ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಸಚಿನ್ ತೆಂಡೂಲ್ಕರ್ or ವಿರಾಟ್ ಕೊಹ್ಲಿ; ಈ ಬ್ಯಾಟಿಂಗ್ ದಿಗ್ಗಜರ ನಡುವೆ ಪ್ಯಾಟ್ ಕಮ್ಮಿನ್ಸ್ ಆಯ್ಕೆ ಯಾರು?

Sachin Tendulkar or Virat Kohli; Pat Cummins Choose One Between These Two Indian Batting Greats

2022ರ ಕ್ರಿಕೆಟ್ ಕ್ಯಾಲೆಂಡರ್‌ನಲ್ಲಿ ಭಾರತದ ಮಾಜಿ ನಾಯಕ ವಿರಾಟ್ ಕೊಹ್ಲಿ ಬ್ಯಾಟಿಂಗ್‌ನಲ್ಲಿ ಅತ್ಯಂತ ಕಳಪೆ ಪ್ರದರ್ಶನ ನೀಡಿದ್ದರು. 2022ರ ಏಷ್ಯಾಕಪ್‌ನಲ್ಲಿ ಸುಮಾರು ಮೂರು ವರ್ಷಗಳ ನಂತರ ಅಂತಾರಾಷ್ಟ್ರೀಯ ಶತಕ ಬಾರಿಸಿ ಫಾರ್ಮ್‌ಗೆ ಮರಳಿದರು. ಅನಂತರ ಆಸ್ಟ್ರೇಲಿಯಾದಲ್ಲಿ ನಡೆದ ಟಿ20 ವಿಶ್ವಕಪ್‌ನಲ್ಲಿ ಅಬ್ಬರದ ಬ್ಯಾಟಿಂಗ್ ಪ್ರದರ್ಶನ ನೀಡಿದರು.

ಇತ್ತೀಚಿಗೆ ಬಾಂಗ್ಲಾದೇಶದ ವಿರುದ್ಧದ ಏಕದಿನ ಸರಣಿಯಲ್ಲಿ ಒಂದು ಶತಕ ಮತ್ತು ಶ್ರೀಲಂಕಾ ವಿರುದ್ಧದ ಏಕದಿನ ಸರಣಿಯ ಪಂದ್ಯಗಳಲ್ಲಿ ಎರಡು ಶತಕಗಳು ರನ್ ಮಷಿನ್ ವಿರಾಟ್ ಕೊಹ್ಲಿಗೆ ತನ್ನ ಪ್ರಾಬಲ್ಯವನ್ನು ಮರಳಿ ಪಡೆಯಲು ಸಹಾಯ ಮಾಡಿದವು.

ಭಾರತೀಯ ಕ್ರಿಕೆಟ್‌ನ ಭವಿಷ್ಯದ ಕುರಿತು ದೊಡ್ಡ ಹೇಳಿಕೆ ನೀಡಿದ ಮಾಜಿ ನಾಯಕ ಕಪಿಲ್ ದೇವ್ಭಾರತೀಯ ಕ್ರಿಕೆಟ್‌ನ ಭವಿಷ್ಯದ ಕುರಿತು ದೊಡ್ಡ ಹೇಳಿಕೆ ನೀಡಿದ ಮಾಜಿ ನಾಯಕ ಕಪಿಲ್ ದೇವ್

ವಿರಾಟ್ ಕೊಹ್ಲಿ ಇದೀಗ 74 ಅಂತಾರಾಷ್ಟ್ರೀಯ ಶತಕಗಳನ್ನು ಬಾರಿಸಿದ್ದಾರೆ ಮತ್ತು ಪಟ್ಟಿಯಲ್ಲಿ ಅತಿ ಹೆಚ್ಚು ಶತಕ ಗಳಿಸಿದ ವಿಶ್ವದ ಎರಡನೇ ಆಟಗಾರನಾಗಿದ್ದಾರೆ. ಇದಕ್ಕೂ ಮೊದಲು ಭಾರತದ ಮಾಜಿ ಬ್ಯಾಟಿಂಗ್ ದಿಗ್ಗಜ ಸಚಿನ್ ತೆಂಡೂಲ್ಕರ್ 100 ಅಂತಾರಾಷ್ಟ್ರೀಯ ಶತಕಗಳನ್ನು ಬಾರಿಸಿ ಅಗ್ರಸ್ಥಾನದಲ್ಲಿದ್ದಾರೆ.

