ಇಶಾನ್ ಕಿಶನ್ ದ್ವಿಶತಕದ ಬಗ್ಗೆ ದಿಗ್ಗಜ ಸಚಿನ್ ತೆಂಡೂಲ್ಕರ್ ಕೊಟ್ಟ ಪ್ರತಿಕ್ರಿಯೆ ಇದು

24 ವರ್ಷದ ಇಶಾನ್ ಕಿಶನ್ ಬಾಂಗ್ಲಾದೇಶದ ವಿರುದ್ಧದ ಸರಣಿಯ ಅಂತಿಮ ಪಂದ್ಯದಲ್ಲಿ ದ್ವಿಶತಕ ಸಿಡಿಸುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ. ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಕೂಡ ಇಶಾನ್ ಕಿಶನ್ ಬ್ಯಾಟಿಂಗ್‌ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಎರಡನೇ ಏಕದಿನ ಪಂದ್ಯದ ವೇಳೆ ಫೀಲ್ಡಿಂಗ್ ವೇಳೆ ನಾಯಕ ರೋಹಿತ್ ಶರ್ಮಾ ಗಾಯಗೊಂಡರು. ಮೂರನೇ ಏಕದಿನ ಪಂದ್ಯಕ್ಕೆ ಅವರು ಅಲಭ್ಯರಾದ ಕಾರಣ ಅವರ ಬದಲಿಗೆ ಇಶಾನ್ ಕಿಶನ್‌ಗೆ ತಂಡದಲ್ಲಿ ಅವಕಾಶ ನೀಡಲಾಯಿತು.

Ind vs Ban 1st Test: ಮೊದಲನೇ ಟೆಸ್ಟ್ ಪಂದ್ಯಕ್ಕೆ ಟೀಂ ಇಂಡಿಯಾ ಸಿದ್ಧತೆ, ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ಗಾಗಿ ಮಹತ್ವದ ಸರಣಿInd vs Ban 1st Test: ಮೊದಲನೇ ಟೆಸ್ಟ್ ಪಂದ್ಯಕ್ಕೆ ಟೀಂ ಇಂಡಿಯಾ ಸಿದ್ಧತೆ, ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ಗಾಗಿ ಮಹತ್ವದ ಸರಣಿ

ಇಶಾನ್ ಕಿಶನ್ ತಮಗೆ ಸಿಕ್ಕ ಅವಕಾಶವನ್ನು ಸಮರ್ಪಕವಾಗಿ ಬಳಸಿಕೊಂಡರು. ಶಿಖರ್ ಧವನ್ ಬೇಗನೆ ಔಟಾದ ನಂತರ ವಿರಾಟ್ ಕೊಹ್ಲಿ ಜೊತೆಯಲ್ಲಿ ವಿಶ್ವದಾಖಲೆಯ 290 ರನ್‌ ಜೊತೆಯಾಟ ಆಡಿದರು.

ಎಡಗೈ ಬ್ಯಾಟರ್ 85 ಎಸೆತಗಳಲ್ಲಿ ತಮ್ಮ ಚೊಚ್ಚಲ ಶತಕವನ್ನು ಪೂರ್ಣಗೊಳಿಸಿದರೆ, ಕೇವಲ 45 ಎಸೆತಗಳನ್ನು ನೂರು ರನ್ ಗಳಿಸುವ ಮೂಲಕ ವೇಗದ ದ್ವಿಶತಕ ಗಳಿಸಿದ ಆಟಗಾರ ಎನಿಸಿಕೊಂಡರು. ಅಂತಿಮವಾಗಿ 131 ಎಸೆತಗಳಲ್ಲಿ 210 ರನ್‌ ಗಳಿಸಿ ವಿಕೆಟ್ ಒಪ್ಪಿಸಿದರು. ಅವರ ಈ ಇನ್ನಿಂಗ್ಸ್‌ನಲ್ಲಿ 24 ಬೌಂಡರಿ ಮತ್ತು 10 ಭರ್ಜರಿ ಸಿಕ್ಸರ್ ಸಿಡಿಸಿದರು. 24 ವರ್ಷದ ಇಶಾನ್ ಕಿಶನ್ ಕ್ರಿಸ್ ಗೇಲ್ ದಾಖಲೆಯನ್ನು ಅಳಿಸಿಹಾಕಿದರು.

