For Quick Alerts
ALLOW NOTIFICATIONS  
For Daily Alerts
 

ಆಸ್ಪತ್ರೆಯಿಂದ ಬಿಡುಗಡೆಯಾದ ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್

Sachin Tendulkar has been discharged from the hospital

ಟೀಮ್ ಇಂಡಿಯಾ ಮಾಜಿ ಕ್ರಿಕೆಟಿಗ ದಿಗ್ಗಜ ಆಟಗಾರ ಸಚಿನ್ ತೆಂಡೂಲ್ಕರ್ ಕೊರೊನಾ ವೈರಸ್‌ಗೆ ತುತ್ತಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಈಗ ಅವರು ತಮ್ಮ ಮನೆಗೆ ಮರಳಿದ್ದಾರೆ. ಈ ಬಗ್ಗೆ ಸ್ವತಃ ಸಚಿನ್ ತೆಂಡೂಲ್ಕರ್ ಟ್ವಿಟ್ಟರ್‌ನಲ್ಲಿ ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ಮನೆಯಲ್ಲಿಯೇ ಪ್ರತ್ಯೇಕವಾಗಿರುವುದಾಗಿ ಸಚಿನ್ ಟ್ವೀಟ್‌ನಲ್ಲಿ ಹೇಳಿಕೊಂಡಿದ್ದಾರೆ.

ಮಾರ್ಚ್ 27ರಂದು ಸಚಿನ್ ತೆಂಡೂಲ್ಕರ್ ಕೊರೊನಾ ವೈರಸ್‌ಗೆ ತುತ್ತಾಗಿರುವುದು ಬೆಳಕಿಗೆ ಬಂದಿತ್ತು. ಆರು ದಿನಗಳ ಬಳಿಕ ಕೊರೊನಾ ವೈರಸ್‌ನ ಲಕ್ಷಣಗಳು ಬೆಳವಣಿಗೆ ಕಂಡ ಹಿನ್ನೆಲೆಯಲ್ಲಿ ಸಚಿನ್ ತೆಂಡೂಲ್ಕರ್ ಆಸ್ಪತ್ರೆಗೆ ದಾಖಲಾಗಿದ್ದರು.

ಈಗ ಸಚಿನ್ ತೆಂಡೂಲ್ಕರ್ ಟ್ವಿಟ್ಟರ್‌ನಲ್ಲಿ ಸಂದೇಶವನ್ನು ಹಂಚಿಕೊಂಡಿದ್ದು ತನಗಾಗಿ ಪ್ರಾರ್ಥಿಸಿದ ಅಭಿಮಾನಿಗಳು ಹಾಗೂ ಹಿತೈಷಿಗಳಿಗೆ ಧನ್ಯವಾದಗಳನ್ನು ತಿಳಿಸಿದ್ದಾರೆ. ಇದರ ಜೊತೆಗೆ ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನು ನೀಡಿದ ವೈದ್ಯಕೀಯ ಸಿಬ್ಬಂದಿಗಳು ಹಾಗೂ ವೈದ್ಯರಿಗೆ ಧನ್ಯವಾದ ಹೇಳಿದ್ದಾರೆ.

ಕಳೆದ ತಿಂಗಳು ರೋಡ್ ಸೇಫ್ಟಿ ವರ್ಲ್ಡ್ ಸೀರೀಸ್‌ನಲ್ಲಿ ಪಾಲ್ಗೊಳ್ಳುವ ಮೂಲಕ ಸಚಿನ್ ತೆಂಡೂಲ್ಕರ್ ಮತ್ತೆ ಕ್ರಿಕೆಟ್ ಮೈದಾನಕ್ಕೆ ಇಳಿದಿದ್ದರು. ಈ ಸರಣಿಯಲ್ಲಿ ಭಾರತ ಲೆಜೆಂಡ್ಸ್ ತಂಡವನ್ನು ಮುನ್ನಡೆಸಿದ ಸಚಿನ್ ತೆಂಡೂಲ್ಕರ್ ತಂಡದಲ್ಲಿ ಯುವರಾಜ್ ಸಿಂಗ್, ವೀರೇಂದ್ರ ಸೆಹ್ವಾಗ್, ಯೂಸೂಫ್ ಪಠಾಣ್ ಅವರಂತಾ ಆಟಗಾರರು ಇದ್ದರು. ಜೊತೆಗೆ ಟೂರ್ನಿಯಲ್ಲಿ ಕೆವಿನ್ ಪೀಟರ್ಸನ್, ಜಾಂಟಿ ರೋಡ್ಸ್, ಸನತ್ ಜಯಸೂರ್ಯರಂತಾ ವಿಶ್ವ ಕ್ರಿಕೆಟ್‌ನ ದಿಗ್ಗಜರು ಕೂಡ ಭಾಗಿಯಾಗಿದ್ದರು.

ರೋಡ್ ಸೇಫ್ಟಿ ವರ್ಲ್ಡ್ ಸೀರೀಸ್‌ನಲ್ಲಿ ಸಚಿನ್ ತೆಂಡೂಲ್ಕರ್ ನೇತೃತ್ವದ ಇಂಡಿಯಾ ಲೆಜೆಂಡ್ಸ್ ತಂಡ ಚಾಂಪಿಯನ್ ಆಗಿ ಗೆದ್ದು ಬೀಗಿತ್ತು. ಆದರೆ ಅದಾದ ಬಳಿಕ ಸಚಿನ್ ತೆಂಡೂಲ್ಕರ್ ಕೊರೊನಾ ವೈರಸ್‌ಗೆ ತುತ್ತಾಗಿರುವುದು ಬೆಳಕಿಗೆ ಬಂದಿತ್ತು. ಸಚಿನ್ ತೆಂಡೂಲ್ಕರ್ ಬಳಿ ಯೂಸೂಫ್ ಪಠಾಣ್, ಎಸ್ ಬದ್ರಿನಾಥ್, ಇರ್ಫಾನ್ ಪಠಾಣ್ ಕೂಡ ಕೊರೊನಾ ವೈರಸ್‌ಗೆ ತುತ್ತಾಗಿದ್ದರು.

Story first published: Friday, April 9, 2021, 9:55 [IST]
Other articles published on Apr 9, 2021
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+