಾ ಹೆಂಡ್ರಿಕ್ಸ್, ಸಿಸಂಡಾ ಮಗಾಲಾ, ಕೇಶವ್ ಮಹಾರಾಜ್, ವಿಯಾನ್ ಮುಲ್ಡರ್, ಲುಂಗಿ ಎನ್‌ಗಿಡಿ, ರಿಯಾನ್ ರಿಕೆಲ್ಟನ್, ಆಂಡಿಲ್ ಫೆಹ್ಲುಕ್ವಾಯೊ, ಟ್ರಿಸ್ಟಾನ್ ಸ್ಟಬ್ಸ್, ಲಿಜಾಡ್ ವಿಲಿಯಮ್ಸ್, ರಾಸ್ಸಿ ವ್ಯಾನ್ ಡೆರ್ ಡಸ್ಸೆನ್.

ಟಿ20 ಸರಣಿಗೆ ದಕ್ಷಿಣ ಆಫ್ರಿಕಾ ತಂಡ
ಏಡೆನ್ ಮಾರ್ಕ್ರಾಮ್ (ನಾಯಕ), ಕ್ವಿಂಟನ್ ಡಿ ಕಾಕ್, ಜಾರ್ನ್ ಫಾರ್ಚುಯಿನ್, ರೀಜಾ ಹೆಂಡ್ರಿಕ್ಸ್, ಮಾರ್ಕೊ ಜಾನ್ಸೆನ್, ಹೆನ್ರಿಚ್ ಕ್ಲಾಸೆನ್, ಸಿಸಂಡಾ ಮಗಲಾ, ಡೇವಿಡ್ ಮಿಲ್ಲರ್, ಲುಂಗಿ ಎನ್‌ಗಿಡಿ, ಅನ್ರಿಚ್ ನಾರ್ಟ್ಜೆ, ವೇಯ್ನ್ ಪಾರ್ನೆಲ್, ಕಗಿಸೊ ರಬಾಡ, ರಿಲೀ ರೊಸ್ಸೌ, ತಬ್ರೈಜ್ ಶಮ್ಸಿ, ಟ್ರಿಸ್ಟಾನ್ ಸ್ಟಬ್ಸ್.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications