For Quick Alerts
ALLOW NOTIFICATIONS  
For Daily Alerts
 

Sachin Tendulkar: ಮೆಲ್ಬೋರ್ನ್ ಕ್ರಿಕೆಟ್ ಕ್ಲಬ್‌ನ ಸದಸ್ಯತ್ವ ಸ್ವೀಕರಿಸಿದ ಸಚಿನ್ ತೆಂಡೂಲ್ಕರ್

ಭಾರತ ತಂಡದ ದಿಗ್ಗಜ ಬ್ಯಾಟರ್ ಸಚಿನ್ ತೆಂಡೂಲ್ಕರ್ ಮೆಲ್ಬೋರ್ನ್ ಕ್ರಿಕೆಟ್ ಕ್ಲಬ್‌ನ ಗೌರವಾನ್ವಿತ ಸದಸ್ಯತ್ವವನ್ನು ಸ್ವೀಕರಿಸಿದ್ದಾರೆ. ಕ್ಲಬ್‌ನ ಗೌರವಾನ್ವಿತ ಸದಸ್ಯತ್ವವನ್ನು ಸಚಿನ್ ತೆಂಡೂಲ್ಕರ್ ಸ್ವೀಕರಿಸಿರುವ ಬಗ್ಗೆ ಮೆಲ್ಬೋರ್ನ್ ಕ್ರಿಕೆಟ್ ಕ್ಲಬ್ (ಎಂಸಿಸಿ) ತನ್ನ ಪ್ರಕಟಣೆ ಮೂಲಕ ಮಾಹಿತಿ ನೀಡಿದೆ. ಎಂಸಿಸಿ ಅನ್ನು 1838 ರಲ್ಲಿ ಸ್ಥಾಪಿಸಲಾಗಿದ್ದು, ಆಸ್ಟ್ರೇಲಿಯಾದ ಅತ್ಯಂತ ಹಳೆಯ ಕ್ರೀಡಾ ಕ್ಲಬ್‌ಗಳಲ್ಲಿ ಒಂದಾಗಿದೆ. ಪ್ರಸ್ತುತ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಬಾಕ್ಸಿಂಗ್ ಡೇ ಟೆಸ್ಟ್ ಅನ್ನು ಆಯೋಜಿಸುತ್ತಿರುವ ಐಕಾನಿಕ್ ಮೆಲ್ಬೋರ್ನ್ ಕ್ರಿಕೆಟ್ ಮೈದಾನದ (ಎಂಸಿಸಿ) ನಿರ್ವಹಣೆ ಮತ್ತು ಅಭಿವೃದ್ಧಿಯ ಜವಾಬ್ದಾರಿಯನ್ನು ಎಂಸಿಸಿ ಹೊಂದಿದೆ.

ಕ್ರಿಕೆಟ್‌ಗೆ ನೀಡಿರುವ ಅದ್ಭುತ ಕೊಡುಗೆಯನ್ನು ಪರಿಗಣಿಸಿ ಕ್ಲಬ್‌ನ ಗೌರವಾನ್ವಿತ ಸದಸ್ಯರಾಗುವಂತೆ ಕಳುಹಿಸಿದ ಆಹ್ವಾನವನ್ನು ಟೀಮ್ ಇಂಡಿಯಾದ ಮಾಜಿ ಆಟಗಾರ ಸಚಿನ್ ತೆಂಡೂಲ್ಕರ್ ಸ್ವೀಕರಿಸಿದ್ದಾರೆ ಎಂದು ಎಂಸಿಸಿ ಘೋಷಣೆ ಮಾಡಲು ಸಂತೋಷವಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Sachin Tendulkar accepted membership of Melbourne Cricket Club

