ಟೀಮ್ ಇಂಡಿಯಾದ ದಿಗ್ಗಜ ಆಟಗಾರ ಸಚಿನ್ ತೆಂಡೂಲ್ಕರ್ ಅವರ ಪುತ್ರ ಅರ್ಜುನ್ ತೆಂಡೂಲ್ಕರ್ ನಿಶ್ಚಿತಾರ್ಥವಾದ ಸಾನಿಯಾ ಚಂದೋಕ್ ಅವರೊಂದಿಗೆ ಸುದ್ದಿ ಇತ್ತೀಚಿಗೆ ಭಾರೀ ಸದ್ದು ಮಾಡಿತ್ತು. ಈ ಬಗ್ಗೆ ಈಗ ಮಾಜಿ ಕ್ರಿಕೆಟ್ ಆಟಗಾರ ಸಚಿನ್ ತೆಂಡೂಲ್ಕರ್ ದೃಢಪಡಿಸಿದ್ದಾರೆ. ಆದರೆ ಈ ಬಗ್ಗೆ ಎರಡೂ ಕುಟುಂಬಗಳಿಂದ ಯಾವುದೇ ಸ್ಪಷ್ಟನೆ ಸಿಕ್ಕಿರಲಿಲ್ಲ. ಆದರೆ ಈಗ ಸಚಿನ್ ತೆಂಡೂಲ್ಕರ್ ಮೌನ ಮುರಿದಿದ್ದಾರೆ.
ಸಚಿನ್ ತೆಂಡೂಲ್ಕರ್ ರೆಡ್ಡಿಟ್‌ನಲ್ಲಿ ನಡೆದ 'ಆಸ್ಕ್ ಮಿ ಎನಿಥಿಂಗ್' ಈ ಬಗ್ಗೆ ಮಾತನಾಡಿದ್ದಾರೆ. ಅರ್ಜುನ್ ಮತ್ತು ಸಾನಿಯಾ ಅವರ ನಿಶ್ಚಿತಾರ್ಥವಾದ ಬಗ್ಗೆ ತಿಳಿಸಿದ್ದಾರೆ. ಈ ಕಾರ್ಯಕ್ರಮದಲ್ಲಿ ಅಭಿಮಾನಿಗಳು ಸಚಿನ್ ಅವರಿಗೆ ಯಾವುದೇ ಪ್ರಶ್ನೆಯನ್ನು ಕೇಳಬಹುದಿತ್ತು. ಇದೇ ಸಮಯವನ್ನು ಬಳಸಿಕೊಂಡ ಅಭಿಮಾನಿಗಲು ಅರ್ಜುನ್ ನಿಜವಾಗಿಯೂ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆಯೇ ಎಂದು ಬಳಕೆದಾರರು ಕೇಳಿದರು.

ಈ ಪ್ರಶ್ನೆಗೆ ಉತ್ತರಿಸಿರುವ ಸಚಿನ್ "ಹೌದು, ಅವರು ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ನಾವು ಆರ್ಜುನ್ ಅವರ ಜೀವನದ ಹೊಸ ಅಧ್ಯಾಯವನ್ನು ಎದುರು ನೋಡುತ್ತಿದ್ದೇವೆ ಎಂದು ಬರೆದುಕೊಂಡಿದ್ದಾರೆ.
ಇತ್ತೀಚಿಗೆ ಅರ್ಜುನ್ ತೆಂಡೂಲ್ಕರ್ ಹಾಗೂ ಸಾನಿಯಾ ನಿಶ್ಚಿತಾರ್ಥ ಮಾಡಿಕೊಂಡ ಸುದ್ದಿ ಭಾರೀ ವೈರಲ್ ಆಗಿತ್ತು. ಅಲ್ಲದೆ ಈ ಸಮಾರಂಭದಲ್ಲಿ ಎರಡೂ ಕುಟುಂಬದ ಸದಸ್ಯರು ಮಾತ್ರ ಭಾಗವಹಿಸಿದ್ದರು. ಸಾನಿಯಾ ಕುಟುಂಬ ಉದ್ಯಮ ಕ್ಷೇತ್ರದಲ್ಲಿ ದೊಡ್ಡ ಹೆಸರು ಮಾಡಿತ್ತು. ಇವರ ಕುಟುಂಬ ಇಂಟರ್‌ಕಾಂಟಿನೆಂಟಲ್ ಹೋಟೆಲ್ ಮತ್ತು ಐಸ್‌ಕ್ರೀಮ್ ಬ್ರ್ಯಾಂಡ್‌ಗಳನ್ನು ಹೊಂದಿದೆ. ಈ ಇಬ್ಬರೂ ಆಗಸ್ಟ್ 13 ರಂದು ನಿಶ್ಚಿತಾರ್ಥ ಮಾಡಿಕೊಂಡಿದ್ದರು. ಆದರೆ ಇವರಿಬ್ಬರ ವಿವಾಹದ ದಿನಾಂಕ ಇನ್ನು ಅಂತಿಮವಾಗಿಲ್ಲ. 25 ವರ್ಷದ ಅರ್ಜುನ್ ಹಾಗೂ ಸಾನಿಯಾ ಬಾಲ್ಯದ ಸ್ನೇಹಿತರು.
ಅರ್ಜುನ್ ತೆಂಡೂಲ್ಕರ್ ಈಗಾಗಲೇ ಕ್ರಿಕೆಟ್ ಮೈದಾನದಲ್ಲಿ ತಮ್ಮ ಛಾಪು ಮೂಡಿಸಲು ಶ್ರಮಿಸುತ್ತಿದ್ದಾರೆ. ಇವರು ಈಗಾಗಲೇ ಐಪಿಎಲ್‌ನಲ್ಲಿ ಮುಂಬೈ ಇಂಡಿಯನ್ಸ್ ಪರ ಆಡಿ ಸೈ ಎನಿಸಿಕೊಂಡಿದ್ದಾರೆ. ಅಲ್ಲದೆ ಇವರು ಈಗ ದೇಶೀಯ ಟೂರ್ನಿಯಲ್ಲಿ ಗೋವಾ ತಂಡದ ಪರ ಆಡುತ್ತಿದ್ದಾರೆ. ಅರ್ಜುನ್ 17 ಪ್ರಥಮ ದರ್ಜೆ ಪಂದ್ಯಗಳನ್ನು ಆಡಿದ್ದು, ಇಲ್ಲಿಯವರೆಗೆ 37 ವಿಕೆಟ್‌ಗಳನ್ನು ಕಬಳಿಸಿದ್ದು, 532 ರನ್ ಸಿಡಿಸಿದ್ದಾರೆ. ಅರ್ಜುನ್ ಐಪಿಎಲ್‌ನಲ್ಲಿ 5 ಪಂದ್ಯಗಳಲ್ಲಿ 3 ವಿಕೆಟ್ ಪಡೆದಿದ್ದಾರೆ.