ಸಚಿನ್ ತೆಂಡೂಲ್ಕರ್ ಹಿಂದಿಕ್ಕಿದ ವಿರಾಟ್ ಕೊಹ್ಲಿ

ಸಚಿನ್ ತೆಂಡೂಲ್ಕರ್ ಹಿಂದಿಕ್ಕಿದ ವಿರಾಟ್ ಕೊಹ್ಲಿ

ಮತ್ತೊಂದೆಡೆ, ತವರಿನಲ್ಲಿ ಅತಿ ಹೆಚ್ಚು ಏಕದಿನ ಶತಕ ಗಳಿಸಿದವರ ಪಟ್ಟಿಯಲ್ಲಿ ವಿರಾಟ್ ಕೊಹ್ಲಿ ಅವರು ಮಾಜಿ ಬ್ಯಾಟ್ಸ್‌ಮನ್ ಸಚಿನ್ ತೆಂಡೂಲ್ಕರ್ ಅವರನ್ನು ಹಿಂದಿಕ್ಕಿದ್ದಾರೆ. ಇದುವರೆಗೆ ವಿರಾಟ್ ಕೊಹ್ಲಿ ಮಾಜಿ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್ ಅವರ ಹಲವು ದಾಖಲೆಗಳನ್ನು ಮುರಿದು ಮುಂದೆ ಸಾಗುತ್ತಿದ್ದಾರೆ.

ಆಡುವ ಪ್ರತಿ ಪಂದ್ಯದಲ್ಲೂ ವಿರಾಟ್ ಕೊಹ್ಲಿ ಯಾವುದಾದರೊಂದು ಸಚಿನ್ ತೆಂಡೂಲ್ಕರ್ ಅವರ ದಾಖಲೆಗಳನ್ನು ಅಳಿಸಿ ಹಾಕುತ್ತಿದ್ದಾರೆ ಮತ್ತು ಸರಿಗಟ್ಟುತ್ತಿದ್ದಾರೆ. ದಾಖಲೆಗಳಿರುವುದೇ ಮುರಿಯುವುದಕ್ಕೆ ಎಂಬ ಮಾತನ್ನು ನಿಜವಾಗಿಸುತ್ತಿದ್ದಾರೆ.

ನಾನು ವಿರಾಟ್ ಕೊಹ್ಲಿ ಆಯ್ಕೆ ಮಾಡಿಕೊಳ್ಳುತ್ತೇನೆ ಎಂದ ಕಮ್ಮಿನ್ಸ್

ನಾನು ವಿರಾಟ್ ಕೊಹ್ಲಿ ಆಯ್ಕೆ ಮಾಡಿಕೊಳ್ಳುತ್ತೇನೆ ಎಂದ ಕಮ್ಮಿನ್ಸ್

ಭಾರತದ ಸ್ಟಾರ್ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ ಬ್ಯಾಟಿಂಗ್ ಫಾರ್ಮ್‌ಗೆ ಮರಳಿರುವುದು ಮತ್ತೊಮ್ಮೆ ಸಚಿನ್ ತೆಂಡೂಲ್ಕರ್ ಅವರೊಂದಿಗೆ ಹೋಲಿಕೆ ಮಾಡಲಾಗುತ್ತಿದೆ. ಇನ್ನು ಆಸ್ಟ್ರೇಲಿಯಾದ ನಾಯಕ ಪ್ಯಾಟ್ ಕಮ್ಮಿನ್ಸ್ ಅವರು ಭಾರತದ ಇಬ್ಬರು ಬ್ಯಾಟಿಂಗ್ ಶ್ರೇಷ್ಠರ ನಡುವೆ ಒಬ್ಬರನ್ನು ಆಯ್ಕೆ ಮಾಡಿದ್ದಾರೆ.

'ಸಚಿನ್ ಅಥವಾ ವಿರಾಟ್?' ಯಾರನ್ನು ಆಯ್ಕೆ ಮಾಡಿಕೊಳ್ಳುತ್ತೀರಿ ಎಂದು ಯುಟ್ಯೂಬ್‌ನಲ್ಲಿ ಪ್ರೈಮ್ ವಿಡಿಯೋ ಇಂಡಿಯಾ ಅಪ್‌ಲೋಡ್ ಮಾಡಿದ ವೀಡಿಯೊದಲ್ಲಿ ಉಸ್ಮಾನ್ ಖವಾಜಾ ಅವರು ತಮ್ಮ ನಾಯಕ ಪ್ಯಾಟ್ ಕಮ್ಮಿನ್ಸ್ ಅವರನ್ನು ಕೇಳಿದ್ದಾರೆ.