ಸಚಿನ್ ತೆಂಡೂಲ್ಕರ್ ಅವರನ್ನು 2012 ರಲ್ಲಿ ಆರ್ಡರ್ ಆಫ್ ಆಸ್ಟ್ರೇಲಿಯಾ (ಓಎಎಂ)ದ ಗೌರವ ಸದಸ್ಯರನ್ನಾಗಿ ಮಾಡಲಾಗಿತ್ತು. ಈ ಗೌರವವನ್ನು ಪಡೆದ ಮೊದಲ ವಿದೇಶಿ ಕ್ರಿಕೆಟಿಗ ಎಂಬ ಹೆಗ್ಗಳಿಕೆ ಸಚಿನ್ ತೆಂಡೂಲ್ಕರ್ ಪಾತ್ರರಾಗಿದ್ದರು. ಅದೇ ವರ್ಷದಲ್ಲಿ, ಅವರಿಗೆ ಸಿಡ್ನಿ ಕ್ರಿಕೆಟ್ ಕ್ಲಬ್‌ನ (ಎಸ್‌ಸಿಸಿ) ಗೌರವ ಆಜೀವ ಸದಸ್ಯತ್ವವನ್ನೂ ನೀಡಿ ಗೌರವಿಸಿದೆ.

ಮೇರಿಲ್ಬೋನ್ ಕ್ರಿಕೆಟ್ ಕ್ಲಬ್‌ನ ಆಜೀವ ಸದಸ್ಯತ್ವ ಮತ್ತು ಇಂಗ್ಲೆಂಡ್‌ನ ಯಾರ್ಕ್‌ಷೈರ್ ಕೌಂಟಿ ಕ್ರಿಕೆಟ್ ಕ್ಲಬ್‌ನ ಗೌರವ ಆಜೀವ ಸದಸ್ಯತ್ವವನ್ನು 2014 ರಲ್ಲಿ ಸಚಿನ್ ತೆಂಡೂಲ್ಕರ್ ಪಡೆದಿದ್ದಾರೆ. ಇದಲ್ಲದೆ, ಅವರು ಲಂಡನ್‌ನ ಲಾರ್ಡ್ಸ್ ಕ್ರಿಕೆಟ್ ಗ್ರೌಂಡ್‌ನ ಪೋಷಕರಾಗಿರುವ ಮೇರಿಲ್ಬೋನ್ ಕ್ರಿಕೆಟ್ ಕ್ಲಬ್ ಮತ್ತು ಮುಂಬೈನ ಎಂಐಜಿ ಕ್ರಿಕೆಟ್ ಕ್ಲಬ್‌ನ ಆಜೀವ ಸದಸ್ಯತ್ವವನ್ನು ಹೊಂದಿದ್ದಾರೆ. ಎಂಐಜಿ ಕ್ರಿಕೆಟ್ ಕ್ಲಬ್‌ನಲ್ಲಿ ಸಚಿನ್ ತಮ್ಮ ಬಾಲ್ಯದಲ್ಲಿ ತರಬೇತಿ ಪಡೆದಿದ್ದರು.

ಮೆಲ್ಬೋರ್ನ್ ಸ್ಟೇಡಿಯಂನಲ್ಲಿ ಸಚಿನ್ ತೆಂಡೂಲ್ಕರ್ ಅದ್ಭುತ ದಾಖಲೆಯನ್ನು ಹೊಂದಿದ್ದರೆ. ಮೆಲ್ಬೋರ್ನ್‌ನಲ್ಲಿ ಭಾರತ ತಂಡದ ಪರ ಸಚಿನ್ 5 ಟೆಸ್ಟ್ ಮತ್ತು 7 ಏಕದಿನ ಪಂದ್ಯಗಳನ್ನು ಆಡಿದ್ದಾರೆ. ಇದರಲ್ಲಿ ಅವರು ಕ್ರಮವಾಗಿ 449 ಮತ್ತು 190 ರನ್ ಗಳಿಸಿದ್ದಾರೆ. ಅವರು 1 ಶತಕ ಮತ್ತು 3 ಅರ್ಧಶತಕಗಳೊಂದಿಗೆ ಟೆಸ್ಟ್ ಪಂದ್ಯಗಳಲ್ಲಿ ಭಾರತದ ಅತಿ ಹೆಚ್ಚು ರನ್ ಗಳಿಸಿದ ಆಟಗಾರರಾಗಿದ್ದಾರೆ.

Story first published: Friday, December 27, 2024, 19:40 [IST]
Other articles published on Dec 27, 2024
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+