SA vs WI T20: ಟಿ20 ಕ್ರಿಕೆಟ್ ಇತಿಹಾಸದಲ್ಲೇ ಅತ್ಯಧಿಕ ಮೊತ್ತ ಚೇಸ್ ಮಾಡಿ ಗೆದ್ದ ದಕ್ಷಿಣ ಆಫ್ರಿಕಾ

ಏಕದಿನ ಮಾದರಿಯಲ್ಲಿ ಅತ್ಯಧಿಕ ಮೊತ್ತವನ್ನು ಚೇಸ್ ಮಾಡಿ ಗೆದ್ದ ದಾಖಲೆ ಹೊಂದಿರುವ ದಕ್ಷಿಣ ಆಫ್ರಿಕಾ ಈಗ ಟಿ20 ಕ್ರಿಕೆಟ್‌ನಲ್ಲಿ ಕೂಡ ಅತ್ಯಧಿಕ ಮೊತ್ತವನ್ನು ಯಶಸ್ವಿಯಾಗಿ ಚೇಸ್ ಮಾಡುವ ಮೂಲಕ ಇತಿಹಾಸ ನಿರ್ಮಿಸಿದೆ.
ದಕ್ಷಿಣ ಆಫ್ರಿಕಾದ ಸೆಂಚುರಿಯನ್‌ನಲ್ಲಿ ನಡೆದ ಟಿ20 ಸರಣಿಯ ಎರಡನೇ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ 259 ರನ್‌ಗಳ ಬೃಹತ್ ಗುರಿಯನ್ನು 18.5 ಓವರ್ ಗಳಲ್ಲಿ ಚೇಸ್ ಮಾಡುವ ಮೂಲಕ 6 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿದೆ. ಟಾಸ್ ಗೆದ್ದ ದಕ್ಷಿಣ ಆಫ್ರಿಕಾ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿತು.
ಮೊದಲು ಬ್ಯಾಟಿಂಗ್ ಮಾಡಿದ ವೆಸ್ಟ್ ಇಂಡೀಸ್ ಆರಂಭದಲ್ಲೇ ವಿಕೆಟ್ ಕಳೆದುಕೊಂಡರೂ ನಂತರ ಸ್ಫೋಟಕ ಆಟವಾಡಿತು. ಬ್ರಾಂಡನ್ ಕಿಂಗ್ ಕೇವಲ ಒಂದು ರನ್ ಗಳಿಸಿ ಔಟಾದರೆ, ನಂತರ ಬಂದ ಕೈಲ್ ಮೇಯರ್ಸ್ ಮತ್ತು ಜಾನ್ಸನ್ ಚಾರ್ಲ್ಸ್ ಅಮೋಘ ಜೊತೆಯಾಟ ಆಡಿದರು.
ಕೈಲ್ ಮೇಯರ್ಸ್ 27 ಎಸೆತಗಳಲ್ಲಿ 5 ಬೌಂಡರಿ ನಾಲ್ಕು ಭರ್ಜರಿ ಸಿಕ್ಸರ್ ಸಹಿತ 51 ರನ್ ಗಳಿಸಿದರು. ಜಾನ್ಸನ್ ಚಾರ್ಲ್ಸ್ ಅದ್ಭುತ ಶತಕ ಸಿಡಿಸಿದರು. 46 ಎಸೆತಗಳಲ್ಲಿ 10 ಬೌಂಡರಿ 11 ಭರ್ಜರಿ ಸಿಕ್ಸರ್ ಸಹಿತ 118 ರನ್ ಗಳಿಸಿದರು. ನಿಕೋಲಸ್ ಪೂರನ್ 2 ರನ್ ಗಳಿಸಿ ಔಟಾದರೆ, ರೋವ್ಮನ್ ಪೊವೆಲ್ 19 ಎಸೆತಗಳಲ್ಲಿ 1 ಬೌಂಡರಿ 2 ಭರ್ಜರಿ ಸಿಕ್ಸರ್ ಸಹಿತ 28 ರನ್ ಗಳಿಸಿದರು.
ರೊಮಾರಿಯೋ ಶೆಫರ್ಡ್ 18 ಎಸೆತಗಳಲ್ಲಿ ಒಂದು ಬೌಂಡರಿ 4 ಭರ್ಜರಿ ಸಿಕ್ಸರ್ ಸಹಿತ 41 ರನ್ ಗಳಿಸಿದರು. ಒಡಿಯಾನ್ ಸ್ಮಿತ್ 5 ಎಸೆತಗಳಲ್ಲಿ 11 ರನ್ ಗಳಿಸಿದರು. 20 ಓವರ್ ಗಳಲ್ಲಿ ವೆಸ್ಟ್ ಇಂಡೀಸ್ 5 ವಿಕೆಟ್ ಕಳೆದುಕೊಂಡು 258 ರನ್ ಕಲೆಹಾಕಿತು.