'ಇದು ಕ್ಲಿಷ್ಟಕರ' ಎಂದು ಪ್ಯಾಟ್ ಕಮ್ಮಿನ್ಸ್ ನಗುತ್ತಲೇ ಉತ್ತರಿಸಿ, "ನಾನು ಸಚಿನ್ ತೆಂಡೂಲ್ಕರ್ ಅವರೊಂದಿಗೆ ಕೆಲವು ವರ್ಷಗಳ ಹಿಂದೆ ಟಿ20 ಪಂದ್ಯದಲ್ಲಿ ಒಮ್ಮೆ ಮಾತ್ರ ಆಡಿದ್ದೇನೆ ಎಂದು ನಾನು ಭಾವಿಸುತ್ತೇನೆ. ಹಾಗಾಗಿ ನಾನು ವಿರಾಟ್ ಕೊಹ್ಲಿ ಆಯ್ಕೆ ಮಾಡಿಕೊಳ್ಳುತ್ತೇನೆ," ಎಂದು ಹೇಳಿದ್ದಾರೆ.

46 ಏಕದಿನ, 27 ಟೆಸ್ಟ್ ಶತಕಗಳು, ಒಂದು ಟಿ20 ಶತಕ

46 ಏಕದಿನ, 27 ಟೆಸ್ಟ್ ಶತಕಗಳು, ಒಂದು ಟಿ20 ಶತಕ

ವಿರಾಟ್ ಕೊಹ್ಲಿ ಅವರು ಸಚಿನ್ ತೆಂಡೂಲ್ಕರ್ ಅವರಂತೆ ಟೆಸ್ಟ್ ಆಡುವ ಎಲ್ಲ ದೇಶಗಳ ವಿರುದ್ಧ ಶತಕ ಬಾರಿಸಿದ್ದಾರೆ. 46 ಏಕದಿನ ಅಂತಾರಾಷ್ಟ್ರೀಯ ಶತಕಗಳು, 27 ಟೆಸ್ಟ್ ಶತಕಗಳು ಮತ್ತು ಒಂದು ಟಿ20 ಶತಕ ಸೇರಿ ಒಟ್ಟು 74 ಶತಕ ಬಾರಿಸಿದ್ದಾರೆ.

ಸದ್ಯ ನ್ಯೂಜಿಲೆಂಡ್ ವಿರುದ್ಧ ಭಾರತ ತಂಡ ಆಡುತ್ತಿರುವ ಮೂರು ಪಂದ್ಯಗಳ ಏಕದಿನ ಸರಣಿಯ ಮೊದಲೆರಡು ಪಂದ್ಯಗಳಲ್ಲಿ ವಿರಾಟ್ ಕೊಹ್ಲಿ 8 ಮತ್ತು 11 ರನ್‌ಗಳನ್ನು ಬಾರಿಸಿದ್ದಾರೆ.

ಇಂದೋರ್‌ನ ಹೋಳ್ಕರ್ ಸ್ಟೇಡಿಯಂನಲ್ಲಿ ಅಂತಿಮ ಏಕದಿನ ಪಂದ್ಯ

ಇಂದೋರ್‌ನ ಹೋಳ್ಕರ್ ಸ್ಟೇಡಿಯಂನಲ್ಲಿ ಅಂತಿಮ ಏಕದಿನ ಪಂದ್ಯ

ಮೂರನೇ ಹಾಗೂ ಅಂತಿಮ ಏಕದಿನ ಪಂದ್ಯವು ಮಂಗಳವಾರ, ಜನವರಿ 24ರಂದು ಇಂದೋರ್‌ನ ಹೋಳ್ಕರ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿದೆ. ಮತ್ತೊಂದು ಗಮನಾರ್ಹ ಪ್ರದರ್ಶನದೊಂದಿಗೆ ಈ ಸರಣಿಯನ್ನು ಉನ್ನತ ಮಟ್ಟದಲ್ಲಿ ಕೊನೆಗೊಳಿಸಲು ವಿರಾಟ್ ಕೊಹ್ಲಿ ಎದುರು ನೋಡುತ್ತಿದ್ದಾರೆ.

ಅಂತಿಮ ಏಕದಿನ ಪಂದ್ಯದಲ್ಲಿ ರೋಹಿತ್ ಶರ್ಮಾ ನಾಯಕತ್ವದ ಭಾರತ ತಂಡ ಗೆದ್ದರೆ ಐಸಿಸಿ ಏಕದಿನ ರ್‍ಯಾಂಕಿಂಗ್‌ನಲ್ಲಿ ನಂ.1 ಸ್ಥಾನಕ್ಕೇರುವ ಅವಕಾಶವಿದೆ. ಭಾರತದಲ್ಲಿ ನಡೆಯುವ 2023ರ ಏಕದಿನ ವಿಶ್ವಕಪ್ ವರ್ಷದಲ್ಲಿ ಪ್ರತಿ ಪಂದ್ಯ ಹಾಗೂ ಸರಣಿಯೂ ಪ್ರಮುಖವಾಗಿದೆ.

Story first published: Monday, January 23, 2023, 5:50 [IST]
Other articles published on Jan 23, 2023
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X