ಇಶಾನ್ ಕಿಶನ್, ವಿರಾಟ್ ಕೊಹ್ಲಿ ಆಟಕ್ಕೆ ಮೆಚ್ಚುಗೆ

ಇಶಾನ್ ಕಿಶನ್, ವಿರಾಟ್ ಕೊಹ್ಲಿ ಅಮೋಘ ಬ್ಯಾಟಿಂಗ್ ನೆರವಿನಿಂದ ಭಾರತ ನಿಗದಿತ 50 ಓವರ್ ಗಳಲ್ಲಿ 409 ರನ್ ಗಳಿಸಿತು. ಈ ಬೃಹತ್ ಮೊತ್ತವನ್ನು ಬೆನ್ನಟ್ಟಿದ ಬಾಂಗ್ಲಾದೇಶ ತಂಡವನ್ನು 182 ರನ್‌ಗಳಿಗೆ ಆಲೌಟ್ ಮಾಡುವ ಮೂಲಕ 227 ರನ್‌ಗಳ ಬೃಹತ್ ಜಯ ದಾಖಲಿಸಿತು.

ಭಾರತದ ದಿಗ್ಗಜ ಬ್ಯಾಟರ್ ಸಚಿನ್ ತೆಂಡೂಲ್ಕರ್ ಇಶಾನ್ ಕಿಶನ್‌ರ 210 ರನ್‌ಗಳ ದ್ವಿಶತಕದ ಇನ್ನಿಂಗ್ಸ್‌ ಅನ್ನು ಅದ್ಭುತ ಇನ್ನಿಂಗ್ಸ್ ಎಂದು ಹೇಳಿದರು. ಇಶಾನ್ ಕಿಶನ್ ಬ್ಯಾಟಿಂಗ್ ಹೆಚ್ಚಿನ ಪ್ರಶಂಸೆಗೆ ಅರ್ಹವಾಗಿದೆ ಎಂದು ಹೇಳಿದರು.

ಅದು ಅಸಾಧಾರಾಣ ಇನ್ನಿಂಗ್ಸ್, ಇಶಾನ್ ಕಿಶನ್ ಆಡಿದ ಇನ್ನಿಂಗ್ಸ್ ಎರಡು ಪಟ್ಟು ಮೆಚ್ಚುಗೆಗೆ ಅರ್ಹವಾಗಿದೆ. ಇಶಾನ್ ಕಿಶನ್ ಜೊತೆಯಲ್ಲಿ ವಿರಾಟ್ ಕೊಹ್ಲಿ ಕೂಡ ಅದ್ಭುತವಾಗಿ ಆಡಿದರು. ಇಬ್ಬರಿಗೂ ಅಭಿನಂದನೆಗಳು ಎಂದು ಟ್ವೀಟ್ ಮಾಡಿದ್ದಾರೆ.

ಐಪಿಎಲ್‌ನಲ್ಲಿ ಇಶಾನ್ ಕಿಶನ್ ಮುಂಬೈ ಇಂಡಿಯನ್ಸ್ ತಂಡದ ಪರ ಆಡುತ್ತಾರೆ, ಸಚಿನ್ ಕೂಡ ಮುಂಬೈ ಇಂಡಿಯನ್ಸ್ ತಂಡದ ಸಿಬ್ಬಂದಿಯಲ್ಲೊಬ್ಬರಾಗಿದ್ದು, ಇಶಾನ್ ಕಿಶನ್‌ಗೆ ಜೊತೆ ಉತ್ತಮ ಬಾಂಧವ್ಯ ಹೊಂದಿದ್ದಾರೆ. ಇಶಾನ್ ಕಿಶನ್ ಅಮೋಘ ಬ್ಯಾಟಿಂಗ್‌ ಮಾಡಿರುವುದು ಮುಂಬೈ ಇಂಡಿಯನ್ಸ್ ಫ್ರಾಂಚೈಸಿಗೂ ಖುಷಿ ನೀಡಿದೆ.

For Quick Alerts
ALLOW NOTIFICATIONS
For Daily Alerts
Story first published: Sunday, December 11, 2022, 17:31 [IST]
Other articles published on Dec 11, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X