ಕ್ವಿಂಟನ್ ಡಿ ಕಾಕ್ - ರೀಜಾ ಹೆಂಡ್ರಿಕ್ಸ್ ಅಬ್ಬರಕ್ಕೆ ಶರಣಾದ ವೆಸ್ಟ್ ಇಂಡೀಸ್
ಈ ಬೃಹತ್ ಮೊತ್ತವನ್ನು ಬೆನ್ನತ್ತಿದ ದಕ್ಷಿಣ ಆಫ್ರಿಕಾ ಸ್ಫೋಟಕ ಆರಂಭ ಪಡೆಯಿತು. ಕೇವಲ 2.4 ಓವರ್ ಗಳಾಗುಷ್ಟರಲ್ಲಿ ದಕ್ಷಿಣ ಆಫ್ರಿಕಾ 50 ರನ್‌ಗಳ ಗಡಿಯನ್ನು ದಾಟಿತು. ಕ್ವಿಂಟನ್ ಡಿ ಕಾಕ್ ಕೇವಲ 15 ಎಸೆತಗಳಲ್ಲಿ ತಮ್ಮ ಅರ್ಧಶತಕವನ್ನು ಪೂರೈಸಿದರು. ಈ ಮೂಲಕ ಟಿ20 ಕ್ರಿಕೆಟ್‌ನಲ್ಲಿ 4ನೇ ವೇಗವಾದ ಅರ್ಧಶತಕ ದಾಖಲಿಸಿದರು.
ದಕ್ಷಿಣ ಆಫ್ರಿಕಾ ಪವರ್ ಪ್ಲೇನ 6 ಓವರ್ ಗಳಲ್ಲಿ 102 ರನ್ ಗಳಿಸುವ ಮೂಲಕ ಪವರ್ ಪ್ಲೇನಲ್ಲಿ ಅತಿ ಹೆಚ್ಚು ರನ್ ಗಳಿಸಿದ ದಾಖಲೆ ನಿರ್ಮಿಸಿದರು. ತಮ್ಮ ಸ್ಫೋಟಕ ಆಟವನ್ನು ಮುಂದುವರೆಸಿದ ಕ್ವಿಂಟನ್ ಡಿ ಕಾಕ್ 41 ಎಸೆತಗಳಲ್ಲಿ ಅಂತಾರಾಷ್ಟ್ರೀಯ ಟಿ20 ಪಂದ್ಯದಲ್ಲಿ ತಮ್ಮ ಮೊದಲ ಶತಕ ಗಳಿಸಿದರು.
ರೀಜಾ ಹೆಂಡ್ರಿಕ್ಸ್ 28 ಎಸೆತಗಳಲ್ಲಿ 11 ಬೌಂಡರಿ 2 ಭರ್ಜರಿ ಸಿಕ್ಸರ್ ಸಹಿತ 68 ರನ್ ಗಳಿಸಿ ಔಟಾದರು. ನಾಯಕ ಐಡೆನ್ ಮಾರ್ಕ್ರಾಮ್ 21 ಎಸೆತಗಳಲ್ಲಿ ಅಜೇಯ 38 ರನ್ ಗಳಿಸಿದರೆ, ಹೆನ್ರಿಚ್ ಕ್ಲಾಸೆನ್ 7 ಎಸೆತಗಳಲ್ಲಿ ಅಜೇಯ 16 ರನ್ ಗಳಿಸುವ ಮೂಲಕ ದಕ್ಷಿಣ ಆಫ್ರಿಕಾ ತಂಡಕ್ಕೆ ವಿಶ್ವದಾಖಲೆಯ ಗೆಲುವು ತಂದುಕೊಟ್ಟರು. ಬ್ಯಾಟಿಂಗ್ ಸ್ನೇಹಿ ಪಿಚ್‌ನಲ್ಲಿ ನಡೆದ ಪಂದ್ಯದಲ್ಲಿ ಒಟ್ಟು 35 ಸಿಕ್ಸರ್ ಗಳು ಮತ್ತು 46 ಬೌಂಡರಿಗಳು ದಾಖಲಾದವು. 40 ಓವರ್ ಗಳಲ್ಲಿ ಒಟ್ಟು 517 ರನ್‌ಗಳು ಬಂದವು.

ಉಭಯ ತಂಡಗಳ ಆಡುವ ಬಳಗ
ದಕ್ಷಿಣ ಆಫ್ರಿಕಾ: ಕ್ವಿಂಟನ್ ಡಿ ಕಾಕ್ (ವಿಕೆಟ್ ಕೀಪರ್), ರೀಜಾ ಹೆಂಡ್ರಿಕ್ಸ್, ರಿಲೀ ರೊಸೊವ್, ಐಡೆನ್ ಮಾರ್ಕ್ರಾಮ್ (ನಾಯಕ), ಡೇವಿಡ್ ಮಿಲ್ಲರ್, ಹೆನ್ರಿಚ್ ಕ್ಲಾಸೆನ್, ಮಾರ್ಕೊ ಜಾನ್ಸೆನ್, ವೇಯ್ನ್ ಪಾರ್ನೆಲ್, ಸಿಸಂಡಾ ಮಗಾಲಾ, ಕಗಿಸೊ ರಬಾಡ, ತಬ್ರೈಜ್ ಶಮ್ಸಿ.
ವೆಸ್ಟ್ ಇಂಡೀಸ್: ಕೈಲ್ ಮೇಯರ್ಸ್, ಬ್ರಾಂಡನ್ ಕಿಂಗ್, ಜಾನ್ಸನ್ ಚಾರ್ಲ್ಸ್, ನಿಕೋಲಸ್ ಪೂರನ್ (ವಿಕೆಟ್ ಕೀಪರ್), ರೋವ್ಮನ್ ಪೊವೆಲ್ (ನಾಯಕ), ಜೇಸನ್ ಹೋಲ್ಡರ್, ರೇಮನ್ ರೀಫರ್, ರೊಮಾರಿಯೋ ಶೆಫರ್ಡ್, ಅಕೆಲ್ ಹೊಸೈನ್, ಓಡಿಯನ್ ಸ್ಮಿತ್, ಶೆಲ್ಡನ್ ಕಾಟ್ರೆಲ್.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications