Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

Maharashtra Assembly Election: ಮತ ಚಲಾಯಿಸಿದ ಸಚಿನ್ ತೆಂಡೂಲ್ಕರ್

ಟೀಮ್ ಇಂಡಿಯಾ ಆಟಗಾರರು ಅತ್ತ ಆಸ್ಟ್ರೇಲಿಯಾದಲ್ಲಿ ಭರ್ಜರಿ ಅಭ್ಯಾಸ ನಡೆಸಿದ್ದಾರೆ. ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳ ನಡುವೆ ನಡೆಯಲಿರುವ ಬಾರ್ಡರ್ ಗವಾಸ್ಕರ್ ಟ್ರೋಫಿಯ ಕಾವು ದಿನೇ ದಿನೇ ಹೆಚ್ಚಾಗುತ್ತಿದೆ. ಆದರೆ ಇತ್ತ ಭಾರತದ ಕೆಲವು ರಾಜ್ಯಗಳಲ್ಲಿ ಚುನಾವಣೆಗಳ ಭರಾಟೆ ಜೋರಾಗಿದೆ. ಮಹರಾಷ್ಟ್ರ ಹಾಗೂ ಜಾರ್ಖಂಡ್‌ನಲ್ಲಿ ವಿಧಾನಸಭಾ ಚುನಾವಣೆಗಳು ನಡೆಯುತ್ತಿವೆ. ಬುಧವಾರ ಜಾರ್ಖಂಡ್‌ನ 38 ಕ್ಷೇತ್ರಗಳಲ್ಲಿ ಎರಡನೇ ಹಂತದ ಮತದಾನ ನಡೆದರೆ, ಮಹಾರಾಷ್ಟ್ರದಲ್ಲಿ ನವೆಂಬರ್‌ 20ರಂದು ಒಂದೇ ಹಂತದ ಮತದಾನ ನಡಿದಿದೆ.

ಮಹಾರಾಷ್ಟ್ರದ 288 ಕ್ಷೇತ್ರಗಳಲ್ಲಿ ಒಂದೇ ಹಂತದಲ್ಲಿ ಮತದಾನ ನಡೆಯುತ್ತಿದ್ದ, ಟೀಮ್ ಇಂಡಿಯಾ ಆಟಗಾರರು ಸಹ ಮತದಾನ ಮಾಡಿದರು. ಭಾರತದ ಸ್ಟಾರ್ ಆಟಗಾರ ಸಚಿನ್ ತೆಂಡೂಲ್ಕರ್‌ ತಮ್ಮ ಕುಟುಂಬ ಸಮೇತ ಮುಂಬೈನಲ್ಲಿ ಮತ ಚಾಲಿಸಿದರು. ಈ ಮೂಲಕ ಪ್ರಜಾ ಪ್ರಭುತ್ವದ ಹಬ್ಬದಲ್ಲಿ ಭಾಗವಹಿಸಿ ಖುಷಿ ಪಟ್ಟರು.

Sachin Tendulkar Casts His Vote in Maharashtra Assembly Elections 2024

ಹಲವು ಸಾಮಾಜಿಕ ಕಾರ್ಯಗಳಲ್ಲಿ ಸಕ್ರಿಯರಾಗಿರುವ ತೆಂಡೂಲ್ಕರ್‌, ಜನರಲ್ಲಿ ಮತದಾನ ಮಾಡುವಂತೆ ಜಾಗೃತಿ ಮೂಡವ ಕೆಲಸವನ್ನು ಮಾಡುತ್ತಲೆ ಇದ್ದಾರೆ. ಈ ಬಾರಿಯೂ ಅವರು ತಮ್ಮ ಜವಾಬ್ದಾರಿಯನ್ನು ನಿರ್ವಹಿಸಿದ್ದಾರೆ. ಕ್ರಿಕೆಟ್‌ ಅಂಗಳದಿಂದ ದೂರವಾದ ಬಳಿಕ ಸಚಿನ್ ಸಾಮಾಜಿಕ ಕಾರ್ಯಗಳಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳಲು ಆರಂಭಿಸಿದ್ದಾರೆ.

ದಿಗ್ಗಜ ಆಟಗಾರ ಸಚಿನ್‌ ತೆಂಡೂಲ್ಕರ್‌ ಮತ ಚಲಾಯಿಸಿದರು. ಈ ವೇಳೆ ಅವರಿಗೆ ಪತ್ನಿ ಅಂಜಲಿ, ಮಗಳು ತಾರಾ ತೆಂಡೂಲ್ಕರ್‌ ಸಾಥ್ ನೀಡಿದರು. ಮೂರು ಜನ ತಮ್ಮ ಅಮೂಲ್ಯ ಹಕ್ಕನ್ನು ಚಲಾಯಿಸಿ ಮತಗಟ್ಟೆಯ ಹೊರಗೆ ಬಂದು ಪೋಟೋಗೆ ಪೋಸ್‌ ನೀಡುತ್ತಿರುವ ಫೋಟೋ ಹಾಗೂ ದೃಶ್ಯಗಳು ಸಖತ್ ವೈರಲ್ ಆಗುತ್ತಿವೆ.

ಮತದಾನ ಮಾಡಿದ ನಂತರ ತೆಂಡೂಲ್ಕರ್ ಅವರು ಮತದಾನ ಮಾಡುವಂತೆ ಜನರಲ್ಲಿ ಮನವಿ ಮಾಡಿದರು. ಮತ ಚಲಾಯಿಸುವುದು ನಮ್ಮ ಜವಾಬ್ದಾರಿ.ಪ್ರತಿಯೊಬ್ಬರು ಮನೆ ಬಿಟ್ಟು ಹೊರ ಬಂದು ತಮ್ಮ ಹಕ್ಕನ್ನು ಚಲಾಯಿಸ ಬೇಕು ಎಂದು ತಿಳಿಸಿದ್ದಾರೆ.

ಸಚಿನ್ ತೆಂಡೂಲ್ಕರ್ ಹೆಸರಿನಲ್ಲಿ ಹಲವು ದಾಖಲೆಗಳು ಇವೆ. ಇವರು ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಹಲವು ಮಹತ್ವದ ಮೈಲಿಗಲ್ಲು ಸ್ಥಾಪಿಸಿದ್ದಾರೆ. ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 100 ಶತಕಗಳನ್ನು ಬಾರಿಸಿದ್ದಾರೆ. ಅಲ್ಲದೆ 200 ಟೆಸ್ಟ್‌ ಪಂದ್ಯಗಳನ್ನು ಆಡಿದ ವಿಶ್ವದ ಮೊದಲ ಆಟಗಾರ ಎಂಬ ಹೆಗ್ಗಳಿಕೆಯನ್ನು ಸಹ ತಮ್ಮದಾಗಿಸಿಕೊಂಡಿದ್ದಾರೆ. ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 600ಕ್ಕೂ ಹೆಚ್ಚು ಇನಿಂಗ್ಸ್‌ಗಳನ್ನು ಆಡಿದ ಮೊದಲ ಆಟಗಾರ ಎಂಬ ಹೆಗ್ಗಳಿಕೆ ಸಹ ಇವರದ್ದಾಗಿದೆ.

Story first published: Wednesday, November 20, 2024, 11:18 [IST]
Other articles published on Nov 20, 2024
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+